Wednesday, March 11, 2026
Google search engine
Home Blog Page 29

ಮೂವರು ಪೊಲೀಸ್ ಕಾನ್ಸ್ಟೇಬಲ್ ಅಮಾನತು

Publicstory

ತುಮಕೂರು: ಕರ್ತವ್ಯ ಲೋಪ ಆರೋಪದ ಮೇರೆಗೆ ಮೂವರು ಪೊಲೀಸ್ ಕಾನ್‌ಸ್ಟೇಬಲ್‌ಗಳನ್ನು ಸೇವೆಯಿಂದ ಅಮಾನತ್ತುಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ. ಆದೇಶ ಹೊರಡಿಸಿದ್ದಾರೆ. ನಗರದ ಕ್ಯಾತ್ಸಂದ್ರ ಪೊಲೀಸ್ ಠಾಣೆಯ ಹೆಡ್ ಕಾನ್ಸ್’ಟೇಬಲ್ ಶಿವಣ್ಣ, ಕಾನ್‌ಸ್ಟೇಬಲ್ ಸಂತೋಷ್ ಹಾಗೂ ಮಹಿಳಾ ಠಾಣೆಯ ಕಾನ್‌ಸ್ಟೇಬಲ್‌ ಕುಸುಮ ಅವರು ಸೇವೆಯಿಂದ ಅಮಾನತುಗೊಳಗಾದವರು.

ತುಮಕೂರು: ಕರ್ತವ್ಯ ಲೋಪ ಆರೋಪದ ಮೇರೆಗೆ ಮೂವರು ಪೊಲೀಸ್ ಕಾನ್‌ಸ್ಟೇಬಲ್‌ಗಳನ್ನು ಸೇವೆಯಿಂದ ಅಮಾನತ್ತುಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ. ಆದೇಶ ಹೊರಡಿಸಿದ್ದಾರೆ. ನಗರದ ಕ್ಯಾತ್ಸಂದ್ರ ಪೊಲೀಸ್ ಠಾಣೆಯ ಹೆಡ್ ಕಾನ್ಸ್’ಟೇಬಲ್ ಶಿವಣ್ಣ, ಕಾನ್‌ಸ್ಟೇಬಲ್ ಸಂತೋಷ್ ಹಾಗೂ ಮಹಿಳಾ ಠಾಣೆಯ ಕಾನ್‌ಸ್ಟೇಬಲ್‌ ಕುಸುಮ ಅವರು ಸೇವೆಯಿಂದ ಅಮಾನತುಗೊಳಗಾದವರು.

