ನಾಮಪತ್ರ ಸಲ್ಲಿಕೆ ವೇಳೆ ಶಿರಾ ನಗರ ಅಕ್ಷರಶಃ ಕಾಂಗ್ರೆಸ್ ಕೋಟೆ ಅಗಿತ್ತು ಇದರ ಬಿಸಿ ಅಭ್ಯರ್ಥಿ ಟಿ.ಬಿ.ಜಯಚಂದ್ರ ಅವರಿಗೆ ತಟ್ಟಿತ್ತು.
ಮೆರವಣಿಗೆ ವಾಹನ ತಲುಪಲು ಬುಕ್ಕಾಪಟ್ಟಣ ಸರ್ಕಲ್ ನಿಂದ ನಗರ ಐ.ಬಿ.ಸರ್ಕಲ್ ವರೆಗಿನ 200 ಮೀ ನಡೆದುಕೊಂಡು ಬಂದರು.
ಟ್ರಾಫಿಕ್ : ನಡದೇ ಹೋದ ಜಯಚಂದ್ರ
ನನಗೆ ಗೆಲುವು ಎಂದರು ಏಕೆ ಕಾಂತರಾಜ್
ತುರುವೇಕೆರೆ: ಬಿಜೆಪಿಯ ದುರಾಡಳಿತಕ್ಕೆ ಬೇಸತ್ತಿರುವ ಕ್ಷೇತ್ರದ ಜನತೆ ಈ ಬಾರಿ ಕಾಂಗ್ರೆಸ್ಗೆ ಹೆಚ್ಚಿನ ಮತಗಳನ್ನು ನೀಡಿ; ಅಭ್ಯರ್ಥಿ ಕಾಂತರಾಜ್ ಬಿ.ಎಂ ಅವರನ್ನು ಗೆಲ್ಲಿಸಲಿದ್ದಾರೆಂದು ತುರುವೇಕೆರೆ ವಿಧಾನ ಸಭಾ ಕಾಂಗ್ರೆಸ್ ಅಭ್ಯರ್ಥಿ ಕಾಂತರಾಜ್ ಬಿ.ಎಂ ಹೇಳಿದರು.
ಪಟ್ಟಣದ ಬೆಮೆಲ್ ಕಾಂತರಾಜ್ ಕಾಂಗ್ರೆಸ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಸಿ.ಎಸ್.ಪುರ ಹೋಬಳಿಯ ಮುಖಂಡರು ಮತ್ತು ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಬುಧವಾರ ರಾತ್ರಿ ಮಾತನಾಡಿದ ಅವರು
ಮಾಜಿ ಶಾಸಕ ಶ್ರೀನಿವಾಸ್ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದು ಇದರಿಂದ ಗುಬ್ಬಿ ತಾಲ್ಲೂಕಿನ ಸಿ.ಎಸ್.ಪುರ ಹೋಬಳಿಯ ಮತಗಳು ತುರುವೇಕೆರೆ ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗೆ ಸಹಕಾರಿಯಾಗಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು ಈ ಭಾಗದ ಸಾಕಷ್ಟು ಯುವಕರು, ಮುಖಂಡರು, ಕಾರ್ಯಕರ್ತರು ಕಾಂಗ್ರೆಸ್ನತ್ತ ಒಲವು ತೋರಿದ್ದು ಪಕ್ಷದ ಶಕ್ತಿಯನ್ನು ಹೆಚ್ಚಿಸಿದೆ.
ಕಾಂಗ್ರೆಸ್ ಬಡವರ, ಹಿಂದುಳಿದವರ, ಶೋಷಿತರ, ಅಲ್ಪಸಂಖ್ಯಾತರ ಸೇರಿದಂತೆ ಎಲ್ಲ ಸಮುದಾಯಗಳ ಏಳಿಗೆಗೆ ಸದಾ ದುಡಿಯುವ ಪಕ್ಷವಾಗಿದೆ. ಸಿದ್ದರಾಮಯ್ಯ ಅವರು ತಮ್ಮ ಅಧಿಕಾರಾವಧಿಯಲ್ಲಿ ರಾಜ್ಯದಲ್ಲಿ ನೀಡಿರುವ ಶಾಶ್ವತ ಜನಪರ ಯೋಜನೆಗಳು ಇಂದಿಗೂ ಜನಮಾನಸಲ್ಲಿ ಅಚ್ಚಳಿಯದೇ ಉಳಿದಿದ್ದು ಈ ಬಾರಿ ಕಾಂಗ್ರೆಸ್ ಪರವಾದ ಮತದಾರರ ಧ್ವನಿ ಇದೆ ಎಂದರು.
