Saturday, March 14, 2026
Google search engine
Home Blog Page 67

ಕಳ್ಳತನ ಮಾಡಲು ಬಂದ ಮನೆಯಲ್ಲೇ ಸತ್ತ ಕಳ್ಳ!?

0

ಕಳ್ಳತನ ಮಾಡಲು ಬಂದವ ಅದೇ ಮನೆಯಲ್ಲಿಯೇ ಸತ್ತಿರುವ ಘಟ‌ನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಇಂದಿರಾನಗರದ ಸಾಪ್ಟವೇರ್ ಎಂಜಿನಿಯರ್ ಒಬ್ಬರ ಮನೆಯಲ್ಲಿ ಈ ಅಚ್ಚರಿ ನಡೆದಿದೆ.

ಮನೆಯ ಒಡೆಯ ಮತ್ತು ಆತನ ಪತ್ನಿ ಇಬ್ಬರೂ ಯೂರೋಪ್ ಪ್ರವಾಸಕ್ಕೆ ತೆರಳಿದ್ದರು. ಪ್ರವಾಸದಿಂದ ಬಂದವರು ಮನೆಯ ಬಾಗಿಲು ತೆಗೆಯಲು ಹೋದರೆ ಬಂದಿಲ್ಲ. ಆನಂತರ ಬೀಗ ಹೊಡೆಯುವವರನ್ನು ಕರೆ ತಂದು ಬಾಗಿಲು ತೆಗೆದು ಒಳ ಹೋದರೆ ಅಡುಗೆ ಮನೆಯಲ್ಲಿ ಅಡುಗೆ ಮಾಡಿರುವುದು ಕಂಡು ಅಚ್ಚರಿಗೆ ಒಳಗಾಗಿದ್ದಾರೆ.

ಆನಂತರ ಮನೆಯಲ್ಲಿ ಯಾರೋ ಓಡಾಡಿರುವುದು ಕಂಡು ಬಂದಿದೆ. ಹಿಂಬಾಗಿಲು ಮುರಿದಿರುವುದು ನೋಡಿದ ನಂತರ ಕಳ್ಳತನ ಆಗಿರುವ ಅನುಮಾನ ಬಂದಿದೆ.

ಕೂಡಲೇ ಪೋಲಿಸರಿಗೆ ಕರೆ ಮಾಡಿ ತಿಳಿಸಿದ್ದಾರೆ.

ಮನೆಗೆ ನುಗ್ಗಿರುವ ಕಳ್ಳ, ಇಡೀ ದಿನ ಮನೆಯಲ್ಲಿಯೇ ಇದ್ದು, ಸ್ನಾನ ಕೂಡ ಮಾಡಿದ್ದಾನೆ. ಅಲ್ಲದೇ ಅವನೇ ತಂದಿದ್ದ ಹೊಸ ಬಟ್ಟೆಗಳನ್ನು ಹಾಕಿಕೊಂಡಿದ್ದಾನೆ.

ಪೊಲೀಸರು ಬಂದ ಬಂತರ ಮನೆಯಲ್ಲ ಹುಡುಕಿದಾಗ ದೇವರ ಮನೆಯಲ್ಲಿ ಕಳ್ಳನು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಮನೆಗೆ ನುಗ್ಗಿರುವ ಈತ ಕಳ್ಳತ‌ನ ಮಾಡುವ ಪ್ರಯತ್ನ ಮಾಡಿಲ್ಲ. ಯಾವುದೇ ವಸ್ತುವನ್ನು ಚೆಲ್ಲಾಪಿಲ್ಲಿ ಮಾಡಿಲ್ಲ, ಕದ್ದಿಲ್ಲ. ಮನೆಯಿಂದ ಆಚೆ ಹೋಗಲು ವಿಫುಲ ಅವಕಾಶ ಇದ್ದರೂ ದೇವರ ಮನೆಗೆ ಹೋಗಿ ಆತ್ಮಹತ್ಯೆ ಮಾಡಿಕೊಂಡಿವುದು ನಮಗೂ ವಿಸ್ಮಯ ತಂದಿದೆ ಎಂದು ಪೊಲೀಸರು ತಿಳಿಸಿದ್ದಾಗಿ ಡೆಕ್ಕನ್ ಹೆರಾಲ್ಡ್ ಪತ್ರಿಕೆ ವರದಿ ಮಾಡಿದೆ.

