Monday, March 16, 2026
Google search engine
Home Blog Page 102

ಅಗ್ನಿವೀರ ಸೈನಿಕರಿಗೆ ನಾಲ್ಕು ವರ್ಷಗಳಿಗೆ ನಿವೃತ್ತಿಯಾದರೆ ರಾಜಕಾರಣಿಗಳಿಗೆ ಬೇಡವೆ? :ಜಿಲ್ಲಾ ಎಎಪಿ ಪ್ರಶ್ನೆ

Publicstory


ತುಮಕೂರು: ರಕ್ಷಣಾ ಪಡೆಗಳಲ್ಲಿ ‘ಅಗ್ನಿಪಥ’ಯೋಜನೆಯಡಿಯಲ್ಲಿ ಸೈನಿಕರನ್ನು ಕೇವಲ ನಾಲ್ಕು ವರ್ಷಗಳ ಅವಧಿಗೆ ನೇಮಕ ಮಾಡಿಕೊಳ್ಳುವುದಾದರೆ ಪ್ರಧಾನಮಂತ್ರಿ, ಮುಖ್ಯಮಂತ್ರಿ,ಮಂತ್ರಿಗಳು ಹಾಗೂ ಸಂಸದ-ಶಾಸಕರಿಗೂ ನಾಲ್ಕೈದು ವರ್ಷಗಳ ಸೀಮಿತ ಅವಧಿ ನಿಗಧಿಪಡಿಸುವ ಕಾನೂನು ಜಾರಿಗೊಳಿಸಲಿ ಎಂದು ಆಮ್ ಆದ್ಮಿ ಪಾರ್ಟಿಯ ಜಿಲ್ಲಾ ಅಧ್ಯಕ್ಷ ಡಾ.ವಿಶ್ವನಾಥ್ ಒತ್ತಾಯಿಸಿದ್ದಾರೆ.

ಸಾರ್ವಜನಿಕರ ಹಣವನ್ನು ಲೂಟಿ ಮಾಡುವ ಅನೇಕ ಜನಪ್ರತಿನಿಧಿಗಳು ಜನಸಾಮಾನ್ಯರಿಗೆ ಹಣ, ಹೆಂಡ, ಖಂಡ ಹಂಚಿ ಚುನಾವಣೆಯಲ್ಲಿ ಗೆದ್ದು ಸಾಯುವವರೆಗೂ ಅಧಿಕಾರದಲ್ಲಿ ಮೆರೆಯುತಿದ್ದಾರೆ. ಮೊದಲು ಅಂತಹ ಭ್ರಷ್ಟ ಜನಪ್ರತಿನಿಧಿಗಳು ಚುನಾವಣೆಗೇ ಸ್ಪರ್ಧಿಸದಂತಹ ಕಾನೂನು ಜಾರಿಗೊಳಿಸುವ ತುರ್ತು ಅಗತ್ಯವಿದೆ ಎಂದು ಡಾ.ವಿಶ್ವನಾಥ್ ಪತ್ರಿಕಾ ಹೇಳಿಕೆಯಲ್ಲಿ ಪ್ರತಿಪಾದಿಸಿದ್ದಾರೆ.
ಸೇನೆಯಲ್ಲಿ ‘ಅಗ್ನಿವೀರ’ರನ್ನು ಕೇವಲ ನಾಲ್ಕು ವರ್ಷ ದುಡಿಸಿಕೊಂಡು ನಂತರ ಅವರನ್ನು ಕೈಬಿಡುವುದಾದರೆ ಅದೇ ‘ಅಗ್ನಿ ವೀರ’ರು ಮುಂದೆ ನಿರುದ್ಯೋಗಿಗಳಾಗಿ ದೇಶಕ್ಕೆ, ಸಮಾಜಕ್ಕೆ ಬೆಂಕಿ ಹಚ್ಚುವ ‘ಬೆಂಕಿ ವೀರ’ರಾಗುವ ಭವಿಷ್ಯದ ಅಪಾಯವನ್ನು ಕೇಂದ್ರ ಸರ್ಕಾರವೇ ನಿರ್ಮಿಸಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಕೇವಲ ನಾಲ್ಕು ವರ್ಷಗಳ ನಂತರ ನಿರುದ್ಯೋಗಿಗಳಾಗುವ ಸೈನಿಕರನ್ನು ‘ಅಗ್ನಿ ವೀರರು’ ಎಂದು ಸಂಬೋಧಿಸುತ್ತಿರುವುದೇ ರಾಷ್ಟ್ರ ರಕ್ಷಣೆಯಂತಹ ಮಹತ್ವದ ವಿಷಯದಲ್ಲಿ ಕೇಂದ್ರ ಸರ್ಕಾರದ ಸಂವೇದನೆ ಇಲ್ಲದ ಅಪಾಯಕಾರಿ ನಡೆಯಾಗಿದೆ ಎಂದಿದ್ದಾರೆ.

ದೇಶದ ಬೆನ್ನೆಲುಬಾಗಿದ್ದ ರೈತರು ಬದಲಾದ ಕಾನೂನುಗಳಿಂದ ಈಗಾಗಲೇ ತಮ್ಮ ಜಮೀನುಗಳನ್ನು ಉದ್ಯಮಿಗಳಿಗೆ, ಕಾರ್ಪೊರೇಟ್ ಸಂಸ್ಥೆಗಳಿಗೆ ಮಾರಿಕೊಂಡು ನಿರುದ್ಯೋಗಿಗಳಾಗಿದ್ದಾರೆ. ಇನ್ನು ಅವರ ಮಕ್ಕಳು ನಾಲ್ಕು ವರ್ಷಗಳ ನಂತರ ‘ಅಗ್ನಿ ವೀರ’ರಾಗಿ ನಿರುದ್ಯೋಗಿಗಳಾಗಲಿದ್ದಾರೆ. ಆಗ ದೇಶದ ಒಳಗಿನ ಕಿಚ್ಚೇ ದೇಶವನ್ನು ಸುಡುವ ಭವಿಷ್ಯವನ್ನು ಮನುವಾದಿ ಬಿಜೆಪಿ ಬರೆಯುತ್ತಿದೆ. ಇಂತಹ ಭವಿಷ್ಯದ ಅಪಾಯವನ್ನು ಮನಗಂಡು ರೈತರು, ಯುವಕರು ಹಾಗೂ ಎಲ್ಲಾ ರೀತಿಯ ಶ್ರೀಸಾಮಾನ್ಯರು ಬೀದಿಗಿಳಿದು ಹೋರಾಟ ಮಾಡಬೇಕಿದೆ ಎಂದು ಆಮ್ ಆದ್ಮಿ ಪಾರ್ಟಿ ಜಿಲ್ಲಾಧ್ಯಕ್ಷ ಡಾ. ವಿಶ್ವನಾಥ್ ಮನವಿ ಮಾಡಿದ್ದಾರೆ.

ಒಂದೇ ಹುದ್ದೆಗೆ ನಾಲ್ವರನ್ನು ವರ್ಗಾವಣೆ ಮಾಡಿದ ಆರೋಗ್ಯ ಇಲಾಖೆ!!

Publicstory


ತುಮಕೂರು; ಜಿಲ್ಲೆಯ ಆರೋಗ್ಯ ಇಲಾಖೆಯ ಒಂದೇ ಹುದ್ದೆಗೆ ನಾಲ್ಕು ಮಂದಿಯನ್ನು ವರ್ಗಾವಣೆ ಮಾಡುವ ಮೂಲಕ ಆರೋಗ್ಯ ಇಲಾಖೆ ಎಡವಟ್ಟು ದಾಖಲೆ ಬರೆದಿದೆ.

