Thursday, March 12, 2026
Google search engine
Home Blog Page 35

ಮತ್ತೇ 10 ಸಾವಿರ ಎಕರೆಯಲ್ಲಿ ಸೋಲಾರ್ ಪಾರ್ಕ್: ಡಿಕೆಶಿ

0

ಪಾವಗಡ : ರೈತರು ಇನ್ನೂ 10 ಸಾವಿರ ಎಕರೆ ಭೂಮಿ ಕೊಟ್ಟರೆ ಸೋಲಾರ್ ಪಾರ್ಕ್ ವಿಸ್ತರಣೆ ಮಾಡುತ್ತೀವಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

ಪಾವಗಡ ತಾಲೂಕಿನ ತಿರುಮಣಿಯ ವಿಶ್ವದ ಅತಿದೊಡ್ಡ ಸೋಲಾರ್ ಪಾರ್ಕ್‌ಗೆ ಬುಧವಾರ ಇಂಧನ ಸಚಿವ ಕೆ.ಜೆ.ಜಾರ್ಜ್ ಜತೆ ಭೇಟಿ ನೀಡಿ ಪರಿಶೀಲಿಸಿ, ಸ್ಥಳೀಯರೊಂದಿಗೆ ಚರ್ಚೆ ನಡೆಸಿದ ಬಳಿಕ ಮಾತನಾಡಿದ ಅವರು, ಪಾವಗಡದಲ್ಲಿ 2400 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಆಗ್ತಿದೆ. ಸ್ಥಳೀಯರ ಇನ್ನೂ ಜಮೀನು ಕೊಟ್ಟರೆ ಸೋಲಾರ್ ಪಾರ್ಕ್ ವಿಸ್ತರಣೆ ಮಾಡುತ್ತೇವೆ. ಗುಲ್ಬರ್ಗಾ ಕಡೆಯೂ ಕೇಳುತ್ತಿದ್ದಾರೆ. ಇಲ್ಲಿ ಯಾರಿಗೂ ಲಂಚ ಕೊಡುವ ಅಗತ್ಯವಿಲ್ಲ. ರೈತರು ಮುಂದೆ ಬಂದರೆ ಮತ್ತಷ್ಟು ವಿಸ್ತರಣೆ ಮಾಡ್ತೀವಿ ಎಂದರು.

ಸುಸ್ಥಿರ ಅಭಿವೃದ್ಧಿಗೆ ಸಾಕ್ಷಿ : ಪಾವಗಡ ಸೋಲಾರ್ ಪಾರ್ಕ್ ನವೀಕರಿಸಬಹುದಾದ ಇಂಧನ ಮತ್ತು ಸುಸ್ಥಿರ ಅಭಿವೃದ್ಧಿಗೆ ಕರ್ನಾಟಕದ ಬದ್ಧತೆಗೆ ಸಾಕ್ಷಿಯಾಗಿದೆ. ರಾಜ್ಯದ ಆರ್ಥಿಕ ಬೆಳವಣಿಗೆಗೆ ಪೂರಕವಾಗಿರುವ ಅತಿದೊಡ್ಡ ಸೋಲಾರ್ ಪಾರ್ಕ್ , ಶುದ್ಧ- ಹಸಿರು ಇಂಧನ ಮೂಲಗಳನ್ನು ಬಳಸಿಕೊಳ್ಳುವಲ್ಲಿ ನಮ್ಮ ನಾಯಕತ್ವಕ್ಕೆ ಸಾಕ್ಷಿಯಾಗಿದೆ ಎಂದು ಡಿ.ಕೆ ಶಿವಕುಮಾರ್ ತಿಳಿಸಿದರು.

ಹವಾಮಾನ ಬದಲಾವಣೆಯ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ಮತ್ತು ಇಂಗಾಲದ ಹೊರಸೂಸುವಿಕೆಯನ್ನು ಕಡಿಮೆ ಮಾಡುವ ಜತೆಗೆ, ಮುಂದಿನ ಪೀಳಿಗೆಗೆ ಸುಸ್ಥಿರ ಭವಿಷ್ಯವನ್ನು ಖಚಿತಪಡಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದರು.

ಇಂಧನ ಸಚಿವ ಕೆ.ಜೆ. ಜಾರ್ಜ್ ಮಾತನಾಡಿ, ಪಾವಗಡ ಸೋಲಾರ್ ಪಾರ್ಕ್ ಸ್ವಚ್ಛ ಮತ್ತು ಸುಸ್ಥಿರ ಇಂಧನ ಪರಿಹಾರಗಳಿಗೆ ನಮ್ಮ ಬದ್ಧತೆಯ ಕುರುಹಾಗಿದೆ. ಸರ್ಕಾರ ಮತ್ತು ನವೀಕರಿಸಬಹುದಾದ ಇಂಧನ ಉದ್ಯಮದ ನಡುವಿನ ಬಾಂಧವ್ಯ ಉತ್ತಮ ಪಡಿಸುವ ಜತೆಗೆ ಹೂಡಿಕೆ, ಸಹಯೋಗವನ್ನು ಉತ್ತೇಜಿಸಲು ಹೆಚ್ಚಿನ ಒತ್ತು ನೀಡಲಾಗುತ್ತದೆ. ಮುಖ್ಯವಾಗಿ, ಉದ್ಯೋಗ ಸೃಷ್ಟಿಗೆ ಹೊಸ ಮಾರ್ಗಗಳನ್ನು ಅನ್ವೇಷಿಸುವುದು ನಮ್ಮ ಗುರಿಎಂದು ವಿವರಿಸಿದರು.

ಶುದ್ಧ ಇಂಧನ ಉತ್ಪಾದನೆಗೆ ರಾಷ್ಟ್ರ ಹಾಕಿಕೊಂಡಿರುವ ಗುರಿಗೆ ನಮ್ಮ ಸೋಲಾರ್ ಪಾರ್ಕ್ ಈಗಾಗಲೇ ದೊಡ್ಡ ಕೊಡುಗೆ ನೀಡಿದೆ. ಅದರ ಅತ್ಯಾಧುನಿಕ ದ್ಯುತಿವಿದ್ಯುಜ್ಜನಕ ಫಲಕಗಳು, ಅತ್ಯಾಧುನಿಕ ತಂತ್ರಜ್ಞಾನ, ಸುಧಾರಿತ ವಿದ್ಯುತ್ ಸಂಗ್ರಹ ವ್ಯವಸ್ಥೆ ಮತ್ತು ಸಮರ್ಥ ಗ್ರಿಡ್ ಏಕೀಕರಣದೊಂದಿಗೆ, ಸೋಲಾರ್ ಪಾರ್ಕ್ ವರ್ಷಕ್ಕೆ 4.5 ಶತಕೋಟಿ ಯುನಿಟ್ ಸೌರ ವಿದ್ಯುತ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಆ ಮೂಲಕ ವಾರ್ಷಿಕ 3.6 ಮಿಲಿಯನ್ ಟನ್‌ಗಳಷ್ಟು ಕಾರ್ಬನ್ ಡೈಕ್ಸಾಡೈ ಹೊರಸೂಸುವಿಕೆಯನ್ನು ತಗ್ಗಿಸಲು ನೆರವಾಗುತ್ತಿದೆ. ನವೀಕರಿಸಬಹುದಾದ ಇಂಧನ ಮೂಲಗಳು ನಮ್ಮ ಪರಿಸರ ಮತ್ತು ಆರ್ಥಿಕತೆಯ ಮೇಲೆ ಬೀರಬಹುದಾದ ಪ್ರಭಾವವನ್ನು ಈ ಅಂಕಿಅಂಶಗಳೇ ಸಾರಿ ಹೇಳುತ್ತವೆಎಂದರು.

ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ. ರುದ್ರಪ್ಪಯ್ಯ, ಸ್ಥಳೀಯ ಶಾಸಕ ಎಚ್.ವಿ.ವೆಂಕಟೇಶ್ ಮತ್ತಿತರರು ಇದ್ದರು.

ನುಡಿದಂತೆ ನಡೆ: ಬೆಮಲ್ ಕಾಂತರಾಜ್

ತುರುವೇಕೆರೆ: ಸಾರಿಗೆ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಶಕ್ತಿ ಯೋಜನೆಯನ್ನು ನಮ್ಮ ಕಾಂಗ್ರೆಸ್ ಸರ್ಕಾರ ಜಾರಿ ಮಾಡಿ ನುಡಿದಂತೆ ನಡೆದಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಕಾಂತರಾಜು ಬಿ.ಎಂ. ತಿಳಿಸಿದರು.


ಪಟ್ಟಣದ ಸಾರಿಗೆ ಬಸ್ ನಿಲ್ದಾಣದಲ್ಲಿ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಪಕ್ಷದಿಂದ ಸೋಮವಾರ ಆಯೋಜಿಸಿದ್ದ ಸರ್ಕಾರದ ಶಕ್ತಿ ಯೋಜನೆಯ ಮಹಿಳೆಯರಿಗೆ ಸರ್ಕಾರಿ ಬಸ್ ಉಚಿತ ಪ್ರಯಾಣದ ಮಹಿಳಾ ಪ್ರಯಾಣಿಕರಿಗೆ ಸಿಹಿ ನೀಡಿ ಶುಭಕೋರಿ ಮಾತನಾಡಿದರು.

ಕಾಂಗ್ರೆಸ್ ಪಕ್ಷ ನುಡಿದಂತೆ ನೆಡೆಯುವ ಪಕ್ಷವಾಗಿದೆ. ಚುನಾವಣೆಯ ಪ್ರನಾಳಿಕೆಯಲ್ಲಿ ತಿಳಿಸಿದಂತೆ 5 ಯೋಜನೆಗಳಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆ ಈಡೇರಿಸಲಾಗಿದೆ. ಕುಟುಂಬದ ಮಹಿಳಾ ಸದಸ್ಯೆಗೆ ತಿಂಗಳಿಗೆ 2 ಸಾವಿರ, ಪ್ರತಿ ಮನೆಗೂ 200 ಯುನಿಟ್ ಉಚಿತ ವಿದ್ಯುತ್, ನಿರೂದ್ಯೋಗ ಯುವಕ, ಯುವತಿಯರಿಗೆ ನಿರುದ್ಯೋಗ ಭತ್ಯೆ, ಬಿಪಿಎಲ್ ಕುಟುಂಬದ ಪ್ರತಿ ಸದಸ್ಯರಿಗೂ 10 ಕೆ.ಜಿ ಅಕ್ಕಿ ನೀಡುವ ಯೋಜನೆಯನ್ನು ಕಾಂಗ್ರೆಸ್ ಸರ್ಕಾರ ಸದ್ಯದಲ್ಲಿಯೇ ಈಡೇರಿಸಲಿದೆ ಎಂದರು.

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಥಾನದಲ್ಲಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕೆಪಿಸಿಸಿ ಪ್ರದಾನ ಕಾರ್ಯದರ್ಶಶಿ ಮುರುಳಿಧರ ಹಾಲಪ್ಪ ಮಾತನಾಡಿ, ಪ್ರತಿ ಪಕ್ಷದವರು ಎಷ್ಟೇ ಟೀಕೆ ಟಿಪ್ಪಣಿ ಮಾಡಿದರು ಸಹ ನಮ್ಮ ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತಿನಂತೆ ಮೊದಲನೆಯದಾಗಿ ಶಕ್ತಿ ಯೋಜನೆಯನ್ನು ಈಡೇರಿಸಿದೆ. ಈ ಶಕ್ತಿ ಯೋಜನೆಯಿಂದ ರಾಜ್ಯಾದ್ಯಂತ 42 ಲಕ್ಷ ಮಂದಿ ಮಹಿಳೆಯರಿಗೆ ಅನುಕೂಲವಾಗಲಿದೆ. ಈ ಯೋಜನೆಯನ್ನು ರಾಜ್ಯದ ಮಹಿಳೆಯರು ಸದೂಪಯೋಗ ಪಡಿಸಿಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಮುಖಂಡರುಗಳಾದ ಪ್ರಸನ್ನಕುಮಾರ್, ನಾಗೇಶ್ ಗೋಣಿತುಮಕೂರು ಲಕ್ಷ್ಮೀಕಾಂತ್, ಎನ್.ಆರ್.ಜಯರಾಮ್, ಶ್ರೀನಿವಾಸ್, ಶಿವರಾಜು, ಶಶಿಶೇಖರ್, ನಂಜುಂಡಪ್ಪ, ಹನುಮಂತಯ್ಯ, ತ್ರೈಲೋಕಿನಾಥ್, ರೇವಣ್ಣ, ವೇಣುಗೊಪಾಲ್, ಕೆಂಪರಾಜು, ಲಕ್ಷ್ಮಿದೇವಮ್ಮ, ಕಮಲಸ್ವರ್ಣಕುಮಾರ್, ಮಹಾಲಿಂಗಯ್ಯ, ಅರಳಿಕೆರೆ ಉದಯ್, ಬಸವರಾಜು ಸೇರಿದಂತೆ ಕಾರ್ಯಕರ್ತರು ಇದ್ದರು.

ಉಚಿತ ಬಸ್ ದೇವಸ್ಥಾನಕ್ಕೆ ಹೋಗಿ: ಎಂಟಿಕೆ

ಮಹಿಳೆಯರಿಗೆ ಸ್ವಾವಲಂಬನೆಯ ಶಕ್ತಿ ನೀಡಿದ ಶಕ್ತಿ ಯೋಜನೆ: ಶಾಸಕ ಎಂ.ಟಿ.ಕೃಷ್ಣಪ್ಪ

ತುರುವೇಕೆರೆ:
ತಾಲ್ಲೂಕಿನ ಮಹಿಳೆರು ಸರ್ಕಾರ ನೀಡಿರುವ ಉಚಿತ ಬಸ್ ಪ್ರಯಾಣವನ್ನು ಬಳಸಿಕೊಂಡು ಎಲ್ಲ ದೇವಸ್ಥಾನಗಳಿಗೆ ಹೋಗಿ ನಿಮ್ಮ ಕುಟುಂಬಕ್ಕೆ ಒಳ್ಳೆಯದಾಗಲಿದೆ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಹೇಳಿದರು.


