ಚಾಮರಾಜನಗರ: ಇಲ್ಲಿನ ಚಾಮರಾಜನಗರ ಕ್ಷೇತ್ರದಿಂದ ಸ್ಪರ್ಧಿಸಿರುವ ವಸತಿ ಸಚಿವ ವಿ.ಸೋಮಣ್ಣ ಅವರ ಉಮೇದುವಾರಿಕೆ ರದ್ದು ಆಗುವ ಸಂಭವವಿದೆ.
ಜೆಡಿಎಸ್ ಅಭ್ಯರ್ಥಿ ಮಲ್ಲಿಕಾರ್ಜುನ ( ಆಲೂರು ಮಲ್ಲು) ಅವರಿಗೆ ಕರೆ ಮಾಡಿ ಸ್ಪರ್ಧೆಯಿಂದ ಹಿಂತೆಗೆದರೆ ಬಿಜೆಪಿ ಅಧಿಕಾರಕ್ಕೆ ಬಂದರೆ ಗೂಟದ ಕಾರು ಕೊಡುವುದಾಗಿ ಆಮಿಷ ಒಡ್ಡಿದ್ದರು. ಈ ವಿಡಿಯೊ ವ್ಯಾಪಕವಾಗಿ ಹರಿದಾಡಿತ್ತು.
ಇದರ ಆಧಾರದಲ್ಲಿ ಕೇಂದ್ರ ಚುನಾವಣಾ ಆಯೋಗ ದ ಸೂಚನೆ ಮೇರೆಗೆ ಸೋಮಣ್ಣ ವಿರುದ್ಧ ಪ್ರಜಾಪ್ರತಿನಿಧಿ ಕಾಯ್ದೆ ಸೆಕ್ಷನ್ 123 ರ ಅಡಿ ಇಲ್ಲಿನ ಪೊಲೀಸ್ ಠಾಣೆಯಲ್ಲಿ FIR ದಾಖಲಿಸಲಾಗಿತ್ತು. ಈ ಆಧಾರದಲ್ಲಿ ಸೋಮಣ್ಣ ಉಮೇದುವಾರಿಕೆ ರದ್ದುಪಡಿಸುವ ಸಾಧ್ಯತೆ ಇದೆ ಎಂದು ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ ಎಂದು ಪ್ರಜಾವಾಣಿ ವರದಿ ಮಾಡಿದೆ.
ಈ ಆರೋಪ ಸಾಬೀತಾದರೆ ಒಂದು ವರ್ಷ ಜೈಲು ಅಥವಾ ದಂಡದ ಶಿಕ್ಷೆ ಇದೆ.