ಕಳ್ಳನನ್ನು ಅಸ್ಸಾಂ ರಾಜ್ಯದವನು ಎಂದು ಗುರುತಿಸಲಾಗಿದ್ದು, ಈ ಹಿಂದೆ ಮನೆಗಳ್ಳತ‌ನದ ಆರೋಪದಲ್ಲಿ ಬಂಧಿತ‌ನಾಗಿದ್ದ ಎಂದು ಪೋಲಿಸರು ತಿಳಿಸಿದ್ದಾರೆ.

ಗುಂಡು ಹಾರಿಸಿಕೊಂಡ ಲೇಡಿ ಸಬ್ ಇನ್ಸ್ ಪೆಕ್ಟರ್

0

Publicstory


ಮಹಿಳಾ ಸಬ್ ಇನ್ಸ್ ಪೆಕ್ಟರ್ ಒಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಜ್ಯೋತಿಬಾಯಿ (33) ಆತ್ಮಹತ್ಯೆಗೆ ಯತ್ನಿಸಿದವರು. ಇವರು ಮಂಗಳೂರಿನಲ್ಲಿ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯಲ್ಲಿ ಸಬ್ ಇನ್ಸ್ ಪೆಕ್ಟರ್ ಆಗಿದ್ದಾರೆ. ಇವರ ಪತಿ ಸಹ ಎಂ ಅರ್ ಪಿಎಲ್ ನಲ್ಲಿ ಭದ್ರತಾ ಅಧಿಕಾರಿಯಾಗಿದ್ದಾರೆ.

ಇವರಿಬ್ಬರು ಜೋದ್ ಪುರದವರು. ಅಮ್ಮನಿಗೆ ಬರೆದ ಪತ್ರದಲ್ಲಿ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ಯಾರು ಒತ್ತಡ ಹಾಕಿಲ್ಲ ಎಂದು ಬರೆದುಕೊಂಡಿದ್ದಾರೆ.

ಮಚ್ಚಿನಿಂದ‌ ಕೊಚ್ಚಿ ಪತ್ನಿ ಕೊಂದನು…

0

ಮಧುಗಿರಿ; ಗಂಡನ್ನೊಬ್ಬ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ಮಧುಗಿರಿ ತಾಲ್ಲೂಕಿನ ಮಿಡಿಗೇಶಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮಹಿಳೆಯನ್ನು ಬೇಡತ್ತೂರು ಗ್ರಾಮದ ಪುಷ್ಪಲತಾ ಎಂದು ಗುರುತಿಸಲಾಗಿದೆ. ಆರೋಪಿ ರಾಮಾಂಜನೇಯ ತಲೆ ಮರೆಸಿಕೊಂಡಿದ್ದಾನೆ.

ಇವರಿಬ್ಬರ ವಿವಾಹವಾಗಿ 13 ವರ್ಷವಾಗಿತ್ತು. ಪತ್ನಿಯ ಶೀಲ ಶಂಕಿಸಿ ಮಚ್ಚಿನಿಂದ ಕೊಚ್ಚಿ ಹತ್ಯೆ ಮಾಡಿದ್ದಾನೆ.

ಪುಷ್ಪಲತಾ , ರಾಮಾಂಜನೇಯ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು ಎನ್ನಲಾಗಿದೆ.

ಪರಮಾನಂದವೇ ಸಂಸ್ಕಾರದ‌ ಗುರಿಯಾಗಿರಲಿ

ತುರುವೇಕೆರೆ; ಒಳ್ಳೆಯ ಕೆಲಸಗಳ ಮೂಲಕ ಪರಮಾನಂದ ಕಡೆಗೆ ಹೋಗುವುದೇ ಸಂಸ್ಕಾರ. ಸಂಸ್ಕಾರ ನಮ್ಮ ವ್ಯಕ್ತಿತ್ವದ ದೋಷ ನಿವಾರಣೆ ಮಾಡಿ ಗುಣದಾನ ದೊಂದಿಗೆ ಶಕ್ತಿವರ್ಧನೆ ಮಾಡುತ್ತದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಹಾಗೂ ಚಿಂತಕ ಡಾ. ಸಂತೋಷ್ ಹಾನಗಲ್ ತಿಳಿಸಿದರು.