ಒಂದೇ ಹುದ್ದೆಗೆ ಇಬ್ಬಿಬ್ಬರನ್ನು ವರ್ಗಾವಣೆ ಮಾಡಿ ಅಧಿಕಾರಿಗಳು ಅಧಿಕಾರ ವಹಿಸಿಕೊಳ್ಳುವುದಕ್ಕೆ ಕಿತ್ತಾಡುವುದನ್ನು ನೋಡಿ ಸಿಬ್ಬಂದಿ ಮಜಾ ತೆಗೆದುಕೊಳ್ಳುತ್ತಿದ್ದರು. ಆದರೆ ಈ ಸಲ ಆರೋಗ್ಯ ಸಚಿವ ಸುಧಾಕರ ಅವರು ನಾಲ್ಕು ಮಂದಿ ಅಧಿಕಾರಿಗಳನ್ನು ಒಂದೇ ಜಾಗಕ್ಕೆ ವರ್ಗಾವಣೆ ಮಾಡಿರುವುದು ನಗೆಪಾಟಲಿಗೆ ಮಾತ್ರವಲ್ಲ ಬೇರೆ ಬೇರೆ ರೀತಿಯ ಚರ್ಚೆಗೂ ಕಾರಣವಾಗುತ್ತಿದೆ.

ಕೊರಟಗೆರೆ ತಾಲ್ಲೂಕು ಅಧೀಕ್ಷಕರು ವಯೋನಿವೃತ್ತಿಗೊಳ್ಳುತ್ತಿದ್ದಾರೆ. ಆ ಜಾಗಕ್ಕೆ ಹಿರಿಯೂರು ತಾಲ್ಲೂಕು ಅಸ್ಪತ್ರೆಯ ಕಚೇರಿ ಅಧೀಕ್ಷಕ ಸಿ.ಕೆ. ಕುಮಾರಸ್ವಾಮಿ, ಹೊಸಕೋಟೆ ತಾಲ್ಲೂಕಿನ ಸಿ.ಕೆ.‌ಉಷಾ ಹಾಗೂ ಕಡೂರಿನ ಕಲ್ಪನಾ, ಕೂಡ್ಲಗಿಯ ಮಂಜಣ್ಣ ಅವರಿಗೂ ಭಾಗ್ಯ ಕಲ್ಪಿಸಲಾಗಿದೆ!!
ಹಿಂದುಳಿದ ತಾಲ್ಲೂಕು ಕೊರಟಗೆರೆ ಈ ತಾಲ್ಲೂಕು ಆಸ್ಪತ್ರೆಯ ಹುದ್ದೆಯಲ್ಲಿ ಇನ್ನೆಂಥ ಮಾಯಾದಂಡ ಅಡಗಿರಬಹುದು ಎಂದು ಇಲಾಖೆಯ ಸಿಬ್ಬಂದಿಯೇ ಜೋರು ಚರ್ಚೆಯಲ್ಲಿ ತೊಡಗಿದ್ದಾರೆ

ಪಾವಗಡದಲ್ಲಿ ಇಬ್ಬರ ಸಾವು

Publicstory


ಪಾವಗಡ: ತಾಲ್ಲೂಕಿನ ಕೆಂಚಗಾನಹಳ್ಳಿ ಗೇಟ್ ಬಳಿ ಶನಿವಾರ ಕಾರ್ ಹಾಗೂ ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟಿದ್ದಾರೆ.

ನೀಲಮ್ಮನಹಳ್ಳಿಯ ಶ್ರೀನಿವಾಸ್ (65), ಸೀನಪ್ಪ (57) ಮೃತರು. ನಾರಾಯಣ ನಾಯ್ಕ, ನರಸಿಂಹಪ್ಪ ಎಂಬುವರಿಗೆ ತೀವ್ರ ಗಾಯಗಳಾಗಿವೆ.

ದೊಡ್ಡಹಳ್ಳಿ ಕಡೆಯಿಂದ ಪಟ್ಟಣದ ಕಡೆಗೆ ಬರುತ್ತಿದ್ದ ಕಾರ್ ಟಿ ವಿ ಎಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ನಂತರ ಮತ್ತೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಟಿ ವಿ ಎಸ್ ದ್ವಿ ಚಕ್ರ ವಾಹನದಲ್ಲಿದ್ದ ಇಬ್ಬರಿಗೂ ಗಾಯಗಳಾಗಿವೆ.

ಮತ್ತೊಂದು ದ್ವಿ ಚಕ್ರ ವಾಹನದಲ್ಲಿದ್ದ ಇಬ್ಬರೂ ಪಟ್ಟಣದ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಪಟ್ಟಣ ಠಾಣೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದರು.

ಬಗರ್ ಹುಕುಂ; ಜಂಟಿ ಸರ್ವೆಗೆ ಡೀಸಿ‌ ಒಪ್ಪಿಗೆ

Publicatory


Tumakuru: ಕಳೆದ ಮೂರು ದಿನಗಳಿಂದ ಕರ್ನಾಟಕ ಪ್ರಾಂತ ರೈತ ಸಂಘ ದ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಛೇರಿ ಎದುರು ನಡೆಯುತ್ತಿದ್ದ ಬಗರ್ ಹುಕಂ ಸಾಗುವಳಿದಾರರ ಅನಿರ್ದಿಷ್ಟಾವಧಿ ಪ್ರತಿಭಟನೆ ಇಂದು ಮುಕ್ತಾಯಗೊಂಡಿತು.

ಅರಣ್ಯ ಇಲಾಖೆ ಜೊತೆ ತಕರಾರು ಇರುವ ಎಲ್ಲಾ ಬಗರ್ ಹುಕಂ ಸಾಗುವಳಿ ಜಮೀನಿನ ರೈತರ ಸ್ವಾಧೀನ ರಕ್ಷಿಸಲು ಜಂಟಿ ಸರ್ವೆ ಹಾಗೂ ಜಂಟಿ ಸಭೆ ಮಾಡುವುದಾಗಿ ಜಿಲ್ಲಾಧಿಕಾರಿಯ ಲಿಖಿತ ಭರವಸೆ ಆಧಾರದಲ್ಲಿ ಪ್ರತಿಭಟನಾ ಧರಣಿ ವಾಪಸ್ಸು ಪಡೆಯಲಾಯಿತು.

ಪ್ರತಿಭಟನಾ ನಿರತರು ಒದಗಿಸಿರುವ ಗ್ರಾಮ ಹಾಗೂ ಸರ್ವೆ ನಂಬರ್ ಗಳ ಜಮೀನುಗಳ ಜಂಟಿ ಸರ್ವೆ ನಡೆಸಿ ಅರಣ್ಯ ಇಲಾಖೆ ಯಿಂದ ಯಾವುದೇ ಕಿರುಕುಳ ಆಗದಂತೆ ಕ್ರಮ ವಹಿಸಬೇಕು. ಜಂಟಿ ಸರ್ವೆ ಆಗುವ ವರೆಗೆ ಹಾಗೂ ಕಂದಾಯ ಇಲಾಖೆಗೆ ವರ್ಗಾಯಿಸಿರುವ ಡೀಮ್ಡ್ ಆರಣ್ಯದ ವ್ಯಾಪ್ತಿ ಪ್ರಮಾಣ ,ಗಡಿ ಗುರುತಿಸುವವರೆಗೆ ರೈತರ ಮೇಲೆ ದೌರ್ಜನ್ಯ ನಡೆಸದಂತೆ ಅರಣ್ಯ ಇಲಾಖೆಯನ್ನು ನಿರ್ಭಂದಿಸಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘ ರಾಜ್ಯ ಮುಖಂಡ ಟಿ ಯಶವಂತ ಆಗ್ರಹಿಸಿದರು.

