Monday, April 22, 2024
Google search engine
Homeಪೊಲಿಟಿಕಲ್ಆಗ್ನೇಯ ಶಿಕ್ಷಕರ ಕ್ಷೇತ್ರ: ಕಾಂಗ್ರೆಸ್ ಗೆಲುವಿನ ವಿಶ್ವಾಸ

ಆಗ್ನೇಯ ಶಿಕ್ಷಕರ ಕ್ಷೇತ್ರ: ಕಾಂಗ್ರೆಸ್ ಗೆಲುವಿನ ವಿಶ್ವಾಸ

ತುರುವೇಕೆರೆ: ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ಮುಂಚೆ ನೀಡಿದ್ದ ಎಲ್ಲ ಭರವಸೆಗಳನ್ನು ಹಂತ ಹಂತವಾಗಿ ಈಡೇರಿಸಿ, ರಾಜ್ಯದ ಜನರ, ಶಿಕ್ಷಕರ ವಿಶ್ವಾಸವನ್ನು ಗಳಿಸಿರುವ ಹಿನ್ನೆಲೆಯಲ್ಲಿ ಮುಂಬರುವ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಪರವಾದ ಫಲಿತಾಂಶ ಬರಲಿದೆ ಎಂದು ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ತಿಳಿಸಿದರು.

ಪಟ್ಟಣದ ಪ್ರವಾಸಿ ಮಂದಿರದ ಮುಂದೆ ತಾಲ್ಲೂಕಿನ ಶಿಕ್ಷಕರ ಸಮಸ್ಯೆಗಳನ್ನು ಆಲಿಸಿ ಮಾತನಾಡಿದ ಅವರು ಹಲವು ವರ್ಷಗಳಿಂದ ಕ್ಷೇತ್ರದಲ್ಲಿನ ಸರ್ಕಾರಿ, ಅನುಧಾನಿತ ಹಾಗು ಅನುದಾನ ರಹಿತ ಶಾಲೆಗಳ ಶಿಕ್ಷಕರ ಮೂಲಭೂತ ಸಮಸ್ಯೆಗಳಾದ ನೂತನ ಪಿಂಚಣಿ ಯೋಜನೆಗೆ ಬದಲಾಗಿ ಹಳೆಪಿಂಚಣಿ ಜಾರಿ ಮಾಡುವುದು, 7ನೇ ವೇತನ ಆಯೋಗ, ಕೇಂದ್ರ ಮತ್ತು ರಾಜ್ಯ ಸರ್ಕಾರಿ ನೌಕರರ ವೇತನ ತಾರತಮ್ಯ ನಿವಾರಣೆ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿನ ಮಕ್ಕಳ ಹಾಜರಾತಿ 25 : 25ರ ಅನುಪಾತದ ನಿಯಮ ಸಡಿಲಿಸುವುದು, 2016ರಿಂದ ಇಲ್ಲಿಯವರೆಗೆ ಖಾಲಿ ಇರುವ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿನ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವುದು. ಸರ್ಕಾರಿ ನೌಕರರಂತೆ ಅನುದಾನಿತ ಶಾಲೆಗಳ ಶಿಕ್ಷಕರಿಗೂ ಆರೋಗ್ಯ ಸಂಜೀವಿನಿ ಯೋಜನೆಯನ್ನು ಒದಗಿಸುವುದು ಸೇರಿದಂತೆ ಸಾಕಷ್ಟು ಬೇಡಿಕೆಗಳ ಈಡೇರಿಕೆಗೆ ಶಿಕ್ಷಕರ ಪರವಾಗಿ ಹೋರಾಟಗಳನ್ನು ನಡೆಸುತ್ತಾ ಬಂದಿದ್ದೇನೆ.