ಪಟ್ಟಣದ ಚಿದಂಬರೇಶ್ವರ ಗ್ರಂಥಾಲಯದಲ್ಲಿ ಶತವಧಾನಿ ಆರ್. ಗಣೇಶ್ ಅವರು ರಚಿಸಿದ ‘ಸಂಸ್ಕಾರಗಳು’ ಕೃತಿಯ ವಿಶ್ಲೇಷಣೆ ಮಾಡಿ ಅವರು ಮಾತನಾಡಿದರು.

ಸಂಸ್ಕಾರದಿಂದ ಸಮಾಜದ ಸದಸ್ಯರು ಸಂಘಟಿತರಾಗುತ್ತಾರೆ. ಹೃದಯದ ಶ್ರದ್ಧೆ ಮತ್ತು ವಿಶ್ವಾಸ ಬಲಿಯುತ್ತದೆ. ಕಲೆ, ಸಾಹಿತ್ಯದ ಸಂವೇದನೆ ಅರಳು ತ್ತದೆ.ವೈವಿಧ್ಯಮಯ ಆಚರಣೆ ಗಳನ್ನು ಸಮಾನ ದೃಷ್ಟಿಯಿಂದ ನೋಡುವ ಮೂಲಕ ಪ್ರಜ್ಞಾವಂತಿಕೆ ಬೆಳೆಯುತ್ತದೆ.ಸಂಸ್ಕಾರವುಳ್ಳ ವ್ಯಕ್ತಿಗಳು ಒಂದು ಸುಸಂಸ್ಕೃತ ಸಮುದಾಯವನ್ನು ನಿರ್ಮಿಸುತ್ತಾರೆ ಎಂದರು.

ಕೃತಿಯಲ್ಲಿನ ಹಲವು ಸಂಕೀರ್ಣ ವಿಷಯಗಳನ್ನು ಅರ್ಥೈಸಿದ ಅವರು ವರ್ಣ ವ್ಯವಸ್ಥೆ ಎಂದರೆ ಚರ್ಮದ ಬಣ್ಣ, ಕಸುಬಿನ ಮೂಲಕ ಮನುಷ್ಯನನ್ನು ಪ್ರತ್ಯೇಕಿಸುವುದಲ್ಲ. ಸ್ವಧರ್ಮ ಗುರುತಿಸಿಕೊಂಡು ವ್ಯಕ್ತಿತ್ವ ಗಟ್ಟಿಮಾಡಿಕೊಳ್ಳುವುದೇ ವರ್ಣ ವ್ಯವಸ್ಥೆ ಎನಿಸಿಕೊಳ್ಳುತ್ತದೆ. ಅಂತೆಯೇ ಆತ್ಮಗುಣಗಳಿಗೂ, ಮಾನವ ಮೌಲ್ಯಗಳಿಗೂ ನೇರ ಸಂಬಂಧವಿಲ್ಲ. ಅದು ಮತಕೋಲಾಹಲ ಎಂದು ಆಕ್ಷೇಪಿಸಲ್ಪಟ್ಟಿದೆ ಎಂದು ಹಲವು ಧರ್ಮಸೂಕ್ಷö್ಮ ಸಂಗತಿಗಳನ್ನು ವಿವರಿಸಿದರು.

ಶ್ರಿ ಸಂತೋಷ್ ಹಾನಗಲ್ ಅವರಿಗೆ ಗ್ರಂಥಾಲಯದ ವತಿಯಿಂದ ಹಾಗೂ ವಿವಿಧ ನಾಗರಿಕ ಸಂಘ, ಸಂಸ್ಥೆಗಳ ವತಿಯಿಂದ ಗೌರವ ಸಮರ್ಪಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಡಾ.ನಾಗರಾಜ್, ಸಂಸ್ಕಾರ ಭಾರತೀ ತಾಲ್ಲೂಕು ಘಟಕದ ಅಧ್ಯಕ್ಷೆ ಉಷಾ ಶ್ರೀನಿವಾಸ್, ಸುರಭಿ ಸಂಗಮದ ಟ್ರಸ್ಟೀ ನಾಗರತ್ನಮ್ಮ, ಶಾಂತಾ. ಎನ್.ಸ್ವಾಮಿ, ಆನಂದರಾಜ್, ಮಂಜುನಾಥ್, ರೊಟೇರಿಯನ್‌ಗಳಾದ ಟಿ.ಎಸ್.ಪ್ರಕಾಶ್‌ಗುಪ್ತಾ, ಅರಳೀಕರೆ ಲೋಕೇಶ್, ಪ್ರಭುಸ್ವಾಮಿ, ಶಿವರಾಜ್, ಇನ್ನರ್‌ವೀಲ್ ಕ್ಲಬ್ ಅಧ್ಯಕ್ಷೆ ಗೀತಾ ಸುರೇಶ್, ಕಸಾಪ ಅಧ್ಯಕ್ಷ ಡಿ.ಪಿ.ರಾಜು, ಕುವೆಂಪು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ವೆಂಕಟೇಶ್, ಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.