ಪಟ್ಟಣದಲ್ಲಿ ಹೊಸ ಬಸ್ ನಿಲ್ದಾಣದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಭಾನುವಾರ ಹಮ್ಮಿಕೊಂಡಿದ್ದ ಶಕ್ತಿ ಯೋಜನೆಯಡಿ ಉಚಿತ ಪ್ರಯಾಣ ನಮ್ಮ ಪ್ರಯಾಣಕ್ಕೆ ಚಾಲನೆ ನೀಡಿ ಮಾತನಾಡಿದರು.


ಕಾಂಗ್ರೆಸ್ ಸರ್ಕಾರ ಚುನಾವಣಾ ಪೂರ್ವದಲ್ಲಿ ನೀಡಿದ್ದ ಭರವಸೆಗಳಲ್ಲಿ ಶಕ್ತಿ ಯೋಜನೆಯೂ ಒಂದಾಗಿದ್ದು ಇಂದು ರಾಜ್ಯದಾದ್ಯಂತ ಚಾಲನೆ ನೀಡಲಾಗುತ್ತಿದ್ದೆ. ಇಂತಹ ಯೋಜನೆಗಳು ಮಹಿಳೆಯರ ಸಬಲೀಕರಣಕ್ಕೆ ಪೂಕರವಾದ ಅವಕಾಶವನ್ನು ಕಲ್ಪಿಸಿಕೊಡುತ್ತದೆ. ಹಾಗಾಗಿ ಸರ್ಕಾರದ ಯೋಜನೆಯನ್ನು ತಾಲ್ಲೂಕಿನ ಎಲ್ಲ ಮಹಿಳೆಯರು ಸಮರ್ಥವಾಗಿ ಬಳಸಿಕೊಂಡು ಸ್ವಾವಲಂಬನೆಯ ಬದುಕನ್ನು ಕಟ್ಟಿಕೊಳ್ಳಿ. ಈ ಸರ್ಕಾರ ಉಳಿದ ನಾಲ್ಕು ಯೋಜನೆಗಳನ್ನು ಹಂತ ಹಂತವಾಗಿ ನೀಡುತ್ತಾರೆ ಅವುಗಳ ಪ್ರಯೋಜನವನನ್ನೂ ಪಡೆದುಕೊಳ್ಳಿ ಎಂದರು.


ತಹಶೀಲ್ದಾರ್ ವೈ.ಎಂ.ರೇಣುಕುಮಾರ್ ಮಾತನಾಡಿ, ಮಹಿಳೆಯರು ತಮ್ಮಲ್ಲಿರುವ ಯಾವುದಾದರೂ ಗುರುತಿನ ಚೀಟಿಯನ್ನು ತೋರಿಸಿ ಪ್ರಯಾಣ ಮಾಡಿ. ಕುಟುಂಬದ ಏಳಿಗೆಗೆ ಶಕ್ತಿ ಯೋಜನೆ ಮಹತ್ವಪೂರ್ಣವಾಗಿದೆ ಎಂದರು.


ಇದೇ ವೇಳೆ ತುರುವೇಕೆರೆಯಿಂದ ಬೆಂಗಳೂರಿಗೆ ಮೊದಲು ಉಚಿತ ಬಸ್ ಗೆ ಚಾಲನೆ ನೀಡಲಾಯಿತು.


ಈ ಸಂದರ್ಭದಲ್ಲಿ ಘಟಕ ವ್ಯವಸ್ಥಾಪಕ ಆರ್.ಮೂರ್ತಿ, ಮೇಲ್ವಿಚಾರಕರಾದ ಮಧುಸೂಧನ್, ಲೋಹಿತ್, ನರಸಿಂಹ ಸ್ವಾಮಿ, ಕ್ಯಾಷಿಯರ್ ಮಂಜುನಾಥ್, ಮುಖಂಡರುಗಳಾದ ಮಾವಿನಕೆರೆ ವಿಜಿಯೇಂದ್ರ, ರಾಘು, ನರಸೇಗೌಡ, ರಾಜಣ್ಣ, ಶಿವಾನಂದ ಬಸ್ ನಿರ್ವಾಹಕ ರಂಗಸ್ವಾಮಿ ಉಪಸ್ಥಿತರಿದ್ದರು.

ಕಾರ್ಯಕರ್ತರ ಹಣ ವಾಪಸ್: ಎಂ.ಟಿ.ಕೃಷ್ಣಪ್ಪ

ತುರುವೇಕೆರೆ:
ಮುಖ್ಯ ಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ನ ಸಾಕಷ್ಟು ಸಚಿವರು ನನಗೆ ಸ್ನೇಹಿತರಿದ್ದು ಹಾಗಾಗಿ ಕ್ಷೇತ್ರದ ಅಭಿವೃದ್ದಿಗೆ ಹೆಚ್ಚಿನ ಅನುದಾನ ನೀಡುವ ಸಂಪೂರ್ಣ ಭರವಸೆಯಿದ್ದು ಜನರ ನಿರೀಕ್ಷೆಗೆ ಅನುಗುಣವಾಗಿ ಕೆಲಸ ಮಾಡುವೆ ಎಂದು ನೂತನ ಶಾಸಕ ಎಂ.ಟಿ.ಕೃಷ್ಣಪ್ಪ ವಿಶ್ವಾಸ ವ್ಯಕ್ತಪಡಿಸಿದರು.


ಪಟ್ಟಣದಲ್ಲಿ ತಾಲ್ಲೂಕು ಜೆಡಿಎಸ್ ಕಾರ್ಯಕರ್ತರು ಮತ್ತು ಎಂ.ಟಿ.ಕೃಷ್ಣಪ್ಪ ಅಭಿಮಾನ ಬಳಗದ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ನೂತನ ಶಾಸಕರಿಗೆ ಅಭಿನಂಧನೆ ಹಾಗು ಎಂ.ಟಿ.ಕೃಷ್ಣಪ್ಪ ಅವರ 73 ನೇ ಹುಟ್ಟು ಹಬ್ಬವನ್ನು ಕೇಕ್ ಕಟ್ಟು ಮಾಡುವ ಮೂಲಕ ಆಚರಿಸಿಕೊಂಡರು.

ನಾನು ಜೆಡಿಎಸ್ ಪಕ್ಷದ ಶಾಸಕನಾಗಿದ್ದರು ಕೂಡ ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಜಿಲ್ಲಾಉಸ್ತುವಾರಿ ಸಚಿವರಾದ ಜಿ.ಪರಮೇಶ್ವರ್ ಸೇರಿ ಹಲವು ಸಚಿವರುಗಳು ನನ್ನ ಸ್ನೇಹಿತರಾಗಿದ್ದು ನೀರಾವರಿ ಸೇರಿದಂತೆ ಹಲವು ಅಭಿವೃದ್ದಿ ಕಾರ್ಯಗಳಿಗೆ ಸರ್ಕಾರದಿಂದ ಅನುದಾನ ತಂದು ಅಭಿವೃದ್ದಿ ಕೆಲಸ ಮಾಡುವೆ‌ ಎಂದರು.