ದೂರು ಬಂದರೆ ಹುಷಾರ್ : ಪರಮೇಶ್ವರ್ ಗರಂ

ತುಮಕೂರು : ಬರ ನಿರ್ವಹಣೆ, ಕುಡಿಯುವ ನೀರಿನ ಸಮಸ್ಯೆ, ಗ್ಯಾರಂಟಿ ಯೋಜನೆಗಳ ಅನುಷ್ಠಾನ, ರೈತರಿಗೆ ಬೆಳೆ ನಷ್ಟ ಪರಿಹಾರ ಸೇರಿದಂತೆ ವಿವಿಧ ಸರ್ಕಾರದ ಸೌಲಭ್ಯಗಳನ್ನು ಜನರಿಗೆ ತಲುಪಿಸುವಲ್ಲಿ ಸಾರ್ವಜನಿಕರಿಂದ ಯಾವುದೇ ದೂರು ಬಂದರೂ ಅಂತಹವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ|| ಜಿ.ಪರಮೇಶ್ವರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದ ಅವರು, ಪ್ರಸ್ತುತ ಸರ್ಕಾರಿ ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ರೀತಿಯಲ್ಲಿ ದೂರು ಬಂದರೂ ಮುಲಾಜಿಲ್ಲದೆ ಅಂತಹ ಅಧಿಕಾರಿಗಳ ಮೇಲೆ ಕ್ರಮ ವಹಿಸಲಾಗುವುದೆಂದು ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ ಪ್ರಸಕ್ತ ವರ್ಷದಲ್ಲಿ ಮುಂಗಾರು ಹಂಗಾಮಿನಲ್ಲಿ ಉತ್ಪಾದಿಸಬಹುದಾದ ಬೆಳೆ ಪ್ರಮಾಣದ ವಾಸ್ತಾವಿಕ ಮಾಹಿತಿ ನೀಡಬೇಕು. ಇದರಿಂದ ಆಹಾರ ಧಾನ್ಯ ಕೊರತೆಯನ್ನು ಅಂದಾಜಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರಲ್ಲದೆ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿಯೂ ಬರ ಪರಿಸ್ಥಿತಿ ತಲೆದೋರಿರುವ ಹಿನ್ನೆಲೆಯಲ್ಲಿ ಬೆಳೆ ನಷ್ಟ ಹೊಂದಿರುವ ರೈತರಿಗೆ ವಿಮಾ ಮೊತ್ತ ವಿತರಣೆಯಾಗಬೇಕು. ವಿಮಾ ಸೌಲಭ್ಯಕ್ಕೆ ಈವರೆಗೂ ನೋಂದಣಿಯಾಗದ ರೈತರಿಗೆ ಅರಿವು ಮೂಡಿಸಿ ರೈತರ ನೋಂದಣಿಗೆ ಕ್ರಮ ಕೈಗೊಳ್ಳಬೇಕು ಎಂದು ಜಂಟಿ ಕೃಷಿ ನಿರ್ದೇಶಕ ರಮೇಶ್ ಅವರಿಗೆ ಸೂಚಿಸಿದರು.

ಜಿಲ್ಲೆಯಲ್ಲಿ ನಿರೀಕ್ಷಿತ ಮಳೆಯಾಗದಿರುವುದರಿಂದ ಬೆಳೆ ನಷ್ಟ ಪರಿಸ್ಥಿತಿ ಎದುರಿಸಬೇಕಾಗುವುದಲ್ಲದೆ ಜಾನುವಾರುಗಳ ಮೇವಿಗೂ ಕೊರತೆ ಉಂಟಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ನೀರಿನ ಲಭ್ಯತೆ ಇರುವ ರೈತರಿಗೆ ಬಿತ್ತನೆ ಬೀಜ, ಗೊಬ್ಬರ ವಿತರಿಸಿ ಮೇವು ಬೆಳೆಯಲು ಹುರಿದುಂಬಿಸಬೇಕು.

ಜಿಲ್ಲೆಯಲ್ಲಿ ಉಂಟಾಗಬಹುದಾದ ಮೇವಿನ ಕೊರತೆಯನ್ನು ನೀಗಿಸಲು ಹೊರ ರಾಜ್ಯಗಳಲ್ಲಿ ಮೇವಿನ ಲಭ್ಯತೆಯ ಬಗ್ಗೆ ಮಾಹಿತಿ ಪಡೆಯಬೇಕೆಂದು ಪಶು ಸಂಗೋಪನಾ ಇಲಾಖೆ ಉಪನಿರ್ದೇಶಕ ಡಾ|| ಗಿರೀಶ್ ಬಾಬು ರೆಡ್ಡಿ ಅವರಿಗೆ ಸೂಚನೆ ನೀಡಿದರು.

