Saturday, May 9, 2026
Google search engine
Home Blog Page 214

ಕೊರೊನಾ ತಂದುಕೊಟ್ಟ ಮಗ!

Publicstory. in


Tumkuru: ಜಗತ್ತಿನ‌ ಎಲ್ಲರಿಗೂ ಕೊರೊನಾ ಸೋಂಕು ದುಃಖದ ಮೂಟೆಯನ್ನೇ ತಂದು ಸುರಿಸಿದೆ.

ಪ್ರಾಣ ಕಳಕೊಂಡವರ ಕುಟುಂಬದವರ ನೋವು ಹೇಳತೀರದು. ಕೊರೊನಾ ತೊಲಗಲಿ ಎಂದು ದೇವರಿಗೆ ಮೊರೆ ಇಟ್ಟವರ ಸಂಖ್ಯೆಗೇನು ಕಡಿಮೆ ಇಲ್ಲ.

ಆದರೆ‌ ಇಲ್ಲೊಂದು ಕುಟುಂಬಕ್ಕೆ ಕಳೆದು ಹೋಗಿದ್ದ ಮಗನನ್ನು ಕೊರೊನಾ ತಂದುಕೊಟ್ಟಿದೆ.

ಈ ಕುಟುಂಬದ ಸಂತಸಕ್ಕೀಗ ಪಾರವೇ ಇಲ್ಲ. ಜಗತ್ತಿನ, ದೇಶದ ಎಷ್ಟೋ ಮನೆಗಳಲ್ಲಿ ಇಂಥ ಘಟನೆಗಳು ನಡೆದಿರಬಹುದೇನೋ?

ಹಾರಿಹೋದ ಹಣತೆಯೀಗ ಬೆಳಗುತ್ತದೆ. ಮಗನ ನಿರೀಕ್ಷೆಯೇ ಬಿಟ್ಟಿದ್ದ ತಂದೆಗೆ ಮಗ ಮನೆಯ ಮುಂದೆ ನಿಂತಾಗ ಆದ ಸಂತಸ ಅಷ್ಟಿಷ್ಟಲ್ಲ.

ಆದರೆ ಈ ಸಂತಸದಲ್ಲಿ ಮಗನನ್ನು ತಬ್ಬಿಕೊಳ್ಳುವ ಸುಖ ಮಾತ್ರ ತಂದೆ ತಾಯಿಗೆ ಸಿಕ್ಕಿಲ್ಲ. ಮನೆ ಬಾಗಿಲಿಗೆ ಬಂದಿರುವ ಮಗ ಕೊರೊನಾ ಪರೀಕ್ಷೆ ಎದುರಿಸಿ ಮನೆಯೊಳಗೆ ಕಾಲಿಡಬೇಕಾಗಿದೆ. ಕೊರೊನಾ ಕ್ವಾರಂಟೈನ್ ನಲ್ಲಿ ಮಗ ಇದ್ದಾನೆ‌.

ಆಗಿದ್ದಿಷ್ಟೇ


ಕುಣಿಗಲ್ ತಾಲ್ಲೂಕಿನ ಕೊತ್ತಗೆರೆ ಹೋಬಳಿಯ ಗುನ್ನಾಗರೆ ಗ್ರಾಮದ ಕೃಷ್ಣಪ್ಪ ಅವರ ಮಗ ರಂಗಸ್ವಾಮಿ 2011ರಲ್ಲಿ ಮನೆಯಿಂದ‌ ನಿಗೂಢವಾಗಿ ಕಾಣೆಯಾಗಿದ್ದ.

ಪಟ್ಟಣದ ಜ್ಞಾನಭಾರತಿ ಶಾಲೆಯ ಹತ್ತನೇ ತರಗತಿಯಲ್ಲಿ ಓದುತ್ತಿದ್ದ ಆತ ಶಾಲೆಗೆ ಹೋದವನು ವಾಪಸ್ ಆಗಿರಲಿಲ್ಲ. ಪೊಲೀಸರಿಗೆ ದೂರು ನೀಡಿದ ಬಂತರವೂ ಮಗನನ್ನು ಹುಡುಕಲಾಗದೇ ದಂಪತಿ ಕೈ ಚೆಲ್ಲಿದ್ದರು.

ಇಷ್ಟು ವರ್ಷ ಕಾಲ ಸಣ್ಣ ಸುಳಿವು ಇಲ್ಲದ ಕಾರಣ ಮಗ ಬದುಕಿರುವ ಬಗ್ಗೆಯೂ ಅವರಿಗೆ ಅನುಮಾನ ಇತ್ತು.

ಶುಕ್ರವಾರ ರಾತ್ರಿ ರಂಗಸ್ವಾಮಿ ತನ್ನ ಅಜ್ಜಿಯಮನೆ ( ಶೆಟ್ಟಿಗೆರೆಗೆ) ಬಂದಾಗ ಅವರಿಗೂ ಅಚ್ಚರಿ.

ಯಾರಿವ, ಯಾರಿವ ಎಂದಾಗ, ನಾ ಅವನೇ, ನಾ ಅವನೇ ಎಂದು ಪರಿಚಯ ಹೇಳಿಕೊಂಡಿದ್ದಾನೆ ರಂಗಸ್ಚಾಮಿ.

ನಂತರ ಅಜ್ಜಿ ಮನೆಯವರು ಸೀದಾ ತಂದೆ ಮನೆಗೆ ವಿಷಯ ಮುಟ್ಟಿಸಿದ್ದಾರೆ.

ಬಾಲ್ಕಿಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ರಂಗಸ್ವಾಮಿ ಕೊರೊನಾದಿಂದ ಕೂಲಿ ಕೆಲಸ ಸಿಗದೇ ಕಂಗಾಲಾಗಿ ಊರಿಗೆ ಮರಳಿದ್ದಾಗಿ ಹೇಳಿದ್ದಾನೆ.

ಮರಳಿ ಮಣ್ಣಿಗೆ ಬಂದ ಮಗನ ಕಂಡು ಕುಟುಂಬ ಸಂತಸದಲ್ಲಿದೆ.‌ ಎಸ್ ಎಸ್ ಎಲ್ ಸಿ ಓದುತ್ತಿದ್ದವನು ಸೀದಾ ಪಾದ ಎಲ್ಲೆಲ್ಲಿಗೋ ಹೋಗಿದ್ದೇಕೆ? ಇಷ್ಟು ವರ್ಷ ಇಲ್ಲದ ಪ್ರೀತಿ ಕೊರೊನಾ ಮೂಡಿಸಿದ್ದೇಗೆ ಎಂಬುದನ್ನು ಆತ ಕ್ವಾರಂಟೈನ್ ನಿಂದ ಬಂದ ಬಳಿಕವೇ ತಿಳಿದುಕೊಳ್ಳಬೇಕಿದೆ.

ಮಹಾರಾಷ್ಟ್ರ ಗಡಿ ಭಾಗದಿಂದ ಬಂದಿರುವ ಕಾರಣ ಪೋಷಕರೆ ಎಚ್ಚೆತ್ತು , ಹತ್ತು ವರ್ಷದ
ನಂತರ ಬಂದ ಮಗನನ್ನು ಮನೆಗೆ ಸೇರಿಸದೆ, ಕೊರೊನಾ ಭೀತಿಯಿಂದ ಆರೋಗ್ಯ ತಪಾಸಣೆಗೆ ವಹಿಸಿದ್ದಾರೆ.