ಅರಣ್ಯ ಇಲಾಖೆ ಮೂಲಕ ಕಿತ್ತುಕೊಂಡಿರುವ ಬಗರ್ ಹುಕಂ ಸಾಗುವಳಿ ಭೂಮಿ ಮರಳಿಸಲು ,ಸಾಗುವಳಿ ಮಂಜೂರಾತಿ ಆದೇಶ ಪಡೆದಿರುವ ಎಲ್ಲಾ ಬಗರ್ ಹುಕುಂ ಸಾಗುವಳಿದಾರರಿಗೆ ದುರಸ್ತ್ ಮಾಡಿಸಿ ಪಹಣಿ ವಿತರಿಸಲು, ಬಗರ್ ಹುಕಂ ಸಕ್ರಮ ಕೋರಿ ಅರ್ಜಿ ಸಲ್ಲಿಸಲು ಇರುವ ಅವಕಾಶವನ್ನು ವಿಳಂಬ ಮಾಡದೇ ಕಲ್ಪಿಸಲು ,ವಸತಿ ರಹಿತರಿಗೆ ಮನೆ-ನಿವೇಶನ ಒದಗಿಸಲು, ಹೇಮಾವತಿ ನಾಲೆ,ರಾಷ್ಟ್ರೀಯ ಹೆದ್ದಾರಿ, ಎತ್ತಿನಹೊಳೆ ,ರೈಲ್ವೆ ಮುಂತಾದ ಯೋಜನೆಗಳಿಗೆ ಭೂ ಸ್ವಾಧೀನಕ್ಕೆ ಒಳಗಾದ ಬಗರ್ ಹುಕುಂ ಸಾಗುವಳಿದಾರರು ಸೇರಿದಂತೆ ಎಲ್ಲಾ ರೈತರಿಗೆ ಪರಿಹಾರದ ಹಣ ವಿತರಿಸಲು ಜಿಲ್ಲಾಡಳಿತ ಹಾಗೂ ರಾಜ್ಯ ಸರ್ಕಾರ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆ ನೇತೃತ್ವ ವನ್ನು ಕರ್ನಾಟಕ ಪ್ರಾಂತ ರೈತ ಸಂಘ ಜಿಲ್ಲಾ ಸಂಚಾಲಕ ಅಜ್ಜಪ್ಪ ,ಮುಖಂಡರಾದ ಎನ್ ಕೆ ಸುಬ್ರಹ್ಮಣ್ಯ, ನರಸಿಂಹಮೂರ್ತಿ, ದೊಡ್ಡನಂಜಯ್ಯ, ಬಸವರಾಜು, ಯಾದವಮೂರ್ತಿ, ಲೋಕೇಶ್, ಆರ್ ಎಸ್ ಚನ್ನಬಸವಣ್ಣ ,ಮಾರುತಿ ಕೆಆರ್ ,ಮೂಡ್ಲಪ್ಪ, ಗೌರಮ್ಮ,ನಾಗರಾಜು,ಕರಿಬಸವಯ್ಯ, ಮಂಜುನಾಥ್ ಮುಂತಾದವರು ವಹಿಸಿದ್ದರು.

ತುಮಕೂರು ನದಿಗಳ ಪುನರುಜ್ಜೀವನದ ಬಗ್ಗೆ ಮೌನ ಏಕೆ?

Publicstory


Tumkuru: ತುಮಕೂರು ಜಿಲ್ಲೆಯಲ್ಲಿ ಹರಿಯುವ ಸುವರ್ಣಮುಖಿ, ಶಿಂಷಾ, ಜಯ ಮಂಗಲಿ, ಗರುಡಾಚಲ, ನಾಗಿನಿ ನದಿಗಳ ಬಗ್ಗೆ ಜಿಲ್ಲೆಯ ರಾಜಕಾರಣಿಗಳು ಚಕಾರ ಎತ್ತುತ್ತಿಲ್ಲ ಏಕೆ ಎಂದು ವಕೀಲ, ಹಿರಿಯ ಪತ್ರಕರ್ತರಾದ ಸಿ.ಕೆ.ಮಹೇಂದ್ರ ಪ್ರಶ್ನಿಸಿದರು.

ಗುರುವಾರ ನಗರದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಆಯೋಜಿಸಿದ್ದ ಜಿಲ್ಲಾ ಜಲ ಸಂವಾದದಲ್ಲಿ ಜಿಲ್ಲೆಯ ನದಿಗಳ ಪುನರುಜ್ಜೀವನ ಕುರಿತು ಮಾತನಾಡಿದ ಅವರು, ಭದ್ರಾ, ಹೇಮಾವತಿ, ಎತ್ತಿನಹೊಳೆ ಯೋಜನೆಗಳ ಬಗ್ಗೆ ಮಾತನಾಡಿದಷ್ಟು ನಮ್ಮ‌‌ ಜಿಲ್ಲೆಯಲ್ಲೇ ಹರಿಯುವ ನದಿಗಳ ಬಗ್ಗೆ ಮಾತನಾಡದೇ ಇರುವ ಹಿಂದೆ ರಾಜಕಾರಣ ಇದೆ. ಜಿಲ್ಲೆಯ ಜನ,‌ಜಲನಾಡಿಗಳ ಬಗ್ಗೆ ಎದೆಯಲ್ಲಿ ಕಾಳಜಿ ಇಲ್ಲದ ರಾಜಕಾರಣಿಗಳೆ ಹೆಚ್ಚಿದ್ದಾರೆ ಎಂದರು.

ತುಮಕೂರು ಜಿಲ್ಲೆ ಸಮೃದ್ಧ ನಾಡಾಗಿತ್ತು. ಹುಲಿ, ಆನೆಗಳಿದ್ದವು. ನದಿಗಳು ಬೋರ್ಗರೆತ ಇತ್ತು. ಜಲಪಾತಗಳಿದ್ದವು. ಇಂತ ಜಿಲ್ಲೆಯನ್ನು ಬರದ ಜಿಲ್ಲೆಯಾಗಲು ಏನು ಕಾರಣ ಎಂಬುದನ್ನು ಚಿಂತಿಸಬೇಕು ಎಂದರು.

ಕೇರಳ, ರಾಜಸ್ಥಾನಗಳಲ್ಲಿ ಅನೇಕ ನದಿಗಳನ್ನು ಜೀವಂತಗೊಳಿಸಿದ ಉದಾಹರಣೆಗಳು ನಮ್ಮ ಕಣ್ಮುಂದಿವೆ. ದೂರದ ಗಂಗಾ ನದಿ ಪುನರುಜ್ಜೀವನಗೊಳಿಸುವ ಬಗ್ಗೆ ಮಾತನಾಡುವ ನಾವು ನಮ್ಮ ಸುವರ್ಣಮುಖಿ ನದಿ ಬಗ್ಗೆ ಏಕೆ ಮಾತನಾಡುವುದಿಲ್ಲ ಎಂದರು.

ಜಿಲ್ಲೆಯಲ್ಲಿ ಬಡ ರೈತರು ನೀರಾವರಿ ಹೋರಾಟದಲ್ಲಿದ್ದಾರೆ. ಆದರೆ ರೈತರು ಹೋರಾಟ ಮಾಡಿ ತಂದ ನೀರನ್ನು ಕೈಗಾರಿಕೆಗಳಿಗೆ ನೀಡಲಾಗುತ್ತಿದೆ. ನೀರಾವರಿ ಹೋರಾಟಕ್ಕೆ ಜಿಲ್ಲೆಯ ಉದ್ಯಮಿಗಳ ಪಾತ್ರ ಏನಿದೆ. ನದಿ ನೀರನ್ನು ಕೃಷಿಗೆ ಮಾತ್ರ ನೀಡಬೇಕು. ಕೊಳಚೆ ಸಂಸ್ಕರಿಸಿದ ನೀರನ್ನು ಕೈಗಾರಿಕೆಗಳಿಗೆ ನೀಡಬೇಕು ಎಂದರು.

