Wednesday, February 25, 2026
Google search engine
Home Blog Page 278

25 ವರ್ಷದ ನಂತರ ಸಿಕ್ಕ ಕೊಲೆ ಆರೋಪಿಗೆ ಕಡೆಗೂ ಸಿಕ್ತು ಜೈಲು ಊಟ

ತುಮಕೂರು:

25 ವರ್ಷಗಳ ಹಿಂದೆ ನಡೆದಿದ್ದ ಕೊಲೆ ಪ್ರಕರಣದ ಆರೋಪಿಯನ್ನು ಕೊರಟಗೆರೆ ಪೊಲೀಸರು ಕಡೆಗೂ ಬಂಧಿಸಿ ಜೈಲಿಗಟ್ಟಿದ್ದಾರೆ. ಈ ಮೂಲಕ ಹಲವು ವರ್ಷಗಳ ಪ್ರಕರಣ ಅಂತ್ಯ ಕಂಡಿದೆ.

ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕಿನ ಹೊಳವನಹಳ್ಳಿ ಹೋಬಳಿ ವ್ಯಾಪ್ತಿಯ ಕರಕಲಘಟ್ಟದಲ್ಲಿ 1994 ಡಿಸೆಂಬರ್ 1ರಂದು ಮಹಿಳೆಯೊಬ್ಬಳ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿತ್ತು.

ಆರೋಪಿಯ ಹೆಸರು ಗೊತ್ತಿದ್ದರೂ ಪೊಲೀಸರು ಬಂಧಿಸಲು ಸಾಧ್ಯವಾಗಿರಲಿಲ್ಲ. 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಖತರ್ನಾಕ್ ಆರೋಪಿ ಕೊನೆಗೂ ಪೊಲೀಸರ ಅತಿಥಿಯಾಗಿದ್ದಾನೆ.

ಕೊಲೆಯಾದ ಮಹಿಳೆಯನ್ನು ಅದೇ ಗ್ರಾಮದ ಈರಮಲ್ಲಮ್ಮ ಎಂದು ಗುರುತಿಸಲಾಗಿತ್ತು. ಸ್ಥಳಕ್ಕೆ ಭೇಟಿ ನೀಡಿದ್ದ ಕೊರಟಗೆರೆ ಪೊಲೀಸರು ಪರಿಶೀಲನೆ ನಡೆಸಿ, ಸ್ಥಳೀಯರ ಮಾಹಿತಿ ಪ್ರಕಾರ ಅದೇ ಗ್ರಾಮದ ಸಿದ್ದಹನುಮಯ್ಯ ಕೆಎಎಸ್ ಎಂಬ ವ್ಯಕ್ತಿಯ ವಿರುದ್ಧ ಎಫ್‍ಐಆರ್ ದಾಖಲಿಸಿದ್ದರು.

ನಂತರ ಪ್ರಕರಣ ತನಿಖೆ ಕೈಗೊಂಡಿದ್ದ ಪೊಲೀಸರು ಆರೋಪಿ ಪತ್ತೆಯಾಗದ ಕಾರಣ ತಲೆ ಮರೆಸಿಕೊಂಡಿದ್ದಾನೆ ಎಂದು 1997ರಲ್ಲಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ್ದರು.

ತುಮಕೂರು ಎಸ್ಪಿ ಡಾ. ಕೆ. ವಂಶಿಕೃಷ್ಣ

25 ವರ್ಷಗಳ ಬಳಿಕ ಪ್ರಕರಣಕ್ಕೆ ಮರು ಜೀವ..!

ಕಳೆದ ಒಂದು ವರ್ಷದ ಹಿಂದೆ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಬಂದ ಡಾ.ಕೆ.ವಂಶಿಕೃಷ್ಣ ಈಚೆಗೆ ಕೊರಟಗೆರೆ ಪೊಲೀಸ್ ಠಾಣೆಗೆ ಭೇಟಿ ನೀಡಿ, ದೀರ್ಘ ಕಾಲದಿಂದ ಬಾಕಿ ಇರುವ ಪ್ರಕರಣಗಳ ಬಗ್ಗೆ ಪರಿಶೀಲನೆ ನಡೆಸಿದ್ದರು. ಈ ವೇಳೆ ಕರಕಲಘಟ್ಟ ಈರಮಲ್ಲಮ್ಮ ಕೊಲೆ ಪ್ರಕರಣವನ್ನು ಕೈಗೆತ್ತಿಕೊಳ್ಳುವಂತೆ ಸಿಪಿಐ ಎಫ್.ಕೆ.ನದಾಫ್, ಪಿಎಸ್‍ಐ ಬಿ.ಸಿ.ಮಂಜುನಾಥ್‍ಗೆ ಸೂಚಿಸಿದ್ದರು.

ಎಸ್ಪಿ ಸೂಚನೆಯಂತೆ ಪ್ರಕರಣ ಬೆನ್ನತ್ತಿ ಹೊರಟ ನದಾಫ್ ಮತ್ತು ಮಂಜುನಾಥ್ ನೇತೃತ್ವದ ತಂಡ ಆರೋಪಿ ಸಿದ್ದಹನುಮಯ್ಯನನ್ನು ಬಂಧಿಸುವಲ್ಲಿ ಕೊನೆಗೂ ಯಶಸ್ವಿಯಾದರು.