ಹುಲಿಯೂರು ದುರ್ಗದ
ಹೇಮಗಿರಿಬೆಟ್ಟದ ಬಳಿಯ ವಸತಿ ಶಾಲೆಗೆ ಕ್ವಾರಂಟೈನ್ ಮಾಡಲಾಗಿದೆ.

ಪರಿಸರ‌‌‌ ಚೆನ್ನಾಗಿದ್ದರೆ ಮಾತ್ರ ಬದುಕು ಹಸನು: ಸಿದ್ಧಗಂಗಾ ಶ್ರೀ

Publicstory. in


Tumkuru: ಸಿದ್ಧಗಂಗಾ ಮಠದ ಆವರಣದಲ್ಲಿ ಅರಳಿ ಗಿಡ ನೆಡುವ ಮುಖಾಂತರ ಜೀವವೈವಿದ್ಯ ಆಂದೋಲನಕ್ಕೆ ಇಂದು ಕರ್ನಾಟಕ ಜೀವ ವೈವಿದ್ಯ ಮಂಡಳಿ ಅಧ್ಯಕ್ಷ ಅನಂತಕುಮಾರ್ ಹೆಗಡೆ ಆಶೀಶಿರ ಅವರು ಚಾಲನೆ ನೀಡಿದರು.

ಸಿದ್ದಲಿಂಗ ಸ್ವಾಮೀಜಿ ಮಾತನಾಡಿ, ಗ್ರಾಮ ಮಟ್ಟದಿಂದ ರಾಷ್ಟ್ರಮಟ್ಟದವರೆಗೆ ಈ ಅಭಿಯಾನವನ್ನ ಆಂದೋಲನವನ್ನಾಗಿ ಮಾಡುವ ಮುಖಾಂತರವಾಗಿ ಪ್ರಭೇದ, ಜೀವ ವೈವಿದ್ಯ, ಕೆರೆ ಕಟ್ಟೆಗಳನ್ನ ಉಳಿಸುವಂತದ್ದು, ಅಲ್ಲದೇ ಹೊಸ ಚೈತನ್ಯವನ್ನು ಉಂಟು ಮಾಡುವ ರೀತಿಯಲ್ಲಿ ಜೀವ ಕಳೆಯನ್ನು ತುಂಬುವ ಕೆಲಸವನ್ನು ಜೀವವೈವಿದ್ಯ ಮಂಡಳಿ ಮಾಡುತಿರುವುದು ಸಂತೋಷದ ಸಂಗತಿ.

ಇಂದು ಮನುಷ್ಯ ಆರೋಗ್ಯವಾಗಿ ಬದುಕಬೇಕೆಂದರೆ ಆಹಾರವಷ್ಟೆ ಸಾಲದು ಉತ್ತಮ ಪರಿಸರವೂ ಕೂಡ ಅಗತ್ಯವಾಗಿದೆ. ಉತ್ತಮವಾದ ಆರೋಗ್ಯವಂತ ಗಾಳಿಯನ್ನು ಸೇವನೆ ಮಾಡಬೇಕೆಂದರೆ ಒಳ್ಳೆಯ ವಾತಾವರಣ ನಿರ್ಮಾಣವಾಗಬೇಕು.

ನಮ್ಮ ಸುತ್ತಮುತ್ತಲಿನ ಪರಿಸರ ಚೆನ್ನಾಗಿದ್ದರೆ ಮಾತ್ರ ಬದುಕು ಚೆನ್ನಾಗಿರುತ್ತದೆ. ಅದಕ್ಕಾಗಿ ಸರ್ಕಾರ ಇಂದು ಆಂದೋಲನವಾಗಿ ಮಾಡಿದೆ. ಈ ಹಿಂದೆ ಪ್ರತಿ ಗ್ರಾಮದಲ್ಲಿಯೂ ಸಹ ಗೋಕಟ್ಟೆ, ಗೋಮಾಳ, ದೇವಸ್ಥಾನ ಇರುತ್ತೀತ್ತು. ಆದರೆ ಇಂದು ಅವೆಲ್ಲವೂ ನಾಶವಾಗಿ ಹೋಗಿದೆ. ಪ್ರತಿಯೊಬ್ಬ ನಾಗರೀಕನೂ ಈ ಆಂದೋಲನದಲ್ಲಿ ಪಾಲ್ಗೊಂಡು ಪರಿಸರಕ್ಕೆ ಕೊಡುಗೆಯನ್ನು ನೀಡಬೇಕು ಎಂದರು.

ಉಪಅರಣ್ಯ ಸಂರಕ್ಷಣಾಧಿಕಾರಿ ಸತೀಶ್‍ಬಾಬು ರೈ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಚಂದ್ರಪ್ಪ, ತಿಪಟೂರಿನ ಸಹಾಯಕ ಅರಣ್ಯ ಅಧಿಕಾರಿ ಸಂತೋಷ ನಾಯಕ್, ಶಿರಾದ ಅರಣ್ಯ ಅಧಿಕಾರಿ ಅನೂಷಭಟ್, ಉಪವಲಯ ಅಧಿಕಾರಿ ರಬ್ಬಾನಿ ಉಪಸ್ಥಿತರಿದ್ದರು.

ಇನ್ಮುಂದೆ‌ 100 ದಿನ ಮಾತ್ರ ಶಾಲೆ !

Publicstory. in


Tumkuru: ವರ್ಷದಲ್ಲಿ 100 ದಿವಸ ಶಾಲೆಗಳನ್ನು ನಡೆಸಬೇಕೆಂದು ಕೇಂದ್ರ ಸರ್ಕಾರದ ಮಾರ್ಗಸೂಚಿಯಲ್ಲಿ ತಿಳಿಸಿರುವುದರಿಂದ ಮಕ್ಕಳ ಭವಿಷ್ಯ ಹೇಗೆ ರೂಪಿಸಬೇಕೆಂಬ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದು ಪ್ರಾಥಮಿಕ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಉಚಿತ ಪಠ್ಯ, ಉಚಿತ ಶಿಕ್ಷಣ, ಉಚಿತ ಸಮವಸ್ತ್ರ ನೀಡುವುದರಿಂದ ಪೋಷಕರು ಶೇಕಡ 40ರಷ್ಟು ಹಣವನ್ನು ಉಳಿತಾಯ ಮಾಡಬಹುದು. ಇದರಿಂದ ಅವರು ಆರ್ಥಿಕವಾಗಿ ಸಬಲರಾಗಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಹೀಗಿರಲಿದೆ Sslc ಪರೀಕ್ಷೆ


ಪ್ರಸಕ್ತ ಸಾಲಿನಲ್ಲಿ 8 ಲಕ್ಷ 48 ಸಾವಿರ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ನಿಗದಿತ ಅವಧಿಯಲ್ಲಿ ಪರೀಕ್ಷೆಗಳು ಪ್ರಾರಂಭವಾಗಲಿವೆ. ಪರೀಕ್ಷೆ ಬರೆಯುವ ಮಕ್ಕಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಮತ್ತು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬುವಂತಹ ಕೆಲಸ ಮಾಡಬೇಕು ಎಂದು ಸೂಚಿಸಿದರು.