ಜೆಡಿಎಸ್ ಕಾರ್ಯಕರ್ತರು ನನ್ನ ಹುಟ್ಟು ಹಬ್ಬ ಮಾಡುವುದಕ್ಕಿಂತ ನನಗೆ ರಾಜಕೀಯ ಪುನರ್ ಜನ್ಮ ನೀಡಿದ ಕ್ಷೇತ್ರದ ಕಾರ್ಯಕರ್ತರ ಹುಟ್ಟು ಹಬ್ಬವನ್ನು ನಾನು ಮಾಡಬೇಕಿದೆ. ಚುನಾವಣೆಯ ಸಮಯದಲ್ಲಿ ಆರ್ಥಿಕ ಸಂಕಷ್ಟ ಎದುರಾಗಿ ಚುನಾವಣೆ ಕಣದಿಂದ ಹಿಂದೆ ಸರಿಯುವ ತೀರ್ಮಾನ ಮಾಡಿದ್ದೆ.
ಇಂತಹ ಸಂದಿಗ್ಧ ಕಾಲದಲ್ಲಿ ಕಾರ್ಯಕರ್ತರೇ ಹಣ ಹಾಕಿಕೊಂಡು ಚುನಾವಣೆ ಮಾಡಿ ನನ್ನನ್ನು ಶಾಸಕನ್ನಾಗಿ ಮಾಡಿದ್ದೀರಿ ಯಾರಾರು ಎಷ್ಟು ಹಣ ನೀಡಿದ್ದಾರೆ ಎಂಬುದು ಪಟ್ಟಿ ಇದೆ. ನನಗೆ ಸಮಯ ಕೊಡಿ ನೀವು ನೀಡಿದ ಹಣವನ್ನು ಖಂಡಿತ ವಾಪಸ್ಸ್ ನೀಡುತ್ತೇನೆ ಎಂದು ಭರವಸೆ ನೀಡಿದರು.


ಈ ಬಾರಿ ದಬ್ಬೇಘಟ್ಟ ಹೋಬಳಿಯಲ್ಲಿ 8 ಸಾವಿರ ಮತಗಳ ಲೀಡ್ ನೀಡಿದ್ದು ಹೋಬಳಿಯ ಸಮಗ್ರ ಅಭಿವೃದ್ದಿ ಮಾಡಲಾಗುವುದು. ಆದರೆ ಮಾಜಿ ಶಾಸಕ ಜಯರಾಮ್ ಎ.ಎಸ್ ವೋಟಿಗಾಗಿ ದಬ್ಬೇಘಟ್ಟ ಏತ ನೀರಾವರಿ ಯೋಜನೆಗೆ ನಾಮಕಾವಸ್ಥೆ ಭೂಮಿ ಪೂಜೆ ಮಾಡಿ ಒಂದು ಬಿಡಿಗಾಸೂ ಅನುದಾನ ಬಿಡುಗಡೆಯಾಗಲಿಲ್ಲ ಕೇವಲ ಸುಳ್ಳು ಭರವಸೆ ನೀಡಿದ್ದರು ಎಂದು ಆರೋಪಿಸಿದರು.


ಅದಕ್ಕೆ ನಾವೇ ಈಗಾಗಲೇ ಸರ್ವೇ ಮಾಡಿಸಿದ್ದು ಇದಕ್ಕೆ 80 ಕೋಟಿ ಹಣ ಬೇಕು. ನಾನು ಸರ್ಕಾರದಿಂದ ತರುತ್ತೇನೆ. ಈ ಏತ ನೀರಾವರಿ ಕಾಮಗಾರಿಯಿಂದ ಈ ಹೋಬಳಿಯ 30ಕ್ಕೂ ಹೆಚ್ಚು ಕೆರೆ, ಕಟ್ಟೆಗಳಿಗೆ ಅನುಕೂಲವಾಗಲಿದೆ.
ಎಲ್ಲ ಗ್ರಾಮಗಳಿಗೂ ರಸ್ತೆ, ಕುಡಿಯುವ ನೀರಿಗೂ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದರು.

ತಾಲ್ಲೂಕಿನ ಕಸಬಾ ಹೋಬಳಿಗೆ ಇಂದಿರಾ ಗಾಂದಿ ವಸತಿ ಶಾಲೆ, ದಂಡಿನಶಿವರ ಹೋಬಳಿಗೆ ಡಾ.ಅಂಬೇಡ್ಕರ್ ವಸತಿ ಶಾಲೆ ಸೇರಿದಂತೆ ಸಿ.ಎಸ್.ಪುರ ಹೋಬಳಿಗೆ ಮೊರಾರ್ಜಿ ವಸತಿ ಶಾಲೆ ಮುಂಜೂರು ಮಾಡಿಸಲಾಗುವುದು. ಹಲವು ಗ್ರಾಮಗಳಲ್ಲಿ ಮಾಡಿರುವ ಕಾಂಕ್ರೇಟ್ ರಸ್ತೆಗಳು ಕಳಪೆಯಾಗಿದ್ದು ಅವುಗಳ ತನಿಖೆ ಮಾಡಿಸಲಾಗುವುದು ಎಂದರು.


ಇದೇ ವೇಳೆ ತಾಲ್ಲೂಕು ಗುತ್ತಿಗೆದಾರರ ಸಂಘದ ವತಿಯಿಂದ ಚಿನ್ನದ ಉಂಗುರ ತೊಡಿಸಿ ಬೃಹತ್ ಹಾರ, ಮೈಸೂರು ಪೇಟ ಹಾಕಿ ಅಭಿನಂದಿಸಿದರು.


ಕಾರ್ಯಕ್ರಮದಲ್ಲಿ ಜೆಡಿಎಸ್ ತಾಲ್ಲೂಕು ಅಧ್ಯಕ್ಷ ದೊಡ್ಡೇಗೌಡ ಮುಖಂಡರಾದ ಶಂಕರೇಗೌಡ, ಕಲ್ಲಬೋರನಹಳ್ಳಿ ಜಯರಾಮ್, ಭೂವನಹಳ್ಳಿ ಬಿ.ಎಸ್.ದೇವರಾಜು, ದೊಡ್ಡಾಘಟ್ಟಚಂದ್ರೇಶ್, ವೆಂಕಟಾಪುರ ಯೋಗೀಶ್, ಎ.ಬಿ.ಜಗದೀಶ್, ಬಡಗರಹಳ್ಳಿ ತ್ಯಾಗರಾಜು, ಶರತ್ ಕುಮಾರ್, ನಂಜೇಗೌಡ, ತಿಮ್ಮೇಗೌಡ, ರೇಣಕಪ್ಪ, ವೆಂಕಟೇಶ್, ಜಯಗಿರಿಸುಂದರ್, ಬಾಬು, ಸೋಮಣ್ಣ, ರಾಮಕೃಷ್ಣ, ದಂಡಿನಶಿವರ ರಾಜಕುಮಾರ್, ಎನ್.ಆರ್.ಸುರೇಶ್, ಆರ್.ಮಲ್ಲಿಕಾರ್ಜುನ್, ಪ್ರಕಾಶ್, ಶಿವಾನಂದ, ಬಸವರಾಜು, ರಾಘು ಸೇರಿದಂತೆ ಜೆಡಿಎಸ್ ಕಾರ್ಯಕರ್ತರು ಇದ್ದರು.

