Publicstory/prajayoga
ತುಮಕೂರು: ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದ ಶೆಟ್ಟಿಹಳ್ಳಿ ಬಳಿ ತಡರಾತ್ರಿ ಸಂಭವಿಸಿದೆ.
ಕೆಎ 02 ಎಚ್ ಆರ್ 5092 ಆ್ಯಕ್ಟಿವಾ ವಾಹನದಲ್ಲಿ ಸಾಗುತ್ತಿದ್ದ ವ್ಯಕ್ತಿ ಚಿಕ್ಕನಾಯಕನಹಳ್ಳಿ ತಾಲೂಕಿನ ಶಿಡ್ಲಕಟ್ಟೆಯ ರಂಗಸ್ವಾಮಿ ಮೃತ ದುರ್ದೈವಿ ಎಂದು ತಿಳಿದು ಬಂದಿದೆ.
ರಂಗಸ್ವಾಮಿ ತುಮಕೂರಿನ ಪೆಟ್ರೋಲ್ ಬಂಕ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಕೆಲಸ ಮುಗಿಸಿ ಮನೆಗೆ ಹಿಂತಿರುಗುವಾಗ ತುಮಕೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.