ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಲು ನಿರ್ಧರಿಸಲಾಗಿದೆ. ನಾಳೆಯೇ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಶುಕ್ರವಾರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್ ಆಯೋಗದ ಶಿಫಾರಸಿನಂತೆ ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇಕಡ 15ರಿಂದ ಶೇ 17ಕ್ಕೆ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಶೇ 3ರಿಂದ ಶೇ 7ಕ್ಕೆ ಹೆಚ್ಚಿಸಲಾಗುವುದು ಎಂದರು.
ಈ ಸಮುದಾಯಗಳ ಅಭಿವೃದ್ಧಿಗೆ ನಾಗಮೋಹನ ದಾಸ್ ಆಯೋಗ ಹಾಗೂ ನ್ಯಾಯಮೂರ್ತಿ ಸುಭಾಷ್ ಅಡಿ ಸಮಿತಿಗಳ ಶಿಫಾರಸುಗಳನ್ನೂ ಒಪ್ಪಿಕೊಳ್ಳಲಾಗಿದೆ ಎಂದರು.