ತುಮಕೂರು ವಕೀಲರ ಅಧ್ಯಕ್ಷರಾಗಿ ಕೆಂಪರಾಜಯ್ಯ ಆಯ್ಕೆ

0

ತುಮಕೂರು ವಕೀಲರ ಸಂಘದ ಪದಾಧಿಕಾರಿಗಳ ಸ್ಥಾನಗಳಿಗೆ ಏಪ್ರಿಲ್ 9ರಂದು ನಡೆದ ಚುನಾವಣೆಯಲ್ಲಿ ವಕೀಲ ಕೆಂಪರಾಜಯ್ಯ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಮತ ಎಣಿಕೆಯ ಪ್ರತಿಯೊಂದ ಸುತ್ತಿನಲ್ಲೂ ಕೆಂಪರಾಜಯ್ಯ ಮುನ್ನಡೆ ಕಾಯ್ದುಕೊಂಡು ಬಂದರು. ಅಂತಿಮವಾಗಿ ಕೆಂಪರಾಜಯ್ಯ ಗೆಲುವು ಸಾಧಿಸಿದ್ದು, ಪ್ರತಿಸ್ಪರ್ಧಿ ಮಲ್ಲಿಕಾರ್ಜುನಯ್ಯ ಪರಾಭವಗೊಂಡಿದ್ದಾರೆ.

ತಿಪ್ಪೇಸ್ವಾಮಿ

ಅಧ್ಯಕ್ಷ – ಕೆಂಪರಾಜಯ್ಯ

ಉಪಾಧ್ಯಕ್ಷ – ಶಿವಶಂಕರಯ್ಯ

ಪ್ರಧಾನ ಕಾರ್ಯದರ್ಶಿ – ತಿಪ್ಪೇಸ್ವಾಮಿ

ಜಂಟಿ ಕಾರ್ಯದರ್ಶಿ – ಫಾಲಕ್ಷಯ್ಯ

ಖಜಾಂಚಿ – ಭಾರತಿ

ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ನವೀನ್ ಕುಮಾರ್, ಜನಾರ್ಧನ್, ಶಿವಕುಮಾರಸ್ವಾಮಿ, ಗುರುಪ್ರಸಾದ್, ಸಂದೀಪ್, ಮೋಹನ್ ಎಸ್. ಆಯ್ಕೆಯಾಗಿದ್ದಾರೆ.

ನವೀನ್ ಕುಮಾರ್

ಇದು ಕಾನೂನು: ಹೆತ್ತವರ ನೋಡಿಕೊಳ್ಳದ ಮಕ್ಕಳಿಗೆ 6 ತಿಂಗಳು ಜೈಲು, ಜೊತೆಗೆ ದಂಡ

0

ಹತ್ತು ಹಲವು ಒಳಸುಳಿಗಳಿರುವ ಕಾನೂನುಗಳ ಸುತ್ತಲೂ ಇರುವ ವಿಚಾರಗಳೂ ಹಲವು. ಕಾನೂನು, ನ್ಯಾಯಾಂಗ, ಸಂವಿಧಾನದ ಬಗ್ಗೆ ನಿಮ್ಮ

ಪ್ರಶ್ನೆಗಳಿಗೆ ‘ಇದು ಕಾನೂನು’ ಅಂಕಣದಲ್ಲಿ ಉತ್ತರಿಸಲಿದ್ದಾರೆ ತುಮಕೂರಿನ ಹಿರಿಯ ವಕೀಲ ಸಿ.ಕೆ.ಮಹೇಂದ್ರ. ಫೋನ್; 9844817737

1) ಕೋರ್ಟು, ಕಾನೂನು ಇರೋದು ಶ್ರೀಮಂತರಿಗೆ ಮಾತ್ರ. ಬಡವರಿಗೆ ನ್ಯಾಯ ಸಿಗಲ್ಲ ಎಂಬ ಮಾತಿದೆ. ಇದು ನಿಜವೇ?

  • ಮಂಜುನಾಥ, ಕೊತ್ತನೂರು

ಉತ್ತರ: ನೀವು ತಪ್ಪಾಗಿ ಗ್ರಹಿಸಿದ್ದೀರಿ. ಪ್ರತಿಯೊಬ್ಬರು ಎಲ್ಲ ಪ್ರಯತ್ನಗಳ ನಂತರ ಕಡೆಯದಾಗಿ ಕೋರ್ಟ್‌ಗೆ ಬರುತ್ತಾರೆ. ‘ಕೋರ್ಟ್‌ನಲ್ಲಿ ನೋಡೋಣ ಬಿಡು’ ಎನ್ನುವ ಮಾತನ್ನೂ ನೀವು ಕೇಳಿಸಿಕೊಂಡಿರಬಹುದು. ನ್ಯಾಯಾಲಯಗಳಲ್ಲಿ ನ್ಯಾಯ ಸಿಗಲಿದೆ ಎಂಬ ಭರವಸೆಯೇ ಇದಕ್ಕೆ ಕಾರಣ. ವಶೀಲಿ ಬಾಜಿ, ಪ್ರಭಾವ, ರಾಜಕೀಯ, ತೋಳ್ಬಲಗಳು ಯಾವುದೇ ನ್ಯಾಯಾಲಯದಲ್ಲಿ, ನ್ಯಾಯದಾನದ ವ್ಯವಸ್ಥೆಯಲ್ಲಿ ಕೆಲಸಕ್ಕೆ ಬರುವುದಿಲ್ಲ. ನ್ಯಾಯಾಧೀಶರು, ಕಾನೂನಿನ ಕಣ್ಣಿನಲ್ಲಿ ಎಲ್ಲರೂ ಸಮಾನರು. ಶ್ರೀಮಂತ, ಬಡವ ಎಂಬ ಭೇದಭಾವ ಇಲ್ಲಿಲ್ಲ. ಕೋರ್ಟ್ ಶುಲ್ಕವೂ ಸಮಾನವಾಗಿರಲಿದೆ.

ಇಲ್ಲಿ ಎಲ್ಲರಿಗೂ ನ್ಯಾಯ ಸಿಗಲಿದೆ. ಬಡ ಕಕ್ಷಿದಾರರಿಗೆ ಉಚಿತವಾಗಿ ಕಾನೂನು ಸಹಾಯ ನೀಡಲು ಸರ್ಕಾರವು ‘ಕಾನೂನು ಸೇವಾ ಪ್ರಾಧಿಕಾರ’ದ ಅನುಕೂಲ ಕಲ್ಪಿಸಿದೆ. ಒಳ್ಳೆಯ, ನುರಿತ ವಕೀಲರ ಸೇವೆಗೆ ಶುಲ್ಕ ಹೆಚ್ಚಿರುತ್ತದೆ. ಅದು ವಕೀಲರಿಗೆ ಸಂಬಂಧಿಸಿದ ವಿಚಾರ. ಹಾಗೆ, ಗಮನಿಸಿದರೆ ಕಡು ಬಡವರು ಸಹ ಕೋರ್ಟ್‌ಗಳಲ್ಲಿ ಗೆಲುವು ಸಾಧಿಸುತ್ತಾರೆ. ಆಗರ್ಭ ಶ್ರೀಮಂತರು ಕೈಕಟ್ಟಿ ನಿಂತು ಸೋಲುತ್ತಾರೆ. ನಿಮ್ಮ ಪರ ನ್ಯಾಯ ಇದ್ದರೆ ನೀವು ಹೆದರಬೇಕಿಲ್ಲ.