Police: polisara

0

ರಾಜ್ಯಾದ್ಯಂತ ಪೊಲೀಸ್ ಮಕ್ಕಳ ಶಿಕ್ಷಣಕ್ಕಾಗಿ ರಾಜ್ಯದ ಏಳು ಸ್ಥಳಗಳಲ್ಲಿ ಪೊಲೀಸ್ ಪಬ್ಲಿಕ್ ಸ್ಕೂಲ್ ತೆರೆಯಲಾಗುವುದು. ಪೊಲೀಸ್ ಕ್ಯಾಂಟೀನ್ ಕಲ್ಪಿಸಲಾಗಿದೆ. ವಿಶೇಷ ಗುಂಪು ಯೋಜನೆಯಡಿ 20 ಲಕ್ಷ ರೂಪಾಯಿ ಬಿಡುಗಡೆ ಮಾಡಲಾಗಿದೆ. ಕರ್ತವ್ಯದಲ್ಲಿ ಇರುವ ವೇಳೆ ಹುತಾತ್ಮರಾದ ಪೊಲೀಸರಿಗೆ 50 ಲಕ್ಷ ರೂಪಾಯಿ ಪರಿಹಾರ ಕೊಡಲಾಗುವುದು ಎಂದು ಸಿಎಂ ತಿಳಿಸಿದರು.

ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಹೇಗೆ? ಇಲ್ಲಿದೆ ಮಾಹಿತಿ

ತುಮಕೂರು: 415 ಗ್ರಾಮಗಳಲ್ಲಿ ಜಲಕ್ಷಾಮ

ತುಮಕೂರು: ಮಳೆ ಕೊರತೆಯಿಂದಾಗಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಭೀತಿ ಎದುರಾಗಿದೆ. ಮಳೆ ಕೊರತೆ ಹೀಗೆ ಮುಂದುವರೆದಲ್ಲಿ ಜಿಲ್ಲೆಯ ಸುಮಾರು 415 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದುದೆಂದು ಅಂದಾಜಿಸಲಾಗಿದೆ.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪ್ರಗತಿ ಪರಿಶೀಲನೆ ಸಭೆಯಲ್ಲಿ ನೀರಿನ ಸಮಸ್ಯೆ ಕುರಿತು ಜಿಲ್ಲಾ ಉಸ್ತುವಾರಿ ಸಚಿವರ ಗಮನಕೆ, ತಂದರು.

ಜಿಲೆಯಲ್ಲಿ ಉದ್ಭವಿಸಬಹುದಾದ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಈಗಾಗಲೇ ಎಲ್ಲಾ ತಾಲ್ಲೂಕುಗಳ 186 ಕಾಮಗಾರಿಗಳಿಗೆ 360.75ಲಕ್ಷ ರೂ.ಗಳ ಕಾಂಟೆಜೆನ್ಸಿ ಕ್ರಿಯಾ ಯೋಜನೆ ಅನುಮೋದನೆಗಾಗಿ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಮಳೆ ಕೊರತೆ ಹೀಗೆ ಮುಂದುವರೆದಲ್ಲಿ ಜಿಲ್ಲೆಯ ಸುಮಾರು 415 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದುದೆಂದು ಅಂದಾಜಿಸಲಾಗಿದೆ. ಕುಡಿಯುವ ನೀರು ಸಮಸ್ಯೆ ಬಾರದಂತೆ ಜಲಜೀವನ ಮಿಷನ್ ಯೋಜನೆಯಡಿ 881 ಕೊಳವೆ ಬಾವಿಗಳನ್ನು ಕೊರೆಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವರಿಗೆ ಮಾಹಿತಿ ನೀಡಿದರು.

ಕ್ರೀಡೆಯಿಂದ ಸದೃಢ ಭಾರತ

ಶೇಷಾದ್ರಿಪುರಂ ಪದವಿ ಪೂರ್ವ ಕಾಲೇಜಿನಲ್ಲಿ ಏಳನೇ ವಾರ್ಷಿಕ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು.