ಲೇಖಕ ಸಿದ್ದಲಿಂಗಪ್ಪ ಹೊಳತಾಳ್ ಮಾತನಾಡಿ, ಗಂಗಾನದಿಗಿಂತ ನಮ್ಮ ಸುವರ್ಣಮುಖಿ ನದಿಯೇ ನಮಗೆ ಶ್ರೇಷ್ಠ. ನಮ್ಮ ನದಿಗಳನ್ನು ನಾವು ಉಳಿಸುವ ಬಗ್ಗೆ ಮಾತನಾಡಬೇಕು ಎಂದರು.

ಸಿಪಿಎಂ ನ ಕಾರ್ಯದರ್ಶಿ ಎನ್.ಕೆ.ಸುಬ್ರಹ್ಮಣ್ಯ, , ಕಾಂಗ್ರೆಸ್ ಮುಖಂಡರಾದ ಮುರುಳೀಧರ ಹಾಲಪ್ಪ, ಪಾವಗಡದ ನಾಗಭೂಷಣ ರೆಡ್ಡಿ, ಕಾಂಗ್ರೆಸ್ ನ ನಿರಂಜನ್ ಟಿ.ಆರ್. , ರೈತ ಸಂಘದ ಚಂದ್ರಕಲಾ ಇತರರು ಇದ್ದರು.

ಶಿವಮೊಗ್ಗ ವಿ.ವಿ.: ರಮೇಶ್ ಗೆ ಪಿಎಚ್ ಡಿ ಪ್ರದಾನ

0

Publicstory


ಶಿವಮೊಗ್ಗ: ಇಲ್ಲಿ ಗುರುವಾರ ನಡೆದ ಕುವೆಂಪು ವಿ.ವಿ. ಘಟಿಕೋತ್ಸವದಲ್ಲಿ ತುಮಕೂರಿನ ಸುಫಿಯಾ ಕಾನೂನು ಕಾಲೇಜಿನ ಪ್ರಾಂಶುಪಾಲರಾದ ಡಾ.ರಮೇಶ್ ಅವರಿಗೆ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಯಿತು.

ಕಾನೂನು ವಿಭಾಗದಲ್ಲಿ ಸಂಶೋಧನಾ ಪ್ರಬಂಧ ಮಂಡನೆಗಾಗಿ ಪದವಿ ಪ್ರದಾನ ಮಾಡಲಾಯಿತು.‌ ವಿ.ವಿ. ಕುಲಪತಿ ಸೇರಿದಂತೆ ಅನೇಕ ಗಣ್ಯರು ಹಾಜರಿದ್ದರು.

ಭೀಕರ ಅಪಘಾತ: ಸಾವು

0

ಕೊರಟಗೆರೆ: ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಜೋನಿಗರಹಳ್ಳಿ ಗ್ರಾಮದಲ್ಲಿ ಭೀಕರ ಅಪಘಾತ ನಡೆದಿದೆ.

ಸ್ಥಳದಲ್ಲೇ ಕೊರಟಗೆರೆ ಪಟ್ಟಣದ ಅಲಿಂ ಪಾಷಾ ಬಿನ್ ಗೂರ್ಹನ್ ಖಾನ್ ರವರ ಮಗ ಸ್ಥಳದಲ್ಲೇ ಸಾವು.

ಕೊರಟಗೆರೆಯಿಂದ ತೋವಿನಕೆರೆಯ ಸಂಬಂಧಿಕರ ಮನೆಗೆ ಬರುವ ನಡು ರಸ್ತೆಯಲ್ಲಿ ಅಪಘಾತವಾಗಿದೆ.

ಜೋನಿಗರಹಳ್ಳಿ ಗ್ರಾಮದಲ್ಲಿ ರಸ್ತೆ ದುರಸ್ತೆ ಕಾಮಗಾರಿ ನಡೆಯುತ್ತಿತ್ತು.

ದಲಿತರ ಹತ್ಯೆ: ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ

Publicstory


ತುಮಕೂರು: ಜಿಲ್ಲೆಯಲ್ಲಿ ನಡೆದಿರುವ ದಲಿತರ ಹತ್ಯೆ ಪ್ರಕರಣಗಳನ್ನು ಸಮಗ್ರ ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಗೃಹ ಸಚಿವ ಅರಗ ಜ್ಞಾನೇಂದ್ರ ಕಾರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ತುಮಕೂರು ಜಿಲ್ಲಾಧಿಕಾರಿ ಕಚೇರಿ ಮುಂದೆ ಇಂದು ದಿಢೀರ್ ಸಮಾವೇಶಗೊಂಡ ದಲಿತ ಸಂಘಟನೆಗಳ ಕಾರ್ಯಕರ್ತರು ಸಚಿವ ಅರಗ ಜ್ಞಾನೇಂದ್ರ ಕಾರಿಗೆ ಮುತ್ತಿಗೆ ಹಾಕಿ ಜಿಲ್ಲೆಯಲ್ಲಿ ಪದೇಪದೇ ದಲಿತರ ಮೇಲೆ ಹಲ್ಲೆ ನಡೆಯುತ್ತಿವೆ. ಕೊಲೆಗಳು ನಡೆದಿವೆ. ಈ ಎಲ್ಲಾ ಪ್ರಕರಗಣಗಳನ್ನು ಸಮಗ್ರ ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು.

ಕಳೆದ ಎರಡು ತಿಂಗಳಲ್ಲಿ ಮೂವರು ದಲಿತರ ಕೊಲೆಯಾಗಿದೆ. ಪೆದ್ದನಹಳ್ಳಿ ಘಟನೆಯಲ್ಲಿ ಇಬ್ಬರು ದಲಿತ ಯುವಕರು ಹತ್ಯೆಯಾಗಿದ್ದಾರೆ. ಇಂದು ಗುಬ್ಬಿಯಲ್ಲಿ ಹಾಡಹಗಲೇ ದಲಿತ ಮುಖಂಡ ನರಸಿಂಹಮೂರ್ತಿಯ ಹತ್ಯೆಯಾಗಿದೆ. ಜಿಲ್ಲೆಯಲ್ಲಿ ನಿರಂತರವಾಗಿ ದಲಿತರ ಹತ್ಯೆ ನಡೆಯುತ್ತಿದ್ದರೂ ಗೃಹ ಸಚಿವರು ಮಾತನಾಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಎಸ್ಎಫ್ಐ ಜಿಲ್ಲಾಧ್ಯಕ್ಷ ಈ.ಶಿವಣ್ಣ ಮಾತನಾಡಿ ಪದೇಪದೇ ದಲಿತರ ಹತ್ಯೆಗಳು ನಡೆಯುತ್ತಿವೆ. ಆದರೂ ಸರ್ಕಾರ ಈ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಪೆದ್ದನಹಳ್ಳಿ ಜೋಡಿ ಹತ್ಯೆ ಮಾಸುವ ಮುನ್ನವೇ ಗುಬ್ಬಿಯಲ್ಲಿ ಇಂದು ನರಸಿಂಹಮೂರ್ತಿಯ ಕೊಲೆಯಾಗಿದೆ. ತುರುವೇಕೆರೆಯಲ್ಲೂ ಹತ್ಯೆ ನಡೆದಿದೆ. ಒಂದು ಪ್ರಕರಣವನ್ನೂ ತನಿಖೆ ಮಾಡಿ ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ನೋಡಿಕೊಂಡಿಲ್ಲ ಎಂದು ದೂರಿದರು.