ಗುಬ್ಬಿ ತಾಲ್ಲೂಕಿನ ಎಪಿಎಂಸಿ ಮಾಜಿ ಉಪಾಧ್ಯಕ್ಷ ತಿಮ್ಮರಾಜು ಮಾತನಾಡಿ, ಶಾಸಕ ಜಯರಾಮ್ ಎ.ಎಸ್ ಅವರ ಕೊಡುಗೆ ಸಿ.ಎಸ್.ಪುರ ಹೋಬಳಿಯಲ್ಲಿ ಶೂನ್ಯ. ಒಬ್ಬ ಗ್ರಾಮ ಪಂಚಾಯಿತಿ ಸದಸ್ಯರು ಒಳ್ಳೆಯ ಕೆಲಸ ಮಾಡಿದ್ದಾರೆ ಆದರೆ ಶಾಸಕರು ಏನೂ ಮಾಡಿಲ್ಲ. ಇಲ್ಲಿಯ ಜನತೆಗೆ ಒಂದು ಮನೆಯೂ ನೀಡಿಲ್ಲ, ಬಸ್ ಸೌಕರ್ಯವಿಲ್ಲ, ಬಡಮಕ್ಕಳಿಗೆ ಯಾವುದೇ ಸೌಲಭ್ಯ ನೀಡಿಲ್ಲವೆಂದು ಕಿಡಿಕಾರಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಶ್ರೀನಿವಾಸ್, ಮುಖಂಡರುಗಳಾದ ಗೋಣಿತುಮಕೂರು ಲಕ್ಷ್ಮೀಕಾಂತ್, ರಾಮಣ್ಣ, ವೆಂಕಟೇಶ್, ದೇವರಾಜ್ ಗಿರೀಶ್, ಚೇತನ್ಕುಮಾರ್, ನವೀನ್, ಆನಂದ್, ಗಂಗಾಧರ್, ಶಿವಕುಮಾರ್ ಮತ್ತು ಕಾರ್ಯಕರ್ತರು ಪಾಲ್ಗೊಂಡಿದ್ದರು.
ಸಿದ್ದಗಂಗಾ ಮಠಕ್ಕೆ ಉತ್ತರಾಧಿಕಾರಿ ನೇಮಕ
ಸಿದ್ದಗಂಗಾ ಮಠದ ಉತ್ತರಾಧಿಕಾರಿಯನ್ನಾಗಿ ಸಿದ್ದಗಂಗಾ ಪಾಲಿಟೆಕ್ನಿಕ್ ಉಪನ್ಯಾಸಕರಾಗಿರುವ ಮನೋಜ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಮೈಲನಹಳ್ಳಿಯ ಷಡಕ್ಷರಯ್ಯ ಮತ್ತು ವಿರೂಪಾಕ್ಷಮ್ಮ ದಂಪತಿಯ ಪುತ್ರರಾಗಿರುವ ಮನೋಜ್ ಕುಮಾರ್ ಅವರು ಬಿಎ, ಬಿಇಡಿ, ಎಂಎಸ್.ಸಿ, ಎಂ.ಎ ಹಾಗೂ ವಿದ್ವತ್ ಪೂರ್ಣಗೊಳಿಸಿ ಸಿದ್ದಗಂಗಾ ಪಾಲಿಟೆಕ್ನಿಕ್ ನಲ್ಲಿ ಉಪನ್ಯಾಸಕರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.
ಬಸವ ಜಯಂತಿಯಂದು ಮಠದಲ್ಲಿ ನಿರಂಜನ ಪಟ್ಟಾಧಿಕಾರ ಮತ್ತು ಉತ್ತರಾಧಿಕಾರಿ ನೇಮಕ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಮನೋಜ್ ಕುಮಾರ್ ಅವರು ಸಿದ್ದಗಂಗಾ ಮಠಧ ಉತ್ತರಾಧಿಕಾರಿಯಾಗಿ ದೀಕ್ಷೆ ಪಡೆಯಲಿದ್ದಾರೆ.
ಗ್ರಾಮಾಂತರ BJP ಅಲೆ
ತುಮಕೂರು ಗ್ರಾಮಾಂತರದಲ್ಲಿ ಬಿಜೆಪಿ ಅಲೆಯೇ ಕಾಣಿಸಿಕೊಂಡಿದ್ದು, ಅದು ಪ್ರಚಾರದ ಮೇಲೂ ಪರಿಣಾಮ ಬೀರಿದೆ.