 ಈ ಕಾರ್ಯಕ್ರಮವನ್ನು ಡಾ. ರಾಘವೇಂದ್ರ ದೈಹಿಕ ಶಿಕ್ಷಕ ನಿರ್ದೇಶಕರು  ಶೇಷಾದ್ರಿಪುರಂ ಪದವಿ ಕಾಲೇಜು ಮೈಸೂರು, ರಾಷ್ಟ್ರ ಪ್ರಶಸ್ತಿ ವಿಜೇತರು ಎನ್ಎಸ್ಎಸ್ ಕಾರ್ಯಕ್ರಮದ  ಅಧಿಕಾರಿಗಳು ಇವರು  ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಕ್ರೀಡೆ ಇರುವುದು ಬರೀ ಸ್ಪರ್ಧೆಗಾಗಿ ಅಲ್ಲ, ನಮ್ಮ ಆರೋಗ್ಯ ದೃಷ್ಟಿಯಿಂದ ಕೂಡ  ಒಳ್ಳೆಯದು.  ಕ್ರೀಡೆ ಮಾನಸಿಕ ಹಾಗೂ ದೈಹಿಕ ಆರೋಗ್ಯವನ್ನು ಸದೃಢಗೋಳಿಸುತ್ತದೆ.  ಮೊಬೈಲ್ ಬಳಕೆ ಕಡಿಮೆಮಾಡಿ ಎಂದು ಮಕ್ಕಳಿಗೆ ಸಲಹೆ ನೀಡಿದರು, ದೈಹಿಕ ಶ್ರಮ ವಹಿಸುವ ಕ್ರೀಡೆಗಳನ್ನು ಆಡಬೇಕು. ಮುಂದಿನ ಭವಿಷ್ಯಕ್ಕಾಗಿ ಸದೃಢ ಭಾರತಕ್ಕಾಗಿ ಸದೃಢ ಯುವಜನತೆ ಬೇಕು. ನೀವೆ ನಮ್ಮ ಭಾರತದ ಭವಿಷ್ಯ. ಪ್ರತಿ ದಿನ ಒಂದು ಗಂಟೆ ಕ್ರೀಡೆಗಾಗಿ ಮೀಸಲಿಡಿ ಎಂದರು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಕೃಷ್ಣ ಸ್ವಾಮಿ ಕೆ ಟ್ರಸ್ಟಿ ಶೇಷಾದ್ರಿಪುರಂ ಎಜುಕೇಶನಲ್ ಟ್ರಸ್ಟ್ ಬೆಂಗಳೂರು ಇವರು ವಹಿಸಿದ್ದರು. ಮಕ್ಕಳನ್ನು ಉದ್ದೇಶಿಸಿ ಮಾತನಾಡಿದ ಇವರು  “ ಇರುವೆಗಿರುವ ಚೈತನ್ಯ ರೂಢಿಸಿಕೊಳ್ಳಬೇಕು” ಸದಾ ಕ್ರಿಯಾಶೀಲವಾಗಿರಬೇಕು. “sound mind in a sound body” ಕ್ರೀಡೆ, ಯೋಗದ ಪ್ರಯೋಜನ ಸಾಕಷ್ಟಿದೆ. ಜಗತ್ತಿಗೆ ಯೋಗವನ್ನು ಪರಿಚಯಿಸಿದ್ದು ಭಾರತೀಯರು. ಜಗತ್ತೆ ಯೋಗವನ್ನು ಪಾಲಿಸುವಾಗ, ನಾವೇಕೆ ಪಾಲಿಸಬಾರದು? ಎಂದರು.

ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಶ್ರೀ ಶಶಾಂಕ್ ಎಂ ಗೋಪಾಲ್ ಟ್ರಸ್ಟಿ ಶೇಷಾದ್ರಿಪುರಂ ಎಜುಕೇಶನ್ ಟ್ರಸ್ಟ್ ಬೆಂಗಳೂರು ಇವರು ಆಗಮಿಸಿದ್ದರು.

ಈ ಕಾರ್ಯಕ್ರಮಕ್ಕೆ ವಿಶೇಷ ಆಹ್ವಾನಿತರಾಗಿ ಶೇಷಾದ್ರಿಪುರಂ ಪದವಿ ಪೂರ್ವ ಕಾಲೇಜಿನ ಹಳೆಯ ವಿದ್ಯಾರ್ಥಿ  ಕುಶಲ್ ಜಿ ಕೆ ರಾಷ್ಟ್ರೀಯ ಕಬ್ಬಡಿ ಆಟಗಾರರು ಆಗಮಿಸಿದ್ದರು.