ಆದರೂ ಕಳೆದ ಬಾರಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಕಡಿಮೆ ಅಂತರದಿಂದ ಸೋಲನ್ನುಕಂಡಿದ್ದೆ. ಈಗಿರುವ ಆಗ್ನೇಯ ಶಿಕ್ಷಕರ ಕ್ಷೇತ್ರದ ನಾಯಕರು ಕಳೆದ 18 ವರ್ಷಗಳಿಂದ ಶಿಕ್ಷಕರ ಸಮಸ್ಯೆಗಳನ್ನು ಈಡೇರಿಸುವುದಾಗಿ ಸುಳ್ಳು ಭರವಸೆಗಳನ್ನು ನೀಡುತ್ತಾ ಬಂದಿದ್ದರೂ ಇಲ್ಲಿಯವರೆಗೂ ಒಂದೂ ಈಡೇರಿಲ್ಲ. ಅಲ್ಲದೆ ಕೇಂದ್ರ ಮತ್ತು ರಾಜ್ಯದಲ್ಲಿ ತಮ್ಮದೇ ಸರ್ಕಾರವಿದ್ದಾಗ ಶಿಕ್ಷಕರ ಸಮಸ್ಯೆಗಳ ಬಗ್ಗೆ ತುಟಿಬಿಚ್ಚದವರು ಈಗಿನ ಕಾಂಗ್ರೆಸ್ ಸರ್ಕಾರವನ್ನು ಪ್ರಶ್ನಿಸುವ ಯಾವ ನೈತಿಕತೆ ಇದೆ ಎಂದು ಹೆಸರು ಹೇಳದೇ ಎಂಎಲ್ ಸಿ ವೈ.ಎ.ನಾರಾಯಣ ಸ್ವಾಮಿಯನ್ನು ಕುಟುಕಿದರು.

ಮುಖ್ಯ ಮಂತ್ರಿ ಸಿದ್ದರಾಮಯ್ಯನವರ ಶಿಕ್ಷಕ ಸ್ನೇಹಿ ಹಾಗು ಜನಪರ ಆಡಳಿತದಿಂದ ಈಗಾಗಲೇ ಬೆಂಗಳೂರು ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಗೆಲುವು ಸಾಧಿಸುವ ಮೂಲಕ ಐದೂ ಕ್ಷೇತ್ರಗಳಲ್ಲೂ ಕೈ ಅಭ್ಯರ್ಥಿಗಳೇ ಗೆಲ್ಲುವ ಶುಭ ಸೂಚನೆ ನೀಡಿದ್ದಾರೆ.

ಈಗಾಗಲೇ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇಲ್ಲದವರು ಕೂಡಲೇ ನಮೂನೆ 19ರ ಅರ್ಜಿಯನ್ನು ಭರ್ತಿ ಮಾಡಿ ತಾಲ್ಲೂಕು ಕಚೇರಿಗೆ ನೀಡಿ ಎಂದ ಅವರು ಕಳೆದ ಸಲ ಅತ್ಯಲ್ಪ ಮತಗಳಿಂದ ಪರಾಭವಗೊಂಡಿದ್ದೆ. ಈ ಬಾರಿ ಶಿಕ್ಷಕರಲ್ಲಿ ನನ್ನ ಪರವಾದ ಅನುಕಂಪದ ಅಲೆ ಇದ್ದು ಜೂನ್ ತಿಂಗಳಲ್ಲಿ ನಡೆಯುವ ಚುನಾವಣೆಯಲ್ಲಿ ಶಿಕ್ಷಕರು ನನಗೆ ಮೊದಲೆ ಆದ್ಯತೆಯನ್ನು ನೀಡಿ ತಮ್ಮೆಲ್ಲರ ಸಮಸ್ಯೆಗೆ ದನಿಯಾಗಲು ಮತ ನೀಡಿ ಎಂದ ವಿನಂತಿಸಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೊಳಾಲ ನಾಗರಾಜು, ಗುಡ್ಡೇನಹಳ್ಳಿ ಪ್ರಸನ್ನ ಕುಮಾರ್, ಮುಖಂಡರುಗಳಾದ ನಂಜುಂಡಯ್ಯ, ಜೋಗಿಪಾಳ್ಯ ಶಿವರಾಜು, ಗುರುದತ್, ಗವಿರಂಗಪ್ಪ, ಪ್ರಕಾಶ್. ಮಹೇಂದ್ರ, ಶಿಕ್ಷಕ ಪ್ರಕಾಶ್ ಇನ್ನಿತರರು ಇದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?