ಸಾಮಾಜಿಕ ಕಾರ್ಯಕರ್ತ ಹಾಗೂ ಮುಖಂಡ ಕೊಟ್ಟಶಂಕರ್ ಮಾತನಾಡಿ ಜಿಲ್ಲೆಯಲ್ಲಿ ದಲಿತರ ಹತ್ಯೆಗಳು ನಿರಂತರವಾಗಿ ನಡೆಯುತ್ತಿವೆ. ರಾಜ್ಯದ ಬಿಜೆಪಿ ಸರ್ಕಾರ ಹತ್ಯೆ ಮತ್ತು ದೌರ್ಜನ್ಯವನ್ನು ತಡೆಯುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿಲ್ಲ. ದಲಿತರಿಗೆ ರಕ್ಷಣೆ ನೀಡುತ್ತೇವೆ ಎಂದು ಹೇಳುವ ಸರ್ಕಾರ ಮಾತಿಗೆ ತಪ್ಪಿದೆ ಎಂದು ಆರೋಪಿಸಿದರು.

ಪ್ರತಿಭಟನೆಯಲ್ಲಿ ಸ್ಲಂ ಜನಾಂದೋಲನ ಕರ್ನಾಟಕದ ಸಂಚಾಲಕ ನರಸಿಂಹಮೂರ್ತಿ, ದಲಿತ ಮುಖಂಡರಾದ ಕೇಬಲ್ ರಘು, ಪಿ.ಎನ್.ರಾಮಯ್ಯ, ಮರಳೂರು ಕೃಷ್ಣ ಮೊದಲಾದವರು ಇದ್ದರು.

ಗುಬ್ಬಿ: ಶಾಸಕರ ಆಪ್ತ ಹಾಡುಹಗಲೇ ಕೊಲೆ

0

ಗುಬ್ಬಿ; ಹಾಡುವಾಗಲೇ ಪಟ್ಟಣದಲ್ಲಿ ಮಚ್ಚು-ಲಾಂಗುಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಮುಂಭಾಗ ಹೆದ್ದಾರಿ ಪಕ್ಕದಲ್ಲಿ ನಡೆದಿದೆ.

ಕೊಲೆಗೀಡಾದವರನ್ನು ತಾಲ್ಲೂಕಿನ ದಲಿತ ಸಂಘರ್ಷ ಸಮಿತಿ ಮುಖಂಡ ನರಸಿಂಹಮೂರ್ತಿ 50 ವರ್ಷ ಅಲಿಯಾಸ್ ಕುರಿ ಮೂರ್ತಿ ಎಂದು ಗುರುತಿಸಲಾಗಿದೆ . ಶಾಸಕ ಎಸ್.ಆರ್.ಶ್ರೀನಿವಾಸ್ ಅವರ ಅನುಯಾಯಿ.

ಹೆದ್ದಾರಿ ಪಕ್ಕದ ಟೀ ಅಂಗಡಿ ಬಳಿ ಸ್ನೇಹಿತರೊಡನೆ ಟೀ ಕುಡಿಯುತ್ತಾ ಕುಳಿತಿದ್ದಾಗ ದಾಳಿ ಮಾಡಿ ಕೊಲೆ ಮಾಡಲಾಗಿದೆ . ಕಾರಿನಲ್ಲಿ ಬಂದ ಅಪರಿಚಿತ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ .ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
[15/06, 14:56] Chidu: ಘಟನಾ ಸ್ಥಳಕ್ಕೆ ಜಿಲ್ಲಾ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪುರ್ ವಾಡ್ ಹಾಗೂ ಅಡಿಷನಲ್ ಎಸ್ಪಿ ಉದೇಶ್ ಭೇಟಿನೀಡಿದ್ದಾರೆ

ನಮಸ್ಕಾರ, ಚೆಗೆವಾರ..’

ಇಂದು ಚೆಗೆವಾರ ಹುಟ್ಟಿದ ದಿನ.
ಚೆಗೆವಾರನಿಗೂ ಭಾರತಕ್ಕೂ ಪ್ರೀತಿಯ ಸಂಬಂಧ.
ನಾನು ಕಂಡುಕೊಂಡದ್ದು ಇಲ್ಲಿದೆ-

ಜಿ ಎನ್ ಮೋಹನ್

ನಮಸ್ಕಾರ-
ಏನೋ ಬರೆಯುವುದರಲ್ಲಿ ತಲ್ಲೀನರಾಗಿದ್ದ ನೆಹರೂ ತಲೆ ಎತ್ತಿ ನೋಡಿದರು. ನೋಡಿದರು ಅಷ್ಟೇ ಮಾತು ಹೊರಡಲಿಲ್ಲ. ಅದೇ ಹಸಿರು ಪ್ಯಾಂಟ್, ಹಸಿರು ಶರ್ಟ್, ಹಸಿರು ಬೂಟು, ಅದೇ ಗಡ್ಡ, ಅದೇ ಹೊಂಗೂದಲು, ಅದೆಲ್ಲಕ್ಕಿಂತ ಹೆಚ್ಚಾಗಿ ಸದಾ ನಗು ತುಳುಕಿಸುವ ಅದೇ ಮುಖ. ಮಾತಿಲ್ಲದೆ ನಿಂತ ನೆಹರೂ ನಂತರ ತಮ್ಮ ಎದುರಿಗಿದ್ದ ಆ ಎತ್ತರದ ನಿಲುವಿನ ಹುಡುಗನ ಕೈ ಕುಲುಕಿ- ‘ನಮಸ್ಕಾರ, ಚೆಗೆವಾರ’ ಎಂದರು.

ನಂತರ ನೆಹರೂ, ಚೆಗೆವಾರ ಮಧ್ಯೆ ಸೇತುವೆಯಾಗಿ ನಿಂತದ್ದು ಆ ಅದೇ ಸಿಗಾರ್. ಕ್ಯೂಬನ್ ಸಿಗಾರ್. ಕ್ಯೂಬಾದ ಜನತೆ ತಮ್ಮ ಎದೆ ಹೊಲಗಳಲ್ಲಿ ಬೆಳೆಸಿದ್ದ ತಂಬಾಕನ್ನು ಸುರುಳಿ ಸುತ್ತಿ ಭಾರತಕ್ಕೆ ಪ್ರೀತಿಯಿಂದ ಕಳಿಸಿದ ಸಿಗಾರ್. ಒಂದು ಪೆಟ್ಟಿಗೆಯ ತುಂಬಾ ಸಿಗಾರ್ ಕಂತೆಯನ್ನೇ ಹೊತ್ತು ತಂದಿದ್ದ ಚೆಗೆವಾರ ಅದನ್ನು ನೆಹರೂ ಕೈಗಿತ್ತರು. ‘ಕ್ಯೂಬಾದಿಂದ, ಪ್ರೀತಿಯಿಂದ’ ಎಂದರು. ಒಂದು ಸಿಗಾರ್, ಒಬ್ಬ ಚೆಗೆವಾರ ಭಾರತ ಮತ್ತು ಕ್ಯೂಬಾದ ನಡುವಿನ ನಂಟಿಗೆ ಪ್ರತೀಕವಾಗಿ ನಿಂತಿದ್ದರು.