ಬಿಜೆಪಿಯದು ಅಬ್ಬರ ಪ್ರಚಾರ ಕಾಣಿಸುತ್ತಿದೆ. ಕಾಂಗ್ರೆಸ್, ಜೆಡಿಎಸ್ ಪ್ರಚಾರದಲ್ಲಿ ಹಿಂದೆ ಬಿದ್ದಿವೆ.

ಕಾಂಗ್ರೆಸ್ ಪ್ರಚಾರದಲ್ಲಿ ಹಿಂದೆ ಬಿದ್ದಿದೆ. ಜೆಡಿಎಸ್ ನಲ್ಲಿ ಕೋರ್ಟ್ ತೀರ್ಪಿನ ಕರಿನೆರಳಿನ ಕಾರಣ ಕಾರ್ಯಕರ್ತರು ಗೊಂದಲದಲ್ಲಿದ್ದಾರೆ.

ಸಾಕಷ್ಟು ಊರುಗಳಲ್ಲಿ ಬಿಜೆಪಿ ಅಭ್ಯರ್ಥಿ ಸುರೇಶಗೌಡರು ಹೋದರೆ ಊರೂರೇ ಸೇರ ತೊಡಗಿರುವುದು ಬಿಜೆಪಿ ಕಾರ್ಯಕರ್ತರಲ್ಲಿ ಉತ್ಸಾಹ ಇಮ್ಮಡಿಸಿದೆ.

ಬಿಜೆಪಿ ಅಭಿವೃದ್ಧಿಯನ್ನೇ ಮುಂದು ಮಾಡಿದೆ. ಶಾಲಾ ಕಾಲೇಜು, ಆಸ್ಪತ್ರೆ, ರಫ್ತೋದ್ಯಮ ಕೇಂದ್ರ, ಮಹಿಳೆಯರಿಗೆ ಕೌಶಲ ತರಬೇತಿ ಕೇಂದ್ರದ ವಾಗ್ದಾನ ಕ್ಷೇತ್ರದ ಜನರು ಹೆಚ್ಚು ಆಕರ್ಷಿತರಾಗುವಂತೆ ಮಾಡಿದೆ.
ಲ
ಚೀನಾ ಹಿಂದಿಕ್ಕಿದ ಭಾರತದ ಜನಸಂಖ್ಯೆ
ಭಾರತ ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ರಾಷ್ಟ್ರವಾಗಿದೆ ಎಂದು ವಿಶ್ವಸಂಸ್ಥೆ ಬಿಡುಗಡೆ ಮಾಡಿರುವ ಅಂಕಿ ಅಂಶಗಳು ಹೇಳಿವೆ.
ವಿಶ್ವಸಂಸ್ಥೆ ಎಲ್ಲ ದೇಶಗಳ ಜನಸಂಖ್ಯೆಯನ್ನು ಬಿಡುಗಡೆಗೊಳಿಸಿದೆ.
ವಿಶ್ವಸಂಸ್ಥೆ ಪ್ರಕಾರ, ಜನಸಂಖ್ಯೆಯಲ್ಲಿ ನೆರೆಯ ದೇಶ ಚೀನಾವನ್ನೇ ಹಿಂದಿಕ್ಕಿದೆ. ಭಾರತ 142.86 ಕೋಟಿ ಜನಸಂಖ್ಯೆ ಹೊಂದಿದ್ದರೆ, ಚೀನಾ 142.57 ಕೋಟಿ ಜನಸಂಖ್ಯೆ ಹೊಂದಿದೆ.
BJP ಮತ್ತೇ ಅಧಿಕಾರಕ್ಕೆ: ಸಿಎಂ
ಶಿಗ್ಗಾವಿ: ಬಿಜೆಪಿ ಮೇ 13ರಂದು 125ಕ್ಕೂ ಹೆಚ್ಚು ಸ್ಥಾನಗಳೊಂದಿಗೆ ಮತ್ತೆ ಅಧಿಕಾರಕ್ಕೆ ಬರಲಿದೆ. ಮತ್ತೆ ಕನ್ನಡಮಾತೆಯ ಸೇವೆ ಮಾಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಶ್ವಾಸದಿಂದ ನುಡಿದರು.
