ತಿಪಟೂರು: ತ್ರಿವರ್ಣ ಧ್ವಜಕ್ಕಿಂತ ಮೇಲೆ ಕೇಸರಿ ಧ್ವಜ ಹಾರಿಸಿರುವ ಆರೋಪದ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ವಿರುದ್ಧ ತಿಪಟೂರು ಪೊಲೀಸ್ ಠಾಣೆಯಲ್ಲಿ ಇಂದು ದೂರು ದಾಖಲಾಗಿದೆ.
ಬುಧವಾರ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಸಾವಿರ ಮಕ್ಕಳು ಪಾಲ್ಗೊಂಡು ನಡೆದ 180 ಅಡಿ ಉದ್ದದ ತಿರಂಗ ಯಾತ್ರೆಯಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಪಾಲ್ಗೊಂಡಿದ್ದರು. ಈ ತಿರಂಗ ಮೆರವಣಿಗೆಯಲ್ಲಿ ರಾಷ್ಟ್ರಧ್ವಜಕ್ಕಿಂತ ಮೇಲೆ ಕೇಸರಿ ಧ್ವಜ ಹಾರಾಟ ಮಾಡಲಾಗಿತ್ತು. ಇದು ರಾಷ್ಟ್ರದ್ರೋಹಕ್ಕೆ ಸಮಾನಾದ ಅಪರಾಧವಾಗಿದೆ. ಶಾಲಾ ಮಕ್ಕಳನ್ನು ಇಂತಹ ದೇಶವಿರೋಧಿ ಚಟುವಟಿಕೆಗಳಿಗೆ ಬಳಸಿಕೊಂಡಿರುವುದು ದುರ್ದೈವದ ಸಂಗತಿ. ಹಾಗಾಗಿ ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕೆಂದು ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಿ.ವಿ ಹರಿಪ್ರಸಾದ್ ದೂರು ಸಲ್ಲಿಸಿದ್ದಾರೆ.