ಕಾರ್ಯಕ್ರಮದಲ್ಲಿ ಶೇಷಾದ್ರಿಪುರಂ ಪದವಿ ಕಾಲೇಜಿನ ಪ್ರಾಂಶುಪಾಲರಾದ ಜಗದೀಶ ಜಿ ಟಿ ಹಾಗೂ ಶೇಷಾದ್ರಿಪುರಂ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಬಸವರಾಜು ಬಿ ವಿ ಉಪಸ್ಥಿತರಿದ್ದರು

ಒಕ್ಕಲಿಗರಿಗೆ ಸಾಲ : ಅರ್ಜಿ ಆಹ್ವಾನ

  • ತುಮಕೂರು : ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದಿಂದ 2023-24 ನೇ ಸಾಲಿಗೆ ಹಿಂದುಳಿದ ವರ್ಗಗಳ ಪ್ರವರ್ಗ-3ಎನಲ್ಲಿ ಕ್ರಮ ಸಂಖ್ಯೆ 1(ಎ) ರಿಂದ 1(ಟಿ) ವರೆಗೆ ನಮೂದಾಗಿರುವ ಒಕ್ಕಲಿಗ, ವಕ್ಕಲಿಗ, ಸರ್ಪವಕ್ಕಲಿಗ, ಹಳ್ಳಿಕಾರ್ ಒಕ್ಕಲಿಗ, ನಾಮಧಾರಿ ಒಕ್ಕಲಿಗ, ಗಂಗಡ್‌ಕಾ‌ ಒಕ್ಕಲಿಗ, ದಾಸ್‌ಒಕ್ಕಲಿಗ, ರೆಡ್ಡಿ ಒಕ್ಕಲಿಗ, ಮರಸು ಒಕ್ಕಲಿಗ, ಗೌಡ (Gouda)/ ಗೌಡ (Gowda), ಹಳ್ಳಿಕಾರ್, ಕುಂಚಿಟಿಗ, ಗೌಡ, ಕಾಪು, ಹೆಗ್ಗಡೆ, ಕಮ್ಮಾ, ರೆಡ್ಡಿ, ಗೌಡ‌, ನಾಮಧಾರಿಗೌಡ, ಉಪ್ಪಿನ ಕೊಳಗ ಉತ್ತಮ ಕೊಳಗ ಒಕ್ಕಲಿಗ ಸಮುದಾಯದ ಜನರ ಆರ್ಥಿಕ ಅಭಿವೃದ್ಧಿಗಾಗಿ ಸಾಲಸೌಲಭ್ಯ ಒದಗಿಸಲು ಅರ್ಜಿ ಆಹ್ವಾನಿಸಲಾಗಿದೆ.

ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ,

ಶೈಕ್ಷಣಿಕ ಸಾಲ ಯೋಜನೆ(Fresh Students), ಶೈಕ್ಷಣಿಕ ಸಾಲ ಯೋಜನೆ(Renewal), ವಿದೇಶ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ(Fresh Students) ಸ್ವಾತಂತ್ರ್ಯ ಅಮೃತ ಮಹೋತ್ಸವ ಮುನ್ನಡೆ ಯೋಜನೆಯ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ(ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ)ಗಳಡಿ ಸಾಲ ಸೌಲಭ್ಯ ಒದಗಿಸಲಾಗುವುದು. ಈ ಯೋಜನೆಯಡಿ ಅರ್ಜಿ ಸಲ್ಲಿಸಬಯಸುವವರು ಸೇವಾಸಿಂಧು

ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು.

