Sunday, March 15, 2026
Google search engine
Home Blog Page 98

ಜನೋತ್ಸವ ದಿಢೀರ್ ರದ್ದು : ಸಿಎಂ ಹೇಳಿದ್ದೇನು?


ಮಂಗಳೂರಿನ ಬಿಜೆಪಿ ಕಾರ್ಯಕರ್ತ ಬೆಳ್ಳಾರೆ ಪ್ರವೀಣ್ ನೆಟ್ಟಾರು ಹತ್ಯೆಯಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಯೋಜಿಸಿದ್ದ ಜನೋತ್ಸವ ಕಾರ್ಯಕ್ರಮವನ್ನು  ರದ್ದುಗೊಳಿಸಿರುವುದಾಗಿ ಸಿಎಂ ಬೊಮ್ಮಾಯಿ ನಿನ್ನೆ ತಡರಾತ್ರಿ ಪ್ರಕಟಿಸಿದ್ದಾರೆ.

ಬೆಂಗಳೂರಿನ ಆರ್‌ಟಿ ನಗರದ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರವೀಣ್ ಹತ್ಯೆಯ ವಿಷಯ ತಿಳಿದಾಗ  ಬಹಳ ಸಂಕಟವಾಯಿತು. ಅಮಾಯಕನೊಬ್ಬನನ್ನು ಯೋಜನಾ ಬದ್ಧವಾಗಿ ಕೊಲೆ ಮಾಡಿರುವುದು ಅಮಾನವೀಯ. ಹರ್ಷನ ಕೊಲೆಯಾದ ಕೆಲವೇ ದಿನಗಳಲ್ಲಿ ಈ ಪ್ರಕರಣ ನಡೆದಿರುವುದು ನೋವುಂಟು ಮಾಡಿದೆ. ಜನೋತ್ಸವ ಕಾರ್ಯಕ್ರಮದ ಜೊತೆಗೆ ವಿಧಾನಸೌಧದಲ್ಲಿ ನಡೆಯುವ ಕಾರ್ಯಕ್ರಮವನ್ನೂ ರದ್ದು ಮಾಡಿದ್ದೇವೆ.
ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಕೇರಳ ಹೈಕೋರ್ಟ್ ಆದೇಶದಂತೆ ರಾಜ್ಯದಲ್ಲಿ ಆ್ಯಂಟಿ ಟೆರರಿಸ್ಟ್ ಕಮಾಂಡೋ ಪಡೆಯನ್ನು ರಚನೆ ಮಾಡಲಾಗುವುದು ಎಂದರು.

ನಮಗೆ ನನ್ನ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನ ಮತ್ತು ಪ್ರತಿಯೊಬ್ಬ ಪ್ರಜೆಯ ಜೀವ ಮುಖ್ಯ. ಅಮಾಯಕರ ಜೀವ ಪಡೆಯುವವರ ಪಾಪದ ಕೊಡ ತುಂಬಿದೆ. ಇಂಥವರನ್ನು ಮಟ್ಟ ಹಾಕುವ ಶಕ್ತಿ ನಮಗಿದ್ದು, ಕಠಿಣ ಕ್ರಮ ಕೈಗೊಳ್ಳುತ್ತೇವೆ.  ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ಪಿಎಫ್‌ಐ ಸಂಘಟನೆಯನ್ನು ಬ್ಯಾನ್ ಮಾಡುವ ಬಗ್ಗೆ ಎಲ್ಲಾ ರಾಜ್ಯಗಳ ಒಪ್ಪಿಗೆ ಪಡೆದು ತೀರ್ಮಾನಿಸಲಾಗುವುದು ಎಂದರು.

ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ಬಿಜೆಪಿ: ಶಾಸಕ ವೆಂಕಟರಮಣಪ್ಪ

ಪಾವಗಡ: ಬ್ರಹ್ಮಾಂಡ  ಭ್ರಷ್ಟಾಚಾರದಲ್ಲಿ  ತೊಡಗಿರುವ ಬಿಜೆಪಿಯ ೪೦% ಸರ್ಕಾರ ಹಾಗೂ ಕುಟುಂಬ ರಾಜಕಾರಣಕ್ಕೆ ಸೀಮಿತವಾಗಿರುವ ಜೆಡಿಎಸ್ ಪಕ್ಷಗಳಿಗೆ ೨೦೨೩ರ  ವಿಧಾನಸಭೆ ಚುನಾವಣೆ ನುಂಗಲಾರದ ತುತ್ತಾಗುತ್ತದೆ ಎಂದು ಶಾಸಕ ವೆಂಕಟರಮಣಪ್ಪ ತಿಳಿಸಿದರು.

ಪಟ್ಟಣದ ಎಸ್.ಎಸ್.ಕೆ ಸಮುದಾಯ ಭವನದಲ್ಲಿ ಬ್ಲಾಕ್ ಕಾಂಗ್ರೆಸ್ ಆಯೋಜಿಸಿದ್ದ ೭೫ನೇ ಸ್ವಾತಂತ್ರೋತ್ಸವ ಅಂಗವಾಗಿ ನಡೆಯುವ ಪಾದಯಾತ್ರೆ ಮತ್ತು ಸಿದ್ದರಾಮಯ್ಯನವರ ೭೫ ಹುಟ್ಟುಹಬ್ಬದ  ಸಂಭ್ರಮಾಚರಣೆಯ ಸಲುವಾಗಿ  ನಡೆದ  ಪೂರ್ವಭಾವಿ ಸಭೆಯಲ್ಲಿ  ಅವರು ಮಾತನಾಡಿದರು.

ಜನರು ಜನಪ್ರತಿನಿಧಿಗಳನ್ನು ಆರಿಸಿ ಕಳುಹಿಸಿರುವುದು ಒಳ್ಳೆಯ ಸರ್ಕಾರ ರಚನೆಯಾಗಿ ಜನಗಳಿಗೆ ಅನುಕೂಲ ಮಾಡುವರೆಂದು, ಆದರೆ ಜನರ ಆಶೀರ್ವಾದದಿಂದ  ರಚನೆಯಾದ ಬಿಜೆಪಿ ಸರ್ಕಾರವು  ಜನರಿಗೆ ಅನುಕೂಲ ಮಾಡುವುದಕ್ಕಿಂತ ಎಲ್ಲಾ ರೀತಿಯಲ್ಲಿ ತೆರಿಗೆಗಳನ್ನು ಹೆಚ್ಚಿಸಿ ಅನಾನುಕೂಲ ಮಾಡಿಕೊಟ್ಟಿದೆ. ಬಿಜೆಪಿ ಸರ್ಕಾರ ಅನೇಕ ಯೋಜನೆಗಳಿಗೆ  ಅನುದಾನ ನೀಡದೆ ಜನರನ್ನು ಶೋಷಣೆ ಮಾಡುತ್ತಿದೆ. ಮುಂಬರುವ ಚುನಾವಣೆಯಲ್ಲಿ ರಾಜ್ಯದ ಜನತೆ ಬಿಜೆಪಿಗೆ ತಕ್ಕ ಪಾಠ ಕಲಿಸುವರೆಂದು ದೂರಿದರು.
ಭದ್ರಾ  ಮೇಲ್ದಂಡೆ, ತುಂಗಭದ್ರ ನೀರಾವರಿ ಯೋಜನೆ, ವಿವಿಧ ಕಾಮಗಾರಿಗಳಿಗೂ ಅಗತ್ಯ ಅನುದಾನ ನೀಡುತ್ತಿಲ್ಲ. ತಾಲೂಕಿನಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಮುಂದಾದಾಗ ಸ್ಥಳೀಯ ಜೆಡಿಎಸ್ ಶಾಸಕರು ಅಭಿವೃದ್ಧಿ ಕಾಮಗಾರಿಗಳಿಗೆ ಅಡ್ಡಗಾಲು ಹಾಕುತ್ತಿದ್ದಾರೆ. ಈ ರೀತಿಯಾಗಿ ರಾಜಕೀಯ ದುರುದ್ದೇಶದಿಂದ ಕೆಲಸಗಳನ್ನು ಮಾಡಿದರೆ ತಾಲೂಕು ಅಭಿವೃದ್ಧಿ ಹೇಗಾಗುತ್ತದೆ ಎಂದರು.
ಚುನಾವಣೆ ವೇಳೆ ಕುಮಾರಸ್ವಾಮಿ ಸಾಲ ಮನ್ನಾ ಹೆಸರಿನಲ್ಲಿ ಸುಳ್ಳು ಹೇಳಿಕೊಂಡು ೨೦ ಸ್ಥಾನ ಪಡೆಯಲು ಹೆಣಗಾಡುತ್ತಾರೆ. ಕಾಂಗ್ರೆಸ್, ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡು ಅಧಿಕಾರ ಪಡೆಯುವ ಲೆಕ್ಕಾಚಾರ ತಂದೆ ಮಕ್ಕಳದ್ದು ಎಂದರು.

ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ಎಚ್.ವಿ.ವೆಂಕಟೇಶ್ ಮಾತನಾಡಿ, ೭೫ ನೇ ವರ್ಷದ ಸ್ವಾತಂತ್ರ ಮಹೋತ್ಸವದ ಅಂಗವಾಗಿ ಅರಸೀಕೆರೆ, ಲಿಂಗದಹಳ್ಳಿ, ವೈ.ಎನ್.ಹೊಸಕೋಟೆ, ವಿರುಪಸಮುದ್ರ, ತಿರುಮಣಿ ಸೇರಿದಂತೆ ವಿವಿದೆಡೆಯಿಂದ ಪಟ್ಟಣಕ್ಕೆ ಪಾದಯಾತ್ರೆ ನಡೆಸಲಾಗುವುದು. ಸಿದ್ದರಾಮೋತ್ಸವದಲ್ಲಿ ಜನತೆ ಭಾಗವಹಿಸಿ ಅವರಿಗೆ ಗೌರವ ಸೂಚಿಸಬೇಕು ಎಂದರು.

ಮಾಜಿ ಶಾಸಕ ಸೋಮ್ಲಾನಾಯ್ಕ, ಡಿಸಿಸಿ ಬ್ಯಾಂಕ್ ನಿರ್ದೇಶಕ ಟಿ.ನರಸಿಂಹಯ್ಯ, ವಕೀಲ ವೆಂಕಟರಾಮರೆಡ್ಡಿ, ಕೆಪಿಸಿಸಿ ಸದಸ್ಯ ಕೋಟೆ ಪ್ರಭಾಕರ್, ಸಣ್ಣರಾಮ ರೆಡ್ಡಿ, ತಿಪ್ಪೇಸ್ವಾಮಿ, ಫಜ್ಲುಸಾಬ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಪಾಪಣ್ಣ, ಮೈಲಪ್ಪ, ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯ ಕ್ಷ ಸುದೇಶ್ ಬಾಬು, ಪುರಸಭೆ ಅಧ್ಯಕ್ಷ ವೇಲುರಾಜು ಮತ್ತಿತರರು ಉಪಸ್ಥಿತರಿದ್ದರು.

0

ಪಾವಗಡ: ಬ್ರಹ್ಮಾಂಡ  ಭ್ರಷ್ಟಾಚಾರದಲ್ಲಿ  ತೊಡಗಿರುವ ಬಿಜೆಪಿಯ ೪೦% ಸರ್ಕಾರ ಹಾಗೂ ಕುಟುಂಬ ರಾಜಕಾರಣಕ್ಕೆ ಸೀಮಿತವಾಗಿರುವ ಪಕ್ಷಗಳಿಗೆ ೨೦೨೩ರ  ವಿಧಾನಸಭೆ ಚುನಾವಣೆ ನುಂಗಲಾರದ ತುತ್ತಾಗುತ್ತದೆ ಎಂದು ಶಾಸಕ ವೆಂಕಟರಮಣಪ್ಪ ತಿಳಿಸಿದರು.

ಪಟ್ಟಣದ ಎಸ್.ಎಸ್.ಕೆ ಸಮುದಾಯ ಭವನದಲ್ಲಿ ಬ್ಲಾಕ್ ಕಾಂಗ್ರೆಸ್ ಆಯೋಜಿಸಿದ್ದ ೭೫ನೇ ಸ್ವಾತಂತ್ರೋತ್ಸವ ಅಂಗವಾಗಿ ನಡೆಯುವ ಪಾದಯಾತ್ರೆ ಮತ್ತು ಸಿದ್ದರಾಮಯ್ಯನವರ ೭೫ ಹುಟ್ಟುಹಬ್ಬದ  ಸಂಭ್ರಮಾಚರಣೆಯ ಸಲುವಾಗಿ  ನಡೆದ  ಪೂರ್ವಭಾವಿ ಸಭೆಯಲ್ಲಿ  ಅವರು ಮಾತನಾಡಿದರು.

ಜನರು ಜನಪ್ರತಿನಿಧಿಗಳನ್ನು ಆರಿಸಿ ಕಳುಹಿಸಿರುವುದು ಒಳ್ಳೆಯ ಸರ್ಕಾರ ರಚನೆಯಾಗಿ ಜನಗಳಿಗೆ ಅನುಕೂಲ ಮಾಡುವರೆಂದು, ಆದರೆ ಜನರ ಆಶೀರ್ವಾದದಿಂದ  ರಚನೆಯಾದ ಬಿಜೆಪಿ ಸರ್ಕಾರವು  ಜನರಿಗೆ ಅನುಕೂಲ ಮಾಡುವುದಕ್ಕಿಂತ ಎಲ್ಲಾ ರೀತಿಯಲ್ಲಿ ತೆರಿಗೆಗಳನ್ನು ಹೆಚ್ಚಿಸಿ ಅನಾನುಕೂಲ ಮಾಡಿಕೊಟ್ಟಿದೆ. ಬಿಜೆಪಿ ಸರ್ಕಾರ ಅನೇಕ ಯೋಜನೆಗಳಿಗೆ  ಅನುದಾನ ನೀಡದೆ ಜನರನ್ನು ಶೋಷಣೆ ಮಾಡುತ್ತಿದೆ. ಮುಂಬರುವ ಚುನಾವಣೆಯಲ್ಲಿ ರಾಜ್ಯದ ಜನತೆ ಬಿಜೆಪಿಗೆ ತಕ್ಕ ಪಾಠ ಕಲಿಸುವರೆಂದು ದೂರಿದರು.
ಭದ್ರಾ  ಮೇಲ್ದಂಡೆ, ತುಂಗಭದ್ರ ನೀರಾವರಿ ಯೋಜನೆ, ವಿವಿಧ ಕಾಮಗಾರಿಗಳಿಗೂ ಅಗತ್ಯ ಅನುದಾನ ನೀಡುತ್ತಿಲ್ಲ. ತಾಲೂಕಿನಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಮುಂದಾದಾಗ ಸ್ಥಳೀಯ ಜೆಡಿಎಸ್ ಶಾಸಕರು ಅಭಿವೃದ್ಧಿ ಕಾಮಗಾರಿಗಳಿಗೆ ಅಡ್ಡಗಾಲು ಹಾಕುತ್ತಿದ್ದಾರೆ. ಈ ರೀತಿಯಾಗಿ ರಾಜಕೀಯ ದುರುದ್ದೇಶದಿಂದ ಕೆಲಸಗಳನ್ನು ಮಾಡಿದರೆ ತಾಲೂಕು ಅಭಿವೃದ್ಧಿ ಹೇಗಾಗುತ್ತದೆ ಎಂದರು.
ಚುನಾವಣೆ ವೇಳೆ ಕುಮಾರಸ್ವಾಮಿ ಸಾಲ ಮನ್ನಾ ಹೆಸರಿನಲ್ಲಿ ಸುಳ್ಳು ಹೇಳಿಕೊಂಡು ೨೦ ಸ್ಥಾನ ಪಡೆಯಲು ಹೆಣಗಾಡುತ್ತಾರೆ. ಕಾಂಗ್ರೆಸ್, ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡು ಅಧಿಕಾರ ಪಡೆಯುವ ಲೆಕ್ಕಾಚಾರ ತಂದೆ ಮಕ್ಕಳದ್ದು ಎಂದರು.

ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ಎಚ್.ವಿ.ವೆಂಕಟೇಶ್ ಮಾತನಾಡಿ, ೭೫ ನೇ ವರ್ಷದ ಸ್ವಾತಂತ್ರ ಮಹೋತ್ಸವದ ಅಂಗವಾಗಿ ಅರಸೀಕೆರೆ, ಲಿಂಗದಹಳ್ಳಿ, ವೈ.ಎನ್.ಹೊಸಕೋಟೆ, ವಿರುಪಸಮುದ್ರ, ತಿರುಮಣಿ ಸೇರಿದಂತೆ ವಿವಿದೆಡೆಯಿಂದ ಪಟ್ಟಣಕ್ಕೆ ಪಾದಯಾತ್ರೆ ನಡೆಸಲಾಗುವುದು. ಸಿದ್ದರಾಮೋತ್ಸವದಲ್ಲಿ ಜನತೆ ಭಾಗವಹಿಸಿ ಅವರಿಗೆ ಗೌರವ ಸೂಚಿಸಬೇಕು ಎಂದರು.