ಕೊರಟಗೆರೆ ಸಿಪಿಐ ಎಫ್.ಕೆ.ನದಾಫ್

ಸಿದ್ದಹನುಮಯ್ಯ ಸಿರಾಜ್ ಆಗಿ ಬದಲಾದ…


ಪ್ರಕರಣದ ತನಿಖೆ ನಡೆಸಿದ ಸಿಪಿಐ ನದಾಫ್ ಹಾಗೂ ತಂಡಕ್ಕೆ ತುಂಬಾ ಇಂಟ್ರೆಸ್ಟಿಂಗ್ ವಿಚಾರವೊಂದು ಎದುರಾಯಿತು. ಕೆಎಎಸ್ ಅಂತಲೇ ಕರಕಲಘಟ್ಟದಲ್ಲಿ ಫೇಮಸ್ ಆಗಿದ್ದ ಸಿದ್ದಹನುಮಯ್ಯ, ಈರಮಲ್ಲಮ್ಮ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಿದ ನಂತರ ಅವಳ ಮೈಮೇಲಿದ್ದ ಚಿನ್ನಾಭರಣ ದೋಚಿ ಹಲವು ವೇಷ, ಭಾಷೆಗಳ ಮೂಲಕ ತಲೆ ಮರೆಸಿಕೊಂಡು ಮುಂಬೈ ಸೇರಿಕೊಂಡಿದ್ದ.

ನಂತರ ಬಾಂಬೆಯಲ್ಲಿ ಲಾರಿ ಕ್ಲೀನರ್ ಆಗಿ ಕೆಲಸ ಮಾಡಿ ಆ ಬಳಿಕ ಡ್ರೈವರ್ ಜೀವನ ಸಾಗಿಸುತ್ತಿದ್ದ.

ಬಂಧನದ ಭೀತಿಯಿಂದಾಗಿ ಕರಕಲಘಟ್ಟದಲ್ಲಿದ್ದ ತನ್ನ ಹೆಂಡತಿ ಮಕ್ಕಳನ್ನು ಮರೆತು ಒಬ್ಬಂಟಿಯಾಗಿ ಅಲ್ಲೇ ಜೀವನ ಮಾಡುತ್ತಿದ್ದ.

ಕೆಲ ವರ್ಷಗಳ ಬಳಿಕ ಕೊಪ್ಪಳ ನಗರಕ್ಕೆ ಬಂದು ಸಿದ್ದಹನುಮಯ್ಯ ಬದಲಿಗೆ ಸಿರಾಜ್ ಎಂಬ ಹೆಸರು ಹೇಳಿಕೊಂಡು ಮುಸ್ಲಿಂ ಮಹಿಳೆಯನ್ನು ಮದುವೆಯಾಗಿದ್ದ.

ನಂತರ ಕೊಪ್ಪಳದಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಬೆಟ್ಟಹಳ್ಳಿಗೆ ಬಂದು ವಾಸವಾಗಿದ್ದ.

ಹುಟ್ಟೂರಿನ ಪ್ರೇಮ ಅಳಿಸದ ಕಾರಣ ಕರಕಲಘಟ್ಟದ ಸಂಬಂಧಿಕರ ಜೊತೆ ನಿರಂತರ ಸಂಪರ್ಕದಲ್ಲಿದ್ದುಕೊಂಡು ಮೊದಲ ಪತ್ನಿ, ಮಕ್ಕಳ ಬಗ್ಗೆ ಮಾಹಿತಿ ಪಡೆಯುತ್ತಿದ್ದ.

ಇದರ ಜಾಡು ಹಿಡಿದು ಹೊರಟ ಪೊಲೀಸರು ನೆಲಮಂಗಲ ಬಳಿ ಆರೋಪಿಯನ್ನು ಬಂಧಿಸಿ, ತನಿಖೆ ಕೈಗೊಂಡು ಪ್ರಕರಣ ಸಾಬೀತಾದ‌ ಹಿನ್ನೆಲೆಯಲ್ಲಿ ಆರೋಪಿ ಸಿದ್ದಹನುಮಯ್ಯನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಆ ಮೂಲಕ 25 ವರ್ಷಗಳ ಹಿಂದಿನ ಈರಮಲ್ಲಮ್ಮಳ ಕೊಲೆ ಪ್ರಕರಣದ ಅಂತ್ಯ ಕಂಡು ಆರೋಪಿ ಸಿದ್ದಹನುಮಯ್ಯನಿಗೆ ನ್ಯಾಯಾಂಗ ಬಂಧನವಾಗಿದೆ.