ತುಮಕೂರಿನಲ್ಲಿ ಶಿಕ್ಷಣ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, 8.48 ಲಕ್ಷ ವಿದ್ಯಾರ್ಥಿಗಳಿಗೆ ಕೊರೊನ ಸಮಯದಲ್ಲಿ ಪರೀಕ್ಷೆ ನಡೆಸುವುದು ಸವಾಲಿನ ಕೆಲಸ. ದೈಹಿಕ ಅಂತರ ಕಾಪಾಡಿಕೊಂಡು ಪರೀಕ್ಷೆ ನಡೆಸಬೇಕಾದಂತಹ ಪರಿಸ್ಥಿತಿ ಬಂದಿದೆ ಎಂದರು.

ಹಿಂದೆ ಒಂದು ಕೊಠಡಿಗೆ 30 ವಿದ್ಯಾರ್ಥಿಗಳನ್ನು ಹಾಕಲಾಗುತ್ತಿತ್ತು. ಕೊರೊನ ಹಿನ್ನೆಲೆಯಲ್ಲಿ ಒಂದು ಕೊಠಡಿಗೆ 20 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಪರೀಕ್ಷೆ ಕೇಂದ್ರದ ಸುತ್ತ 500 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಹೇರುವಂತೆ ಪೊಲೀಸರಿಗೆ ಸೂಚಿಸಲಾಗುವುದು ಎಂದರು ಹೇಳಿದರು.

SSLC ಪರೀಕ್ಷೆ ತಪ್ಪಿಸಿಕೊಂಡವರಿಗೆ ಜುಲೈನಲ್ಲಿ ಮತ್ತೇ ಪರೀಕ್ಷೆ

Publicstory. in


Tumkuru: ಕೊರೊನಾ ಸಂಕಷ್ಟದ ನಡುವೆಯು ಈ ಬಾರಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯುವ ಮಕ್ಕಳ ಸುರಕ್ಷತೆ ಮತ್ತು ಆತ್ಮವಿಶ್ವಾಸಕ್ಕೆ ಮೊದಲ ಆದ್ಯತೆ ನೀಡಲಾಗುವುದು ಎಂದು ಪ್ರಾಥಮಿಕ ಸಚಿವ ಎಸ್.ಸುರೇಶ್‍ಕುಮಾರ್ ತಿಳಿಸಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಪೂರ್ವ ಸಿದ್ಧತೆ ಕುರಿತಂತೆ ಡಿಡಿಪಿಐ ಮತ್ತು ಬಿಇಓಗಳೊಂದಿಗೆ ಸಭೆ ನಡೆಸಿ ಆನಂತರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಕುಡಿಯಲು ಮನೆಯಿಂದಲೇ ಬಿಸಿ ನೀರನ್ನು ತರುವಂತೆ ಸೂಚಿಸಬೇಕು. ಜೊತೆಗೆ ಪರೀಕ್ಷಾ ಕೇಂದ್ರಗಳಲ್ಲಿ ವ್ಯವಸ್ಥಿತವಾಗಿ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಕೇಂದ್ರಗಳಲ್ಲಿ ಶೌಚಾಲಯದ ಸ್ವಚ್ಛತೆಯ ಬಗ್ಗೆ ಗಮನಹರಿಸಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಮಕ್ಕಳ ಮನಸ್ಥಿತಿ ಕೆಡದಂತೆ ಎಚ್ಚರವಹಿಸಬೇಕು ಎಂದರು.

ಪರೀಕ್ಷಾ ಕೇಂದ್ರದಿಂದ ಮನೆ ದೂರವಿದ್ದು, ಯಾವುದೇ ಸಂಚಾರ ವ್ಯವಸ್ಥೆ ಇಲ್ಲದಿದ್ದರೆ, ಅಂತಹ ವಿದ್ಯಾರ್ಥಿಗಳ ವಿವರ ಪಡೆದು ಶಾಲೆಯ ಮುಖ್ಯೋಪಾದ್ಯಯರು ರೂಟ್ ಮ್ಯಾಪ್ ಸಿದ್ಧಪಡಿಸಬೇಕು. ಅವರ ಬಳಿ ಇರುವ ಪ್ರವೇಶ ಪತ್ರವನ್ನು ಉಚಿತ ಬಸ್‍ಪಾಸ್‍ಗಳ ಪರಿಗಣಿಸಲು ನಿರ್ಧರಿಸಲಾಗಿದೆ ಹಾಗೂ ಖಾಸಗಿ ಶಾಲೆಯ ಬಸ್ಸುಗಳನ್ನು ಬಳಸಿಕೊಂಡು ಸುರಕ್ಷಿತವಾಗಿ ಪರೀಕ್ಷಾ ಕೇಂದ್ರಕ್ಕೆ ಮಕ್ಕಳನ್ನು ಕರೆತರಬೇಕು. ಮಕ್ಕಳ ಜೊತೆ ಬರುವ ಪೋಷಕರು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಪರೀಕ್ಷಾ ಕೇಂದ್ರದ ಸುತ್ತಮುತ್ತ 500 ಮೀಟರ್ ವ್ಯಾಪ್ತಿ 144 ಜಾರಿಯಲ್ಲಿರುತ್ತದೆ ಎಂದರು.

ಸ್ಕೌಟ್ಸ್ ಅಂಡ್ ಗೈಡ್ಸ್ ಮಕ್ಕಳು ತಯಾರಿಸಿರುವ 8.50 ಲಕ್ಷ ಮಾಸ್ಕ್‍ಗಳನ್ನು ಪರೀಕ್ಷೆಗೆ ಬರೆಯುವ ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ. ಪರೀಕ್ಷಾ ಕೇಂದ್ರಗಳಲ್ಲಿ ಥರ್ಮಲ್ ಸ್ಕ್ಯಾನಿಂಗ್ ವ್ಯವಸ್ಥೆ ಮಾಡಲಾಗುವುದು. ಅನಾರೋಗ್ಯದ ಸೂಚನೆ ಕಂಡು ಬರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗುವುದು. ಕೊಠಡಿ ಮೇಲ್ವಿಚಾರಕರು ಕಡ್ಡಾಯವಾಗಿ ಮಾಸ್ಕ್, ಸ್ಯಾನಿಟೈಜರ್ ಬಳಸಬೇಕು ಎಂದು ಅವರು ತಿಳಿಸಿದರು.

ಮುಂದಿನ ವರ್ಷಗಳಲ್ಲಿ ಸರ್ಕಾರಿ ಶಾಲೆಗಳನ್ನು ಸಬಲೀಕರಣಗೊಳಿಸುವುದು ನಮ್ಮ ಜವಾಬ್ದಾರಿಯಾಗಿದೆ. ಯಾಕೆಂದರೆ ಕೂಲಿಕನು ಸಹ ತನ್ನ ಮಗುವನ್ನು ಖಾಸಗಿ ಶಾಲೆಗೆ ಸೇರಿಸುತ್ತಿದ್ದೇನೆ, ಇದಕ್ಕಾಗಿ ಅವನು ತನ್ನ ದುಡಿಮೆಯ ಶೇ.40ರಷ್ಟು ಹಣವನ್ನು ಮಗುವಿನ ಶಿಕ್ಷಣಕ್ಕೆ ನೀಡುತ್ತಿದ್ದಾನೆ. ಸರ್ಕಾರಿ ಶಾಲೆಯಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡಿದಾಗ ಅಂತಹ ಕುಟುಂಬಗಳ ಆದಾಯ ಉಳಿಯುತ್ತೇ ಇದರಿಂದ ಆರೋಗ್ಯವಾಗಿ ಬದುಕನ್ನು ನಡೆಸಬಹುದಾಗಿದೆ ಎಂದು ಅವರು ತಿಳಿಸಿದರು.