ಮಾಜಿ ಶಾಸಕ ಸೋಮ್ಲಾನಾಯ್ಕ, ಡಿಸಿಸಿ ಬ್ಯಾಂಕ್ ನಿರ್ದೇಶಕ ಟಿ.ನರಸಿಂಹಯ್ಯ, ವಕೀಲ ವೆಂಕಟರಾಮರೆಡ್ಡಿ, ಕೆಪಿಸಿಸಿ ಸದಸ್ಯ ಕೋಟೆ ಪ್ರಭಾಕರ್, ಸಣ್ಣರಾಮ ರೆಡ್ಡಿ, ತಿಪ್ಪೇಸ್ವಾಮಿ, ಫಜ್ಲುಸಾಬ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಪಾಪಣ್ಣ, ಮೈಲಪ್ಪ, ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯ ಕ್ಷ ಸುದೇಶ್ ಬಾಬು, ಪುರಸಭೆ ಅಧ್ಯಕ್ಷ ವೇಲುರಾಜು ಮತ್ತಿತರರು ಉಪಸ್ಥಿತರಿದ್ದರು.

ಅಹಿಂದ ಚೈತನ್ಯ ಸಿದ್ದರಾಮಯ್ಯ ಧನಿಯಾಕುಮಾರ್

ಗುಬ್ಬಿ: ಅನ್ನಭಾಗ್ಯ ಯೋಜನೆ ಮೂಲಕ ಬಡವರು, ದೀನ ದಲಿತರ ಪರ ನಿಂತ ಸಿದ್ದರಾಮಯ್ಯ ಅವರು ಓರ್ವ ವ್ಯಕ್ತಿ ಅಲ್ಲ, ಅಹಿಂದ ಶಕ್ತಿಯಾಗಿ ಹೊರಹೊಮ್ಮಿದ್ದಾರೆ. ಸರಳತೆಯ ಅವರ 75 ನೇ ಜನಮ ದಿನವನ್ನು ಅದ್ದೂರಿಯಾಗಿ ಸಿದ್ದರಾಮತ್ಸೋವ ಕಾರ್ಯಕ್ರಮವನ್ನು ಆಗಸ್ಟ್ ಮಾಹೆ 3 ನೇ ತಾರೀಖು ನಡೆಯಲಿದೆ ಎಂದು ಹಿಂದುಳಿದ ವರ್ಗಗಳ ಒಕ್ಕೂಟದ ಜಿಲ್ಲಾ ಸಂಚಾಲಕ ಧನಿಯಾಕುಮಾರ್ ತಿಳಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಪೂರ್ವಭಾವಿ ಸಭೆಯ ನಂತರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ದಾವಣಗೆರೆಯಲ್ಲಿ ಈಗಾಗಲೇ ಸಕಲ ಸಿದ್ಧತೆ ನಡೆದಿದೆ. ಸಿದ್ದರಾಮೋತ್ಸವ ಕಾರ್ಯಕ್ರಮ ಪಕ್ಷಾತೀತ ಹಾಗೂ ಜಾತ್ಯತೀತವಾಗಿ ನಡೆಯಲಿದೆ. ಇದಕ್ಕೆ ಸಲ್ಲದ ರಾಜಕಾರಣ ಲೇಪನ ಬೇಕಿಲ್ಲ ಎಂದರು.

ಹಿಂದುಳಿದ ವರ್ಗಗಳ ಕಲ್ಯಾಣಕ್ಕೆ ಈ ಹಿಂದೆ ದುಡಿದ ದೇವರಾಜು ಅರಸು ನಂತರ ಸಿದ್ದರಾಮಯ್ಯ ಅವರ ಶ್ರಮ ಎಲ್ಲರೂ ಒಪ್ಪಲೇಬೇಕು. ಪ್ರಜಾಪ್ರಭುತ್ವ ಯಥಾವತ್ತಾಗಿ ಜಾರಿಗೊಳಿಸಲು ಇಂತಹ ಧೀಮಂತ ನಾಯಕರ ಅಗತ್ಯವಿದೆ. ಈ ನಿಟ್ಟಿನಲ್ಲಿ ಸಿದ್ದರಾಮಯ್ಯ ಅವರ ಅಭಿಮಾನಿಗಳು ಹಾಗೂ ಎಲ್ಲಾ ಅಹಿಂದ ಮುಖಂಡರು ಒಗ್ಗೂಡಿ ಈ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ ಎಂದ ಅವರು ಸಿದ್ದರಾಮಯ್ಯ ಅವರ ಆಡಳಿತದ ಸುಧಾರಣೆ ಗಮನಿಸಿದರೆ ಪಕ್ಷಾತೀತ ಹೊಗಳಿಕೆಗೆ ಅರ್ಹರು ಎಂಬುದು ತಿಳಿದ ವಿಚಾರ. ಆಗಸ್ಟ್ 3 ರಂದು ಸುಮಾರು 8 ಲಕ್ಷ ಮಂದಿ ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದಾರೆ. ಈ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಪ್ರವಾಸ ನಡೆಸಿ ಅಹಿಂದ ಸಂಘಟನೆಗೆ ಒತ್ತು ನೀಡಿ ಈ ಕಾರ್ಯಕ್ರಮ ಯಶಸ್ವಿಗೆ ಸಹಕರಿಸಲು ಮನವಿ ಮಾಡಲಾಗುತ್ತಿದೆ ಎಂದರು.

ಗುಬ್ಬಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್.ಎಲ್.ನರಸಿಂಹಯ್ಯ ಮಾತನಾಡಿ ಒಂದು ಪಕ್ಷಕ್ಕೆ ಧೀಮಂತ ಎನಿಸಿಕೊಳ್ಳದೆ ಉತ್ತಮ ಅಹಿಂದ ನಾಯಕರಾಗಿ ರಾಜ್ಯದಲ್ಲಿ ಗುರುತಿಸಿಕೊಂಡು ಕೇಂದ್ರ ಮಟ್ಟದಲ್ಲೂ ವೈಶಿಷ್ಟ್ಯ ಛಾಪು ಮೂಡಿಸಿದ ಸಿದ್ದರಾಮಯ್ಯ ಅವರ ಜನ್ಮ ದಿನವನ್ನು ಅದ್ದೂರಿಯಾಗಿ ಆಚರಿಸಲು ಕಾಂಗ್ರೆಸ್ ಪಕ್ಷ ಸೇರಿದಂತೆ ಎಲ್ಲಾ ಅಹಿಂದ ಮುಖಂಡರು ಸಿದ್ಧರಿದ್ದಾರೆ. ಇಡೀ ಕಾರ್ಯಕ್ರಮ ಪಕ್ಷಾತೀತವಾಗಿ ಬಿಂಬಿತವಾಗಲಿದೆ. ಈ ಕಾರ್ಯಕ್ರಮಕ್ಕೆ ಜಿಲ್ಲೆಯಿಂದ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ತೆರಳಲಿದ್ದಾರೆ. ಹಾಗೆಯೇ ಗುಬ್ಬಿ ತಾಲ್ಲೂಕಿನಲ್ಲೂ ಅವರ ಅಭಿಮಾನಿಗಳು 40 ಕ್ಕೂಅಧಿಕ ಬಸ್ಸಿನಲ್ಲಿ ದಾವಣಗೆರೆಗೆ ಹೊರಡಲಿದ್ದಾರೆ. ಈ ಜೊತೆಗೆ ಅಭಿಮಾನಿಗಳು ಅವರ ಖಾಸಗಿ ವಾಹನದಲ್ಲೂ ಸಾವಿರಾರು ಸಂಖ್ಯೆಯಲ್ಲಿ ತೆರಳಿ ಕಾರ್ಯಕ್ರಮ ಯಶಸ್ವಿಗೊಳಿಸಲಿದ್ದಾರೆ ಎಂದರು.

ಕಾಂಗ್ರೆಸ್ ಮುಖಂಡ ಟಿ.ಆರ್. ಚಿಕ್ಕರಂಗಯ್ಯ ಮಾತನಾಡಿ ಕಾಂಗ್ರೆಸ್ ಪಕ್ಷ ಹೊರತಾಗಿ ಅಭಿಮಾನಿಗಳು ಸಿದ್ದರಾಮಯ್ಯ ಅವರಿಗೆ ಇದ್ದಾರೆ. ಹಾಗಾಗಿ ಶೋಷಿತರ ಸಿದ್ದರಾಮೋತ್ಸವಕ್ಕೆ ಹಿಂದುಳಿದ ವರ್ಗಗಳು, ಅಲ್ಪ ಸಂಖ್ಯಾತರು ಹಾಗೂ ದಲಿತರು ಲಕ್ಷಾಂತರ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾಂಗ್ರೆಸ್ ಪಕ್ಷ ಬಲವರ್ಧನೆಗೆ ಅವರ ಕೊಡುಗೆ ಅಪಾರ. ಈ ನಿಟ್ಟಿನಲ್ಲಿ ಅವರ ಜನ್ಮ ಉತ್ಸವ ಅವರ ಅಭಿಮಾನಿಗಳು ಆಚರಿಸುತ್ತಿರುವುದು ಶ್ಲಾಘನೀಯ ಎಂದರು.