ಕೊರಟಗೆರೆ ಪಿಎಸ್ಐ ಬಿ.ಸಿ.ಮಂಜುನಾಥ್

ತುಂಬಾ ಹಳೆಯ ಪ್ರಕರಣವನ್ನು ಭೇದಿಸಿದ ಸಿಪಿಐ ಎಫ್.ಕೆ.ನಧಾಫ್, ಪಿಎಸ್‍ಐ ಬಿ.ಸಿ.ಮಂಜುನಾಥ್ ಹಾಗೂ ತಂಡದ‌ ಕಾರ್ಯ ವೈಕರಿಯನ್ನಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ ಪ್ರಶಂಸಿ ಅಭಿನಂದಿಸಿದ್ದಾರೆ.

ಪ್ರಬುದ್ಧ ಭಾರತ: 20ರಂದು ವಿ.ವಿಯಲ್ಲಿ ಕಾರ್ಯಾಗಾರ

Publicstory.in


Tumukuru: ಪ್ರಬುದ್ಧ ಭಾರತ ಏಕತಾ ಟ್ರಸ್ಟ್, ಸ್ನಾತಕೋತ್ತರ ಸಮಾಜ ಕಾರ್ಯ ಅಧ್ಯಯನ ಮತ್ತು ಸಂಶೋಧನ ವಿಭಾಗ ದಿಂದ ತುಮಕೂರು ವಿಶ್ವವಿದ್ಯಾಲಯದ ಸರ್. ಎಂ.ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಗ್ರಾಮೀಣ ಅಭಿವೃದ್ಧಿಯಲ್ಲಿ ಯುವ ನಾಯಕತ್ವ ಕುರಿತು ಒಂದು ದಿನ ಕಾರ್ಯಾಗಾರ ಏರ್ಪಡಿಸಲಾಗಿದೆ.

ಕಾರ್ಯಾಗಾರವನ್ನು ತುಮಕೂರು ವಿವಿ ಕುಲಪತಿ ಪ್ರೊ. ವೈ.ಎನ್.ಸಿದ್ದೇಗೌಡ ಉದ್ಘಾಟಿಸುವರು. ಸ್ನಾತಕೋತ್ತರ ಸಮಾಜ ಕಾರ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಅಧ್ಯಕ್ಷ ಪ್ರೊ.ಕೆ.ಜಿ.ಪರಶುರಾಮ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಕುಲಸಚಿವ ಪ್ರೊ.ಕೆ.ಎನ್. ಗಂಗಾನಾಯಕ್, ವೀಡಿಯಾ ಬ್ಯಾಕ್ ಆಫೀಸ್ ವ್ಯವಸ್ಥಾಪಕ ನಿರ್ದೇಶಕ ಎಸ್.ರಘು ಭಾಗವಹಿಸುವರು.

ಹಿರಿಯ ಪತ್ರಕರ್ತ ಮತ್ತು ವಕೀಲ ಸಿ.ಕೆ.ಮಹೇಂದ್ರ, ನವ್ಯದಿಶಾ ಸಂಸ್ಥೆ ಕಾರ್ಯಕ್ರಮ ವ್ಯವಸ್ಥಾಪಕ ವಿ.ಹೆಂಜಾರಪ್ಪ ಕಾರ್ಯಾಗಾರದಲ್ಲಿ ಉಪನ್ಯಾಸ ನೀಡುವರು.

ಅಂದು ಬೆಳಗ್ಗೆ 10.30ಕ್ಕೆ ಕಾರ್ಯಕ್ರಮಕ್ಕೆ ಉದ್ಘಾಟನೆಯಾಗಲಿದ್ದು ನಂತರ ಉಪನ್ಯಾಸ ಮುಂದುವರಿಯಲಿದೆ.

ಕೆಎಸ್ಆರ್ಟಿಸಿ‌ ನೇಮಕಾತಿಗೆ ಅರ್ಜಿ ಆಹ್ವಾನ

ತುಮಕೂರು:

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 20 ಮಾರ್ಚ್ 2020 ಕೊನೆಯ ದಿನವಾಗಿದೆ.


ಚಾಲಕ ಮತ್ತು ಚಾಲಕ-ಕಂ-ನಿರ್ವಾಹಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಿಯಮಾವಳಿಗಳು 1982 ಮತ್ತು ತದನಂತರದ ತಿದ್ದುಪಡಿಗಳ ಅನುಸಾರ ಅರ್ಜಿಗಳನ್ನು ಕರೆಯಲಾಗಿದೆ.


ಈಗ ಪ್ರಕಟಿಸಿರುವ ಮೇಲ್ಕಂಡ ಹುದ್ದೆಗಳ ಸಂಖ್ಯೆ/ವರ್ಗೀಕರಣ ತಾತ್ಕಾಲಿಕವಾಗಿದ್ದು ಅವಶ್ಯಕತೆ ಅನುಗುಣವಾಗಿ ಮಾರ್ಪಾಡು ಮಾಡಬಹುದಾಗಿದೆ. ಆಯ್ಕೆ ಹೊಂದಿದ ಅಭ್ಯರ್ಥಿಗಳನ್ನು ಕ.ರಾ.ರ.ಸಾ. ನಿಗಮದ ವ್ಯಾಪ್ತಿಯಲ್ಲಿನ ವಿಭಾಗಗಳು ಮತ್ತು ವಿಭಾಗಗಳ ವ್ಯಾಪ್ತಿಯಲ್ಲಿ ಬರುವ ಯಾವುದೇ ಘಟಕಗಳಿಗೆ ನಿಯೋಜನೆ ಮಾಡಬಹುದಾಗಿದೆ.


