ಪುಸ್ತಕ ಬಿಡುಗಡೆ

ಫೆ 5: ಶಿವಣ್ಣ ತಿಮ್ಲಾಪುರ ಕೃತಿಗಳ ಬಿಡುಗಡೆ

ಸಾಹಿತಿ ಹಾಗೂ ಕನ್ನಡ ಅಧ್ಯಾಪಕ ಡಾ.ಶಿವಣ್ಣ ತಿಮ್ಲಾಪುರ ರಚಿಸಿರುವ ಅಹಿಂಸಾ ಮಾರ್ಗ ಹಾಗೂ ಮಾತಂಗಿ ಕುಲಕಥನ ಕೃತಿಗಳ ಬಿಡುಗಡೆ ಸಮಾರಂಭವನ್ನು ಫೆಬ್ರವರಿ 5ರಂದು ಬೆಳಗ್ಗೆ 10.30ಕ್ಕೆ ತುಮಕೂರಿನ ಕನ್ನಡ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಸಾಹಿತಿ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಪುಸ್ತಕಗಳನ್ನು ಬಿಡುಗಡೆ ಮಾಡುವರು. ರಾಜ್ಯಸಭಾ ಸದಸ್ಯ ಹಾಗೂ ಸಾಹಿತಿ ಡಾ.ಎಲ್.ಹನುಮಂತಯ್ಯ ಸಮಾರಂಭದ ಅಧ್ಯಕ್ಷತೆ ವಹಿಸುವರು.

ಕೃತಿಗಳನ್ನು ಕುರಿತು ಕವಿ ಡಾ.ಹುಲಿಕುಂಟೆ ಮೂರ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಯುವ ಪುರಸ್ಕಾರ್ ಪುರಸ್ಕೃತ ಡಾ.ಎಚ್.ಲಕ್ಷ್ಮೀನಾರಾಯಣಸ್ವಾಮಿ ಮಾತನಾಡುವರು.

ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕ ಕೆ.ಎನ್.ರಾಜಣ್ಣ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ, ಕರ್ನಾಟಕ ಲೇಖಕಿಯರ ಸಂಘದ ತುಮಕೂರು ಜಿಲ್ಲಾ ಶಾಖೆಯ ಅಧ್ಯಕ್ಷೆ ಜಿ.ಮಲ್ಲಿಕಾ ಬಸವರಾಜು, ಸ್ಟೂಡೆಂಟ್ ಬುಕ್ ಕಂಪನಿ ಪ್ರಕಾಶಕ ಸದಾಶಿವ್ ಮಂಗಳೂರು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಡಾ.ಟಿ.ಆರ್. ಲೀಲಾವತಿ, ತುಮಕೂರು ವಿವಿ ಕನ್ನಡ ಅಧ್ಯಾಪಕರ ಒಕ್ಕೂಟದ ಅಧ್ಯಕ್ಷ ಡಾ.ಡಿ.ಶಿವನಂಜಯ್ಯ ಭಾಗವಹಿಸುವರು.

Comment here