ಅವತ್ತು ಮೇ ದಿನಾಚರಣೆ. ಇಡೀ ಸಂಜೆ ಹಾಡಿ ಕುಣಿದು, ಗತ್ತು ಗಮ್ಮತ್ತಿನಿಂದ ಸಂಭ್ರಮದ ಹುಡಿ ಹಾರಿಸಿ ಹಿಂದಿರುಗುವಾಗ ಕಲಾವಿದ ಜಾನ್ ದೇವರಾಜ್ ಸ್ಕ್ರೀನ್ ಪ್ರಿಂಟ್ ನ ಒಂದು ಮುದ್ದಾದ ಪೋಸ್ಟರ್ ನನ್ನ ಕೈಗಿತ್ತರು. ಅದರಲ್ಲಿಯೂ ಅದೇ ಕಳೆ ಹೊತ್ತ ಮುಖ, ಎದುರಿಗಿದ್ದವರನ್ನು ಸಮ್ಮೋಹಿನಿಗೆ ಈಡು ಮಾಡುವ ಕಣ್ಣುಗಳು, ಅದೇ ಹರಕಲು ಗಡ್ಡ, ಕೆಳಗೆ ‘ಜಗತ್ತಿನ ಯಾವುದೇ ಮೂಲೆಯಲ್ಲಿ ನಡೆಯುತ್ತಿರುವ ದೌರ್ಜನ್ಯದ ವಿರುದ್ಧ ಸಿಡಿದೆದ್ದರೆ ನೀನು ನನ್ನ ಸಂಗಾತಿ’ ಎನ್ನುವ ಸಾಲುಗಳು. ಆ ಸಾಲುಗಳನ್ನು ನಾನು ಮತ್ತೆ ಮತ್ತೆ ಕಂಡೆ. ಅದೇ ಜಾನ್ ದೇವರಾಜ್ ಅವರ ಕಲಾತ್ಮಕ ಅಕ್ಷರಗಳಲ್ಲಿ, ಬೆಂಗಳೂರಿನ ಬೀದಿ ಬೀದಿಯ ಗೋಡೆಗಳ ಮೇಲೆ. ನಾನೂ ಸಹಾ ‘ ನಮಸ್ಕಾರ, ಚೆಗೆವಾರ’ ಎಂದೆ.


ನಾನು ಹಾಗೆ ಚೆಗೆವಾರಾನಿಗೆ ನಮಸ್ಕಾರ ಎಂದು ವಿಶ್ ಮಾಡುವ ಮೊದಲೇ, ಹಾಗೆ ಆತನನ್ನು ಎದೆಗೂಡಿನೊಳಗೆ ಎಳೆದುಕೊಳ್ಳುವ ದಶಕಗಳ ಮೊದಲೇ ನೆಹರೂ ಚೆಗೆವಾರನಿಗೆ ನಮಸ್ಕಾರ ಹೇಳಿಬಿಟ್ಟಿದ್ದರು. ಆದರೆ ಆಗ ಅವರ ಎದುರು ನಿಂತದ್ದು ಭಾರತಕ್ಕೆ ಬರುವ ಮೊದಲು ಮ್ಯಾಡ್ರಿಡ್ ನಲ್ಲಿ ತನ್ನ ೩೧ ನೆಯ ಹುಟ್ಟುಹಬ್ಬ ಆಚರಿಸಿಕೊಂಡು ಬಂಡ ಪಡ್ಡೆ ತರುಣ ಚೆ. ಜಗತ್ತನ್ನು ಬೆಕ್ಕಸ ಬೆರಗಾಗುವಂತೆ ಮಾಡಿದ ‘ಡಾಕ್ಟರ್’. ಇಡೀ ಅಮೆರಿಕಾದ ಎದೆಯಲ್ಲಿ ಅವಲಕ್ಕಿ ಕುಟ್ಟುವಂತೆ ಮಾಡಿದ ‘ಮಹಾನ್ ಚತುರ’. ಇಡೀ ಜಗತ್ತಿನ ಬೀದಿಗಳಲ್ಲಿ, ಗಲ್ಲಿಗಳಲ್ಲಿ ಹುಚ್ಚರಂತೆ ಜನ ಪ್ರೀತಿಸಿದ ‘ಚೆ’. ಎದೆಯಲ್ಲಿ ಕಾವ್ಯ, ಕೈಯಲ್ಲಿ ಖಡ್ಗ.. ಅಲ್ಲಲ್ಲ.. ಕೋವಿ ಹಿಡಿದ ‘ಚೆ’. ಎಂದೆಂದೂ ಕವಿಯಾಗದ ಬಂಡಾಯಗಾರ ಎಂದು ನೋವಿನಿಂದ ತನ್ನನ್ನು ಬಣ್ಣಿಸಿಕೊಂಡ ‘ಚೆ’.


ಚೆಗೆವಾರ ಭಾರತಕ್ಕೆ ಬಂದಿದ್ದರು ಎಂದು ಗೊತ್ತಾದದ್ದೇ ನಾನು ಒಂದು ಕ್ಷಣ ಮಾತಿಲ್ಲದವನಾದೆ. ನಾನು ಆ ಚೆಗೆವಾರ ಪ್ರೀತಿಗೆ ಬಿದ್ದು, ಆ ಕಾರಣಕ್ಕಾಗಿಯೇ ಕ್ಯೂಬಾಕ್ಕೆ ಹೋಗಿ ಬಂದು, ಇದ್ದ ನೂರೆಂಟು ಮಾಹಿತಿಗಳನ್ನು ಗುಡ್ಡೆ ಹಾಕಿಕೊಂಡು, ನನ್ನೊಳಗಿನ ಎಲ್ಲಾ ಪ್ರೀತಿ ಧಾರೆ ಎರೆದು ‘ನನ್ನೊಳಗಿನ ಹಾಡು ಕ್ಯೂಬಾ’ ಎನ್ನುವ ಪ್ರವಾಸ ಕಥನ ಬರೆದಿದ್ದೆ. ಆಗಲೂ ಸಿಗದಿದ್ದ ಈ ಒಂದು ಮಾಹಿತಿ ಈಗ ಥಟ್ಟೆಂದು ನನ್ನೆದುರು ನಿಂತಿತ್ತು.