https://www.sevasindhu.karnat aka.gov.in)ಗ್ರಾಮ ಒನ್

(https://gramaone.karnataka.gov

.in) ಹಾಗೂ ಸ್ವಾತಂತ್ರ್ಯ ಅಮೃತ ಮುನ್ನಡೆ ಯೋಜನೆಯಡಿ ಕೌಶಲ್ಯ ತಂತ್ರಾಂಶ (https://www.kaushalkar.com) ಲ್ಲಿ ಅಕ್ಟೋಬರ್ 30ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಒಕ್ಕಲಿಗರಿಗೆ ಸಾಲ : ಅರ್ಜಿ ಆಹ್ವಾನ

  • ತುಮಕೂರು : ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದಿಂದ 2023-24 ನೇ ಸಾಲಿಗೆ ಹಿಂದುಳಿದ ವರ್ಗಗಳ ಪ್ರವರ್ಗ-3ಎನಲ್ಲಿ ಕ್ರಮ ಸಂಖ್ಯೆ 1(ಎ) ರಿಂದ 1(ಟಿ) ವರೆಗೆ ನಮೂದಾಗಿರುವ ಒಕ್ಕಲಿಗ, ವಕ್ಕಲಿಗ, ಸರ್ಪವಕ್ಕಲಿಗ, ಹಳ್ಳಿಕಾರ್ ಒಕ್ಕಲಿಗ, ನಾಮಧಾರಿ ಒಕ್ಕಲಿಗ, ಗಂಗಡ್‌ಕಾ‌ ಒಕ್ಕಲಿಗ, ದಾಸ್‌ಒಕ್ಕಲಿಗ, ರೆಡ್ಡಿ ಒಕ್ಕಲಿಗ, ಮರಸು ಒಕ್ಕಲಿಗ, ಗೌಡ (Gouda)/ ಗೌಡ (Gowda), ಹಳ್ಳಿಕಾರ್, ಕುಂಚಿಟಿಗ, ಗೌಡ, ಕಾಪು, ಹೆಗ್ಗಡೆ, ಕಮ್ಮಾ, ರೆಡ್ಡಿ, ಗೌಡ‌, ನಾಮಧಾರಿಗೌಡ, ಉಪ್ಪಿನ ಕೊಳಗ ಉತ್ತಮ ಕೊಳಗ ಒಕ್ಕಲಿಗ ಸಮುದಾಯದ ಜನರ ಆರ್ಥಿಕ ಅಭಿವೃದ್ಧಿಗಾಗಿ ಸಾಲಸೌಲಭ್ಯ ಒದಗಿಸಲು ಅರ್ಜಿ ಆಹ್ವಾನಿಸಲಾಗಿದೆ.

ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ,

ಶೈಕ್ಷಣಿಕ ಸಾಲ ಯೋಜನೆ(Fresh Students), ಶೈಕ್ಷಣಿಕ ಸಾಲ ಯೋಜನೆ(Renewal), ವಿದೇಶ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ(Fresh Students) ಸ್ವಾತಂತ್ರ್ಯ ಅಮೃತ ಮಹೋತ್ಸವ ಮುನ್ನಡೆ ಯೋಜನೆಯ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ(ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ)ಗಳಡಿ ಸಾಲ ಸೌಲಭ್ಯ ಒದಗಿಸಲಾಗುವುದು. ಈ ಯೋಜನೆಯಡಿ ಅರ್ಜಿ ಸಲ್ಲಿಸಬಯಸುವವರು ಸೇವಾಸಿಂಧು

ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು.

https://www.sevasindhu.karnat aka.gov.in)ಗ್ರಾಮ ಒನ್

(https://gramaone.karnataka.gov

.in) ಹಾಗೂ ಸ್ವಾತಂತ್ರ್ಯ ಅಮೃತ ಮುನ್ನಡೆ ಯೋಜನೆಯಡಿ ಕೌಶಲ್ಯ ತಂತ್ರಾಂಶ (https://www.kaushalkar.com) ಲ್ಲಿ ಅಕ್ಟೋಬರ್ 30ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ತುಮಕೂರು ದಸರಾ