ಜಿಲ್ಲೆಯಲ್ಲಿ ಕಂಟೈನ್‍ಮೆಂಟ್ ಜೋನ್‍ನಲ್ಲಿ ಯಾವುದೇ ಪರೀಕ್ಷಾ ಕೇಂದ್ರವು ಇರುವುದಿಲ್ಲ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಾಮಾಜಿಕ ಅಂತರವನ್ನು ಪಾಲಿಸುವಲ್ಲಿ ಪರೀಕ್ಷಾ ಕೊಠಡಿಯಲ್ಲಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ. ಸಾಮಾಜಿಕ ಅಂತರದೊಂದಿಗೆ ಪ್ರತಿ ಕೊಠಡಿಗೆ 18 ರಿಂದ 20 ವಿದ್ಯಾರ್ಥಿಗಳನ್ನು ಹಂಚಿಕೆ ಮಾಡಲಾಗುತ್ತಿದೆ. ಪ್ರತಿ ಕೇಂದ್ರದಲ್ಲೂ ಎರಡು ಮೀಸಲು ಕೊಠಡಿಗಳನ್ನು ಇರಿಸಲಾಗಿದೆ. ಕೊಠಡಿಗಳು ಕೊರತೆ ಬಂದಲ್ಲಿ,ಆ ಆವರಣದಲ್ಲಿರುವ ಪ್ರಾಥಮಿಕ ಶಾಲಾ ಕಟ್ಟಡಗಳನ್ನು ಬಳಸಿಕೊಳ್ಳಲಾಗುತ್ತದೆ ಎಂದರು.

ವಲಸೆ ಕಾರ್ಮಿಕರ ಮಕ್ಕಳು ಪರೀಕ್ಷೆಯಿಂದ ತಪ್ಪಿಸಿಕೊಂಡರೆ ಜುಲೈನಲ್ಲಿ ಪರೀಕ್ಷೆ ನಡೆಸಲಾಗುವುದು. ಅಂತಹವರನ್ನು ಫ್ರೆಶರ್ಸ್ ವಿದ್ಯಾರ್ಥಿಗಳು ಎಂದು ಪರಿಗಣಿಸಲಾಗುವುದು. ಪಠ್ಯಪುಸ್ತಕವನ್ನು ಶಾಲೆ ಆರಂಭಿಸಿದ ಮೊದಲ ವಾರದಲ್ಲಿ ವಿತರಿಸಲಾಗುವುದು ಎಂದು ಅವರು ತಿಳಿಸಿದರು.

ಪರೀಕ್ಷಾ ಕೇಂದ್ರದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಬಗ್ಗೆ ಪ್ರವೇಶದಲ್ಲಿ ಬಾಕ್ಸ್‍ಗಳನ್ನು ಬರೆಯಲಾಗುವುದು. ಒಂದು ಡೆಸ್ಕ್‍ಗೆ ಇಬ್ಬರು ವಿದ್ಯಾರ್ಥಿಗಳನ್ನು ಮಾತ್ರ ಹಾಕಲಾಗುವುದು. ಒಂದು ಡೆಸ್ಕ್‍ನಿಂದ ಮತ್ತೊಂದು ಡೆಸ್ಕ್‍ಗೆ ಅಂತರ 1 ಮೀಟರ್ ಕಾಯ್ದುಕೊಳ್ಳಲಾಗುವುದು ಎಂದು ಅವರು ತಿಳಿಸಿದರು.

ತೇಜಸ್ವಿ ಎಂಬ ‘ಮ್ಯಾಜಿಕ್’..

ಜಿ ಎನ್ ಮೋಹನ್


KA-01 ಗೂ KA-18 ಗೂ ಎತ್ತಣಿಂದೆತ್ತ ಸಂಬಂಧವಯ್ಯ??

ಎತ್ತಣಿಂದೆತ್ತ ಸಂಬಂಧವಯ್ಯ?? ಎಂದು ನಿಜಕ್ಕೂ ಅನಿಸಿದ್ದು ಮೊನ್ನೆ ನ. ಸಂಪತ್ ಕುಮಾರ್ ಫೇಸ್ ಬುಕ್ ವಾಲ್ ನೋಡಿದಾಗ.

‘ಕಿರಗೂರಿನ ಗಯ್ಯಾಳಿಗಳು’ ಸಿನೆಮಾದಲ್ಲಿ ಈತ ಒಂದೇ ಏಟಿಗೆ ಎಲ್ಲರನ್ನೂ ಆವರಿಸಿಕೊಂಡುಬಿಡುವ ಉಳುಕು ತೆಗೆಯುವ ತಜ್ಞ.

ಮೊನ್ನೆ ಅವರು ಗೆಳೆಯರೊಂದಿಗೆ ಟೀ ಕುಡಿಯಲೆಂದು ನಾಗರಭಾವಿಯ ರಸ್ತೆ ಬದಿ ಹೋಟೆಲ್ ಹೊಕ್ಕಿದ್ದಾರೆ. ಸೊರ್ರನೆ ಟೀ ಹೀರುತ್ತಾ ನೋಡಿದರೆ ಒಂದು ಸ್ಕೂಟರ್ ಕಂಡಿದೆ. ಬೆಂಗಳೂರನ್ನು ಕಿಷ್ಕಿಂದೆ ಮಾಡಿರುವುದರಲ್ಲಿ ಈ ಸ್ಕೂಟರ್, ಬೈಕ್ ಗಳ ಪಾತ್ರವೇನು ಕಡಿಮೆಯೇ? ಹಾಗಂತ ಅವರೂ ಸುಮ್ಮನಿರುತ್ತಿದ್ದರೇನೋ..

ಆದರೆ ಕ್ಷಣ ಮಾತ್ರದಲ್ಲಿ ಕೈಲಿದ್ದ ಕಪ್ಪನ್ನು ಕೆಳಗೆ ಇಟ್ಟವರೇ ಓಡೋಡಿ ಆ ಸ್ಕೂಟರ್ ನ ಬಳಿ ಹೋಗಿದ್ದಾರೆ. ಅಷ್ಟೇ ಅಲ್ಲ ‘ಕ್ಲಿಕ್ ಕ್ಲಿಕ್ ಕ್ಲಿಕ್’ ಅಂತ ಸೆಲ್ಫಿ ಹೊಡೆದುಕೊಂಡಿದ್ದಾರೆ

ಅಂತಾದ್ದೇನಿತ್ತು ಆ ಸ್ಕೂಟರ್ ನಲ್ಲಿ..??