ಹಾಗೆ ಚೆಗೆವಾರ ಭಾರತಕ್ಕೆ ಬಂದದ್ದನ್ನು ಬಿಡಿಸಿಟ್ಟವರು ಓಂ ತನ್ವಿ, ಹೆಸರಾಂತ ಪತ್ರಕರ್ತ. ‘ಜನಸತ್ತಾ’ ದೈನಿಕದ ಸಂಪಾದಕರಾಗಿದ್ದ ಓಂ ತನ್ವಿ ಅವರಿಗೂ ನನ್ನಂತೆಯೇ ಚೆಗೆವಾರ ಹುಚ್ಚು. ಕ್ಯೂಬಾ ಪ್ರವಾಸ ಕಥನ ಬರೆಯುತ್ತಾ ನಾನು ಚೆಗೆವಾರ ಎನ್ನುವುದೇ ಒಂದು ಗುಂಗೀ ಹುಳು ಎಂದು ಬಣ್ಣಿಸಿದ್ದೆ. ಚೆ ಎನ್ನುವುದೊಂದು ಹುಚ್ಚು. ಚೆ ಎನ್ನುವುದು ಹುಚ್ಚೇ ಆದಲ್ಲಿ ಜಗತ್ತು ಹುಚ್ಚರ ಸಂತೆಯಾಗಲಿ, ಆಸ್ಪತ್ರೆ ಇಲ್ಲದಿರಲಿ ಎಂದು ಆಶಿಸಿದ್ದೆ. ಓಂ ತನ್ವಿ ಅವರು ಚೆ ಭಾರತಕ್ಕೆ ಬಂದದ್ದಕ್ಕೆ ಸಾಕ್ಷಿಯಾಗಿದ್ದರು. ಸರಣಿ ಲೇಖನಗಳನ್ನು ಬರೆದರು. ಅಷ್ಟಕ್ಕೇ ಸುಮ್ಮನಾಗಲಿಲ್ಲ. ನೇರ ಕ್ಯೂಬಾಗೆ ಹೊದರು. ಚೆ ಮಗ ಕ್ಯಾಮಿಯೋ ಗೆವಾರನ ಕೈ ಕುಲುಕಿದರು. ಹವಾನಾದಲ್ಲಿ ಚೆ ಇದ್ದ ಮನೆ ಈಗ ಚೆಗೆವಾರ ಅಧ್ಯಯನ ಕೇಂದ್ರವಾಗಿ ಬದಲಾಗಿದೆ. ಅಲ್ಲಿದ್ದ ಕಡತಗಳನ್ನು ತಿರುವು ಹಾಕಿದರು. ಸ್ಪಾನಿಶ್ ನಲ್ಲಿದ್ದ ವರದಿಗಳನ್ನು ಹಿಂದಿಗೆ ಭಾಷಾಂತರ ಮಾಡಿಸಿದರು. ಪ್ರೀತಿಯಿಂದ ಸಿಗಾರ್ ಪಡೆದಿದ್ದ ನೆಹರೂ ಅವರು ಆ ಭೇಟಿಯನ್ನು ಸ್ಮರಣೀಯವಾಗಿಸಲು ‘ಕುಕ್ರಿ’ಯೊಂದನ್ನು ಕೊಟ್ಟಿದ್ದರು. ಅದನ್ನೂ ನೋಡಿ ಬಂದರು.

ಭಾರತಕ್ಕೆ ವಾಪಸಾದ ತನ್ವಿ ಅವರು ಸುಮ್ಮನೆ ಕೂರಲಿಲ್ಲ. ಇನ್ನು ನನ್ನ ಕೆಲಸ ಭಾರತದ ಕಡತಗಳನ್ನು ತಿರುವಿಹಾಕುವುದು ಎಂದು ನಿರ್ಧರಿಸಿದರು. ಭಾರತ ಸರ್ಕಾರದ ಅನೇಕ ಕಚೇರಿಗಳಿಗೆ ಭೇಟಿ ಕೊಟ್ಟರು. ಭಾರತದ ಯಾವುದೇ ಕಡತಗಳಲ್ಲಿಯೂ ‘ಚೆ’ ಎನ್ನುವ ಹೆಸರೇ ಇಲ್ಲ. ಅವರು ಕಮಾಂಡೆಂಟ್ ಅರ್ನೆಸ್ಟೊ ಗೆವಾರ ಮಾತ್ರ.ಅರ್ಜೆಂಟೀನಾದ ಚೆ ಕ್ರಾಂತಿಗೆ ಸಾಥ್ ನೀಡಿದ್ದು ಕ್ಯೂಬಾಗೆ. ಆತ ಭಾರತಕ್ಕೆ ಬಂದಿಳಿದಾಗ ಚೆ ಯಾರು ಎನ್ನುವ ಗೊಂದಲ. ಯಾವ ದೇಶದ ನಾಗರಿಕ ಎಂದು. ಫಿಡೆಲ್ ಹೇಳಿದ್ದರು- ಚೆ ಕ್ಯೂಬಾದ ಸಹಜ ನಾಗರಿಕ ಎಂದು. ಕ್ರಾಂತಿ ಜರುಗಿ ಇನ್ನೂ ಆಗತಾನೆ ಫಿಡೆಲ್ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿತ್ತು. ಆಗ ಚೆ ಯಾವ ಹುದ್ದೆಯನ್ನೂ ಹೊಂದಿರಲಿಲ್ಲ. ಹಾಗಾಗಿಯೇ ಭಾರತಕ್ಕೆ ಮತ್ತೂ ಗೊಂದಲ. ಇವರನ್ನು ಏನೆಂದು ಗುರುತಿಸುವುದು ಅಂತ. ಕೊನೆಗೆ ಕ್ಯೂಬಾದ ನಾಯಕ ಅಂತ ಮಾತ್ರ ನಮೂದಿಸಿ ಕೈ ತೊಳೆದುಕೊಂಡಿತು.

ಚೆಗೆವಾರ ಭಾರತಕ್ಕೆ ಬಂದಾಗ ಉಳಿದುಕೊಂಡಿದ್ದು ಆಗ ತಾನೇ ಹೊಸದಾಗಿ ನಿರ್ಮಿಸಲಾಗಿದ್ದ ದೆಹಲಿಯ ಅಶೋಕಾ ಹೋಟೆಲ್ ನಲ್ಲಿ. ಆಕಾಶವಾಣಿಯ ಕೆ ಪಿ ಭಾನುಮತಿ ಅವರು ಅಲ್ಲಿಯೇ ಚೆಗೆವಾರನನ್ನು ಸಂದರ್ಶಿಸಿದ್ದರು. ಓಂ ತನ್ವಿ ಅವರ ಮನೆಯ ಕದವನ್ನೂ ತಟ್ಟಿದರು ಭಾನುಮತಿ ‘ಮಿಲಿಟರಿ ಧಿರಿಸಿನಲ್ಲಿದ್ದ ಸಂತ’ನ ಬಗೆಗಿನ ನೆನಪುಗಳ ಮಾಲೆ ಹೆಣೆದರು. ನಂತರ ತನ್ವಿ ಹಿಂದುಸ್ತಾನ್ ಟೈಮ್ಸ್ ಕಚೇರಿಗೆ ಭೇಟಿ ಕೊತ್ತರು. ಚೆ ಭಾರತ ಭೇಟಿಯ ಬಗ್ಗೆ ಇದ್ದ ವರದಿಗಳನ್ನೆಲ್ಲಾ ಸಂಗ್ರಹಿಸಿದರು. ಸರ್ಕಾರದ ಫೋಟೋ ಡಿವಿಷನ್ ನಲ್ಲಿದ್ದ ಫೋಟೋಗಳನ್ನು ಸಂಗ್ರಹಿಸಿದರು. ಚೆ ಭೇಟಿ ನೀಡಿದ ಕೊಲ್ಕೋತ್ತಕ್ಕೂ ಹೋಗಿ ಬಂದರು. ೧೯೬೨ ರಲ್ಲಿ ಖ್ಯಾತ ವ್ಯಂಗ್ಯಚಿತ್ರಕಾರ ಅಬು ಅಬ್ರಹಾಂ ಲಂಡನ್ ನ ‘ ದಿ ಅಬ್ಸರ್ವರ್’ ಪತ್ರಿಕೆಯಲ್ಲಿದ್ದಾಗ ಹವಾನಾದಲ್ಲಿ ಚೆಗೆವಾರನ ಎದುರು ಕೂತು ರೇಖಾಚಿತ್ರ ಬಿಡಿಸಿದ್ದರು. ಆ ರೇಖಾಚಿತ್ರವನ್ನೂ ತನ್ವಿ ಸಂಗ್ರಹಿಸಿದರು. ಅಲ್ಲೊಂದು ವಿಶೇಷವಿತ್ತು. ಅಬು ಬರೆದ ಚಿತ್ರದ ಶರ್ಟ್ ನ ಕಾಲರ್ ಮೇಲೆ ಚೆಗೆವಾರ ಪ್ರೀತಿಯಿಂದ ‘ಚೆ’ ಎಂದು ಸಹಿ ಮಾಡಿದ್ದ.