ತುಮಕೂರಿನಲ್ಲಿ ವಿಜೃಂಭಣೆಯಿಂದ ದಸರಾ ಆಚರಣೆ
ಪ್ರತಿ ವರ್ಷದಂತೆ ಈ ವರ್ಷವೂ ಕೂಡ ದಸರಾ ಸಂಭ್ರಮ ಸಡಗರ ಆವರಿಸಿದೆ. ನಗರದ ಬೀದಿಗಳನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದೆ.
ನಗರದ ವಿವಿಧ ಕಲಾತಂಡಗಳು ದಸರಾ

ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪ್ರದರ್ಶನ ನೀಡುತ್ತಿವೆ.
ಜಾನಪದ ಗೀತೆಗಳ ಗಾಯನ ಸ್ಪರ್ಧೆ,ಜಾನಪದ ನೃತ್ಯ, ನಾಟಕ ಪ್ರದರ್ಶನ ಹಾಗೂ ನಗರ ಗುಬ್ಬಿ ವೀರಣ್ಣ ಕಲಾ ಮಂದಿರದಲ್ಲಿ ನಾಟಕ ಸ್ಪರ್ಧೆ ಏರ್ಪಡಿಸಲಾಗಿದೆ. ಹಾಸ್ಯ ಕಾರ್ಯಕ್ರಮ, ರಂಗೋಲಿ ಸ್ಪರ್ಧೆ ಭಜನಾ ಸ್ಪರ್ಧೆ  ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ. ನಗರದ ಲೇಖಕಿರಯರ ಸಂಘದ ಸದಸ್ಯರೂ ಸೇರಿದಂತೆ ದೌರ್ಜನ್ಯ ವಿರೋಧಿ ವೇದಿಕೆ, ಸಾಹಿತ್ಯ ಪರಿಷತ್ ಸದಸ್ಯರು ಎಲ್ಲರೂ ಪಾಲ್ಗೊಳ್ಳುವ ಮೂಲಕ ದಸರಾ ರಂಗೇರಿದೆ. ತುಕೂರು ದಸರಾವನ್ನು ಮಹೇಶ್ ಜೋಶಿ ನೆರವೇರಿಸಲಿದ್ದಾರೆ. ಪ್ರತಿದಿನ ಸಿಡಿಮದ್ದಿನ ಪ್ರದರ್ಶನವೂ ಇದೆ.
ಎಂದಿನಂತೆ ಈ ವರ್ಷದ ದಸರವು ಕಳೆಗಟ್ಟಿದೆ.

ಸಿದ್ದಿ ವಿನಾಯಕ ವಿಸರ್ಜನೆ

ತುಮಕೂರು- ಶ್ರೀ ಸಿದ್ದಿವಿನಾಯಕ ಸೇವಾ ಮಂಡಳಿ ವತಿಯಿಂದ ಪ್ರತಿಷ್ಠಾಪಿಸಿದ್ದ 47ನೇ ವರ್ಷದ ಗಣೇಶಮೂರ್ತಿಯನ್ನು ವಿವಿಧ ಜಾನಪದ ಕಲಾ ತಂಡಗಳ ಮೆರವಣಿಗೆ ಹಾಗೂ ಅದ್ದೂರಿ ತೆಪ್ಪೋತ್ಸವದೊಂದಿಗೆ ನಗರದ ಅಮಾನಿಕೆರೆಯಲ್ಲಿ ಸಂಜೆ ವಿಸರ್ಜಿಸಲಾಯಿತು.

ಗಣೇಶಮೂರ್ತಿ ವಿಸರ್ಜನೆ ಅಂಗವಾಗಿ ನಡೆದ ತೆಪ್ಪೋತ್ಸವ ನಡೆಯುವ ಸಂದರ್ಭದಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು.