ಆಯ್ಕೆಯಾದ ಅಭ್ಯರ್ಥಿಗಳನ್ನು ಅವಶ್ಯಕತೆಗೆ ಅನುಗುಣವಾಗಿ ಜಾರಿಯಲ್ಲಿರುವ ಮೀಸಲಾತಿ ನಿಯಮದ ಅನುಸಾರ ಎರಡು ವರ್ಷಗಳ ಕಾಲ ‘ಕೆಲಸದ ಮೇಲೆ ತರಬೇತಿ’ಗೆ ಮೇಲೆ ನಿಯೋಜನೆ ಮಾಡಲಾಗುತ್ತದೆ ಎಂದು ನೇಮಕಾತಿ ಆದೇಶದಲ್ಲಿ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ಒಟ್ಟು 1200 ಚಾಲಕ ಹುದ್ದೆಗಳು, 2545 ಚಾಲಕ-ಕಂ-ನಿರ್ವಾಹಕ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕಾಗಿದೆ. ಬೇರೆ ಮಾದರಿಯಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿಲ್ಲ.

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ಅಥವ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. (ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ನಡೆಸಲಾಗುವ ಎಸ್‌ಎಸ್‌ಎಲ್‌ಸಿ ಅಥವ ರಾಜ್ಯ ಸರ್ಕಾರವು ತತ್ಸಮಾನವೆಂದು ಪರಿಗಣಿಸಿದ ವಿದ್ಯಾರ್ಹತೆ)


ಕೊನೆಯ ದಿನಾಂಕದಂದು ಚಾಲ್ತಿಯಲ್ಲಿರುವ ಭಾರಿ ಸರಕು ಸಾಗಾಣಿಕೆ ವಾಹನ ಚಾಲನಾ ಪರವಾನಗಿ ಹೊಂದಿ ಕನಿಷ್ಠ ಎರಡು ವರ್ಷಗಳಾಗಿರಬೇಕು. ಪ್ರಯಾಣಿಕರ ಭಾರಿ ವಾಹನ ಚಾಲನಾ ಪರವಾನಗಿ ಹಾಗೂ ಕರ್ನಾಟಕ ಪಿ. ಎಸ್. ವಿ ಬ್ಯಾಡ್ಜ್ ಹೊಂದಿರಬೇಕು.

ಚಾಲಕ-ಕಂ-ನಿರ್ವಾಹಕ ಹುದ್ದೆಗೆ ಮಾತ್ರ ಚಾಲ್ತಿಯಲ್ಲಿರುವ ನಿರ್ವಾಹಕ ಪರವಾನಗಿ ಮತ್ತು ಕರ್ನಾಟಕ ಬ್ಯಾಡ್ಜ್ ಹೊಂದಿರಬೇಕು.

ಚಾಲಕ, ಚಾಲಕ-ಕಂ-ನಿರ್ವಾಹಕ ಹುದ್ದೆಗೆ ಅರ್ಜಿಗಳನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಠ 24 ವರ್ಷ ತುಂಬಿರಬೇಕು. ಗರಿಷ್ಠ ವಯೋಮಿತಿ ವಿವರಗಳು ಚಿತ್ರದಲ್ಲಿವೆ.

ಚಾಲಕ, ಚಾಲಕ-ಕಂ-ನಿರ್ವಾಹಕ ಹುದ್ದೆಗೆ ಅರ್ಜಿಗಳನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಠ 24 ವರ್ಷ ತುಂಬಿರಬೇಕು. ಗರಿಷ್ಠ ವಯೋಮಿತಿ ವಿವರಗಳು ಚಿತ್ರದಲ್ಲಿವೆ.

ಅರ್ಜಿಗಳನ್ನು ಸಲ್ಲಿಸಿದ ನಂತರ ಅಭ್ಯರ್ಥಿಯು ಚಲನ್ ಡೌನ್ ಲೋಡ್ ಮಾಡಿಕೊಂಡು ಎಲೆಕ್ಟ್ರಾನಿಕ್ ಅಂಚೆ ಕಚೇರಿಯಲ್ಲಿ ಇ-ಪೇಮೆಂಟ್ ಮೂಲಕ ಅರ್ಜಿ ಶುಲ್ಕ ಪಾವತಿ ಮಾಡಬಹುದು.

ಚಾಲಕ ಮತ್ತು ಚಾಲಕ-ಕಂ-ನಿರ್ವಾಹಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು, ನೇಮಕಾತಿ ಅಧಿಸೂಚನೆಗೆ ವೆಬ್ ಸೈಟ್ ವಿಳಾಸ ಚಿತ್ರದಲ್ಲಿದೆ.