ಸಂಸ್ಥಾಪಕ ಟಿ.ರಾಮಚಂದ್ರ ಸ್ವಾಗತಿಸಿದರು. ಕೃಷ್ಣಚೈತನ್ಯ ನಿರೂಪಿಸಿದರು.

ಮುಲಾಯಂ ಸಿಂಗ್ ಯಾದವ್ ಇನ್ನಿಲ್ಲ

ಸಮಾಜವಾದಿ ಪಕ್ಷದ ಹಿರಿಯ ಮುಖಂಡ,‌ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಇಂದು ನಿಧನರಾದರು.

82 ವರ್ಷ ವಯಸ್ಸಿನ ಅವರು ಕಳೆದ ಹದಿನೈದು ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳಕ್ಕೆ ನಿರ್ಧಾರ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಲು ನಿರ್ಧರಿಸಲಾಗಿದೆ‌. ನಾಳೆಯೇ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಶುಕ್ರವಾರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್ ಆಯೋಗದ ಶಿಫಾರಸಿನಂತೆ ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇಕಡ 15ರಿಂದ ಶೇ 17ಕ್ಕೆ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಶೇ 3ರಿಂದ ಶೇ 7ಕ್ಕೆ ಹೆಚ್ಚಿಸಲಾಗುವುದು ಎಂದರು.
ಈ ಸಮುದಾಯಗಳ ಅಭಿವೃದ್ಧಿಗೆ ನಾಗಮೋಹನ ದಾಸ್ ಆಯೋಗ ಹಾಗೂ ನ್ಯಾಯಮೂರ್ತಿ ಸುಭಾಷ್ ಅಡಿ ಸಮಿತಿಗಳ ಶಿಫಾರಸುಗಳನ್ನೂ ಒಪ್ಪಿಕೊಳ್ಳಲಾಗಿದೆ ಎಂದರು.

ಬಾರ್ ಸಿಬ್ಬಂದಿಯಿಂದ ಕೊಲೆ

0

ತುಮಕೂರು; ನಗರದ ಖಾಸಗಿ ಬಸ್ ನಿಲ್ದಾಣದ ಸಮೀಪ ಇರುವ ಎಸ್ ಎಸ್ ಬಾರ್ ಸಿಬ್ಬಂದಿ ಗ್ರಾಹಕನ್ನೊಬ್ಬನನ್ನು ಕೊಲೆ ಮಾಡಿರುವ ಘಟನೆ ನಡೆದಿದೆ.

ಕೊಲೆ ಘಟನೆ ಬೆಳಕಿಗೆ ಬಂದ ಕೆಲವೇ ಗಂಟೆಗಳಲ್ಲಿ ಐವರು ಕೊಲೆಗಾರರನ್ನು ಪೊಲೀಸರು ಬಂಧಿಸಿದ್ದಾರೆ.

ಬೆಳಿಗ್ಗೆ ಖಾಸಗಿ ಬಸ್ ನಿಲ್ದಾಣದಲ್ಲಿ ಮುಬಾರಕ್ ಎಂಬಾತನನ್ನು ಕೊಲೆ ಮಾಡಿ ಶವ ಎಸೆಯಲಾಗಿತ್ತು.

ಘಟನೆ ಬೆನ್ನು ಹತ್ತಿದ ಪೊಲೀಸರಿಗೆ ಬಾರ್ ಸಿಬ್ಬಂದಿ ಕೊಲೆ ಮಾಡಿರುವುದು ಗೊತ್ತಾಗಿದೆ.