ಸ್ಕೂಟರ್ ಮೇಲೆ ಈಗ ಭಜರಂಗಿಗಳದ್ದೇ ಚಿತ್ರ. ಕೇಸರಿ ಹನುಮಾನ್. ಅದನ್ನು ಬಿಟ್ಟರೆ ಅಪ್ಪನ ಆಶೀರ್ವಾದ, ಅಮ್ಮನ ಆಶೀರ್ವಾದ.. ಅದೂ ಅಲ್ಲದಿದ್ದರೆ ಗೌಡಾಸ್ ಕುರುಬಾಸ್ ಅಂತ ಜಾತಿ ಮೊಹರು. ಅದಕ್ಕೂ ಆಚೆ ಸಿದ್ಧಲಿಂಗೇಶ್ವರ, ಜಡೆ ಮುನೇಶ್ವರ, ಮಲೆ ಮಹಾದೇವ ಅನ್ನೋ ದೇವರುಗಳು

ಆದರೆ ಈ ಸ್ಕೂಟರ್ ಅದಕ್ಕೆಲ್ಲಾ ‘ಬಾಯ್ ಬಾಯ್’ ಹೇಳಿ ತನ್ನ ಇಡೀ ದೇಹದ ಮೇಲೆ ತೇಜಸ್ವಿಯವರ ಅಷ್ಟೂ ಕೃತಿಗಳ ಹೆಸರುಗಳನ್ನು ಹಚ್ಛೆ ಹಾಕಿಸಿಕೊಂಡು ನಿಂತಿತ್ತು!!.

‘ನಿಗೂಢ ಮನುಷ್ಯ’ರಿಂದ ಹಿಡಿದು ‘ಮಾಯಾಲೋಕ’ದವರೆಗೆ, ‘ಪ್ಯಾಪಿಲಾನ್’ನಿಂದ ಹಿಡಿದು ‘ಪರಿಸರ ಕಥೆಗಳ’ವರೆಗೆ, ‘ಅಬಚೂರಿನ ಪೋಸ್ಟಾಫೀಸಿ’ನಿಂದ ಹಿಡಿದು ‘ಜುಗಾರಿ ಕ್ರಾಸ್’ವರೆಗೆ ‘ಅಲೆಮಾರಿ ಅಂಡಮಾನ್’ ನಿಂದ ಹಿಡಿದು ‘ವ್ಯಕ್ತಿ ವಿಶಿಷ್ಟ ಸಿದ್ಧಾಂತ’ದವರೆಗೆ..

ನಾನು ಫೋಟೋದಲ್ಲಿದ್ದ ಸ್ಕೂಟರ್ ನ ರಿಜಿಸ್ಟ್ರೇಷನ್ ನಂಬರ್ ನೋಡಿದೆ KA-01. ಮೂಡಿಗೆರೆಯ ರಿಜಿಸ್ಟ್ರೇಷನ್ ನಂಬರ್ ಗೂಗಲ್ ಮಾಡಿದೆ KA 18

ಅರೆ! ಆ ತಕ್ಷಣವೇ ಹೊಳೆದು ಹೋಯಿತು.
ತೇಜಸ್ವಿ ಎನ್ನುವ ಮಾಯಾವಿಯ ತಾಖತ್ತೇ ಅದು..
ಅದಕ್ಕೆ ಗಡಿ ಗೋಡೆಗಳಿಲ್ಲ,

ಹಾಗೆ ಗಾಡಿ ನಂಬರ್ ನೋಡಲು ಹೇಳಿಕೊಟ್ಟಿದ್ದೂ ತೇಜಸ್ವಿಯೇ.
ಒಂದೇ ಸೀಟಿನ ತಮ್ಮ ಸ್ಕೂಟರ್ ಅನ್ನು ದಂತಕಥೆಯಾಗಿಸುವ ಮೂಲಕ.
ಯಾರಿಗೇ ಕೇಳಿ ಅವರ ಸ್ಕೂಟರ್ ನಂಬರ್ MEN 6625 ಕಂಠಪಾಠ.

ಹಾಗಾಗಿಯೇ ತೇಜಸ್ವಿ ಬೆಂಗಳೂರಿಗೂ ಮೂಡಿಗೆರೆಗೂ, ಮೂಡಿಗೆರೆಗೂ ಜರ್ಮನಿಗೂ, ಜರ್ಮನಿಗೂ ದೆಹಲಿಗೂ ನಂಟು ಬೆಸೆದು ಹೋಗಿಬಿಟ್ಟರು.

ತೇಜಸ್ವಿ ಹೊಸ ಪುಸ್ತಕ ಎಂದರೆ ೮೭ರ ನನ್ನ ಅಮ್ಮ, ಅಂದರೆ ಬಿ ಎಂ ವೆಂಕಟಲಕ್ಷ್ಮಮ್ಮ ಹೇಗೆ ಕಾತರಿಸುತ್ತಿದ್ದರೋ ಹಾಗೆಯೇ ಜರ್ಮನಿಯ ವೂರ್ತ್ಸ್ ಬರ್ಗ್ ವಿವಿಯ ವಿದ್ಯಾರ್ಥಿಗಳೂ ಕಾತರಿಸುತ್ತಾರೆ.

ಟಿ ಪಿ ಅಶೋಕ ಅವರು ಕಮ್ಮಟ ನಡೆಸಿ ತೇಜಸ್ವಿ ಒಳಗಣ್ಣು ಪರಿಚಯಿಸುತ್ತಾ ಹೋದರೆ, ಬಿ ಎ ವಿವೇಕ ರೈ ಅವರು ಜರ್ಮನಿಯ ಪ್ರೊ ಬ್ರೂಕ್ನರ್ ಹಾಗೂ ಡಾ ಕತ್ರಿನ್ ಬಿಂದರ್ ಕೂತು ತೇಜಸ್ವಿ ಕಥೆಗಳನ್ನು ಜರ್ಮನಿಗೆ ಅನುವಾದಿಸುತ್ತಾರೆ.

ತೇಜಸ್ವಿ ಎನ್ನುವ ‘ಮ್ಯಾಜಿಕ್’ ಅನ್ನು ಅರ್ಥ ಮಾಡಿಕೊಳ್ಳಲು ಇನ್ನೂ ಯತ್ನಿಸುತ್ತಿದ್ದೇನೆ.

ತೇಜಸ್ವಿ ಇನ್ನಿಲ್ಲ ಎಂದಾಗ ಅವರ ಅಪಾರ ಬಳಗದ ಒಳಹೊಕ್ಕು ನೋಡುವ ಅವಕಾಶ ನನಗೆ ಸಿಕ್ಕಿತ್ತು. ಹಾಗೆ ಶೋಕಿಸಿದವರು ಒಂದು ತಲೆಮಾರಿಗೆ ಸೇರಿದವರಲ್ಲ, ಬರೀ ಸಾಹಿತ್ಯ ದ ಓದುವವರಲ್ಲ, ತೇಜಸ್ವಿ ಎಂಬ ನಿಗೂಢ ಲೋಕದಲ್ಲಿ ಟೆಕಿಗಳಿದ್ದರು, ಪರಿಸರವಾದಿಗಳಿದ್ದರು, ಚಾರಣಿಗರಿದ್ದರು, ಫೋಟೋಗ್ರಾಫರ್ ಗಳಿದ್ದರು, ಮೀನು ಹಿಡಿಯುವ ಹುಚ್ಚಿನವರು, ಗೂಬೆ ಅಧ್ಯಯನ ಮಾಡುವವರೂ, ಹಕ್ಕಿ ಕುಕಿಲುಗಳನ್ನು ದಾಖಲಿಸುವವರು.. ಕುಡಿ ಮೀಸೆ ಮೂಡುತ್ತಿದ್ದವರೂ, ಹಣ್ಣಣ್ಣು ಗಡ್ಡದವರು ಎಲ್ಲರಿಗೂ ತೇಜಸ್ವಿ ಸೇರಿ ಹೋಗಿದ್ದರು.