ಚಿತ್ರದುರ್ಗ ಜಿಲ್ಲಾಧಿಕಾರಿಗಳ ಕಾರಿಗೆ ಅಪಘಾತ

ಸಾರಿಗೆ ಬಸ್ಸೊಂದು ಚಿತ್ರದುರ್ಗ ಜಿಲ್ಲಾಧಿಕಾರಿಗಳ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ನಜ್ಜುಗುಜ್ಜಾಗಿರುವ ಘಟನೆ ಹೊಳಲ್ಕೆರೆ ತಾಲೂಕಿನ ಶಿವಗಂಗಾ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದೆ.

ಕಾರಿನಲ್ಲಿದ್ದ ಚಿತ್ರದುರ್ಗ ಜಿಲ್ಲಾಧಿಕಾರಿ ವಿನೋತ್ ಪ್ರಿಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಜಿಲ್ಲಾದಿಕಾರಿಗಳ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ಚಿತ್ರದುರ್ಗದಿಂದ ಹೊಳಲ್ಕೆರೆಗೆ ಬರುತ್ತಿದ್ದ ಬಸ್ ಕಾರಿಗೆ ಡಿಕ್ಕಿ ಹೊಡೆದಿದೆ. ರಸ್ತೆಯಲ್ಲಿದ್ದ ಹಸುವನ್ನು ತಪ್ಪಿಸಲು ಹೋಗಿ ಈ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾರಿನಲ್ಲಿದ್ದ ವಿನೋತ್ ಪ್ರಿಯಾ, ಡ್ರೈವರ್ ಹಾಗೂ ಗನ್ ಮ್ಯಾನ್ ಸಿನಿಮೀಯ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ತೆರಳಿದ್ದು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಸಂವಹನ ಕೌಶಲ್ಯಗಳನ್ನು ಕಲಿಯಿರಿ;ಡಾ.ಎಂಎಸ್ ರವಿಪ್ರಕಾಶ್

ತುಮಕೂರು: ಪ್ರತಿಯೊಬ್ಬ ವಿದ್ಯಾರ್ಥಿಗೂ ಸಂವಹನ ಕೌಶಲ್ಯ ಬಹಳ ಮುಖ್ಯ. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಭವಿಷ್ಯ ರೂಪಿಸಿಕೊಳ್ಳಬೇಕಾದರೆ ವಿದ್ಯಾರ್ಥಿಗಳು ಸಂವಹನ ಕೌಶಲ್ಯಗಳನ್ನು ಕಲಿಯಬೇಕಾಗಿದೆ ಎಂದು ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಎಂಎಸ್ ರವಿಪ್ರಕಾಶ್ ತಿಳಿಸಿದರು.

ತುಮಕೂರಿನ ಎಸ್‍ಎಸ್‍ಐಟಿ ಕಾಲೇಜಿನಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ವಿಭಾಗದಿಂದ ಏರ್ಪಡಿಸಿದ್ದ ಕಾರ್ಪೋರೇಟ್ ಅವಶ್ಯಕತೆಗಳು ಮತ್ತು ವೃತ್ತಿಪರ ಜೀವನಲ್ಲಿ ಸಂವಹನದ ಅಗತ್ಯತೆ ಕುರಿತ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಮಾತನಾಡುವುದಕ್ಕಿಂತ ಮಾಡುವ ಕೆಲಸ ಮಾತನಾಡಬೇಕು. ಪ್ರತಿಯೊಬ್ಬರಿಗೂ ಒಂದೊಂದು ಕೌಶಲ್ಯವಿರುತ್ತದೆ. ಅದಕ್ಕೆ ಪೂರಕ ವಾತಾವರಣ ಗುರುತಿಕೊಂಡು ಹೆಚ್ಚಿನ ತರಬೇತಿ ಮತ್ತು ಕೌಶಲ್ಯ ಪಡೆದುಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ವಿದ್ಯಾರ್ಥಿ ಜೀವನದಲ್ಲಿ ತಾಳ್ಮೆ ಅತಿ ಮುಖ್ಯವಾಗಿದ್ದು, ಯಾವುದೇ ಕಂಪನಿಗೆ ಹೋಗುವ ಮುನ್ನ ಯೋಜನೆಗಳ ಸಂವಹನ ಸಾಮಥ್ರ್ಯವನ್ನು ಅರಿತಿರಬೇಕು. ಮೊದಲಿಗೆ ಅಂದುಕೊಂಡಿದ್ದನ್ನು ಸಾಧಿಸುವ ಆತ್ಮವಿಶ್ವಾಸವಿರಬೇಕು ಎಂದರು.

ಸಾಹೇ ವಿಶ್ವವಿದ್ಯಾನಿಲಯದ ರಿಜಿಸ್ಟ್ರಾರ್ ಡಾ.ಎಂ.ಝಡ್. ಕುರಿಯನ್ ವಿದ್ಯಾರ್ಥಿಗಳು ಕಾರ್ಪೋರೇಟ್ ವಲಯದಲ್ಲಿ ಕೆಲಸ ಮಾಡಲು ಶಿಸ್ತು ಮತ್ತು ತಾಳ್ಮೆ ಮುಖ್ಯ. ಓದಿನ ಹಸಿವು ಹೆಚ್ಚಿಸಿಕೊಂಡು ಕಲಿತರೆ ಉತ್ತಮಭವಿಷ್ಯ ರೂಪಿಸಿಕೊಳ್ಳಬಹುದು ಎಂದರು.