ಶಿಗ್ಗಾವಿಯಲ್ಲಿ ಇಂದು ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಜನಸ್ತೋಮವನ್ನುದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ರಾಜ್ಯ ಸರಕಾರ ಎಲ್ಲ ರಂಗಗಳಲ್ಲೂ ವಿಫಲವಾಗಿತ್ತು. ಮೂಲಸೌಕರ್ಯದ ಕೊರತೆ, ನೀರಿನ ಸಮಸ್ಯೆ ವ್ಯಾಪಕವಾಗಿತ್ತು ಎಂದು ಟೀಕಿಸಿದರು. 2 ಏತ ನೀರಾವರಿ ಯೋಜನೆ ಅನುಷ್ಠಾನದ ಮೂಲಕ 100ಕ್ಕೂ ಹೆಚ್ಚು ಕೆರೆಗಳಿಗೆ ನೀರು ತುಂಬಿಸಿದ್ದಾಗಿ ವಿವರಿಸಿದರು. ಗ್ರಾಮೀಣ, ಜಿಲ್ಲಾ ರಸ್ತೆ, ರಾಜ್ಯ, ರಾಷ್ಟ್ರೀಯ ಹೆದ್ದಾರಿ ಸೇರಿ 2 ಸಾವಿರ ಕಿಮೀ ರಸ್ತೆಗಳ ನಿರ್ಮಾಣವಾಗಿದೆ ಎಂದು ತಿಳಿಸಿದರು.
ಬಡತನ ಶಾಪವಲ್ಲ. ಸಾಯುವವರೆಗೆ ಬಡತನ ಇರಬೇಕಿಲ್ಲ.
ಪ್ರಾಮಾಣಿಕತೆಯಿಂದ ದುಡಿಯಲು ಅವಕಾಶ ಕೊಟ್ಟಿದ್ದೇವೆ. ಈ ಭಾಗದಲ್ಲಿ ಅತಿ ಹೆಚ್ಚು ಮನೆಗಳನ್ನು ನಿರ್ಮಿಸಿ ಕೊಡಲಾಗುತ್ತಿದೆ. ಶಹರಗಳ ಸಂಪೂರ್ಣ ಅಭಿವೃದ್ಧಿ, ಪ್ರತಿ ಮನೆಗೆ ನಳದಿಂದ ನೀರು ಕೊಡುತ್ತಿದ್ದೇವೆ. ಮೋದಿಜಿ ಅವರ ನೇತೃತ್ವದ ಕೇಂದ್ರ ಸರಕಾರವು ಜಲಜೀವನ್ ಮಿಷನ್ ಅಡಿಯಲ್ಲಿ ಎಲ್ಲ ಹಳ್ಳಿಗಳಿಗೂ ನೀರಿನ ಸೌಕರ್ಯ ಕೊಡುತ್ತಿದ್ದೇವೆ ಎಂದರು. ಅಭಿವೃದ್ಧಿಗಾಗಿ ಜನರು ನಮಗೆ ಆಶೀರ್ವಾದ ಮಾಡಲಿದ್ದಾರೆ ಎಂದು ನುಡಿದರು.
ಓಡಿ ಹೋಗುವ ಮುಖ್ಯಮಂತ್ರಿ ನಾನಲ್ಲ
ಜೀವನದ ಕೊನೆ ಉಸಿರು ಇರುವವರೆಗೂ ನಿಮ್ಮ ಸೇವೆ ಮಾಡುತ್ತೇನೆ. ಕ್ಷೇತ್ರ ಬದಲಿಸುವ, ಓಡಿ ಹೋಗುವ ಮುಖ್ಯಮಂತ್ರಿ ನಾನಲ್ಲ. ಏನೇ ಆದರೂ ನನ್ನ ಜನರ ಮುಂದೆ ತೀರ್ಮಾನ ಆಗಬೇಕು. ನೀವೇ ಮಾಲೀಕರು ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
ನನ್ನಲ್ಲಿ ಆತ್ಮಸ್ಥೈರ್ಯ ಇದೆ. ಪ್ರಾಮಾಣಿಕ ಸೇವೆಯ ಕುರಿತು ನಂಬಿಕೆ ಇದೆ. ಆಯುರ್ವೇದ ಆಸ್ಪತ್ರೆ, ವೆಟರಿನರಿ ಪಾಲಿಟೆಕ್ನಿಕ್, ಟೆಕ್ಸ್‍ಟೈಲ್ ಪಾರ್ಕ್ ಸೇರಿ ಅನೇಕ ಅಭಿವೃದ್ಧಿ ಕಾರ್ಯ ಆಗಿದೆ. ಬಂಕಾಪುರವು ಮುಂದಿನ ದಿನಗಳಲ್ಲಿ ತಾಲ್ಲೂಕಾಗಲಿದೆ ಎಂದು ತಿಳಿಸಿದರು. ನನ್ನ ಸಾವಾದರೆ ಶಿಗ್ಗಾವಿ ಮಣ್ಣಿನಲ್ಲೇ ಅಂತ್ಯಸಂಸ್ಕಾರ ಮಾಡಿ ಎಂದು ಮನವಿ ಮಾಡಿದರು.
