Friday, November 22, 2024
Google search engine
Homeಜಸ್ಟ್ ನ್ಯೂಸ್ಗ್ರಾಮ ಸಭೆ ಪರ-ವಿರೋಧ, ಪ್ರತಿಭಟನೆ

ಗ್ರಾಮ ಸಭೆ ಪರ-ವಿರೋಧ, ಪ್ರತಿಭಟನೆ

ತುರುವೇಕೆರೆ ತಾಲ್ಲೂಕಿನ ಮಾಯಸಂದ್ರ ಹೋಬಳಿಯ ಸೊರವನಹಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಮಂಗಳವಾರ ಗ್ರಾಮಸಭೆ ಜರುಗಿತು. ಅದರ ಪಕ್ಕದಲ್ಲೇ ಇದೇ ಗ್ರಾಮ ಪಂಚಾಯ್ತಿಯ 8 ಸದಸ್ಯರು ತಮ್ಮನ್ನು ನಿರ್ಲಕ್ಷ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿ ಹಾಗು ಗ್ರಾಮಸಭೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸಿದರು.
ಗ್ರಾಮಪಂಚಾಯಿತಿಯ ಸಾಮಾನ್ಯ ಸಭೆಯಲ್ಲಿ ಗ್ರಾಮಸಭೆ ನಡೆಸುವ ಸಂಬಂಧ ಯಾವುದೇ ಚರ್ಚೆ ಮಾಡಿಲ್ಲ. ಅಲ್ಲದೇ ವಾರ್ಡ್ ಸಭೆಯನ್ನು ಕರೆಯದೇ ಗ್ರಾಮಸಭೆ ಕರೆಯುವುದು ಸರಿಯಲ್ಲ ಎಂದು ಸಹ ಸದಸ್ಯರು ಆರೋಪಿಸಿದರು.
ಗ್ರಾಮ ಪಂಚಾಯಿತಿಯಲ್ಲಿ ಹಲವಾರು ಪಿಡಿಓ ಗಳು ಕರ್ತವ್ಯ ನಿರ್ವಹಿಸಿದ್ದಾರೆ. ಅವರು ಬೇರೆಯವರಿಗೆ ಅಧಿಕಾರ ನೀಡುವ ಸಂದರ್ಭದಲ್ಲಿ ಎನ್ಆರ್ ಇಜಿ ಗೆ ಸಂಬಂಧಿಸಿದ ದಾಖಲೆಗಳನ್ನು ಪಡೆಯಲಾಗಿಲ್ಲ. ಎಲ್ಲ ಪಿಡಿಓಗಳೂ ಸಹ ಜವಬ್ದಾರಿಯಿಂದ ನುಳುಚಿಕೊಳ್ಳುತ್ತಿದ್ದಾರೆ. ಸೂಕ್ತ ದಾಖಲೆ ಕೇಳಿದರೆ ಸದಸ್ಯರ ವಿರುದ್ಧವೂ ಪಿತೂರಿ ನಡೆಸಿ ಅವರನ್ನು ಪೊಲೀಸ್ ಠಾಣೆಗೆ ಅಲೆಯುವಂತೆ ಮಾಡಲಾಗುತ್ತಿದೆ ಎಂದು ಸದಸ್ಯ ಸಂದೇಶ್ ದೂರಿದರು.
ಇಲ್ಲಿಯ ಗ್ರಾಮ ಪಂಚಾಯಿತಿಯ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಪಿಡಿಓ ರವರು ಸರ್ವಾಧಿಕಾರಿ ಧೋರಣೆ ತಾಳಿದ್ದಾರೆ. ಸದಸ್ಯರಿಗೆ ಗೌರವ ನೀಡುತ್ತಿಲ್ಲ. ಸೂಕ್ತ ದಾಖಲಾತಿಗಳನ್ನೂ ಸಹ ನೀಡುತ್ತಿಲ್ಲ. ಯಾರಿಂದ ದಾಖಲೆ ಪಡೆಯಬೇಕೆಂಬ ಗೊಂದಲ ಕಾಡುತ್ತಿದೆ. ಸದಸ್ಯರಿಗೆ ಜಿಲ್ಲಾ ಪಂಚಾಯಿತಿ ವತಿಯಿಂದ ತರಬೇತಿ ನೀಡಲಾಗುತ್ತಿದೆ.
ಅದನ್ನೂ ಸಹ ಗೌಪ್ಯವಾಗಿಟ್ಟು ಇತರೆ ಸದಸ್ಯರನ್ನು ವಂಚಿಸಲಾಗುತ್ತಿದೆ. ಎಲ್ಲಾ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಸರ್ವಾಧಿಕಾರಿಗಳಂತೆ ವರ್ತಿಸುತ್ತಿದ್ದಾರೆ. ಜನರಿಂದ ಆಯ್ಕೆಯಾಗಿರುವ ನಾವು ಜನರಿಗೆ ಉತ್ತರ ನೀಡಲು ಅಸಹಾಯಕರಾಗಿದ್ದೇವೆ ಎಂದು ಅಸಮಧಾನಿತ ಸದಸ್ಯರ ದೂರು.
ಗ್ರಾಮಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಪಿಡಿಓ ರವರು ಇದೇ ಪ್ರವೃತ್ತಿಯನ್ನು ಮುಂದುವರೆಸಿದಲ್ಲಿ ಹಾಗು ಕಳೆದ ಮೂರು ವರ್ಷಗಳ ಅವಧಿಯಲ್ಲಿ ಆಗಿರುವ ಎಲ್ಲಾ ಕಾಮಗಾರಿಗಳ ಕುರಿತು ಸಮಗ್ರ ತನಿಖೆ ನಡೆಸಬೇಕು. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದೂ ಸಹ ಸದಸ್ಯ ಸಂದೇಶ್ ಆಗ್ರಹಿಸಿದ್ದರಲ್ಲದೆ ತಾಲ್ಲೂಕು ಪಂಚಾಯಿತಿ ಅಥವಾ ಜಿಲ್ಲಾ ಪಂಚಾಯಿತಿ ಎದುರೇ ಪ್ರತಿಭಟನೆಯನ್ನು ಮಾಡಲಾಗುವುದೆಂದು ಎಚ್ಚರಿಸಿದರು.
ಈ ಪ್ರತಿಭಟನೆಯಲ್ಲಿ ಸದಸ್ಯರಾದ ಮಹಾಲಕ್ಷ್ಮಮ್ಮ, ಸುಶೀಲಾ, ಎಸ್.ವಿ.ಸುರೇಶ್, ಬಾಲಾಜಿ, ಎನ್.ವಿ.ಶಶಿಕಲಾ, ಜಾಬೀರ್ ಹುಸೇನ್ ಮತ್ತು ಎಚ್.ಎಸ್.ಗೀತಾ ಸೇರಿದಂತೆ ಹಲವು ಮಂದಿ ಭಾಗವಹಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

ಇನ್ಸ್ಪೆಕ್ಟರ್ ಸಲ್ಮಾನ್ ಕೆ ಎನ್ on ಕ್ರೀಡಾಕೂಟ ಝಲಕ್
Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?