ತೇಜಸ್ವಿ ಎಷ್ಟು ನಿಜವೋ ಅವರ ಸ್ಕೂಟರ್ ಸಹಾ ನಿಜ, ಅವರ ಪ್ಯಾರ, ಗಯ್ಯಾಳಿಗಳು, ಎಂಗ್ಟ, ಮಂದಣ್ಣ, ಎಲ್ಲಾ..

ತೇಜಸ್ವಿ ಎಂದರೆ ಎಲ್ಲರಿಗೂ ತೇಜಸ್ವಿ ಮಾತ್ರವಲ್ಲ. ಈ ಪಾತ್ರಗಳೆಲ್ಲಾ ಸೇರಿದ ಕೂಡು ಕುಟುಂಬ. ಹಾಗಾಗಿ ಎಲ್ಲರೂ ತೇಜಸ್ವಿಯನ್ನು ಎಷ್ಟು ಪ್ರೀತಿಸಿದರೋ ಅವರ ಪಾತ್ರಗಳನ್ನೂ ಅಷ್ಟೇ ಪ್ರೀತಿಸಿದರು.

ಈಗಲೂ ಬೆಂಗಳೂರು ವಿವಿಯ ಕನಸುಗಣ್ಣಿನ ಹುಡುಗ ಶಿವಪ್ರಸಾದ್ ಫೇಸ್ ಬುಕ್ ಹೊಕ್ಕರೆ ಸಾಕು ಅಲ್ಲಿ ತೇಜಸ್ವಿ ತೇಜಸ್ವಿ ತೇಜಸ್ವಿ,

ಈಶ್ವರಪ್ರಸಾದ್ ಬಾಗಿಲು ತಟ್ಟಿದರೆ ಅಲ್ಲಿ ಹಕ್ಕಿ, ಗೂಗೆ, ಜೇಡ ಹೀಗೆ ತೇಜಸ್ವಿಗೆ ಪ್ರಿಯವಾದ ಎಲ್ಲವೂ ಇವೆ. ತೇಜಸ್ವಿ ನೆನಪುಗಳನ್ನು ಬದುಕುತ್ತಿವೆ.

‘ಅವಿರತ’ದ ಗೆಳೆಯರಿಗೆ ತೇಜಸ್ವಿ ಎನ್ನುವುದು ಗುಂಗು.

ಆ ನ ರಾವ್ ಜಾಧವ್ ಅವರಿಗೆ ತೇಜಸ್ವಿ ಕೃತಿಗಳನ್ನು ರಂಗಕ್ಕೇರಿಸುವುದು ಎಂದರೆ ಮಹಾನ್ ಉತ್ಸಾಹ.

ಸುಮನಾ ಕಿತ್ತೂರ್ ಕೈನಲ್ಲಿ ಗಯ್ಯಾಳಿಗಳಿಗೆ ಹಿರಿ ತೆರೆ ಪ್ರವೇಶ,

ಮಾತನಾಡುವುದನ್ನು ನಿಲ್ಲಿಸಿಯೇ ವರ್ಷಗಳಾಗಿ ಹೋಗಿರುವ ಬೆಂಗಳೂರಿನ ಮೌನಿ ಸ್ವಾಮಿಗೆ ತೇಜಸ್ವಿಯವರ ಪುಸ್ತಗಳನ್ನು ಮಾರುವುದೇ ಪ್ರಿಯ.

ಮೈಸೂರಿನ ವೈದ್ಯ ಪ್ರಾಧ್ಯಾಪಕ ರವೀಂದ್ರನಾಥ್ ಅವರಿಗೆ ತಮ್ಮ ವೈದ್ಯಕೀಯ ಕಾಲೇಜಿನಲ್ಲಿ ತೇಜಸ್ವಿ ಕಾರ್ಯಕ್ರಮ ನಡೆಸದಿದ್ದರೆ ಸಮಾಧಾನವಿಲ್ಲ.

ತೇಜಸ್ವಿಯವರ ಮಾಯಾ ಲೋಕದಲ್ಲಿ ಎಷ್ಟೆಲ್ಲಾ.. ಈ ಒಗಟು ಬಿಡಿಸುವ ರೀತಿ ನನಗೂ ತಿಳಿದಿಲ್ಲ.

ವಾಹನ ಸವಾರರಿಗೆ ಬಿಗ್ ಶಾಕ್

ತುಮಕೂರು

ಜೂನ್‌ನಲ್ಲಿ ಲಾಕ್‌ಡೌನ್‌ ತೆರವಾದ ಬಳಿಕ ಅಥವಾ ದೈನಂದಿನ ದರ ಪರಿಷ್ಕರಣೆ ಆರಂಭವಾದ ಬಳಿಕ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಗಳು ರೂ.4 ರಿಂದ 5 ರಷ್ಟು ಏರಿಕೆ ಆಗುವ ಸಾಧ್ಯತೆ ಇದೆ. ಕೊರೋನಾ ವೈರಸ್‌ನಿಂದಾಗಿ ಕುಸಿತ ಕಂಡಿದ್ದ ಜಾಗತಿಕ ಕಚ್ಚಾತೈಲ ಮಾರುಕಟ್ಟೆ ನಿಧಾನವಾಗಿ ಚೇತರಿಕೆ ಕಾಣುತ್ತಿದೆ.

ಕಳೆದ ತಿಂಗಳು ಇದ್ದ ದರಕ್ಕೆ ಹೋಲಿಸಿದರೆ ತೈಲ ದರ ಶೇ.50 ರಷ್ಟು ಏರಿಕೆಯಾಗಿದ್ದು, ಬ್ಯಾರಲ್‌ವೊಂದಕ್ಕೆ 30 ಡಾಲರ್‌ (2,250 ರು.) ಆಗಿದೆ. ಅಲ್ಲದೇ ದಿನದಿಂದ ದಿನಕ್ಕೆ ಕಚ್ಚಾತೈಲ ದರ ಏರಿಕೆ ಕಾಣುತ್ತಿದೆ. ಒಂದು ವೇಳೆ ಏರುಗತಿ ಇದೇ ರೀತಿ ಮುಂದುವರಿದರೆ ತೈಲ ಮಾರಾಟ ಕಂಪನಿಗಳಿಗೆ ವೆಚ್ಚ ಹಾಗೂ ಮಾರಾಟದ ಮಧ್ಯೆ ರೂ. 4 ರಿಂದ 5 ರಷ್ಟು ವ್ಯತ್ಯಾಸ ಉಂಟಾಗುತ್ತಿದೆ.

ಕೊರೋನಾ ತಗ್ಗದಿದ್ದರೆ ಬಡವರಿಗೆ ಕೇಂದ್ರದಿಂದ ನೇರ ನಗದು?

ಹೀಗಾಗಿ ನಷ್ಟವನ್ನು ತುಂಬಿಕೊಳ್ಳುವ ಸಲುವಾಗಿ ದೈನಂದಿನ ತೈಲ ದರ ಪರಿಷ್ಕರಣೆ ಆರಂಭವಾದ ಬಳಿಕ ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಸಂಸ್ಥೆಗಳು ಕೆಲವು ದಿನಗಳ ವರೆಗೆ ಪ್ರತಿನಿತ್ಯ ಲೀಟರ್‌ಗೆ 40ರಿಂದ 50 ಪೈಸೆಯಷ್ಟುಪೆಟ್ರೋಲ್‌ ಹಾಗೂ ಡೀಸೆಲ್‌ ದರಗಳನ್ನು ಏರಿಕೆ ಮಾಡುವ ಸಾಧ್ಯತೆ ಇದೆ ಎಂದು ವರದಿಗಳು ತಿಳಿಸಿವೆ.