ಚಿತ್ರನಟ ಕಿಚ್ಚ ಸುದೀಪ್ ಅವರು ಮಾತನಾಡಿ, ಜನಮನ ಗೆದ್ದ ಸಿಎಂ ಬೊಮ್ಮಾಯಿ ಮಾಮ. ಅವರಿಗೆ ಕೆಲಸ ಮಾಡಲು ಇನ್ನಷ್ಟು ಸಮಯ ಬೇಕಿದೆ. ಜನರಿಗೆ ಒಳಿತಿಗಾಗಿ ಅವರನ್ನು ಬೆಂಬಲಿಸಿ ಎಂದು ವಿನಂತಿಸಿದರು.
ಬೊಮ್ಮಾಯಿ ಮಾಮ
ಹೇಗಿದ್ದೀರ ಎಂದೇ ಕಿಚ್ಚ ಸುದೀಪ್ ಮಾತು ಆರಂಭಿಸಿದರು. ಸುಂದರವಾಗಿ ಸುಸ್ವಾಗತ ನೀಡಿ ಪ್ರೀತಿ ತೋರಿದ್ದೀರಿ ಎಂದರಲ್ಲದೆ, ಬೊಮ್ಮಾಯಿ ಮಾಮ ಅವರು ಕಡಿಮೆ ಅವಧಿಯಲ್ಲಿ ತುಂಬ ಕೆಲಸ ಮಾಡಿದ ವ್ಯಕ್ತಿ ಎಂದು ತಿಳಿಸಿದರು. ನಾಮ್‍ಕೆವಾಸ್ತೆ ಅಲ್ಲ ಕಾಮ್‍ಕೆವಾಸ್ತೆ ಸಿಎಂ ಅವರು ಎಂದು ನುಡಿದರು.
ನಾನು ಒಬ್ಬ ಭಾರತೀಯನಾಗಿ ಪ್ರಧಾನಿ ಮೋದಿ ಅವರ ಕೆಲಸಗಳನ್ನು ಮೆಚ್ಚುತ್ತೇನೆ. ನಿಮ್ಮ ನಂಬಿಕೆ ಇದ್ದರೆ ಕೆಲಸ ಚೆನ್ನಾಗಿ ಆಗುತ್ತದೆ ಎಂದು ತಿಳಿಸಿದರು. ಗೆದ್ದೇ ಗೆಲ್ಲುವೆ ಒಂದು ದಿನ ಗೆಲ್ಲಲೇ ಬೇಕು ಒಳ್ಳೆತನ ಹಾಡನ್ನು ಅವರು ಉದಾಹರಿಸಿದರು.
ಇದಕ್ಕೂ ಮೊದಲು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾರವರು ಶಿಗ್ಗಾವಿಯಲ್ಲಿ ಸಿಎಂ ಬಸರಾಜ ಬೊಮ್ಮಾಯಿಯೊಂದಿಗೆ ಬೃಹತ್ ರೋಡ್ ಷೋ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಸಚಿವರಾದ ಬಿ.ಸಿ.ಪಾಟೀಲ, ಗೋವಿಂದ ಕಾರಜೋಳ, ಮುರಗೇಶ ನಿರಾಣಿ, ಚಿತ್ರ ನಟ ಸುದೀಪ್, ಶಿಸ್ತು ಸಮಿತಿಯ ಅಧ್ಯಕ್ಷ ಲಿಂಗರಾಜ ಪಾಟೀಲರು ಉಪಸ್ಥಿತರಿದ್ದರು.
50 ಸಾವಿರ ಅಂತರದ ಗೆಲುವು; ಶೆಟ್ಟರ್
ಹುಬ್ಬಳ್ಳಿ: ನಾನು ಈ ಕ್ಷೇತ್ರದಲ್ಲಿ 7 ಬಾರಿ ಸ್ಪರ್ಧಿಸುತ್ತಿದ್ದೇನೆ. ಕನಿಷ್ಠ 50 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸುತ್ತೇನೆ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ ಹೇಳಿದರು.