ರಾತ್ರಿ, ಮುಬಾರಕ್ ಅವರು ಬಾರ್ ಗೆ ಕುಡಿಯಲು ಹೋಗಿದ್ದರು. ಆಗ ಸಿಬ್ಬಂದಿಯೊಂದಿಗೆ ಗಲಾಟೆ ಮಾಡಿದರು. ಮಾತಿಗೆ ಮಾತು ಬೆಳೆದು ಐದು ಜನರು ಸೇರಿ ಮುಬಾರಕ್ ಅವರಿಗೆ ಚೆನ್ನಾಗಿ ಥಳಿಸಿ ನಂತರ ಆಯುಧಗಳಿಂದ ತಿವಿದು ಕೊಲೆ ಮಾಡಿದ್ದಾರೆ.

ಕೊಲೆ ಮಾಡಿದ ಬಳಿಕ ಶವವನ್ನು ಬಸ್ ನಿಲ್ದಾಣದಲ್ಲಿ ಬಿಸಾಕಿದ್ದಾರೆ ಎಂಬುದು ತನಿಖೆ ವೇಳೆ ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತುಮಕೂರು ಬಸ್ ನಿಲ್ದಾಣದಲ್ಲಿ ಭೀಕರ ಕೊಲೆ

0

Tumakuru: ತುಮಕೂರು ಖಾಸಗಿ ಬಸ್ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬನನ್ನು ಭೀಕರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ.

ಕೊಲೆಯಾದವನನ್ನು ಮುಬಾರಕ್ ಎಂದು ಗುರುತಿಸಲಾಗಿದೆ.

ಈತ ತುಮಕೂರು‌ ನಗರದವನೇ ಆಗಿದ್ದು, ಗುಬ್ಬಿ ಗೇಟ್ ಬಳಿ ಹಮಾಲಿ ಕೆಲಸ ಮಾಡುತ್ತಿದ್ದನು.

ವೈಯಕ್ತಕ ಜಗಳ ಕೊಲೆಗೆ ಕಾರಣ ಎಂದು ಹೇಳಲಾಗುತ್ತಿದೆ.

ಬಸ್ ನಿಲ್ದಾಣಕ್ಕೆ ಬಂದ ಪ್ರಯಾಣಿಕರು ಕೊಲೆಯಾದ ಜಾಗದಲ್ಲಿ ಕುತೂಹಲದಿಂದ ನೆರೆದಿದ್ದರು.

ರಾಜ್ಯದಲ್ಲಿ ಬರಲಿವೆ 438 ʼನಮ್ಮ ಕ್ಲಿನಿಕ್‌ʼ:  ಸಚಿವ ಡಾ.ಕೆ.ಸುಧಾಕರ್‌

ಬೆಂಗಳೂರು: ರಾಜ್ಯದಲ್ಲಿ 438 ʼನಮ್ಮ ಕ್ಲಿನಿಕ್‌ʼಗಳನ್ನು ನವೆಂಬರ್‌ ಅಂತ್ಯ ಅಥವಾ ಡಿಸೆಂಬರ್‌ 15 ರ ವೇಳೆಗೆ ಕಾರ್ಯಾರಂಭಿಸಲಾ ಗುವುದು. ಬಿಬಿಎಂಪಿ ವ್ಯಾಪ್ತಿಯಲ್ಲಿ 243 ಕ್ಲಿನಿಕ್‌ಗಳು ಆರಂಭವಾಗಲಿವೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದರು.

ಬಿಬಿಎಂಪಿ ವ್ಯಾಪ್ತಿಯ ಮಹಾಲಕ್ಷ್ಮಿಲೇಔಟ್‌ನ ವಾರ್ಡ್‌-58 ರ ಪಂಚಮುಖಿ ದೇವಸ್ಥಾನದ ಸಮೀಪ ʼನಮ್ಮ ಕ್ಲಿನಿಕ್‌ ಮಾದರಿ ರೂಪಿಸಿದ್ದು, ಇದನ್ನು ಸಚಿವರು ವೀಕ್ಷಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಒಂದು ಕ್ಲಿನಿಕ್‌ನಲ್ಲಿ ವೈದ್ಯ, ನರ್ಸಿಂಗ್‌ ಸಿಬ್ಬಂದಿ, ಲ್ಯಾಬ್‌ ಟೆಕ್ನೀಶಿಯನ್‌ ಹುದ್ದೆಗಳಿರುತ್ತವೆ. ಬಿಬಿಎಂಪಿ ವ್ಯಾಪ್ತಿಯ ಕ್ಲಿನಿಕ್‌ಗಳಿಗೆ ವೈದ್ಯರ ನೇಮಕಕ್ಕೆ ಅಧಿಸೂಚನೆ ಹೊರಡಿಸಿದ್ದು, 160 ವೈದ್ಯರು ಈಗಾಗಲೇ ನೇಮಕ ಆಗಿದ್ದಾರೆ. ಉಳಿದ ಎಲ್ಲಾ ಸಿಬ್ಬಂದಿ ಹುದ್ದೆ ತುಂಬಿದೆ.