ಒಂದು ವೇಳೆ 5ನೇ ಹಂತದ ಲಾಕ್‌ಡೌನ್‌ ಜಾರಿಯಲ್ಲಿದ್ದರೂ, ಸರ್ಕಾರದ ಅನುಮತಿ ನೀಡಿದರೆ ತೈಲ ಕಂಪನಿಗಳು ದೈನಂದಿನ ದರ ಪರಿಷ್ಕರಣೆಯನ್ನು ಅನ್ವಯಿಸಬಹುದು. ಆದರೆ, ಕೊರೋನಾ ವೈರಸ್‌ ಹಿನ್ನೆಲೆಯಲ್ಲಿ ಸರ್ಕಾರ ತೈಲ ದರ ಏರಿಕೆಗೆ ಒಂದು ಮಿತಿಯನ್ನು ವಿಧಿಸಲು ಮುಂದಾಗಿವೆ ಎಂದು ಮೂಲಗಳು ತಿಳಿಸಿವೆ.

CITU@50; ಎಲ್ಲೆಡೆ ಕೈಗಾರಿಕೆಗಳಲ್ಲಿ ಮೇರೆ ಮೀರಿದ‌ ಸಂಭ್ರಮ

ತುಮಕೂರು: ಈ ಸಮಾಜದ ಚಲನಶೀಲ ವ್ಯಕ್ತಿ ಹಾಗೂ ರಕ್ತ, ಬೆವರುಗಳ ಮೂಲಕ ಸಂಪತ್ತನ್ನು ಸೃಷ್ಟಿಗೆ ಸದಾ ಶ್ರಮಿಸುವಂತಹ ಶ್ರಮಿಕರನ್ನು ಬೇಡುವಂತೆ ಮಾಡಿರುವ ಈ ವ್ಯವಸ್ಥೆಯನ್ನು ಬದಲಿಸಬೇಕಾಗಿದೆ. ಅಸಮಾನ ವ್ಯವಸ್ಥೆ ಬದಲಿಸಿ ಸಮ ಸಮಾಜವನ್ನು ನಿರ್ಮಾಣ ಮಾಡುವ ನಿಟ್ಟಿನಲ್ಲಿ ಸಿಐಟಿಯು ಕಳೆದ 50 ವರ್ಷಗಳಿಂದಲೂ ಅಹರ್ನಿಷಿ ದುಡಿಯುತ್ತ ಬಂದಿದೆ ಎಂದು ಸಿಐಟಿಯು ಜಿಲ್ಲಾಧ್ಯಕ್ಷ ಸೈಯದ್ ಮುಜೀಬ್ ತಿಳಿಸಿದರು.

ಅವರು ತುಮಕೂರಿನ ಅಂತರಸನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಮೇ 30ರಂದು ಮಧ್ಯಾಹ್ನ 2ಗಂಟೆಗೆ ಕರ್ನ್ ಲಿಬರರ್ಸ್ ಹಾಗೂ ತ್ರಿವೇಣಿ ಏರೋನಾಟಿಕ್ಸ ಕಾರ್ಮಿಕರ ಸಂಘಗಳು ಜಂಟಿಯಾಗಿ ಏರ್ಪಡಿಸಿದ್ದ ಸಿಐಟಿಯು 50ನೇ ವರ್ಷಾಚರಣೆ ಅಂಗವಾಗಿ ಮಾನವ ಸರಪಳಿಯನ್ನು ಉದ್ದೇಶಿಸಿ ಮಾತನಾಡಿದರು.

ಸಿಐಟಿಯು 50 ವರ್ಷಗಳಿಂದ ನಿರಂತರವಾಗಿ ಐಕ್ಯತೆ ಹಾಗೂ ಹೋರಾಟದ ಸಂದೇಶವನ್ನು ಜಾತಿ, ಧರ್ಮ, ಭಾಷೆ, ಹಾಗೂ ಪ್ರದೇಶಗಳ ಮಿತಿಗಳನ್ನು ಮೀರಿ ಮಾನವೀಯ ನೆಲೆಯಲ್ಲಿ ಶೋಷಣೆರಹಿತ ಸಮಾಜವನ್ನು ಕಟ್ಟುವಂತಹ ನಿಟ್ಟಿನಲ್ಲಿ ಪ್ರಯತ್ನಿಸುತ್ತಾ ಬರುತ್ತಿದೆ ಎಂದರು.

ಸಿಐಟಿಯು ತುಮಕೂರು ತಾಲೂಕು ಕಾರ್ಯದರ್ಶಿ ರಂಗಧಾಮಯ್ಯ ಮಾತನಾಡಿ, ಕಾರ್ಖಾನೆಗಳಲ್ಲಿ ಕೆಲಸದ ಅವಧಿಯನ್ನು 10 ಗಂಟೆಯಿಂದ 8 ಗಂಟೆಗೆ ಇಳಿಸಿರುವುದು ಸ್ವಾಗತಾರ್ಹ. ಮತ್ತೆ ಕೆಲಸದ ಅವಧಿಯನ್ನು ಹೆಚ್ಚಿಸಲು ಮುಂದಾದರೆ ಹೋರಾಟವನ್ನು ತೀವ್ರಗೊಳಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಕರ್ನ್ ಲಿಬರರ್ಸ್ ಕಾರ್ಮಿಕ ಸಂಘಟನೆಯ ಪ್ರಧಾನ ಕಾರ್ಯದರ್ಶಿ ದಿಲೀಪ್ ಕುಮಾರ್ ಸ್ವಾಗತಿಸಿದರು. ಸಿಐಟಿಯು ತಾಲೂಕು ಖಜಾಂಚಿ ಹುಚ್ಚೇಗೌಡ,ತ್ರಿವೇಣಿ ಏರೋನಾಟಿಕ್ಸ್ ಕಾರ್ಮಿಕ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಲಿಂಗೇಶ್, ಮುಖಂಡರಾದ ಮಂಜುನಾಥ್, ಕರ್ನ್ ಲಿಬರರ್ಸ್ ಕಾರ್ಮಿಕರ ಸಂಘದ ಝಜಾಂಚಿ ಉಮೇಶ್ ಉಪಸ್ಥಿತರಿದ್ದರು.

ಸಿಐಟಿಯು 50ನೇ ವರ್ಷಾಚರಣೆಯ ಅಂಗವಾಗಿ ಜಿಲ್ಲೆಯ ವಿವಿಧೆಡೆ ಕಾರ್ಮಿಕರು ಫ್ಯಾಕ್ಟರಿಗಳ ಮುಂದೆ ದೈಹಿಕ ಅಂತರವನ್ನು ಕಾಯ್ದುಕೊಂಡು ಮಾನವ ಸರಪಳಿ ರಚಿಸಿದರು. ಸಿಐಟಿಯು ಸದಸ್ಯರು ತಮ್ಮ ಮನೆ ಮತ್ತು ಕೆಲಸದ ಸ್ಥಳಗಳಲ್ಲಿ ಭಿತ್ತಿ ಪತ್ರಗಳನ್ನು ಹಿಡಿದು 50ನೇ ವರ್ಷ ಆಚರಿಸಿದರು.