2) ಒಂದು ನಿವೇಶನ ಖರೀದಿ ಮಾಡಬೇಕಾದರೆ ಯಾವೆಲ್ಲ ಅಂಶ ಗಮನಿಸಬೇಕು? ದಯವಿಟ್ಟು ತಿಳಿಸಿ ಸರ್.

  • ಅನಂತ, ಮಾಗಡಿ

ಉತ್ತರ: ಯಾವುದೇ ಆಸ್ತಿ/ನಿವೇಶನ ಖರೀದಿಸಬೇಕಾದರೆ ಮುನ್ನಚ್ಚರಿಕೆ ವಹಿಸುವುದು ಸೂಕ್ತ. ಕಾನೂನು ಏನು ಹೇಳುತ್ತದೆ ಎಂದು ಗೊತ್ತಿಲ್ಲದೆ ಖರೀದಿ ಮಾಡಿದರೆ ಅಪಾಯಗಳನ್ನು ಎದುರಿಸಬೇಕಾಗುತ್ತದೆ. ನಿವೇಶನ ಖರೀದಿಸುವ ಮುನ್ನ ನೀವು ಒಂದಿಷ್ಟು ದಾಖಲೆಗಳನ್ನು ಪರಿಶೀಲಿಸಲೇಬೇಕು. ನಿವೇಶನ ಮಾರುವ ವ್ಯಕ್ತಿಯ ಹಿನ್ನೆಲೆಯ ಬಗ್ಗೆ ಅರಿವಿರಲಿ. ಅವರ ಮಾತುಗಳ ಮೇಲೆ ನಿಗಾ ಇಡಬೇಕು. ಎಲ್ಲ ದಾಖಲೆಗಳನ್ನು ದೃಢೀಕರಿಸಿಕೊಳ್ಳಬೇಕು.

ನಿವೇಶನ ಖರೀದಿಸುವ ಜಾಗದಲ್ಲಿ ನಿವೇಶನ ಇದೆಯೇ ಎಂಬುದು ಖುದ್ದು ಹೋಗಿ ನೋಡಿಕೊಂಡು ಬನ್ನಿ. ಕೇವಲ ಬಾಯ್ಮಾತಿನ ಮೇಲೆ ಹಣ ಹೂಡಿಕೆ ಮಾಡದಿರಿ. ಸಂಬಂಧಪಟ್ಟ ಪ್ರಾಧಿಕಾರದ ದೃಢೀಕೃತ ನಕ್ಷೆಯೊಂದಿದೆ ಚಕ್ ಬಂದ್ ಸಮೇತ ತುಲನೆ ಮಾಡಿ. ನಗರದಲ್ಲಿ ಆದರೆ ಇಸಿ (ಋಣಭಾರ ಪತ್ರ), ಇ- ಖಾತಾ, ಎಂಆರ್, ಈ ಹಿಂದಿನ ಕ್ರಯಪತ್ರಗಳು, ಕಂದಾಯ ರಸೀದಿ, ಭೂ ಪರಿವರ್ತನೆಯ ಜಿಲ್ಲಾಧಿಕಾರಿ ಆದೇಶ ಪ್ರತಿ, ನಗರ ಅಭಿವೃದ್ಧಿ ಪ್ರಾಧಿಕಾರದ ಲೇಔಟ್ ಮಂಜೂರಾತಿ ಆದೇಶ, ಲೇಔಟ್ ಪ್ಲಾನ್, ಮೂಲ ನಗರಾಭಿವೃದ್ಧಿ ಯೋಜನೆ ನಕ್ಷೆಯ ದಾಖಲೆಗಳನ್ನು ಗಮನಿಸಿ. ವಕೀಲರ ಅಭಿಪ್ರಾಯವನ್ನೂ ಪಡೆದುಕೊಳ್ಳಿ.

3) ನನ್ನ ಮಕ್ಕಳು ನನ್ನನ್ನು ತಾತ್ಸಾರ ಮಾಡ್ತಾರೆ. ಸರಿಯಾಗಿ ನೋಡಿಕೊಳ್ತಿಲ್ಲ. ನಾನು ಹೇಗೆ ಕಾನೂನು ಸಹಾಯ ಪಡೆಯಬಹುದು?

  • ರಾಜಲಕ್ಷ್ಮಿ, ಬಳ್ಳಾರಿ

ಉತ್ತರ: ಮಕ್ಕಳು ನಮ್ಮನ್ನು ಸರಿಯಾಗಿ ನೋಡಿಕೊಳ್ಳುತ್ತಿಲ್ಲ ಎಂದು ಹಿರಿಯ ನಾಗರಿಕರು ಕೊರಗಬೇಕಾಗಿಲ್ಲ. ತಂದೆ-ತಾಯಿಯನ್ನು ಸಾಕುವುದು ಮಕ್ಕಳ ಕರ್ತವ್ಯವಾಗಿದೆ. ತಂದೆ-ತಾಯಿಯರ ಮತ್ತು ಹಿರಿಯ ನಾಗರಿಕರ ಪಾಲನೆ ಪೋಷಣೆ ಮತ್ತು ಕಲ್ಯಾಣ ಅಧಿನಿಯಮ ಹಾಗೂ ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಮಸೂದೆ ಕರ್ನಾಟಕದಲ್ಲಿ ಜಾರಿಯಲ್ಲಿದ್ದು, ಮಕ್ಕಳ ವಿರುದ್ಧ ಸೂಕ್ತ ಪ್ರಾಧಿಕಾರದಲ್ಲಿ ಅರ್ಜಿ ನೀಡಿ ಸಹಾಯ ಪಡೆಯಬಹುದಾಗಿದೆ. ಹಿರಿಯರ ಊಟೋಪಚಾರ ಅಲ್ಲದೇ ಮಾನಸಿಕ, ದೈಹಿಕ ಆರೋಗ್ಯದ ಹೊಣೆಯೂ ಮಕ್ಕಳದ್ದಾಗಿದೆ. ಇದರಲ್ಲಿ ದತ್ತು ಮಗನೂ ಸೇರುತ್ತಾನೆ. ತಂದೆ ತಾಯಿ ಮಾತ್ರವಲ್ಲ ಅಜ್ಜ-ಅಜ್ಜಿಯನ್ನು ನೋಡಿಕೊಳ್ಳುವ ಹೊಣೆಯೂ ಮಕ್ಕಳಿಗೆ ಇರುತ್ತದೆ. ಮಕ್ಕಳು ನಿಮ್ಮನ್ನು ಸರಿಯಾಗಿ ಗಮನಿಸಿಕೊಳ್ಳುತ್ತಿಲ್ಲ ಎನಿಸಿದರೆ ಮಾಸಿಕ ಹತ್ತು ಸಾವಿರ ರೂಪಾಯಿವರೆಗೂ ಮಾಸಿಕ ಭತ್ಯೆ ಪಡೆಯಬಹುದಾಗಿದೆ.