*ಬಾಕಿ ಉಳಿದ 83 ಕ್ಕೆ ಮತ್ತೆ ಅಧಿಸೂಚನೆ* ಹೊರಡಿಸಲಾಗಿದೆ. ಇನ್ನೂ ಹತ್ತು ದಿನಗಳೊಳಗೆ ಇದು ಕೂಡ ಆಗಲಿದೆ ಎಂದರು.

ಬಡತನ ರೇಖೆಗಿಂತ ಕೆಳಗಿರುವ ಜನರು, ಗುಡಿಸಲುಗಳಲ್ಲಿ ವಾಸಿಸುವ ಕಡು ಬಡವರಿಗಾಗಿ ಈ ಯೋಜನೆ ರೂಪಿಸಲಾಗಿದೆ. ಪ್ರಾಥಮಿಕ ಆರೋಗ್ಯ ಕೇಂದ್ರ ದಂತೆಯೇ ಇದು ಕಾರ್ಯ ನಿರ್ವಹಿಸಲಿದೆ.

*ಪ್ರತಿ ವಾರ್ಡ್‌ನಲ್ಲಿ ಒಂದು ಕ್ಲಿನಿಕ್‌ ಆರಂಭವಾಗುವುದರಿಂದ ಜನರಿಗೆ ಆರೋಗ್ಯ ಹಾಗೂ ಸರ್ಕಾರಿ ಆರೋಗ್ಯ ಕಾರ್ಯಕ್ರಮಗಳ* ಬಗ್ಗೆ ಅರಿವು ಹೆಚ್ಚಲಿದೆ ಎಂದರು.

ಮಾರ್ಗಸೂಚಿಯ ಪ್ರಕಾರ, ಗ್ರಾಮೀಣ ಪ್ರದೇಶಗಳಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಿವೆ. ಆದರೆ ನಗರ ಪ್ರದೇಶಗಳಲ್ಲಿ ಇದು ಕಡಿಮೆ ಇದೆ. ಆದ್ದರಿಂದಲೇ ಈ ಯೋಜನೆ ರೂಪಿಸಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ಕೇಂದ್ರ ಸರ್ಕಾರ ಸಂಪೂರ್ಣ ಆರ್ಥಿಕ ಸಹಕಾರ ನೀಡಿದೆ. ಹೆಚ್ಚು ಜನರು ಬಂದು ಆರೋಗ್ಯ ತಪಾಸಣೆ, ಚಿಕಿತ್ಸೆಯ ಸೇವೆ ಪಡೆಯಬೇಕು. *ಬಿಬಿಎಂಪಿಯಲ್ಲಿ ಈಗ 198 ವಾರ್ಡ್‌ಗಳಿವೆ. ಮುಂದೆ ವಾರ್ಡ್‌ಗಳ ಸಂಖ್ಯೆ ಹೆಚ್ಚಾಗಬಹುದು. ಇದಕ್ಕೆ ಪೂರಕವಾಗಿ ವಾರ್ಡ್‌ಗೆ ಒಂದರಂತೆ ಈಗಲೇ ಹೆಚ್ಚಿನ ಕ್ಲಿನಿಕ್‌ಗಳನ್ನು ಮಂಜೂರು* ಮಾಡಲಾಗಿದೆ ಎಂದು ತಿಳಿಸಿದರು.