ಕುಣಿಗಲ್ ಗೆ ಹೇಮಾವತಿ ಹರಿಸದಿದ್ದರೆ ಸುಮ್ಮನೆ ಬಿಡೆವು: ಶಾಸಕ ಗರಂ

ತುಮಕೂರು: ಹಿಂದಿನ ಸರ್ಕಾರ ಕುಣಿಗಲ್ ತಾಲೂಕು ಅಭಿವೃದ್ಧಿಗೆ ಬಿಡುಗಡೆ ಮಾಡಿದ್ದ 615 ಕೋಟಿ ರೂಪಾಯಿ ಹಣವನ್ನು ಬಿಜೆಪಿ ಸರ್ಕಾರ ತಡೆಹಿಡಿದಿದೆ ಎಂದು ಶಾಸಕ ಡಾ. ರಂಗನಾಥ್ ಆರೋಪಿಸಿದ್ದಾರೆ.

ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ, ಡಿ.ಕೆ.ಶಿವಕುಮಾರ್ ಜಲಸಂಪನ್ಮೂಲ ಸಚಿವರಾಗಿದ್ದ ಸಂದರ್ಭದಲ್ಲಿ ಹಣವನ್ನು ಬಿಡುಗಡೆ ಮಾಡಿದ್ದರು. ಆದರೆ ಈ ಸರ್ಕಾರ ತಡೆಹಿಡಿದು ಅಭಿವೃದ್ದಿಯನ್ನು ಕಡೆಗಣಿಸಿದೆ ಎಂದರು.

ಕುಣಿಗಲ್ ತಾಲೂಕಿಗೆ ಹೇಮಾವತಿ ನೀರು ಹರಿಸುವಲ್ಲಿ ಅನ್ಯಾಯವಾಗಿದೆ. ಮಾರ್ಕೋನಹಳ್ಳಿ ಜಲಾಶಯಕ್ಕೆ 1 ಟಿಎಂಸಿ ಅಡಿ ನೀರು ಹರಿಸಬೇಕು. ಆದರೆ ಅದರ ಬಗ್ಗೆ ಸರ್ಕಾರ ಮೌನ ವಹಿಸಿದೆ ಎಂದು ದೂರಿದರು.

ತುಮಕೂರು ಜಿಲ್ಲೆಗೆ ಹೇಮಾವತಿಯಿಂದ 24.45 ಟಿಎಂಸಿ ನೀರು ಹರಿಸಬೇಕು. ಇದುವರೆಗೂ ಅಷ್ಟು ಪ್ರಮಾಣದ ನೀರು ಹರಿದುಬಂದಿಲ್ಲ. ಕುಣಿಗಲ್ ಗೆ ಸಿಗಬೇಕಾದ ನೀರನ್ನು ಹರಿಸಿಲ್ಲ ಎಂದು ಆಪಾದಿಸಿದರು.

ಮುಂದಿನ ದಿನಗಳಲ್ಲಿ ಹೇಮಾವತಿ ನೀರು ಹರಿಸದಿದ್ದರೆ ಸಂಸದ ಡಿ.ಕೆ.ಸುರೇಶ್ ಅವರೊಂದಿಗೆ ಸೇರಿ ದೊಡ್ಡ ಮಟ್ಟದ ಹೋರಾಟ ರೂಪಿಸಲಾಗುವುದು. ಕುಣಿಗಲ್ ಜನರಿಗೆ ನ್ಯಾಯವನ್ನು ಒದಗಿಸಲಾಗುವುದು ಎಂದರು.

ವೈದ್ಯ ಸಿಬ್ಬಂದಿ ನಿವೃತ್ತಿ ಮುಂದೂಡಿದ ರಾಜ್ಯ ಸರ್ಕಾರ

ತುಮಕೂರು: ರಾಜ್ಯದ ಆರೋಗ್ಯ ಇಲಾಖೆಯಲ್ಲಿ ಈ ತಿಂಗಳು ನಿವೃತ್ತಿಯಾಗಬೇಕಾಗಿದ್ದ ಸಿಬ್ಬಂದಿಯ ನಿವೃತ್ತಿಯನ್ನು ಅವಧಿಯನ್ನು ಮುಂದೂಡಿ ರಾಜ್ಯ ಸರ್ಕಾರ ಆದೇಶಿಸಿದೆ.

ರಾಜ್ಯದಲ್ಲಿ ಕೊರೊನಾ ತುರ್ತುಪರಿಸ್ಥಿತಿ ಇರುವ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದೆ.

ಇಲಾಖೆಯ ಕ್ಲಿನಿಕಲ್, ನಾನ್ ಕ್ಲಿನಿಕಲ್ ಸೇವೆಯಲ್ಲಿರುವ ಎಲ್ಲ ಸಿಬ್ಬಂದಿಗೆ ಈ ಆದೇಶ ಅನ್ವಯವಾಗಲಿದೆ. ನಿವೃತ್ತಿ ಅವಧಿಯನ್ನು ಒಂದು ತಿಂಗಳ ಅವಧಿಗೆ ಮಾತ್ರ ಮುಂದೂಡಲಾಗಿದೆ ಎಂದು ಇಲಾಖೆಯ ಪ್ರಧಾನ ಕಾರ್ಯದರ್ಶಿ ಜಾವೇದ್ ಆಖ್ತರ್ ತಿಳಿಸಿದ್ದಾರೆ.

ತಂಬಾಕು, ಗುಟ್ಕಾ ಸೇವಿಸಿದರೆ ಕ್ರಮ

‘ ಸಾರ್ವಜನಿಕ ಸ್ಥಳಗಳಲ್ಲಿ  ಗುಟ್ಕಾ, ತಂಬಾಕು ಸೇವಿಸುವುದು, ಎಲ್ಲೆಂದರಲ್ಲಿ ಉಗುಳುವುದನ್ನು ನಿಷೇಧಿಸಲಾಗಿದೆ. ನಿಯಮ ಉಲ್ಲಂಘಿಸಿದವರ ವಿರುದ್ಧ   ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಎಚ್ಚರಿಕೆ ನೀಡಿದರು.

ಪತ್ರಿಕಾ ಗೋಷ್ಠಿಯಲ್ಲಿ ಶನಿವಾರ ಮಾತನಾಡಿ, ‘ಮೇ 31 ವಿಶ್ವ ತಂಬಾಕು ರಹಿತ ದಿನದ ಅಂಗವಾಗಿವಾಗಿ   ರಾಜ್ಯ ಸರ್ಕಾರ  ನಿರ್ಧಾರ ಕೈಗೊಂಡಿದೆ’ ಎಂದರು.

  ಕೊರೋನಾ ಸೋಂಕು ತಡೆಗೆ ಪಿಪಿಇ ಕಿಟ್ ಹಾಗೂ ಆರೋಗ್ಯ ಪರಿಕರಗಳ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿ, ‘ಖರೀದಿ ವೇಳೆ   ಭ್ರಷ್ಟಾಚಾರ ಆಗಿಲ್ಲ. ಕಾಂಗ್ರೆಸ್‌ನವರಿಗೆ ಮಾಡಲು ಬೇರೆ ಕೆಲಸ ಇಲ್ಲ.   ಸರ್ಕಾರ ಎಲ್ಲ ಖರೀದಿಯನ್ನೂ ಪಾರದರ್ಶಕವಾಗಿಯೇ ನಡೆಸಿದೆ’ ಎಂದು ತಿಳಿಸಿದರು.