ಕ್ಷೇತ್ರದ ಜನರಿಗೆ, ರಾಜ್ಯದ ಜನರಿಗೆ ಜಗದೀಶ ಶೆಟ್ಟರ ಏನು ಎಂಬುದು ಗೊತ್ತಿದೆ. ಕ್ಷೇತ್ರದಲ್ಲಿನ ಜನರ ವಿಶ್ವಾಸವೇ ನನ್ನ ಶಕ್ತಿ. ಮಾಡಿದ ಅಭಿವೃದ್ಧಿ ಕೆಲಸಗಳು ಕೈ ಹಿಡಿಯಲಿವೆ ಎಂದರು.
ಮಾಜಿ ಸಚಿವ ಹಾಗೂ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಣ ಎಂ.ಬಿ.ಪಾಟೀಲ, ಮಾಜಿ ಸಚಿವ ಎ.ಎಂ ಹಿಂಡಸಗೇರಿ, ವಿಧಾನ ಪರಿಷತ್ ಮಾಜಿ ಸದಸ್ಯ ಮೋಹನ್ ಲಿಂಬಿಕಾಯಿ ಹಾಗೂ ಇತರ ನಾಯಕರಿದ್ದರು.
ಸಿಎಂ ಬೊಮ್ಮಾಯಿ ನಾಮಪತ್ರ: ಕಿಚ್ಚನ ಸಾಥ್
ಶಿಗ್ಗಾವಿ: ಶಿಗ್ಗಾವಿ ಕ್ಷೇತ್ರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಮಪತ್ರ ಸಲ್ಲಿಸುವ ಸಂಬಂಧ ಏರ್ಪಡಿಸಿರುವ “ರೋಡ್ ಶೋ”ಗೆ ಜನಸಾಗರವೇ ಹರಿದು ಬಂದಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಚಿತ್ರನಟ ಸುದೀಪ್ ಆಗಮನದ ಹಿನ್ನೆಲೆಯಲ್ಲಿ ಸಹಸ್ರಾರು ಜನರು ಪಟ್ಟಣದ ಕಿತ್ತೂರು ಚನ್ನಮ್ಮ ಸರ್ಕಲ್ ನಲ್ಲಿ ನೆರೆದಿದ್ದಾರೆ.
ಮೊದಲಿಗೆ ಕಿತ್ತೂರು ಚನ್ನಮ್ಮ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ನಂತರ ರೋಡ್ ಶೋ ಆರಂಭವಾಗಲಿದೆ. ಸಂತೆ ಮೈದಾನ, ಹಳೇ ಬಸ್ ನಿಲ್ದಾಣ ಮಾರ್ಗದ ಮೂಲಕ ತಾಲ್ಲೂಕು ಕ್ರೀಡಾಂಗಣ ತಲುಪಲಿದೆ.

ತಾಲ್ಲೂಕು ಕ್ರೀಡಾಂಗಣದಲ್ಲಿ ಮಧ್ಯಾಹ್ನ 12.30ಕ್ಕೆ ಬಹಿರಂಗ ಸಮಾವೇಶ ನಡೆಯಲಿದ್ದು, ಮಧ್ಯಾಹ್ನ 1.30ಕ್ಕೆ ತಹಶೀಲ್ದಾರ್ ಕಚೇರಿಯಲ್ಲಿ ಸಿಎಂ ಬೊಮ್ಮಾಯಿ ನಾಮಪತ್ರ ಸಲ್ಲಿಸಲಿದ್ದಾರೆ.
ಜೆ.ಪಿ.ನಡ್ಡಾ ಮತ್ತು ಚಿತ್ರನಟ ಸುದೀಪ್ ಶಿಗ್ಗಾವಿಯ ಮುಖ್ಯಮಂತ್ರಿ ನಿವಾಸಕ್ಕೆ ಆಗಮಿಸಿದ್ದು, ಬೊಮ್ಮಾಯಿ ಜತೆಗೆ ಮಾತುಕತೆ ನಡೆಸಿದ್ದಾರೆ.
ಮೆರವಣಿಗೆಯಲ್ಲಿ ಜಗ್ಗಲಿಗೆ ತಂಡ, ಜನಪದ ಕಲಾ ತಂಡಗಳು ಮೆರುಗು ನೀಡಲಿವೆ. ಸುಡು ಬಿಸಿಲನ್ನು ಲೆಕ್ಕಿಸದೆ ಜನರು ಕಿಚ್ಚ ಸುದೀಪ್ ಅವರನ್ನು ನೋಡಲು ಕಾತರದಿಂದ ಕಾಯುತ್ತಿದ್ದಾರೆ.