ಸರ್ಕಾರಿ ಕಟ್ಟಡಗಳಲ್ಲಿ, ಬಾಡಿಗೆ ಕಟ್ಟಡಗಳಲ್ಲಿ 1,000-1,200 ಚದರ ಅಡಿ ವಿಸ್ತೀರ್ಣದ ಜಾಗದಲ್ಲಿ ಕ್ಲಿನಿಕ್‌ ರೂಪಿಸಲಾಗುತ್ತಿದೆ. ಪ್ರತಿ ವರ್ಷ ಸಿಬ್ಬಂದಿಗಾಗಿ 138 ಕೋಟಿ ರೂ. ವೆಚ್ಚವಾಗಲಿದೆ. ನಾನ್‌ ರಿಕರಿಂಗ್‌ 17.52 ಕೋಟಿ ರೂ. ಸೇರಿ ಒಟ್ಟು 155 ಕೋಟಿ ರೂ. ವೆಚ್ಚವಾಗಲಿದೆ. ಯೋಗ, ಪ್ರಾಣಾಯಾಮ, ಧ್ಯಾನ, ಆಹಾರ ಪದ್ಧತಿ ಮೊದಲಾದವುಗಳ ಕುರಿತು ಕ್ಲಿನಿಕ್‌ ಮೂಲಕ ಜಾಗೃತಿ ಮೂಡಿಸಲಾಗುವುದು ಎಂದರು.

*ನಾಳೆ ಸಭೆ*


ಕಳೆದ 16 ವರ್ಷದಿಂದ ಜಿವಿಕೆ ಸಂಸ್ಥೆ ಆಂಬ್ಯುಲೆನ್ಸ್‌ ಸೇವೆ ನೀಡುತ್ತಿದೆ. ಒಪ್ಪಂದದ ಪ್ರಕಾರ ಸಂಸ್ಥೆಯೇ ಸಿಬ್ಬಂದಿಗೆ ವೇತನ ನೀಡಬೇಕು. ಸರ್ಕಾರದಿಂದ ಹಣ ಪಾವತಿ ಮಾಡಲಾಗುತ್ತಿದೆ. ಸಿಬ್ಬಂದಿಗೆ ವೇತನ ನೀಡದಿದ್ದರೆ, ಸಂಸ್ಥೆಯವರು ಹಾಗೂ ಸಿಬ್ಬಂದಿ ಕಡೆಯವರನ್ನು ಕರೆಸಿ ನಾಳೆ ಸಭೆ ನಡೆಸಲಾಗುವುದು. ಈಗಾಗಲೇ ಅಧಿಕಾರಿಗಳು ಚರ್ಚೆ ಮಾಡಿದ್ದು, ಒಂದು ವಾರದಲ್ಲಿ ಸಮಸ್ಯೆ ಇತ್ಯರ್ಥಪಡಿಸಲಾಗುವುದು ಎಂದು ತಿಳಿಸಲಾಗಿದೆ. ಈ ಸಮಸ್ಯೆಯಿಂದ ಜನರಿಗೆ ತೊಂದರೆಯಾಗಬಾರದು ಎಂದು ಹೇಳಲಾಗಿದೆ ಎಂದರು.

ಆಂಬ್ಯುಲೆನ್ಸ್‌ ಟೆಂಡರ್‌ ಅಂತಿಮಗೊಳ್ಳುತ್ತಿದ್ದು, ಎರಡು ತಿಂಗಳೊಳಗೆ ಮುಗಿಯಲಿದೆ. ಬಳಿಕ ಸೇವೆ ನೀಡುವವರು ಯಾರೆಂದು ತೀರ್ಮಾನವಾಗಲಿದೆ. ಹಳೆಯ ಸಂಸ್ಥೆಯಿಂದ 2008 ರಲ್ಲಿ ಸೇವೆ ಆರಂಭಿಸಿತ್ತು. ಆದರೆ ಈ ಸಂಸ್ಥೆಯಿಂದ ನಿರೀಕ್ಷಿತ ಸೇವೆ ದೊರೆಯತ್ತಿಲ್ಲ. ಅತ್ಯುತ್ತಮವಾದ ಆಂಬ್ಯುಲೆನ್ಸ್‌ ಸೇವೆ ನೀಡಲೆಂದೇ ಸರ್ಕಾರ ಹೊಸ ಯೋಜನೆ ರೂಪಿಸಿದೆ ಎಂದರು.