ಕಾಂಗ್ರೆಸ್ ಮಹಿಳಾ ಘಟಕದ ಸೌಭಾಗ್ಯಮ್ಮ ಮಾತನಾಡಿ ಮಹಿಳಾ ಸಬಲೀಕರಣಕ್ಕೆ ಮೊದಲು ಚೈತನ್ಯ ತುಂಬಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮಹಿಳಾ ಶಕ್ತಿಯನ್ನು ದೇಶಕ್ಕೆ ಪರಿಚಯಿಸಿದರು. ಸ್ವಸಹಾಯ ಸಂಘಗಳ ಮೂಲಕ ಆರ್ಥಿಕ ಸಬಲತೆ ತುಂಬಿದ್ದ ಅವರು ಉತ್ತಮ ಆರ್ಥಿಕ ತಜ್ಞ. ಅವರ ಜನ್ಮ ದಿನ ನಿಜಕ್ಕೂ ಅರ್ಥಪೂರ್ಣವಾಗಲಿದೆ ಎಂದರು.

ಈ ಸಂದರ್ಭದಲ್ಲಿ ನಿಟ್ಟೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಿಂಬೆಕಟ್ಟೆ ಜಯಣ್ಣ, ಹಿಂದುಳಿದ ವರ್ಗಗಳ ಒಕ್ಕೂಟದ ಕೆಂಪರಾಜು, ಕುರುಬರ ಸಂಘದ ಎಸ್. ರಂಗನಾಥ್, ನಿಂಗರಾಜು, ಮುಖಂಡರಾದ ಸುರೇಶ್, ಪುರುಷೋತ್ತಮ್, ಶ್ರೀನಿವಾಸ್, ಭರತ್ ಗೌಡ, ಎಮ್ಮೆದೊಡ್ಡಿ ಜಯಣ್ಣ, ಜಿ.ವಿ.ಮಂಜುನಾಥ್, ಸಲಿಂಪಾಶ, ಜಿ.ಎಂ.ಶಿವಾನಂದ್, ತ್ಯಾಗಟೂರು ವಸಂತಮ್ಮ ಸೇರಿದಂತೆ ಇನ್ನಿತರ ಹಿಂದುಳಿದ ವರ್ಗಗಳ ಮುಖಂಡರು ಹಾಜರಿದ್ದರು.

ಕಾಂಗ್ರೆಸ್ ಅಸಂಘಟಿತ ಕಾರ್ಮಿಕರಿಂದ ಮೌನ ಪ್ರತಿಭಟನೆ

Publicstory/prajayoga

ತುಮಕೂರು: ಎಐಸಿಸಿ ಅಧ್ಯಕ್ಷರಾದ ಸೋನಿಯಾಗಾಂಧಿ ಅವರಿಗೆ ಇಡಿ ವಿಚಾರಣೆಗೆ ಹಾಜರಾಗಲು ನೋಟೀಸ್ ನೀಡಿರುವುದನ್ನು ಖಂಡಿಸಿ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ವಿಭಾಗದ ವತಿಯಿಂದ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಮೌನ ಪ್ರತಿಭಟನೆ ನಡೆಯಿತು.

ಈ ವೇಳೆ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ವಿಭಾಗದ ರಾಜ್ಯ ಉಪಾಧ್ಯಕ್ಷ ಡಾ.ಇಮ್ತಿಯಾಜ್ ಅಹಮ್ಮದ್ ಮಾತನಾಡಿ, ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆ ಹೀಗೆ ಹತ್ತು ಹಲವಾರು ಸಮಸ್ಯೆಗಳನ್ನು ಬೇರೆಡೆ ಸೆಳೆಯಲು ಕಾಂಗ್ರೆಸ್ ರಾಷ್ಟಿçÃಯ ಅಧ್ಯಕ್ಷರ ಮೇಲೆ ಇಡಿ ಅಸ್ತçವನ್ನು ಬಳಸುತ್ತಿದೆ ಎಂದು ಬಿಜೆಪಿ ವಿರುದ್ಧ ಹರಿಹಾಯ್ದರು.

ಬಿಜೆಪಿಯ ಜನವಿರೋಧಿ ಧೋರಣೆಗಳಿಂದ ಜನಸಾಮಾನ್ಯರ ಬದುಕು ಮೂರಾಬಟ್ಟೆಯಾಗಿದ್ದು, ಭಾರತ ಸ್ವಾತಂತ್ರö್ಯಕ್ಕೂ ಮುನ್ನ ಬ್ರಿಟಿಷರು ಉಪ್ಪಿಗೆ ಸುಂಕ ವಿಧಿಸಿದಂತೆ ಪ್ರಸ್ತುತ ಬಿಜೆಪಿ ಸರ್ಕಾರ ತಿನ್ನುವ ಅನ್ನಕ್ಕೂ ಸುಂಕವನ್ನು ವಿಧಿಸುತ್ತಿರುವುದು ಖಂಡನೀಯ ಎಂದರು.

ಈಗಾಗಲೇ ಪೆಟ್ರೋಲ್, ಗ್ಯಾಸ್, ಕಟ್ಟಡ ಸಾಮಗ್ರಿಗಳ ದರ ಏರಿಕೆಯಿಂದ ತತ್ತರಿಸುತ್ತಿರುವ ಜನರಿಗೆ ಗಾಯದ ಮೇಲೆ ಬರೆ ಎಳೆದಂತೆ ತಿನ್ನುವ ಅನ್ನ, ಹಾಲು, ಮೊಸರಿಗೆ ತೆರಿಗೆ ಹಾಕಿ ಅವರ ಜೀವನವನ್ನೇ ದುರ್ಬರ ಮಾಡುತ್ತಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.

ಕೇಂದ್ರದ ಬಿಜೆಪಿ ಸರ್ಕಾರ ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆಯನ್ನು ವಿಪರೀತ ಹೆಚ್ಚಿಸಿದೆ. ಇದರಿಂದಾಗಿ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಮೇಲೆ ಕಡಿಮೆಯಾಗಿದ್ದರೂ ಭಾರತೀಯರಿಗೆ ಅದರ ಲಾಭ ಸಿಗುತ್ತಿಲ್ಲ. ಅಡುಗೆ ಅನಿಲದ ಸಬ್ಸಿಡಿಯನ್ನು ರದ್ದುಪಡಿಸುವ ಮೂಲಕ ದೇಶದ ಬಡ ಹಾಗೂ ಮಧ್ಯಮ ವರ್ಗಕ್ಕೆ ಮೋದಿ ಸರ್ಕಾರವು ಮಹಾ ದ್ರೋಹ ಮಾಡಿದೆ ಎಂದು ಕಿಡಿಕಾರಿದರು.

ಸರ್ಕಾರಿ ಸ್ವಾಮ್ಯದ ಸ್ವತಂತ್ರ ತನಿಖಾ ಸಂಸ್ಥೆಯನ್ನು ಕೇಂದ್ರ ಬಿಜೆಪಿ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ, ವಿಚಾರಣೆ ನೆಪದಲ್ಲಿ ಸೋನಿಯಾ ಗಾಂಧಿ ಅವರನ್ನು ರಾಜಕೀಯವಾಗಿ ಕುಗ್ಗಿಸುವ ಹುನ್ನಾರ ನಡೆಸುತ್ತಿದೆ ಎಂದು ಆರೋಪಿಸಿದರು.

ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ವಿಭಾಗದ ಜಿಲ್ಲಾಧ್ಯಕ್ಷ ಮೊಹಮ್ಮದ್ ನಿಷಾತ್ ಮಾತನಾಡಿ, ತನಿಖೆ ಹೆಸರಲ್ಲಿ ದ್ವೇಷದ ರಾಜಕಾರಣ ಮಾಡುತ್ತಿರುವ ಬಿಜೆಪಿ ಸರ್ಕಾರದ ನಡೆ ಖಂಡನೀಯ. ಶತಮಾನಗಳಿಂದ ದೇಶಕ್ಕಾಗಿ ಹೋರಾಡಿದ ಕಾಂಗ್ರೆಸ್ ಮಟ್ಟ ಹಾಕಲು ಇಲ್ಲದ ಕುತಂತ್ರಗಳನ್ನು ಮಾಡಲಾಗುತ್ತಿದೆ ಎಂದು ಹೇಳಿದರು.