ಜಗದೀಶ ಶೆಟ್ಟರ ನಾಮಪತ್ರ ಸಲ್ಲಿಕೆ
ಹುಬ್ಬಳ್ಳಿ – ಧಾರವಾಡ ಸೆಂಟ್ರಲ್ ವಿಧಾನ ಸಭಾ ಕ್ಷೇತ್ರಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ (Jagadeesh shetter) ಅವರು ಬುಧವಾರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.
ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರು, ಹಿರಿಯ ನಾಯಕರಾದ ಎಂ.ಬಿ ಪಾಟೀಲ, ಮಾಜಿ ಸಚಿವ ಆರ್.ವಿ ದೇಶಪಾಂಡೆ, ಶೆಟ್ಟರ ಅವರ ಬೀಗರಾದ ಗಣೇಶ ಶಾಮನೂರ, ಶೆಟ್ಟರ ಅವರ ಪತ್ನಿ ಶಿಲ್ಪಾ ಶೆಟ್ಡರ, ಮಾಜಿ ಸಚಿವ ಎ.ಎಂ
ಹಿಂಡಸಗೇರಿ, ಶಾಸಕ ಪ್ರಸಾದ್ ಅಬ್ಬಯ್ಯ, ಶೆಟ್ಟರ ಅವರ ಆಪ್ತರಾದ ಮಲ್ಲಿಕಾರ್ಜುನ ಸಾಹುಕಾರ ನಾಮಪತ್ರ ಸಲ್ಲಿಸುವ ವೇಳೆ ಶೆಟ್ಟರ ಅವರೊಂದಿಗಿದ್ದರು
ಪಾವಗಡದಲ್ಲಿ ನಾನೇ ಅಭ್ಯರ್ಥಿ: ಡಿಕೆಶಿ
ಪಾವಗಡ :ಈ ಭಾಗದ ಸೋಲಾರ್ ನಿರ್ಮಾಣ ಮಾಡಿ ಇಡೀ ಪ್ರಪಂಚ ತಿರುಗಿ ನೋಡುವಂತೆ ಮಾಡಿದ ನನಗೆ ಈ ಋಣ ತೀರಿಸಬೇಕಾದರೆ ಈ ಭಾಗದ ಎಚ್ ವಿ ವೆಂಕಟೇಶ್ ನಾಮಪತ್ರ ಸಲ್ಲಿಕೆ ವೇಳೆ ಆಶೀರ್ವಾದ ಮಾಡಲು ಹರಿದು ಬಂದ ಜನಸಾಗರವೇ 2023ರ ಚುನಾವಣೆಯ ಕಾಂಗ್ರೆಸ್ ಪಕ್ಷ ಗೆಲುವಿಗೆ ನಿಮ್ಮ ಮತವನ್ನು ಹಾಕಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕೇಳಿದರು.
ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಹೆಚ್ ವಿ ವೆಂಕಟೇಶ್ ಅವರು ಪಟ್ಟಣದಲ್ಲಿ ಬೃಹತ್ ಶಕ್ತಿ ಪ್ರದರ್ಶನದ ಮೂಲಕ ಸಾವಿರಾರು ಕಾರ್ಯಕರ್ತ ಬೆಂಬಲಿಗರ ಸಮ್ಮುಖದಲ್ಲಿ ಮಂಗಳವಾರ ನಾಮಪತ್ರ ಸಲ್ಲಿಸಿದ ನಂತರ ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಅವರು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು
ನಿಮ್ಮ ಮಗ ನಾನೊಬ್ಬನಿದ್ದೇನೆ ನಾನು ಸಮಾಜದ ರೈತ ಮಗ ಇಲ್ಲಿ ಎಚ್‌ವಿ ವೆಂಕಟೇಶ್ ಅಭ್ಯರ್ಥಿಯಲ್ಲ ನಾನು ಡಿಕೆ ಶಿವಕುಮಾರ್ ಎಂದು ಮನವರಿಕೆ ಮಾಡಿಕೊಂಡು ಮತ ನೀಡಿ ಎಂದು ಪಾವಗಡದ ಮನೆ ಮಹಾಜನತೆಗೆ ಕೇಳಿಕೊಂಡರು.