ಹಿರಿಯ ನಾಗರಿಕರನ್ನು ತ್ಯಜಿಸಿದರೆ ಅಂಥ ಮಕ್ಕಳಿಗೆ ಆರು ತಿಂಗಳು ಜೈಲು, ದಂಡ ಎರಡನ್ನೂ ವಿಧಿಸಬಹುದಾಗಿದೆ.

ಶಿಕ್ಷಕರ ಪಾತ್ರ ಹಿರಿದು: ವೀಣಾ

0

ತುರುವೇಕೆರೆ: ಮಕ್ಕಳಿಗೆ ಓದು, ಬರಹ ಮತ್ತು ಸ್ಪಷ್ಟವಾಗಿ ಮಾತನಾಡುವ ಕೌಶಲವನ್ನು ಕಲಿಸಿ, ಬೆಳೆಸುವ ನಿಟ್ಟಿನಲ್ಲಿ ಕನ್ನಡ ಶಿಕ್ಷಕರ ಪಾತ್ರ ಮಹತ್ವಪೂರ್ಣವಾದದು ಎಂದು ಕ್ಷೇತ್ರ ಸಮನ್ವಯಧಿಕಾರಿ ವೀಣಾ ಹೇಳಿದರು.

ಪಟ್ಟಣದ ಜಿಜೆಸಿ ಪ್ರೌಢ ಶಾಲಾ ಆವರಣದಲ್ಲಿ ಕ್ಷೇತ್ರ ಶಿಕ್ಷಣಾ ಇಲಾಖೆ ಹಾಗು ತಾಲ್ಲೂಕು ಕನ್ನಡ ಭಾಷಾ ಬೋಧಕರ ಸಂಘದಿಂದ ಹಮ್ಮಿಕೊಂಡಿದ್ದ ಪುನಶ್ಚೇತನ ಕಾರ್ಯಗಾರದಲ್ಲಿ ಭಾಗವಹಿಸಿ ಮಾತನಾಡಿದರು.

ಕನ್ನಡ ಭಾಷೆಯ ವೈಜ್ಞಾನಿಕ ಕಲಿಕೆಯನ್ನು ಕ್ರಮಬದ್ಧವಾಗಿ ಕಲಿತರೆ ಇತರ ಭಾಷಾ ವಿಷಯಗಳನ್ನು ಕೂಡ ಅರ್ಥೈಯಿಸಿಕೊಳ್ಳುವ ಜ್ಞಾನ ಮಕ್ಕಳಲ್ಲಿ ಬೆಳೆಯುತ್ತದೆ. ಆದ್ದರಿಂದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಹಂತದಲ್ಲಿ ಸ್ವಷ್ಟ ಓದು, ಆಲಿಸುವ, ಬರಹ ಮತ್ತು ಸರಳ ಲೆಕ್ಕಾಚಾರವನ್ನು ಕಲಿಸುವ ಕೆಲಸ ಶಿಕ್ಷಕರದ್ದಾಗಬೇಕು. ಕನ್ನಡ ಭಾಷೆಯಲ್ಲಿ ಪ್ರತಿಯೊಂದು ಮಗುವೂ ಉತ್ತೀರ್ಣವಾಗುವಂತೆ ಕಲಿಕಾ ತಾಲೀಮು ನಡೆಸಬೇಕು ಎಂದು ಶಿಕ್ಷಕರಿಗೆ ಕಿವಿ ಮಾತು ಹೇಳಿದರು.

ಕನ್ನಡ ಭಾಷಾ ಬೋಧಕರ ಸಂಘದ ತಾಲ್ಲೂಕು ಅಧ್ಯಕ್ಷ ರಂಗಸ್ವಾಮಿ ಎಚ್.ಎಂ ಪ್ರಾಸ್ತಾವಿಕ ನುಡಿಗಳನ್ನಾಡುತ್ತಾ ಬದಲಾಗುತ್ತಿರುವ ಕಾಲಘಟ್ಟಕ್ಕೆ ಅನುಗುಣವಾಗಿ ಶಿಕ್ಷಕರು ತಮ್ಮ ಬೋಧನೆಯಲ್ಲಿ ಹೊಸ ಹೊಸ ತಂತ್ರಗಳು, ವಿನ್ಯಾಸಗಳು, ಮಾದರಿಗಳನ್ನು ರೂಢಿಸಿಕೊಂಡು ಪರಿಣಾಮಕಾರಿ ಬೋಧನೆ ಮಾಡುವ ಮೂಲಕ ಮಕ್ಕಳ ಗುಣಾತ್ಮಕ ಕಲಿಕೆಗೆ ಹೆಚ್ಚು ಒತ್ತು ಕೊಡಬೇಕು. ಜಿಲ್ಲೆಯಲ್ಲೇ ತುರುವೇಕೆರೆ ಕನ್ನಡ ಭಾಷಾ ಬೋಧಕರ ಸಂಘ ಎಲ್ಲ ಆಯಾಮಗಳಿಂದ ಸದೃಢವಾಗಿದ್ದು ಶಿಕ್ಷಕರಿಗೆ, ಮಕ್ಕಳಿಗೆ ಪೂರಕವಾದ ಸೃಜನಶೀಲ ಚಟುವಟಿಕೆಗಳನ್ನು ಮಾಡಿಕೊಂಡು ಬರುತ್ತಿದ್ದೆ ಎಂದರು.

ನಂತರ ಸೇತು ಬಂಧ, 8, 9 ಮತ್ತು ಹತ್ತನೇ ತರಗತಿಯ ಪಠ್ಯದಲ್ಲಿರುವ ಕಿಷ್ಟಾಂಶಗಳ ಬಗ್ಗೆ ವಿಷಯ ಸಂಪನ್ಮೂಲ ವ್ಯಕ್ತಿಗಳಿಂದ ಚರ್ಚೆ ನಡೆಸಿದರು. ಮತ್ತು ಸೇತುಬಂಧ ಪ್ರಶ್ನೆ ಪತ್ರಿಕೆ ಮಾದರಿಗಳನ್ನು ಸಿದ್ದಪಡಿಸಲಾಯಿತು.

ಈ ಸಂದರ್ಭದಲ್ಲಿ ನೋಡಲ್ ಅಧಿಕಾರಿ ಸಿದ್ದಪ್ಪ ಪಿ, ಜಿಜೆಸಿ ಕಾಲೇಜಿನ ಉಪ ಪ್ರಾಂಶುಪಾಲ ವೆಂಕಟೇಶ್, ಸಂಘದ ಕಾರ್ಯದರ್ಶಿ ಸಂಪತ್ತು, ಸಂಪನ್ಮೂಲ ವ್ಯಕ್ತಿಗಳಾದ ಅಜ್ಜನಹಳ್ಳಿ ಶಾಲೆಯ ಶಿವಣ್ಣ, ಮುದ್ದನಹಳ್ಳಿ ಶಾಲೆಯ ಹೇಮಲತಾ ದೇವಿ, ಕೌಸಲ್ಯ, ಮುಖ್ಯ ಶಿಕ್ಷಕರಾದ ಮಾಯಿಗಯ್ಯ, ವಿ.ಟಿ.ಸೋಮಶೇಖರ ರಾಜ್ ಮಳಲಿ ಮತ್ತು ಶಿಕ್ಷಕರು ಭಾಗವಹಿಸಿದ್ದರು. ಸಾವಿತ್ರಮ್ಮ ಸ್ವಾಗತಿಸಿ, ಕುಮಾರ್ ನಿರೂಪಿದರು.