ಪ್ರತಿಭಟನೆಯಲ್ಲಿ ಬ್ಲಾಕ್ ಅಧ್ಯಕ್ಷ ಅಬ್ದುಲ್ ಬಷೀರ್, ಶೇಖ್ ಇಸ್ಮಾಯಿಲ್, ತಿಲಕ್ ಶಿವಕುಮಾರ್, ವಸೀಂ ಜಿಬ್ರಾನ್, ಸಿರಾಜ್ ಸೇರಿದಂತೆ ಇನ್ನಿತರೆ ಅಸಂಘಟಿತ ಕಾರ್ಮಿಕ ವಿಭಾಗದ ಪದಾಧಿಕಾರಿಗಳು ಭಾಗವಹಿಸಿದ್ದರು.

ತುರುವೇಕೆರೆ ಬಿಜೆಪಿಗೆ ಜೈ ಎಂದ ಜೆಡಿಎಸ್ ನವರು

Publicstory


ತುರುವೇಕೆರೆ : ತಾಲೂಕಿನ ಆಯರಹಳ್ಳಿ ಗ್ರಾಮದ ಮುಖಂಡರುಗಳು ಜೆ.ಡಿ.ಎಸ್. ಹಾಗೂ ಕಾಂಗ್ರೇಸ್ ಪಕ್ಷ ತೊರೆದು ಶಾಸಕ ಮಸಾಲಜಯರಾಮ್ ಸಮ್ಮುಖದಲ್ಲಿ ಬಿ.ಜೆ.ಪಿ. ಸೇರ್ಪಡೆಗೊಂಡರು.

ಕಾAಗ್ರೇಸ್ ಹಾಗೂ ಜೆ.ಡಿ.ಎಸ್. ಪಕ್ಷಗಳಲ್ಲಿ ಗುರತಿಸಿಕೊಂಡಿದ್ದ ಮುಖಂಡರುಗಳನ್ನು ಶಾಸಕ ಮಸಾಲಜಯರಾಮ್ ಪಕ್ಷಕ್ಕೆ ಆತ್ಮೀಯವಾಗಿ ಬರ ಮಾಡಿಕೊಂಡು ಮಾತನಾಡಿದ ಅವರು, ಭಾರತೀಯ ಜನತಾ ಪಕ್ಷದ ಸಿದ್ಧಾಂತ ಹಾಗೂ ಕ್ಷೇತ್ರ ವ್ಯಾಪ್ತಿಯಲ್ಲಿನ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಇತರೆ ಪಕ್ಷಗಳ ಮುಖಂಡರುಗಳು ನಮ್ಮ ಪಕ್ಷವನ್ನು. ಸೇರ್ಪಡೆಗೊಳ್ಳುತ್ತಿರುವುದು ಸಂತಸದ ವಿಚಾರ ಎಂದರು.

ಕೆಲ ವರ್ಷಗಳಿಂದ ಕೇವಲ ಮತಬ್ಯಾಂಕ್ ರೀತಿಯಲ್ಲಿ ಅನೇಕ ಗ್ರಾಮದ ಜನತೆಯನ್ನು ಬಳಸಿಕೊಂಡು ಅಭಿವೃದ್ಧಿಯನ್ನು ಮಾಡಿರಲಿಲ್ಲ. ನಾನು ಶಾಸಕನಾದ ನಂತರ ಅಭಿವೃದ್ಧಿ ವಂಚಿತ ಗ್ರಾಮಗಳಲ್ಲಿ ಅಗತ್ಯ ಕಾಮಗಾರಿಗಳಿಗೆ ಚಾಲನೆ ದೊರಕಿಸಿದ್ದೇನೆ. ಪಕ್ಷವನ್ನು ಮತ್ತಷ್ಟು ಸದೃಢಗೊಳಿಸಲು ಶ್ರಮಿಸುವಂತೆ ಮನವಿ ಮಾಡಿದ ಅವರು ಕ್ಷೇತ್ರದ ಜನತೆಯ ಮತದಾರರ ಆಶೋತ್ತರಗಳಿಗೆ ಧ್ವನಿಯಾಗುವೆ ಎಂದರು.

ಆಯರಹಳ್ಳಿ ಗ್ರಾಮದ ಜೆ,ಡಿ,ಎಸ್. ಬೆಂಬಲಿತ ಸದಸ್ಯ ಸಿದ್ದೇಗೌಡ, ಕಾಂಗ್ರೇಸ್ ಪಕ್ಷ ಯತೀಶ್, ಗಿರೀಶ್, ಡಿಪೋ ಮ್ಯಾನೇಜರ್ ಪುಟ್ಟಸ್ವಾಮಿಗೌಡ, ಕಿರಣ್, ರೇವಣ್ಣ, ತಿಲಕ್ , ಗೋಪಿ ಮತ್ತಿತರರು ಬಿ.ಜೆ.ಪಿ. ಪಕ್ಷ ಸೇರಿದ ಪ್ರಮುಖರು.

ಈ ಸಂದರ್ಭದಲ್ಲಿ ತಾಲೂಕು ಬಿ.ಜೆ.ಪಿ. ಅಧ್ಯಕ್ಷ ಮೃತ್ಯಂಜಯ, ಗ್ರಾ.ಪಂ. ಅಧ್ಯಕ್ಷ ನಾಗರಾಜ್, ವಿ.ಎಸ್.ಎಸ್.ಎಮ್ . ಅಧ್ಯಕ್ಷ ಪಾಂಡು, ಗುರುಶಾಂತು, ಚನ್ನಕೇಶವ, ಗೌತಮ್, ಸೇರಿದಂತೆ ಅನೇಕ ಕಾರ್ಯಕರ್ತರುಗಳು ಹಾಜರಿದ್ದರು.

ಬುಕಾಪಟ್ಟಣದಲ್ಲಿ ಕ್ರೀಡಾ ರಂಗು ಮೂಡಿಸಿದ ಮಕ್ಕಳು

ಪಬ್ಲಿಕ್ ಸ್ಟೋರಿ


ಸಿರಾ: ಕ್ರೀಡಾಕೂಟಗಳಲ್ಲಿ ವಿದ್ಯಾರ್ಥಿಗಳು ಸ್ಪರ್ಧಾ ಮನೋಭಾವದಿಂದ ಪಾಲ್ಗೊಂಡು, ಸೋಲು ಮತ್ತು ಗೆಲುವನ್ನು ಸಮನಾಗಿ ಸ್ವೀಕರಿಸುವ ಮೂಲಕ ಕ್ರೀಡಾಕೂಟದ ಘನತೆಯನ್ನು ಎತ್ತಿ ಹಿಡಿದು, ಕ್ರೀಡಾ ಮನೋಭಾವ ಮೆರೆಯುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎಸ್.ಶಂಕರಯ್ಯ ವಿದ್ಯಾರ್ಥಿಗಳಿಗೆ ಕರೆನೀಡಿದರು.

ತಾಲ್ಲೂಕಿನ ಗಾಣದಹುಣಸೆ ಶಾಲೆಯಲ್ಲಿ ಸೋಮವಾರ ನಡೆದ ಬುಕ್ಕಾಪಟ್ಟಣ ಹೋಬಳಿ ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಅವರು, ಕ್ರೀಡೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ವಿದ್ಯಾರ್ಥಿಗಳು ಮಾನಸಿಕ ಮತ್ತು ದೈಹಿಕ ಆರೋಗ್ಯವನ್ನು ಸದೃಢವಾಗಿ ಇಟ್ಟುಕೊಳ್ಳಬೇಕು. ಪಠ್ಯದಷ್ಟೇ ಪ್ರಾಮುಖ್ಯತೆಯನ್ನು ಕ್ರೀಡೆಗಳಿಗೂ ನೀಡುವಂತೆ ಶಿಕ್ಷಕರು ಹಾಗೂ ಪೋಷಕರು ಚಿಂತಿಸಬೇಕೆಂದು ಅಭಿಪ್ರಾಯಪಟ್ಟರು.

ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಎನ್.ಕುಮಾರ್ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಕ್ರೀಡೆಗಳಿಗೆ ಹೆಚ್ಚಿನ ಪ್ರಾಧಾನ್ಯತೆ ನೀಡುವ ಮೂಲಕ ದೇಶದ ಪ್ರಗತಿಗೆ ಶ್ರಮಿಸಬೇಕು. ಆರೋಗ್ಯಕರವಾದ ದೇಹದಲ್ಲಿ ಆರೋಗ್ಯಕರವಾದ ಮನಸ್ಸು ಇರುತ್ತದೆ. ಆದ್ದರಿಂದ ಪೋಷಕರು ಮಕ್ಕಳನ್ನು ಆಟೋಟಗಳಲ್ಲಿ ಕಡ್ಡಾಯವಾಗಿ ಭಾಗವಹಿಸುವ ಅವಕಾಶ ಹಾಗೂ ಪ್ರೋತ್ಸಾಹ ನೀಡುವಂತೆ ಪೋಷಕರಿಗೆ ಮನವಿ ಮಾಡಿದರು.
ನೇರಲಗುಡ್ಡ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕವಿತಾ ಯೋಗೀಶ್ ಮಾತನಾಡಿ, ಎಲ್ಲಾ ಮಕ್ಕಳು ಕ್ರೀಡಾಕೂಟದಲ್ಲಿ ಭಾಗವಹಿಸುವುದು ಮುಖ್ಯ. ಫಲಿತಾಂಶ ಏನೇ ಬಂದರೂ ಕ್ರೀಡಾಮನೋಭಾವನೆಯಿಂದ ಸ್ವೀಕರಿಸಬೇಕು. ಉತ್ತಮವಾಗಿ ಆಟವಾಡಿ ಗ್ರಾಮಕ್ಕೆ ಹೆಸರು ತರಬೇಕೆಂದು ತಿಳಿಸಿದರು.

ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಎಚ್.ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ, ಇಲಾಖೆಯು ಪ್ರತಿವರ್ಷ ಮಕ್ಕಳಿಗಾಗಿ ನಡೆಸುತ್ತಿರುವ ಕ್ರೀಡಾಕೂಟದಲ್ಲಿ ಎಲ್ಲಾ ಮಕ್ಕಳು ಭಾಗವಹಿಸುವಂತೆ ಶಿಕ್ಷಕರು ಕ್ರಮವಹಿಸಿ, ಪಾಲ್ಗೊಳ್ಳಲು ಎಲ್ಲಾ ಅವಕಾಶಗಳನ್ನು ಕಲ್ಪಿಸಿಕೊಡಬೇಕು. ತೀರ್ಪುಗಾರರು ಪಾರದರ್ಶಕವಾಗಿ ಕ್ರೀಡಾ ನಿಯಮಾನುಸಾರ ಕರ್ತವ್ಯ ನಿರ್ವಹಿಸುವಂತೆ ಸೂಚಿಸಿದರು.
ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷೆ ಕೆ.ಜ್ಯೋತಿ ಮರಡಿ ರಂಗನಾಥ್, ಉಪಾಧ್ಯಕ್ಷ ಮಂಜುನಾಥ್, ಗ್ರಾಮ ಪಂಚಾಯಿತಿ ಸದಸ್ಯರಾದ ಜಯಲಕ್ಷ್ಮೀ, ಭಾಗ್ಯವತಿ, ಲತಮ್ಮ, ತಾವರೇನಾಯ್ಕ್, ಮುಖಂಡರಾದ ಕರಿಯಣ್ಣ, ಜಿ.ಎಲ್.ಶಿವಣ್ಣ, ತಿಪ್ಪೇಸ್ವಾಮಿ, ಶಿವರಾಮಣ್ಣ, ಸಣ್ಣಕರಿಯಪ್ಪ, ಈರಣ್ಣ, ರವಿಕುಮಾರ್, ಅಜ್ಜೇನಹಳ್ಳಿ ಹನುಮಂತಪ್ಪ, ಶಿಕ್ಷಣ ಸಂಯೋಜಕ ಎಂ.ಅಣ್ಣಯ್ಯ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಚ್.ಹನುಮಂತರಾಜು, ಕಾರ್ಯದರ್ಶಿ ಗೀತಾ, ನಿರ್ದೇಶಕರಾದ ಸುರೇಶ್, ಜಯಚಂದ್ರ, ಸರ್ಕಾರಿ ನೌಕರರ ಸಂಘದ ನಿರ್ದೇಶಕರಾದ ಟಿ.ಎನ್.ಓಂಕಾರೇಶ್ವರ್, ಆರ್.ದೇವರಾಜು, ನೇರಲಗುಡ್ಡ ಸಿ ಆರ್ ಪಿ ಎಸ್.ಜಯಣ್ಣ, ಗಾಣದಹುಣಸೆ ಶಾಲೆಯ ಮುಖ್ಯ ಶಿಕ್ಷಕ ಹಾಗೂ ಕ್ರೀಡಾಕೂಟದ ಸಂಚಾಲಕ ನರಸಿಂಹಮೂರ್ತಿ, ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ತಿಪ್ಪೇಸ್ವಾಮಿ, ಸಂಘದ ಎಲ್ಲಾ ಪದಾಧಿಕಾರಿಗಳು, ಹಿರಿಯ ವಿದ್ಯಾರ್ಥಿಗಳ ಸಂಘದ ಮುಖ್ಯ ಶಿಕ್ಷಕರಾದ ನಾಗೇಶ್, ವೆಂಕಟೇಶ್, ಸುವರ್ಣಮುಖಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಈರಣ್ಣ, ತಾಲ್ಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಮೂರುಕಣ್ಣಪ್ಪ ಸೇರಿದಂತೆ ನೇರಲಗುಡ್ಡ ಕ್ಲಸ್ಟರ್ ನ ಎಲ್ಲಾ ಶಿಕ್ಷಕರು, ಅತಿಥಿ ಶಿಕ್ಷಕರು , ಗ್ರಾಮಸ್ಥರು ಹಾಜರಿದ್ದರು.

ಒಗ್ಗೂಡಲು ಸಿದ್ದರಾಮಯ್ಯ ಅಮೃತಮಹೋತ್ಸವ; ಆರ್ ರಾಜೇಂದ್ರ

ತುಮಕೂರು: ಮುಂದಿನ ಆಗಸ್ಟ್ ೦೩ ರಂದು ದಾವಣಗೆರೆಯಲ್ಲಿ ನಡೆಯುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ೭೫ನೇ ಜನ್ಮದಿನದ ಅಮೃತಮಹೋತ್ಸವ ಕಾರ್ಯಕ್ರಮದಲ್ಲಿ ತುಮಕೂರು ಜಿಲ್ಲೆಯ ಹಿಂದುಳಿದ ಸಮುದಾಯಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿಟ್ಟಿನಲ್ಲಿ ಇಂದು ಕಾಳಿದಾಸ ವಿದ್ಯಾವರ್ಧಕ ಸಂಘದ ಕಚೇರಿಯಲ್ಲಿ ಎಂ.ಎಲ್.ಸಿ. ಆರ್.ರಾಜೇಂದ್ರ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ಪೂರ್ವಭಾವಿ ಸಭೆ ನಡೆಯಿತು.

ಪೂರ್ವಭಾವಿ ಸಭೆಯಲ್ಲಿ ಕುರುಬ, ಮಡಿವಾಳ, ಕುಂಬಾರ, ನೇಕಾರ, ಸವಿತಾ, ವಾಲ್ಮೀಕಿ, ಗೊಲ್ಲ ಸಮುದಾಯದ ಮುಖಂಡರು ಸೇರಿದಂತೆ ಓಬಿಸಿ ಸಮುದಾಯಕ್ಕೆ ಸೇರಿದ ಹಲವು ಮುಖಂಡರು ಭಾಗವಹಿಸಿ, ಜಿಲ್ಲೆಯಿಂದ ಹೆಚ್ಚು ಜನರನ್ನು ಕರೆದುಕೊಂಡು ಹೋಗುವ ನಿಟ್ಟಿನಲ್ಲಿ ಚರ್ಚೆ ನಡೆಸಲಾಯಿತು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಎಂ.ಎಲ್.ಸಿ. ಆರ್.ರಾಜೇಂದ್ರ ಮಾತನಾಡಿ, ಸಿದ್ದರಾಮಯ್ಯ ಅವರ ೭೫ನೇ ಹುಟ್ಟು ಹಬ್ಬದ ಹೆಸರಿನಲ್ಲಿ ಹರಿದು ಹಂಚಿ ಹೋಗಿರುವ ಓಬಿಸಿಗಳು ವಯುಕ್ತಿಕವಾಗಿ ಮತ್ತು ಸಮುದಾಯದ ಹಂತದಲ್ಲಿ ಒಗ್ಗೂಡಲು ವೇದಿಕೆಯಾಗಿದೆ. ಅವರು ಆಡಳಿತ ನಡೆಸಿದ ೨೦೧೩-೧೮ರವರೆಗಿನ ಕಾಲ ಹಿಂದುಳಿದ ವರ್ಗ, ದಲಿತರಿಗೆ ಸುವರ್ಣ ಕಾಲ, ಸಂವಿಧಾನ ಬದ್ದವಾಗಿ ಈ ಸಮುದಾಯಗಳಿಗೆ ದೊರೆಯಬೇಕಾದ ಎಲ್ಲಾ ಸವಲತ್ತುಗಳನ್ನು ಪಕ್ಷಭೇದ ಮರೆತು ನೀಡಿದ್ದಾರೆ. ಅವರ ಹಿತೈಷಿಗಳು ಮತ್ತು ಗೆಳೆಯರು ಮಾಡುತ್ತಿರುವ ೭೫ನೇ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲೆಯಿಂದ ಕನಿಷ್ಠ ೫೦ ಸಾವಿರ ಭಾಗವಹಿಸುವ ಮೂಲಕ ಜಿಲ್ಲೆಯಲ್ಲಿ ಹಿಂದುಳಿದ ವರ್ಗದವರ ಒಗ್ಗಟ್ಟಿನ ಆನಾವರಣ ಮಾಡಬೇಕಾಗಿದೆ ಎಂದರು.