ಕಾಂಗ್ರೆಸ್ ಪಕ್ಷ ಮತ ನೀಡಿ ಅಧಿಕಾರಕ್ಕೆ ಬಂದ ತಕ್ಷಣವೇ ತಾಲೂಕಿನ ಜನತೆಗೆ 24 ಗಂಟೆ ಉಚಿತ ವಿದ್ಯುತ್, ಪ್ರತಿಯೊಬ್ಬ ವ್ಯಕ್ತಿಗೆ 10 ಕೆಜಿ ಅಕ್ಕಿ, ಪ್ರತಿಯೊಂದು ಮನೆಯ ಕುಟುಂಬದ ಮಹಿಳೆಯ ಯಜಮಾನಿಗೆ 2,000 ರೂ ತಮ್ಮ ಖಾತೆಗೆ ಸರ್ಕಾರದಿಂದ ನೇರವಾಗಿ ಜಮಾ ಮಾಡಲಾಗುವುದೆಂದು ಕಾಂಗ್ರೆಸ್ ಪ್ರಣಾಳಿಕೆಯ ಯೋಜನೆಗಳನ್ನು ತಿಳಿಸಿದರು.
ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರು ಹಾಗೂ ಲಕ್ಷ್ಮಣ್ ಸೌದಿ ಸೇರಿದಂತೆ ಹಲವಾರು ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಅನೇಕ ನಾಯಕರುಗಳು ತಮ್ಮ ಕಾಂಗ್ರೆಸ್ ಪಕ್ಷಕ್ಕೆ ಸೇರಿರುವುದರಿಂದ ನಮ್ಮ ಕಾಂಗ್ರೆಸ್ ಪಕ್ಷಕ್ಕೆ ಆನೆ ಬಲ ಬಂದಂತಾಗಿದೆ ಹಾಗಾಗಿ ಮುಂದಿನ ದಿನಗಳಲ್ಲಿ ನಮ್ಮ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವುದು ಖಚಿತ ನೀವೆಲ್ಲರೂ ಮತ ನೀಡಿ ಸಹಕರಿಸಿ ಎಂದು ಹೇಳಿದರು.
ನೀವೆಲ್ಲರೂ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಬೆಂಬಲಿಸಿದರೆ ಅಧಿಕಾರಕ್ಕೆ ಬಂದ ತಕ್ಷಣ ನಿಮ್ಮ ಋಣವನ್ನು ನಾನು ತೀರಿಸುತ್ತೇನೆ ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಿಕೊಂಡರು.
ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಬಿ ಎನ್ ಚಂದ್ರಪ್ಪ . ಆಂಧ್ರಪ್ರದೇಶದ ಮಾಜಿ ಸಚಿವ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಎನ್ ರಘುವೀರ ರೆಡ್ಡಿ. ಮಾಜಿ ಸಚಿವ ಹಾಲಿ ಶಾಸಕ ವೆಂಕಟರಮಣಪ್ಪ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎಚ್ ವಿ ವೆಂಕಟೇಶ್ . ಪುರಸಭಾ ಮಾಜಿ ಅಧ್ಯಕ್ಷ ಮಾನಂ ವೆಂಕಟಸ್ವಾಮಿ. ಎ ಶಂಕರ್ ರೆಡ್ಡಿ. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೇಶ್ ಬಾಬು. ರಾಮಾಂಜಿನಪ್ಪ. ವಕೀಲ ಭಗವಂತಪ್ಪ. ವೆಂಕಟರಾಮರೆಡ್ಡಿ. ಸೇರಿದಂತೆ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.
ಮೆರವಣಿಗೆಯಲ್ಲಿ 30 ಸಾವಿರ ಕಾರ್ಯಕರ್ತರು ಭಾಗಿ
ಪಾವಗಡ ಪಟ್ಟಣದ ಟೋಲ್ ಗೇಟ್ ಬಳಿ ಇರುವ ಅಂಬೇಡ್ಕರ್ ವೃತ್ತದಿಂದ ಹಿಡಿದು ಶನಿ ಮಹಾತ್ಮ ವೃತ್ತದವರೆಗಿನ 30 ಸಾವಿರಕ್ಕೂ ಅಧಿಕ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಮತ್ತು ಅಭಿಮಾನಿಗಳು ಜೊತೆಗೂಡಿ ಎಚ್ ವಿ ವೆಂಕಟೇಶ್ ರವರ ನಾಮಪತ್ರ ಸಲ್ಲಿಸಿ ಬೃಹತ್ ಮೆರವಣಿಗೆ ಮೂಲಕ ಸುಡುವ ಬಿಸಿಲಿನಲ್ಲೂ ಸಾವಿರಾರು ಕಾರ್ಯಕರ್ತರು ಕುಣಿಯುತ್ತ ತಮ್ಮ ನಾಯಕನ ಪರವಾನಗಿ ಜೈಕಾರ ಹಾಕಿ ಕಾಂಗ್ರೆಸ್ ಪಕ್ಷದ ಪರವಾಗಿ ಭರ್ಜರಿ ಪ್ರಚಾರ ನಡೆಸಿದರು.