ಸಂಪನ್ಮೂಲ ವ್ಯಕ್ತಿ ಸಂತೋಷ ಮಾತನಾಡಿ, ವಿದ್ಯಾರ್ಥಿಗಳು ನೌಕರಿಗೆ ಹೋಗುವಾಗ ಅನುಸರಿಸಬೇಕಾದ ಮಾರ್ಗದರ್ಶಿ ನಿಯಮಗಳು ಮತ್ತು ಕಂಪನಿಗಳ ಅಗತ್ಯತೆ ಬಗ್ಗೆ ತಿಳಿಸಿಕೊಟ್ಟರು.

ಕಾರ್ಯಕ್ರಮದಲ್ಲಿ ಡೀನ್ ಡಾ.ಎಂ.ಸಿದ್ದಪ್ಪ, ಸಂಯೋಜಕ ಪ್ರವೀಣ್ ಸೇರಿ ಉಪನ್ಯಾಸಕರು ಹಾಜರಿದ್ದರು.

ಮುಸ್ಲಿಂ ರಿಂದ ಪ್ರತಿಭಟನೆ

ಮಧುಗಿರಿ ಮೋದಿ ಎಂಬಾತ ಪ್ರವಾದಿ ಮೊಹಮದ್ ಪೈಗಂಬರ್ ಅವರ ಬಗ್ಗೆ ಅವಹೇಳನ ಮಾಡಿದ್ದನ್ನು ಖಂಡಿಸಿ ಮುಸ್ಲಿಂ ಸಮುದಾಯದವರು ಸೋಮವಾರ ತುಮಕೂರಿನಲ್ಲಿ ಪ್ರತಿಭಟನೆ ನಡೆಸಿದರು.

ಇಂತಹ ಕೃತ್ಯ ಎಸಗಿರುವವರನ್ನು ಕೂಡಲೇ ಬಂಧಿಸಬೇಕು ಎಂದು ಪ್ರತಿಭಟನಾ ನಿರತರು ಒತ್ತಾಯಿಸಿದರು.

ಗಾಂಜಾ ಸಾಗಿಸುತ್ತಿದ್ದ ಮೂವರು ಆರೋಪಿಗಳ ಬಂಧನ

ಮಧುಗಿರಿಯಿಂದ ತುಮಕೂರಿಗೆ ಗಾಂಜಾ ಸಾಗಿಸುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 65 ಸಾವಿರ ರೂಪಾಯಿ ಮೌಲ್ಯದ 10 ಕೆ.ಜಿ. ಗಾಂಜಾ ವಶಪಡಿಸಿಕೊಳ್ಳಲಾಗಿದೆ.

ತುಮಕೂರಿನಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೋನಂ ವಂಶಿಕೃಷ್ಣ ಮಧುಗಿರಿಯಿಂದ ತುಮಕೂರಿಗೆ ಬರುತ್ತಿದ್ದ ಕೆಂಪು ಕಾರನ್ನು ತಡೆದು ಪರಿಶೀಲಿಸಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ ಎಂದು ಹೇಳಿದರು.
ಬಂಧಿತರನ್ನು ಮೊಕ್ದೋಂ ಷರೀಪ್, ನಹೀಮ್ ಅಹಮದ್, ಶಮೀರ್ ಪಾಷಾ ಎಂದು ಹೇಳಿದರು.

ಇಬ್ಬರು ಆರೋಪಿಗಳು ಪರಾರಿಯಾಗಿದ್ದು ಅವರಿಗಾಗಿ ಶೋಧಕಾರ್ಯ ನಡೆದಿದೆ. ಪರಾರಿಯಾಗಿರುವವರನ್ನು ಸಾಧಿಕ್, ಸಲ್ಮಾನ್ ಎಂದು ಗುರುತಿಸಲಾಗಿದೆ.
ಬಂಧಿತರಿಂದ ಒಂದು ಡ್ರಾಗರ್, ಮತ್ತು ಗಾಂಜಾ ಸಾಗಾಟಕ್ಕೆ ಬಳಸಿದ್ದ ಕಾರನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದರು.

ಇದೇ ವೇಳೆ ಕೊರಟಗೆರೆ ತಾಲೂಕಿನಲ್ಲಿ 25 ವರ್ಷಗಳ ಹಿಂದೆ ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿ ಸಿದ್ದಹನುಮಯ್ಯನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿಸಿದರು.

ಪರಿಷತ್ ಗೆ ಸವದಿ ಆಯ್ಕೆ

ತುಮಕೂರು :

ವಿಧಾನ ಪರಿಷತ್ ನ ಒಂದು ಸ್ಥಾನಕ್ಕೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಲಕ್ಷ್ಮಣ ಸವದಿ ಆಯ್ಕೆಯಾಗಿದ್ದಾರೆ.