ಇದಕ್ಕೆ ಬೇಕಾದ ಎಲ್ಲಾ ವ್ಯವಸ್ಥೆಯನ್ನು ಮಾಡಲು ನಾವು ಸಿದ್ದ. ಆಯಾಯ ಸಮುದಾಯಗಳು ತಮ್ಮ ಸಮುದಾಯದ ಬ್ಯಾನರ್ ಅಡಿಯಲ್ಲಿಯೇ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮೂಲಕ ನಾವೆಲ್ಲರೂ ಒಂದೇ ಎಂಬುದನ್ನು ಸಾರೋಣ .ಆ ಮೂಲಕ ಸಮಾವೇಶದ ಸ್ವಾಗತ ಸಮಿತಿಯ ಅಧ್ಯಕ್ಷರಾಗಿರುವ ಕೆ.ಎನ್.ರಾಜಣ್ಣ ಅವರಿಗೆ ಶಕ್ತಿ ತುಂಬೋಣ ಎಂದರು.

ಜಿಲ್ಲಾ ಹಿಂದುಳಿದ ಸಮುದಾಯಗಳ ಒಕ್ಕೂಟದ ಸಂಚಾಲಕ ಧನಿಯಕುಮಾರ್ ಮಾತನಾಡಿ, ದಿವಂಗತ ದೇವರಾಜ ಅರಸು ನಂತರ ಹಿಂದುಳಿದ ವರ್ಗಗಳ ಕುಂದುಕೊರತೆಗಳಿಗೆ ಸ್ಪಂದಿಸಿ ಕೆಲಸ ಮಾಡಿದ ಮುಖ್ಯಮಂತ್ರಿಗಳಿದ್ದರೆ ಅದು ಸಿದ್ದರಾಮಯ್ಯ ಮಾತ್ರ. ಹಾಗಾಗಿ ದಾವಣಗೆರೆಯಲ್ಲಿ ನಡೆಯುವ ಅವರ ೭೫ನೇ ಹುಟ್ಟು ಹಬ್ಬದಲ್ಲಿ ಜಿಲ್ಲೆಯಿಂದ ಹೆಚ್ಚು ಜನರು ಭಾಗವಹಿಸುವ ಮೂಲಕ ಒಗ್ಗಟ್ಟು ಪ್ರದರ್ಶಿಸಬೇಕಿದೆ. ಅರಸು ಅವರನ್ನು ಹೊರತು ಪಡಿಸಿದರೆ ಐದು ವರ್ಷಗಳ ಕಾಲ ಯಾವುದೇ ಕಪ್ಪು ಚುಕ್ಕೆ ಇಲ್ಲದೆ ಅಡಳಿತ ನಡೆಸಿದ ಮುಖ್ಯಮಂತ್ರಿ ಎಂಬ ಹೆಗ್ಗಳ್ಳಿಕೆ ಸಿದ್ದರಾಮಯ್ಯ ಅವರಿಗೆ ಸಲ್ಲುತ್ತದೆ. ಇದು ಎಲ್ಲಾ ಹಿಂದುಳಿದ ವರ್ಗದವರು ಹೆಮ್ಮೆ ಪಡುವ ವಿಚಾರ ಎಂದರು.

ಹಿAದುಳಿದ ವರ್ಗಗಳ ಮುಖಂಡ ಹೆಬ್ಬೂರು ಶ್ರೀನಿವಾಸಮೂರ್ತಿ ಮಾತನಾಡಿ, ಸಿದ್ದರಾಮಯ್ಯ ಅವರ ಹುಟ್ಟು ಹಬ್ಬದ ಕಾರ್ಯಕ್ರಮ ನಮ್ಮೆಲ್ಲರ ಮನೆಯ ಹಬ್ಬವಿದ್ದಂತೆ, ಹಾಗಾಗಿ ನಾವೆಲ್ಲರು ಸ್ವಯಂ ಪ್ರೇರಿತರಾಗಿ ಭಾಗವಹಿಸಬೇಕಾಗಿದೆ. ಒಂದು ವೇಳೆ ಭಾಗವಹಿಸಲು ಇಚ್ಚಿಸುವವರು ವಾಹನದ ವ್ಯವಸ್ಥೆ ಬೇಕಾದಲ್ಲಿ ಪ್ರವರ್ಗ ೧ರ ಮೀಸಲಾತಿ ಹೋರಾಟ ಸಮಿತಿಯ ಜಿಲ್ಲಾ ಕಾರ್ಯದರ್ಶಿ ರಾಜೇಶ್ ದೊಡ್ಮನೆ(ದೂ.೯೮೪೪೫೪೯೪೩೦) ಅವರಿಗೆ ಮಾಹಿತಿ ನೀಡಿದರೆ, ಅಗತ್ಯ ವ್ಯವಸ್ಥೆ ಮಾಡಿಕೊಡಲಾಗುವುದು ಎಂದು ತಿಳಿಸಿದರು.

ಹೆಬ್ಬೂರು ಚಿಕ್ಕಣ್ಣನಹಟ್ಟಿಯ ದೇವಾಲಯದ ಪ್ರಧಾನ ಆರ್ಚಕ ಪಾಪಣ್ಣ ಮಾತನಾಡಿ, ಹಿಂದುಳಿದ ಜನಾಂಗದವರು ನಾವೆಲ್ಲರೂ ಒಗ್ಗಟ್ಟಿನಿಂದ ಇದ್ದೇವೆ ಎಂದು ತೋರಿಸಿಕೊಳ್ಳಲು ಇದೊಂದು ಸುವರ್ಣ ಅವಕಾಶ. ಹಾಗಾಗಿ ಪ್ರತಿಯೊಬ್ಬರು ಸ್ವಯಂ ಪ್ರೇರಣೆಯಿಂದ ಈ ಕಾರ್ಯಕರ್ಮದಲ್ಲಿ ಪಾಲ್ಗೊಳ್ಳುವ ಮೂಲಕ ಸಿದ್ದರಾಮಯ್ಯ ಅವರ ಕೈ ಬಲಪಡಿಸುವ ಕೆಲಸ ಮಾಡೋಣ ಎಂದರು.

ಸಭೆಯಲ್ಲಿ ಮಡಿವಾಳ ಸಮಾಜದ ಶಾಂತಕುಮಾರ್, ಕುಂಬಾರ ಸಮಾಜದ ಉಪಾಧ್ಯಕ್ಷ ಗುರುಮೂರ್ತಿ, ವಾಲ್ಮೀಕಿ ಸಮುದಾಯದ ಪುರುಷೋತ್ತಮ್, ರಂಗನಾಥ್, ಕನ್ನಡ ಸ್ವಾಭಿಮಾನ ಸಂಘಟನೆಯ ರಂಗನಾಥ್, ಪ್ರವರ್ಗ ೧ರ ಮೀಸಲಾತಿ ಹೋರಾಟ ಸಮಿತಿಯ ರೇಣುಕಯ್ಯ, ಸುರೇಶ್, ರಾಜೇಶ್ ದೊಡ್ಡಮನೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ತುಮಕೂರು ಬ್ರೇಕಿಂಗ್.. ಸೇತುವೆಗೆ ಬಸ್ ಡಿಕ್ಕಿ; ತಪ್ಪಿದ ಭಾರೀ ಅನಾಹುತ

0

Publicstory


ಶಿರಾ: ನಗರದಿಂದ ಪಟ್ಟನಾಯಕನಹಳ್ಳಿ ಕಡೆಗೆ 40 ಹೆಚ್ಚು ಪ್ರಯಾಣಿಕರನ್ನ ಹೊತ್ತು ಸಾಗುತ್ತಿದ್ದ ಕೆಎಸ್ಆರ್‌ಟಿಸಿ ಬಸ್‌ನ ಆಕ್ಸೆಲ್ ಬ್ಲೇಡ್ ಕಟ್ಟಾಗಿ ಸೇತುವೆಗೆ ಡಿಕ್ಕಿ ಹೊಡೆದ ಘಟನೆ ಕಲ್ಲುಕೋಟೆ ಬಳಿ ಇಂದು ನಡೆದಿದೆ.