ಶಾಸಕ ಬಾಲಕೃಷ್ಣ ಜತೆ ಮಂಜು ಮಾತುಕತೆ

0

ಪಬ್ಲಿಕ್ ಸ್ಟೋರಿ:

ಮಾಗಡಿ ಶಾಸಕ ಬಾಲಕೃಷ್ಣ ಅವರನ್ನು ಭೇಟಿ ಮಾಡಿದ ಜೆಡಿಎಸ್ ಹಿರಿಯ ಮುಖಂಡರಾದ ನೆಲಮಂಗಲದ ಭವಾನಿ ಶಂಕರ್ ಗ್ರೂಪ್ಸ್ ನ ಮಾಲೀಕರಾದ ಮಂಜುನಾಥ್ ಅವರು ಶಾಸಕರಿಗೆ ಅಭಿನಂದನೆ ಸಲ್ಲಿಸಿದರು.

ಶಾಸಕರ ಭೇಟಿ ನಂತರ ಪಬ್ಲಿಕ್ ಸ್ಟೋರಿಯೊಂದಿಗೆ ಮಾತನಾಡಿದ ಅವರು, ಶಾಸಕ ಬಾಲಕೃಷ್ಣ ಅವರು ಹಿರಿಯ ರಾಜಕಾರಣಿ. ಅಭಿವೃದ್ಧಿ ವಿಚಾರದಲ್ಲಿ ಕ್ಷೇತ್ರದಲ್ಲಿ ಹೊಸ ಭಾಷ್ಯ ಬರೆದಿದ್ದಾರೆ ಎಂದರು.

ಕಾಂಗ್ರೆಸ್ ಸರ್ಕಾರ ಅವರಿಗೆ ಸಚಿವ ಸ್ಥಾನ ನೀಡಬೇಕಾಗಿತ್ತು. ಅವರ ಅನುಭವವನ್ನು ಬಳಸಿಕೊಳ್ಳಬೇಕಾಗಿತ್ತು ಎಂದು ಪ್ರತಿಕ್ರಿಯಿಸಿದರು.

ಉದ್ಯಮಿ ನೆಲಮಂಗಲದ ಯಲಚಗೆರೆ ಸತೀಶ್ ಇತರರು ಇದ್ದರು.

ಸಿದ್ದಗಂಗಾಮಠಕ್ಕೆ ಹಣ ಬಿಡುಗಡೆ: ಸುರೇಶಗೌಡರ ಮಾತಿಗೆ ಮನ್ನಣೆ

ತುಮಕೂರು ಸಿದ್ದಗಂಗಾ ಮಠದ ಆವರಣದಲ್ಲಿ ನಿರ್ಮಿಸಲು ಉದ್ದೇಶಿಸಿರುವ ವಸತಿ ನಿಲಯದ ಕಟ್ಟಡ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಮುಂದುವರೆಸಲು ಲೋಕೋಪಯೋಗಿ ಇಲಾಖೆಗೆ ಮುಖ್ಯಮಂತ್ರಿ Siddaramaiah ಅವರು ಬುಧವಾರ ಸೂಚಿಸಿದ್ದಾರೆ.

ಲೋಕೋಪಯೋಗಿ ಇಲಾಖೆಯಲ್ಲಿ ಇನ್ನೂ ಪ್ರಾರಂಭವಾಗದಿರುವ ಕಾಮಗಾರಿಗಳನ್ನು ಮರುಪರಿಶೀಲನೆಗಾಗಿ ತಾತ್ಕಾಲಿಕವಾಗಿ ಸರ್ಕಾರ ತಡೆ ಹಿಡಿದಿತ್ತು. ಅದರಲ್ಲಿ 9.90 ಕೋಟಿ ರೂ. ವೆಚ್ಚದ ಸಿದ್ದಗಂಗಾ ಮಠದ ವಸತಿ ನಿಲಯದ ಕಾಮಗಾರಿಯೂ ಸೇರಿತ್ತು.

ಮಠದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಇದನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ ಮುಂದುವರೆಸುವಂತೆ ಲೋಕೋಪಯೋಗಿ ಇಲಾಖೆಗೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ.

ಸಿದ್ದಗಂಗಾ ಮಠಕ್ಕೆ ಹಣ ತಡೆ ಹಿಡಿಯದಂತೆ ಈಚೆಗೆ ಶಾಸಕ ಸುರೇಶಗೌಡರು ಸರ್ಕಾರವನ್ನು ಒತ್ತಾಯಿಸಿದ್ದರು.

ಅಧಿಕಾರಿ ಮನೆಯಲ್ಲಿ 1 ಕೆಜಿ ಚಿನ್ನ

0

ತುಮಕೂರು: ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪ ಮೇರೆಗೆ ತುಮಕೂರಿನ ಆರ್ ಟಿ ನಗರದಲ್ಲಿರುವ ಕೆಐಎಡಿಬಿ ಅಧಿಕಾರಿಯೊಬ್ಬರ ಮನೆ ಮೇಲೆ ಮೇ 31ರ ಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು ಹಲವು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.

ಒಂದು ಕೆಜಿಗೂ ಅಧಿಕ ಚಿನ್ನದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಲಾಗಿದೆ.

ಆರ್.ಟಿ. ನಗರದ ಪಕ್ಕದಲ್ಲಿರುವ ಶಂಕರಪುರಂನ ಡಿ ಬ್ಲಾಕ್ ನಲ್ಲಿರುವ ಸಿ.ಎನ್.ಮೂರ್ತಿ ಅವರ ಮನೆ ಮೇಲೆ ದಾಳಿ ನಡೆದಿದೆ. ಮೂರ್ತಿ ಮೈಸೂರಿನ ಕೆಐಎಡಿಬಿ ಕಚೇರಿಯಲ್ಲಿ ಕಾರ್ಯನಿರ್ವಾಹಕ ಇಂಜಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದು ತುಮಕೂರಿನಲ್ಲಿ ವಾಸ ಮಾಡುತ್ತಿದ್ದಾರೆ.

ಇಂದು ಬೆಳಗ್ಗೆ ಲೋಕಾಯುಕ್ತ ಎಸ್.ಪಿ ವಲಿಬಾಷಾ ಮಾರ್ಗದರ್ಶನದಲ್ಲಿ ಡಿವೈಎಸ್.ಪಿಗಳಾದ ಮಂಜುನಾಥ್ ಮತ್ತು ಹರೀಶ್ ನೇತೃತ್ವದ ತಂಡ ದಾಳಿ ನಡೆಸಿ ದಾಖಲೆಗಳ ತಪಾಸಣೆ ನಡೆಸಿದ್ದಾರೆ.