ಗಣೇಶೋತ್ಸವದಲ್ಲಿ ಸಿದ್ದಿವಿನಾಯಕ ಸೇವಾ ಮಂಡಳಿಯ ಉಪಾಧ್ಯಕ್ಷ ಹೆಚ್.ಆರ್. ನಾಗೇಶ್, ಕಾರ್ಯದರ್ಶಿ ರಾಘವೇಂದ್ರರಾವ್, ಸಹಕಾರ್ಯದರ್ಶಿ ಜಗಜ್ಯೋತಿ ಸಿದ್ದರಾಮಯ್ಯ, ಖಜಾಂಚಿ ಪ್ರಭು, ಸಾಂಸ್ಕೃತಿಕ ಸಮಿತಿಯ ಟಿ.ಹೆಚ್. ಪ್ರಸನ್ನಕುಮಾರ್, , ಉತ್ಸವ ಸಮಿತಿ ಅಧ್ಯಕ್ಷ ಕೋರಿ ಮಂಜಣ್ಣ, ಎನ್. ವೆಂಕಟೇಶ್ ಕಲ್ಪನ ಹಾಲಪ್ಪ, ನಿರ್ದೇಶಕರಾದ ಎಂ.ಲಿಂಗಪ್ಪ, ಜಿ.ಎಸ್.ಸಿದ್ದರಾಜು, ಕೆ.ನರಸಿಂಹಮೂರ್ತಿ, ಟಿ.ಆರ್ ನಟರಾಜು, ಟಿ.ಹೆಚ್.ಮಹೇಶ್, ಜಿ.ಸಿ.ವಿರುಪಾಕ್ಷ, ಡಾ.ಎಸ್.ವಿ.ವೆಂಕಟೇಶ್, ಹೇಮರಾಜು ಸಿಂಚ, ಎ.ಎಸ್.ವಿಜಯಕುಮಾರ್, ಟಿ.ಆರ್.ವೆಂಕಟೇಶ್‍ಬಾಬು, ಟಿ.ಕೆ.ಪದ್ಮರಾಜ್, ಎಂ.ಎನ್.ಉಮಾಶಂಕರ್, ಆರ್.ಎಲ್.ರಮೇಶ್‍ಬಾಬು, ಡಾ.ಅನುಸೂಯ ರುದ್ರಪ್ರಸಾದ್, ರೇಣುಕಾ ಪರಮೇಶ್, ಇಂದ್ರಾಣಿ ಮತ್ತಿತರರು ಉಪಸ್ಥಿತರಿದ್ದರು.

ಪ್ರೊ. ಭಗವಾನ್ ವಿರುದ್ಧ ದೂರು

ಒಕ್ಕಲಿಗರ ಕುರಿತು ಅವಹೇಳನಕಾರಿಯಾಗಿ ಮಾತನಾಡಿರುವ ಪೊ. ಭಗವಾನ್ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಮೈಸೂರು ಪೊಲೀಸ್ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗೆ ದೂರು ನೀಡಲಾಗಿದೆ.

ಭಗವಾನ್ ರಿಗೆ ಒಕ್ಕಲಿಗರ ಪೂರ್ಣ ಮಾಹಿತಿ ತಿಳಿಯಲು “ಕರ್ನಾಟಕ ಗೆಸೆಟಿಯರ್” ನಲ್ಲಿ ಓದಿ ತಿಳಿದುಕೊಳ್ಳಬೇಕು ಹಾಗೂ ಸಮಾದಲ್ಲಿ ಸ್ವಾಸ್ಥ್ಯ ಹಾಳು ಮಾಡು ಇಂತಹವರ ಮೇಲೆ ಕಾನೂನಾತ್ಮಕ ಕ್ರಮಕೈಗೊಳ್ಳಬೇಕೆಂದು ವಿಶ್ವ ಮಾನವ ಹಕ್ಕುಗಳ ಸೇವಾ ಕೇಂದ್ರದ ಸಂಸ್ಥಾಪಕ ಅಧ್ಯಕ್ಷರಾದ ಸಿದ್ದಲಿಂಗೇಗೌಡರು ಮೈಸೂರಿನ ಪೊಲೀಸ್ ಆಯುಕ್ತರು ಮತ್ತು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.