ಬೈಕ್‌ ಆಂಬ್ಯುಲೆನ್ಸ್‌ ಸಂಬಂಧ ರಚಿಸಿದ ಸಮಿತಿಗಳು, ಇದರ ಅವಶ್ಯಕತೆ ಇಲ್ಲ ಎಂದು ಅಭಿಪ್ರಾಯಪಟ್ಟಿದ್ದವು. ಆದ್ದರಿಂದ ಹೊಸ ಟೆಂಡರ್‌ನಲ್ಲಿ ಬೈಕ್‌ ಆಂಬ್ಯುಲೆನ್ಸ್‌ ಪ್ರಸ್ತಾಪ ಇಲ್ಲ. ಆದರೂ ಅಂಗಾಂಗ ದಾನದ ಸಂದರ್ಭ, ರೋಗಿಗಳ ವರ್ಗಾವಣೆಗೆ ಏರ್‌ ಆಂಬ್ಯುಲೆನ್ಸ್‌ ಪರಿಚಯಿಸಲು ಸರ್ಕಾರ ಉದ್ದೇಶಿಸಿದೆ. ಇನ್ನೂ ರೂಪರೇಷೆ ಅಂತಿಮವಾಗಿಲ್ಲ ಎಂದು ಮಾಹಿತಿ ನೀಡಿದರು.

ಅಸಾಂಕ್ರಾಮಿಕ ರೋಗಗಳನ್ನು ಪತ್ತೆ ಮಾಡುವ ಅಭಿಯಾನ ಮಾಡಲಾಗುತ್ತಿದೆ. 30 ವರ್ಷ ಮೇಲ್ಪಟ್ಟ ಎಲ್ಲರೂ ಆರೋಗ್ಯ ತಪಾಸಣೆ ಮಾಡಿಸಲು ಜಾಗೃತಿ ಮೂಡಿಸಲಾಗುತ್ತಿದೆ. ಆಹಾರ ಸುರಕ್ಷತಾ ಅಧಿಕಾರಿಗಳೊಂದಿಗೆ ಚರ್ಚಿಸಿ, ಜಿಮ್‌ಗಳಲ್ಲಿ ಬಳಸುವ ಪೌಡರ್‌ ಬಗ್ಗೆ ಮಾಹಿತಿ ಕಲೆಹಾಕಲು ಸೂಚಿಸಲಾಗಿದೆ. ಆಹಾರದಲ್ಲಿ ಗುಣಮಟ್ಟ ಇಲ್ಲದಿದ್ದರೆ, ಅನುಮತಿ ಇಲ್ಲದಿದ್ದರೆ ಕ್ರಮ ವಹಿಸಲು ಸೂಚಿಸಲಾಗಿದೆ ಎಂದರು.

ಯಲಚಗೆರೆ: ವಿಜೃಂಭಣೆಯ ವಿಜಯ ದಶಮಿ

ಯಲಚಗೆರೆ (ನೆಲಮಂಗಲ): ಇಲ್ಲಿಗೆ ಸಮೀಪದ ಯಲಚಗೆರೆ ಗ್ರಾಮದಲ್ಲಿ ವಿಜಯದಶಮಿ ಹಬ್ಬ ವಿಜೃಂಭಣೆಯಿಂದ ನೆರವೇರಿತು.
ಹಬ್ಬದ ಪ್ರಯುಕ್ತ ಗ್ರಾಮದ ಆಂಜನೇಯ ಸ್ವಾಮಿ, ಲಕ್ಷ್ಮೀ ದೇವರಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು.

ದೇವರ ಮೆರವಣಿಗೆಯಲ್ಲಿ ಗ್ರಾಮಸ್ಥರು ಉತ್ಸಾಹದಿಂದ ಪಾಲ್ಗೊಂಡರು.

ನಂತರ ದೇವರನ್ನು ಗ್ರಾಮದ ಗುಡ್ಡಕ್ಕೆ ಕರೆ ತರಲಾಯಿತು.
ನಂತರ ಹರೀಶ್ ಗೌಡ ಅವರು ಬನ್ನಿಗೆ ಬಾಣ ತಾಗಿಸಿ ಬನ್ನಿ ಕಡಿದರು.

ಗ್ರಾಮದ ಅಭಿವೃದ್ಧಿ, ಗ್ರಾಮದ ಜನರ ಸಕಲವನ್ನು ಕೊಟ್ಟು ದಯಪಾಲಿಸು ದೇವರೆ. ಗ್ರಾಮದ ರಕ್ಷಣೆ ಮಾಡು ಎಂದು ಕೇಳಿಕೊಂಡರು.

ನಂತರ ದೇವರನ್ನು ಊರಿಗೆ ಕರೆ ತರಲಾಯಿತು.