Thursday, December 12, 2024
Google search engine
Homeಪೊಲಿಟಿಕಲ್ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ಬಿಜೆಪಿ: ಶಾಸಕ ವೆಂಕಟರಮಣಪ್ಪ

ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ಬಿಜೆಪಿ: ಶಾಸಕ ವೆಂಕಟರಮಣಪ್ಪ

ಪಾವಗಡ: ಬ್ರಹ್ಮಾಂಡ  ಭ್ರಷ್ಟಾಚಾರದಲ್ಲಿ  ತೊಡಗಿರುವ ಬಿಜೆಪಿಯ ೪೦% ಸರ್ಕಾರ ಹಾಗೂ ಕುಟುಂಬ ರಾಜಕಾರಣಕ್ಕೆ ಸೀಮಿತವಾಗಿರುವ ಜೆಡಿಎಸ್ ಪಕ್ಷಗಳಿಗೆ ೨೦೨೩ರ  ವಿಧಾನಸಭೆ ಚುನಾವಣೆ ನುಂಗಲಾರದ ತುತ್ತಾಗುತ್ತದೆ ಎಂದು ಶಾಸಕ ವೆಂಕಟರಮಣಪ್ಪ ತಿಳಿಸಿದರು.

ಪಟ್ಟಣದ ಎಸ್.ಎಸ್.ಕೆ ಸಮುದಾಯ ಭವನದಲ್ಲಿ ಬ್ಲಾಕ್ ಕಾಂಗ್ರೆಸ್ ಆಯೋಜಿಸಿದ್ದ ೭೫ನೇ ಸ್ವಾತಂತ್ರೋತ್ಸವ ಅಂಗವಾಗಿ ನಡೆಯುವ ಪಾದಯಾತ್ರೆ ಮತ್ತು ಸಿದ್ದರಾಮಯ್ಯನವರ ೭೫ ಹುಟ್ಟುಹಬ್ಬದ  ಸಂಭ್ರಮಾಚರಣೆಯ ಸಲುವಾಗಿ  ನಡೆದ  ಪೂರ್ವಭಾವಿ ಸಭೆಯಲ್ಲಿ  ಅವರು ಮಾತನಾಡಿದರು.

ಜನರು ಜನಪ್ರತಿನಿಧಿಗಳನ್ನು ಆರಿಸಿ ಕಳುಹಿಸಿರುವುದು ಒಳ್ಳೆಯ ಸರ್ಕಾರ ರಚನೆಯಾಗಿ ಜನಗಳಿಗೆ ಅನುಕೂಲ ಮಾಡುವರೆಂದು, ಆದರೆ ಜನರ ಆಶೀರ್ವಾದದಿಂದ  ರಚನೆಯಾದ ಬಿಜೆಪಿ ಸರ್ಕಾರವು  ಜನರಿಗೆ ಅನುಕೂಲ ಮಾಡುವುದಕ್ಕಿಂತ ಎಲ್ಲಾ ರೀತಿಯಲ್ಲಿ ತೆರಿಗೆಗಳನ್ನು ಹೆಚ್ಚಿಸಿ ಅನಾನುಕೂಲ ಮಾಡಿಕೊಟ್ಟಿದೆ. ಬಿಜೆಪಿ ಸರ್ಕಾರ ಅನೇಕ ಯೋಜನೆಗಳಿಗೆ  ಅನುದಾನ ನೀಡದೆ ಜನರನ್ನು ಶೋಷಣೆ ಮಾಡುತ್ತಿದೆ. ಮುಂಬರುವ ಚುನಾವಣೆಯಲ್ಲಿ ರಾಜ್ಯದ ಜನತೆ ಬಿಜೆಪಿಗೆ ತಕ್ಕ ಪಾಠ ಕಲಿಸುವರೆಂದು ದೂರಿದರು.
ಭದ್ರಾ  ಮೇಲ್ದಂಡೆ, ತುಂಗಭದ್ರ ನೀರಾವರಿ ಯೋಜನೆ, ವಿವಿಧ ಕಾಮಗಾರಿಗಳಿಗೂ ಅಗತ್ಯ ಅನುದಾನ ನೀಡುತ್ತಿಲ್ಲ. ತಾಲೂಕಿನಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಮುಂದಾದಾಗ ಸ್ಥಳೀಯ ಜೆಡಿಎಸ್ ಶಾಸಕರು ಅಭಿವೃದ್ಧಿ ಕಾಮಗಾರಿಗಳಿಗೆ ಅಡ್ಡಗಾಲು ಹಾಕುತ್ತಿದ್ದಾರೆ. ಈ ರೀತಿಯಾಗಿ ರಾಜಕೀಯ ದುರುದ್ದೇಶದಿಂದ ಕೆಲಸಗಳನ್ನು ಮಾಡಿದರೆ ತಾಲೂಕು ಅಭಿವೃದ್ಧಿ ಹೇಗಾಗುತ್ತದೆ ಎಂದರು.
ಚುನಾವಣೆ ವೇಳೆ ಕುಮಾರಸ್ವಾಮಿ ಸಾಲ ಮನ್ನಾ ಹೆಸರಿನಲ್ಲಿ ಸುಳ್ಳು ಹೇಳಿಕೊಂಡು ೨೦ ಸ್ಥಾನ ಪಡೆಯಲು ಹೆಣಗಾಡುತ್ತಾರೆ. ಕಾಂಗ್ರೆಸ್, ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡು ಅಧಿಕಾರ ಪಡೆಯುವ ಲೆಕ್ಕಾಚಾರ ತಂದೆ ಮಕ್ಕಳದ್ದು ಎಂದರು.

ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ಎಚ್.ವಿ.ವೆಂಕಟೇಶ್ ಮಾತನಾಡಿ, ೭೫ ನೇ ವರ್ಷದ ಸ್ವಾತಂತ್ರ ಮಹೋತ್ಸವದ ಅಂಗವಾಗಿ ಅರಸೀಕೆರೆ, ಲಿಂಗದಹಳ್ಳಿ, ವೈ.ಎನ್.ಹೊಸಕೋಟೆ, ವಿರುಪಸಮುದ್ರ, ತಿರುಮಣಿ ಸೇರಿದಂತೆ ವಿವಿದೆಡೆಯಿಂದ ಪಟ್ಟಣಕ್ಕೆ ಪಾದಯಾತ್ರೆ ನಡೆಸಲಾಗುವುದು. ಸಿದ್ದರಾಮೋತ್ಸವದಲ್ಲಿ ಜನತೆ ಭಾಗವಹಿಸಿ ಅವರಿಗೆ ಗೌರವ ಸೂಚಿಸಬೇಕು ಎಂದರು.

ಮಾಜಿ ಶಾಸಕ ಸೋಮ್ಲಾನಾಯ್ಕ, ಡಿಸಿಸಿ ಬ್ಯಾಂಕ್ ನಿರ್ದೇಶಕ ಟಿ.ನರಸಿಂಹಯ್ಯ, ವಕೀಲ ವೆಂಕಟರಾಮರೆಡ್ಡಿ, ಕೆಪಿಸಿಸಿ ಸದಸ್ಯ ಕೋಟೆ ಪ್ರಭಾಕರ್, ಸಣ್ಣರಾಮ ರೆಡ್ಡಿ, ತಿಪ್ಪೇಸ್ವಾಮಿ, ಫಜ್ಲುಸಾಬ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಪಾಪಣ್ಣ, ಮೈಲಪ್ಪ, ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯ ಕ್ಷ ಸುದೇಶ್ ಬಾಬು, ಪುರಸಭೆ ಅಧ್ಯಕ್ಷ ವೇಲುರಾಜು ಮತ್ತಿತರರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

ಇನ್ಸ್ಪೆಕ್ಟರ್ ಸಲ್ಮಾನ್ ಕೆ ಎನ್ on ಕ್ರೀಡಾಕೂಟ ಝಲಕ್
Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?