113 ಮತಗಳನ್ನು ಪಡೆಯುವ ಮೂಲಕ ಲಕ್ಷ್ಮಣ್ ಸವದಿ ಪರಿಷತ್ ಗೆ ಆಯ್ಕೆಗೊಂಡಿದ್ದಾರೆ.

ಇಂದು ನಡೆದ ಉಪಚುನಾವಣೆ ವೇಳೆ ಒಟ್ಟು 120 ಮತಗಳು ಚಲಾವಣೆಯಾಗಿದ್ದವು. ಈ ಪೈಕಿ 7 ಮತಗಳು ಅಸಿಂಧುಗೊಂಡಿವೆ. ಕಾಂಗ್ರೆಸ್ ನ ರಿಜ್ವಾನ್ ಅರ್ಷದ್ ಅವರಿಂದ ತೆರವಾಗಿದ್ದ ಸ್ಥಾನಕ್ಕೆ ಇಂದು ಉಪಚುನಾವಣೆ ನಡೆಸಲಾಗಿತ್ತು. ಈ ಸ್ಥಾನಕ್ಕೆ ಈಗ ಬಿಜೆಪಿಯ ಲಕ್ಷ್ಮಣ್ ಸವದಿ ಆಯ್ಕೆಯಾಗಿದ್ದಾರೆ.

ದೇಶದ್ರೋಹದ ಮಾತನಾಡುವವರಿಗೆ ತಕ್ಕಶಾಸ್ತ್ರಿ: ಸವದಿ

ತುಮಕೂರು: ವಿಧಾನ ಪರಿಷತ್ ಚುನಾವಣೆ ಕಣದಿಂದ ಹಿಂದೆ ಸರಿದಿರುವ ಪಕ್ಷೇತರ ಅಭ್ಯರ್ಥಿ ನನ್ನೊಂದಿಗೆ ದೂರವಾಣಿಯಲ್ಲಿ ಮಾತನಾಡಿ ಒಳ್ಳೆಯದಾಗಲಿ ಎಂದು ಹಾರೈಸಿದ್ದಾರೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.

ತುಮಕೂರು ನಗರದ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸವದಿ ವಿದಾನ ಪರಿಷತ್ ನ ಒಂದು ಸ್ಥಾನಕ್ಕೆ ಜೆಡಿಎಸ್, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು. ಕೊನೆಯ ಕ್ಷಣದಲ್ಲಿ ಕಣದಿಂದ ಹಿಂದೆ ಸರಿದಿರುವುದಾಗಿ ಪ್ರಕಟಣೆ ಹೊರಟಿಸಿದ್ದಾರೆ ಎಂದು ತಿಳಿಸಿದರು.

ನಾಮಪತ್ರ ಹಿಂದೆ ಪಡೆದ ನಂತರ ದೂರವಾಣಿ ಮೂಲಕ ನನ್ನನ್ನು ಸಂಪರ್ಕಿಸಿದರು. ಲಕ್ಷ್ಮಣ ಸವದಿಗೆ ಒಳ್ಳೆಯದಾಗಲಿ ಎಂದು ಹಾರೈಸಿದರು. ನೀವು ಉಪಮುಖ್ಯಮಂತ್ರಿಗಳು. ನಿಮ್ಮ ಪಕ್ಷಕ್ಕೆ ಸಂಖ್ಯಾಬಲವಿದೆ. ನಮ್ಮ ಎರಡು ಪಕ್ಷದ ನಡುವೆ ಸಮನ್ವಯತೆ ಕೊರತೆ ಇದೆ ಎಂದು ಪೋನ್ ಮೂಲಕ ತಿಳಿಸಿದರು ಎಂದು ಮಾಧ್ಯಮಗಳ ಮುಂದೆ ಸ್ಪಷ್ಟಪಡಿಸಿದರು.

ಕಾಂಗ್ರೆಸ್ ಪಕ್ಷಕ್ಕೆ ಸಂಖ್ಯಾ ಕೊರತೆ ಇದೆ. ನಾವು ಯಾಕೆ ಸ್ಪರ್ಧಿಸಬೇಕೆಂದು ತೀರ್ಮಾನಕ್ಕೆ ಬಂದೆ. ನಂತರ ನಾಮಪತ್ರ ವಾಪಸ್ ಪಡೆದಿದ್ದೇನೆ ಎಂದು ನನಗೆ ಹೇಳಿದರೆಂದು ಸವದಿ ತಿಳಿಸಿದರು.

ದೇಶ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತನಿಖೆ ನಡೆಯುತ್ತಿದೆ. ಕಾನೂನು ವ್ಯಾಪ್ತಿಯಲ್ಲಿ ಏನೆಲ್ಲ ಶಿಕ್ಷೆ ನೀಡಬೇಕೋ ಅದನ್ನು ಕೊಡುತ್ತೇವೆ. ದೇಶದ್ರೋಹದ ಮಾತನಾಡುವವರಿಗೆ ತಕ್ಕಶಾಸ್ತಿ ನೀಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಇದೇ ವೇಳೆ ಸಚಿವ ಸೋಮಣ್ಣ, ಮೊದಲಾದವರು ಉಪಸ್ಥಿತರಿದ್ದರು.