ಭಾರತಕ್ಕೆ ಕ್ಯೂಬಾ ಬಗ್ಗೆ ಇದ್ದ ಪ್ರೀತಿ ಅಪಾರ, ಇದು ಆ ಫಿಡೆಲ್ ಕ್ಯಾಸ್ತ್ರೋಗೂ ಗೊತ್ತಿತ್ತು. ‘ಭಾರತ ತನ್ನ ಕಡುಕಷ್ಟ ಕಾಲದ ಸಂಗಾತಿ’ ಎಂದು. ಹಾಗಾಗಿಯೇ ಕ್ಯೂಬಾ ಅಮೆರಿಕಾವನ್ನು ಹಿಮ್ಮೆಟ್ಟಿಸಿ, ಮಣಿಸಿ ಸ್ವಾತಂತ್ರ್ಯ ಗಳಿಸಿಕೊಂಡ ೬ ತಿಂಗಳಿಗೇ ಚೆಗೆವಾರನನ್ನು ಭಾರತದತ್ತ ಮುಖ ಮಾಡುವಂತೆ ಮಾಡಿದ್ದರು.

ಚೆಗೆವಾರ ಎಂದರೆ ಚೆಗೆವಾರನೇ. ನಿನಗೆ ಅಸ್ತಮಾ ಇದೆ ಇನ್‌ಹೇಲರ್ ತೆಗೆದುಕೊಂಡು ಹೋಗಲು ಮರೆಯಬೇಡ ಎಂದು ಹೆಂಡತಿ ತಾಕೀತು ಮಾಡಿದಾಗ ಅತ್ಯಂತ ನಿಷ್ಥನಾಗಿ ಇನ್‌ಹೇಲರ್ ಮರೆತು ಕವಿತೆಯ ಸಂಕಲನಗಳನ್ನು ಪ್ಯಾಕ್ ಮಾಡಿಕೊಳ್ಳುತ್ತಿದ್ದಾತ, ಭಾರತಕ್ಕೆ ಬಂದಾಗಲೂ ಹಾಹಾಗೇ ಮಾಡಿದ್ದ. ನೆಹರೂ ಅವರ ‘ಡಿಸ್ಕವರಿ ಆಫ್ ಇಂಡಿಯಾ’ವನ್ನು ಓದಿ ಅವರೊಂದಿಗೆ ಊಟಕ್ಕೆ ಕುಳಿತಾಗ ಊಟ ಮಾಡುವುದನ್ನೂ ಮರೆತು ಅದರ ಬಗ್ಗೆ ಗಂಟೆಗಟ್ಟಲೆ ಮಾತನಾಡಿದ್ದ.

ನೆಹರೂ, ಕೃಷ್ಣ ಮೆನನ್ ಭೇಟಿ ಮಾಡಿದ ಚೆಗೆವಾರನಿಗೆ ಅಷ್ಟು ಮಾತ್ರವೇ ಗುರಿ ಆಗಿರಲಿಲ್ಲ. ಆತ ಹೊಲಗಳಲ್ಲಿ ಮಕ್ಕಳನ್ನು ಬೆನ್ನಿಗೆ ಕಟ್ಟಿಕೊಂಡು ಕಬ್ಬು ಕತ್ತರಿಸಿದವನು. ಶಾಲೆಗಳಲ್ಲಿ ಮಕ್ಕಳು ಓದಲೆಂದು ಚಿಮಣಿ ದೀಪ ಹೊತ್ತಿಸಿದವನು. ಹಾಗಾಗಿಯೇ ಭಾರತದಲ್ಲೂ ಆತ ಮಾಡಿದ್ದು ಅದನ್ನೇ. ತನ್ನ ಆರು ಜನರ ನಿಯೋಗವನ್ನು ಹೊರಡಿಸಿಕೊಂಡು ಆತ ದೆಹಲಿಯ ಸನಿಹದಲ್ಲೇ ಇದ್ದ ಪಿಲಾನ್ ನ ಶಾಲೆ, ಹೊಲಗಳತ್ತ ನಡೆದ. ಶಾಲೆಯ ಪರಿಸ್ಥಿತಿ ಆತನನ್ನು ಕಂಗೆಡಿಸಿಹಾಕಿತು. ರೈತರು ಚೆಯನ್ನು ಕಂಡವರೇ ಹಾರ ಹಿಡಿದು ಬಂದರು. ಆದರೆ ಚೆ ಮನಸ್ಸು ಹಣ್ಣಾಗಿ ಹೋಗಿತ್ತು. ಆತನ ಕಣ್ಣೆದುರಿಗೆ ಕಂಡ ರೈತರ ಬಡತನ, ಕೈಗಾರಿಕೆಯ ಮಾಲೀಕರ ಶ್ರೀಮಂತಿಕೆ ಕುಗ್ದಿಸಿಹಾಕಿತ್ತು. ‘ಕೆಲವೇ ಮಂದಿಯ ಕೈಯಲ್ಲಿ ಎಷ್ಟೊಂದು, ಹಲವರ ಕೈನಲ್ಲಿ ಏನೂ ಇಲ್ಲ’ ಎಂದು ಬರೆದ.

ಕೊಲ್ಕೊತ್ತದ ಬೀದಿಗಳಲ್ಲಿ ಪಕ್ಕಾ ಪಡ್ಡೆ ಹುಡುಗನಂತೆ ಕ್ಯಾಮೆರಾ ಹಿಡಿದು ಬೀದಿ ಬೀದಿಗಳ ಫೋಟೋ ತೆಗೆಯುತ್ತಾ ಹೋದ. ನೆಹರೂ ಕೊಟ್ಟ ಕುಕ್ರಿಯ ಮೇಲಿದ್ದ ಕೆತ್ತನೆ ನೋಡಿ ಮಗುವಿನಂತೆ ಕಣ್ಣರಳಿಸಿದ. ಸಕ್ಕರೆಯ ನಾಡಿನಿಂದ ಬಂದವನು ಹಲವರ ಎದೆಯಲ್ಲಿ ಸಿಹಿ ಉಳಿಸಿ ಹೋದ. ಯಾಕೋ ತುಂಬಾ ನೆನಪಾಗುತ್ತಿದೆ. ಅವತ್ತು ಹವಾನಾದ ಕಾರ್ಮಿಕ ಕಾಲೋನಿಯಲ್ಲಿ ಗೆಳೆಯ ಸಿದ್ಧನಗೌಡ ಪಾಟೀಲ್ ತಮ್ಮ ಕಂಚು ಕಂಠವನ್ನು ಸರಿಮಾಡಿಕೊಂಡು ನಿಂತಿದ್ದರು. ಚೆಗೆವಾರನನ್ನು ನನ್ನಂತೆಯೇ ಇನ್ನಿಲ್ಲದಂತೆ ಪ್ರೀತಿಸಿದ ಜೀವ ಅದು. ‘ಭೂಮಿ ಮೇಲೆ ಸೂರ್ಯ ಚಂದ್ರ ಇರುವವರೆಗೂ ನಿನ್ನ ಹೆಸರು ಅಜರಾಮರ ಚೆಗೆವಾರ, ಚೆಗೆವಾರ’ ಎಂದು ಹಾಡುತ್ತಿದ್ದರು.

ಚೆಗೆವಾರ ಭಾರತಕ್ಕೆ ಬಂದದ್ದು ಜುಲೈ 1 ರಂದು 1959. ಆರು ದಿನಗಳ ಕಾಲ ಇದ್ದು ಹೋದ ಆ ‘ಚೆ ‘ಹೆಜ್ಜೆಗಳನ್ನು ಹುಡುಕಲು ನಾನು ಇದನ್ನು ಬರೆಯಲು ಕುಳಿತೆ..