ಚಾಲಕನ ಸಮಯ ಪ್ರಜ್ಞೆಯಿಂದ
ಕೂದಲೆಳೆ ಅಂತರದಲ್ಲಿ ಭಾರೀ ಅನಾಹುತ ತಪ್ಪಿದೆ. ಸೇತುವೆಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಬಸ್ ಸ್ವಲ್ಪ ಮುಂದೆ ಸಾಗಿದ್ರೆ ಸುಮಾರು 20 ಅಡಿ ಆಳದ ಗುಂಡಿಯೊಳಕ್ಕೆ ಬೀಳುತ್ತಿತ್ತು. ಅದೃಷ್ಟವಶಾತ್ ಸೇತುವೆಗೆ ಡಿಕ್ಕಿ ಹೊಡೆದು ಬಸ್ ನಿಂತುಕೊಂಡಿದೆ.
ಗಾಯಾಳುಗಳನ್ನ ಶಿರಾ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಸ್ಥಳಕ್ಕೆ ಶಿರಾ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

ಭೂಮಿ ಯೋಜನೆ: ಇತ್ಯರ್ಥಕ್ಕೆ ಜಿಲ್ಲಾಧಿಕಾರಿ ಸೂಚನೆ

Publicstort


ತುಮಕೂರು: ಗ್ರಾಮೀಣ ಮತ್ತು ನಗರ ಪ್ರದೇಶಗಳ ಅಂಗನವಾಡಿ ಕೇಂದ್ರಗಳಿಗೆ ನಿವೇಶನ ಒದಗಿಸಬೇಕಾಗಿದ್ದು, ಕನಿಷ್ಠ ೨೦x೩೦ ಅಳತೆಯ ನಿವೇಶನಗಳನ್ನು ಪಾಲಿಕೆ, ಸ್ಥಳೀಯ ಸಂಸ್ಥೆಗಳ ಆಯುಕ್ತರು, ಪೌರಾಯುಕ್ತರು, ಮುಖ್ಯಾಧಿಕಾರಿಗಳು ಮತ್ತು ಗ್ರಾಮಪಂಚಾಯತಿ ವ್ಯಾಪ್ತಿಯಲ್ಲಿ ಪಿಡಿಓಗಳು ನಿವೇಶನ ಒದಗಿಸುವಂತೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ಸೂಚಿಸಿದರು.

ಡಿಸಿ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ಸೋಮವಾರ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿ ಚರ್ಚಿಸಿದರು.

೧೫ನೇ ಹಣಕಾಸು ಪ್ರಗತಿ ಪರಿಶೀಲನೆ ನಡೆಸಿದ ಅವರು, ಕುಡಿಯುವ ನೀರು, ಅಮೃತ್ ನಿರ್ಮಲ ನಗರ ಯೋಜನೆ, ಅಂಬೇಡ್ಕರ್, ವಾಜಪೇಯಿ ವಸತಿ ಯೋಜನೆಗಳಡಿ ನಿರೀಕ್ಷಿತ ಪ್ರಗತಿ ಸಾಧಿಸುವಂತೆ ಎಲ್ಲಾ ಸ್ಥಳೀಯ ಸಂಸ್ಥೆಗಳ ಪೌರಾಯುಕ್ತರು, ಮುಖ್ಯಾಧಿಕಾರಿಗಳಿಗೆ ಸೂಚಿಸಿದರು.

ನೋಟಿಸ್ ಅವಧಿಯ ಭೂಮಿ ಅರ್ಜಿಗಳನ್ನು ೩೩ ದಿನಗಳೊಗಾಗಿ ವಿಲೇವಾರಿ ಮಾಡದ ತಹಶೀಲ್ದಾರ್, ಕಂದಾಯ ನಿರೀಕ್ಷಕ, ಸರ್ವೇ ಸೂಪರ್‌ವೈಸರ್‌ಗಳ ವಿರುದ್ಧ ಕ್ರಮಕೈಗೊಳ್ಳಲಾಗುವುದು. ಜಿಲ್ಲೆಯಲ್ಲಿ ೬೮೫೦ ಪಹಣಿ ಕಾಲಂ ೩/೯ ಮಿಸ್ ಮ್ಯಾಚ್ ಪ್ರಕರಣಗಳಿದ್ದು, ಶೀಘ್ರ ವಿಲೇವಾರಿ ಮಾಡುವಂತೆ ತಿಳಿಸಿದರು.

ಕಂದಾಯ ಇಲಾಖೆಯ ಸರ್ಕಾರಿ ಭೂಮಿಯಲ್ಲಿರುವ ಶಾಲೆಗಳನ್ನು ಶಿಕ್ಷಣ ಇಲಾಖೆಯ ಹೆಸರಿಗೆ ಕಾಯ್ದಿರಿಸಿ ಖಾತೆ ಮಾಡಿಸುವ ಕೆಲಸ ಪ್ರಗತಿಯಲ್ಲಿದೆ. ತುಮಕೂರು, ಮಧುಗಿರಿ ಶೈಕ್ಷಣಿಕ ಜಿಲ್ಲೆಗಳ ವ್ಯಾಪ್ತಿಯಲ್ಲಿ ಇರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ನಿಗಧಿತ ನಮೂನೆಯಲ್ಲಿ ಹಾಗೂ ಅಗತ್ಯ ದಾಖಲಾತಿಗಳೊಂದಿಗೆ ತಾಲೂಕು ಕಚೇರಿ ಹಾಗೂ ಸಂಬಂಧಿಸಿದ ಗ್ರಾಮ ಪಂಚಾಯ್ತಿಗಳಿಗೆ ಶಿಕ್ಷಣ ಇಲಾಖೆ ಬಿ.ಇ.ಓ, ಬಿ.ಆರ್.ಪಿ, ಮತ್ತು ಸಿ.ಆರ್.ಪಿ ಮೂಲಕ ಅರ್ಜಿ ಸಲ್ಲಿಸಬೇಕು. ತಾಲೂಕುವಾರು ಪ್ರತಿ ವಾರಕ್ಕೆ ಕನಿಷ್ಠ ೫ ಪ್ರಕರಣಗಳನ್ನು ಇತ್ಯರ್ಥಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಕೋವಿಡ್ ಲಸಿಕಾಕರಣಕ್ಕೆ ಸಂಬAಧಿಸಿದAತೆ ೧೨-೧೪ ವಯೋಮಾನದವರ ಮೊದಲೆರಡು ಡೋಸ್ ಕ್ರಮವಾಗಿ ಶೇ ೧೧೪.೮%, ಶೇ.೯೧.೭ ಮತ್ತು ೧೫-೧೭ ವಯಸ್ಸಿನವರ ಲಸಿಕಾಕರಣ ಮೊದಲ ಡೋಸ್ ಶೇ.೮೦.೮% ಎರಡನೇ ಡೋಸ್ ಶೇ ೭೫.೫ ಇದ್ದು ಶೀಘ್ರ ಶೇ.೧೦೦ರಷ್ಟು ಲಸಿಕಾಕರಣ ಪೂರೈಸುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಜುಲೈ ೧೫ ರಿಂದ ಹತ್ತಿರದ ಸರ್ಕಾರಿ ಲಸಿಕಾ ಕೇಂದ್ರಗಳಲ್ಲಿ ೧೮ ರಿಂದ ೫೯ರ ವಯೋಮಾನದವರಿಗೆ ಮುಂಜಾಗ್ರತಾ ಡೋಸ್ ನೀಡುತ್ತಿದ್ದು ಲಸಿಕಾಕರಣಕ್ಕೆ ಆದ್ಯತೆ ನೀಡುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜಿಪಂ ಸಿಇಒ ಡಾ.ಕೆ.ವಿದ್ಯಾಕುಮಾರಿ, ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ, ಉಪವಿಭಾಗಾಧಿಕಾರಿ ವಿ.ಅಜಯ್, ತಹಶೀಲ್ದಾರ್ ಮೋಹನ್ ಕುಮಾರ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಟಿ.ಎ.ವೀರಭದ್ರಯ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀಧರ್ ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.