ನಾಗಲಮಡಿಕೆಯಲ್ಲಿ ನೀರಿಗಾಗಿ ಪ್ರತಿಭಟನೆ

ಪಬ್ಲಿಕ್ ಸ್ಟೋರಿ:    ಆಂಧ್ರದ ಪೇರೂರಿನ ಡ್ಯಾಂ ಗೆ ಹಂದ್ರಿನಿವಾ ಯೋಜನೆ ಮೂಲಕ ನೀರು ಹರಿಸಲು ಅವಕಾಶ ಕೊಡಬೇಕು ಎಂದು ಒತ್ತಾಯಿಸಿ ಸೋಮವಾರ ಪಾವಗಡ ತಾಲ್ಲೂಕಿನ ನಾಗಲಮಡಿಕೆಯಲ್ಲಿ ಜನತೆ ಪ್ರತಿಭಟನೆ ನಡೆಸಲಿದ್ದಾರೆ.

ಶಾಸಕರು ನೀರು ತೆಗೆದುಕೊಂಡು ಹೋಗದಂತೆ ಅಧಿಕಾರಿಗಳನ್ನು ಬಳಸಿಕೊಂಡು ತಡೆಯುತ್ತಿದ್ದಾರೆ ಎಂದು  ವಾಟ್ಸ್ ಅಪ್, ಫೆಸ್ ಬುಕ್ ಸೇರಿದಂತೆ ಸಾಮಾಜಿಕ ಜಾಲತಾಣಗಳು ಹಾಗೂ ಸಾರ್ವಜನಿಕವಾಗಿ  ಚರ್ಚೆ ನಡೆಯುತ್ತಿದೆ.

ಆಂಧ್ರದವರು ನಾಗಲಮಡಿಕೆಯಲ್ಲಿ ಪೂಜೆ ಸಲ್ಲಿಸಿದಾಗ ಮಾಜಿ ಶಾಸಕ ತಿಮ್ಮರಾಯಪ್ಪ, ಸಂಸದ ನಾರಾಯಣಸ್ವಾಮಿ ಹೋಗಿದ್ದರು. ಆದರೆ ಶಾಸಕ ವೆಂಕಟರಮಣಪ್ಪ ಅವರಿರಲಿಲ್ಲ. ಇದೇ ವಿಚಾರವನ್ನು ಆಧಾರವಾಗಿಟ್ಟುಕೊಂಡು ಪರ ವಿರೋಧ ಚರ್ಚೆಗಳು ವ್ಯಾಪಕವಾಗಿ ನಡೆಯುತ್ತಿವೆ.

ಶಾಸಕ ವೆಂಕರಮಣಪ್ಪ, ಕೆಲವರು ಅನಗತ್ಯವಾಗಿ ಇಲ್ಲ ಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ಅವುಗಳಲ್ಲಿ ಯಾವುದೇ ಹುರುಳಿಲ್ಲ. ಪೆರೂರಿಗೆ ಉತ್ತರ ಪಿನಾಕಿನಿ ನದಿ ಮೂಲಕ ನೀರು ತೆಗೆದುಕೊಂಡು ಹೋಗಲು ಯಾವುದೇ ಅಭ್ಯಂತರವಿಲ್ಲ. . ಚೆಕ್ ಡ್ಯಾಂ ತುಂಬಿಸಿ   ಕಾಲುವೆ ಮೂಲಕ ನೀರು ತೆಗೆದುಕೊಂಡು ಹೋಗಲಿ ಎಂದು  ತಿಳಿಸಿದ್ದಾರೆ.

ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ, ಪ್ರತಿಭಟನೆಯಲ್ಲಿ ಭಾಗವಹಿಸಲಾಗುವುದು.   ಮೌಖಿಕ ಒಪ್ಪಿಗೆಯ ಮೇರೆಗೆ ನೀರು ಕೊಂಡೊಯ್ಯಲು ಅವಕಾಶ ಕಲ್ಪಿಸಬೇಕು. ಕೆಲ ತಾಂತ್ರಿಕ ಕಾರಣಗಳಿಂದ ಲಿಖಿತವಾಗಿ ಆದೇಶ ನೀಡಿರುವುದಿಲ್ಲ. ಇದನ್ನು ಅಧಿಕಾರಿಗಳು ಅರ್ಥಮಾಡಿಕೊಂಡು ತಾಲ್ಲೂಕಿನ  ಹಿತದೃಷ್ಠಿಯಿಂದ ಕಾಮಗಾರಿ ನಿಲ್ಲಿಸಬಾರದು.  ಚೆಕ್ ಡ್ಯಾಂ ತುಂಬಿಸುವುದರಿಂದ ಬೇಸಿಗೆಯಲ್ಲಿ ಹೋಬಳಿಯ ಜನತೆ ಹಾಗೂ ಜಾನುವಾರುಗಳಿಗೆ ನೀರು ಸಿಗಲಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.