Thursday, September 12, 2024
Google search engine
Homeಕೃಷಿತುರುವೇಕೆರೆ: ತುಂಬಿದ ಶಿಂಷಾ ನದಿ

ತುರುವೇಕೆರೆ: ತುಂಬಿದ ಶಿಂಷಾ ನದಿ

ತುರುವೇಕೆರೆ: ಸೋಮವಾರ ರಾತ್ರಿ ಬಿದ್ದ ಹಿನ್ನೆಲೆಯಲ್ಲಿ ತಾಲ್ಲೂಕಿನಾದ್ಯಂತ. ಒಟ್ಟು 21.84 ಸೆಂ. ಮೀಟರ್ ಮಳೆಯಾಗಿದ್ದು, ಮುಂಗಾರು ಭಿತ್ತನೆ ಮಾಡಿದ ರೈತರಲ್ಲಿ ಮಂದಹಾಸ ಮೂಡಿದೆ.

ಸೋಮವಾರ ರಾತ್ರಿ ಗುಡುಗು, ಮಿಂಚು ಸಹಿತ ಸುರಿದ ಮಳೆಗೆ ಬಾಣಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಣಿಕೇನಹಳ್ಳಿ ಗ್ರಾಮದ ನಾಗರಾಜುರವರ ಒಂದು ವಾಸದ ಮನೆ, ಬಾಣಸಂದ್ರ ಗ್ರಾಮದಲ್ಲಿನ ಲಕ್ಷ್ಮಣ ಮತ್ತು ಅಂಬಿಕಮ್ಮನವರ ವಾಸದ ಮನೆಯ ಗೋಡೆ ಕುಸಿದು ಬಿದ್ದಿವೆ. 

ಕಾಳಮ್ಮಪುಟ್ಟಾಚಾರ್ರವರ ದನಕೊಟ್ಟಿಗೆ ಮೇಲೆ ತೆಂಗಿನ ಮರಬಿದ್ದು ಶೀಟುಗಳು ಮರಿದಿವೆ. ದಂಡಿನಶಿವರ ಹೋಬಳಿಯ ತೋವಿನಕೆರೆ ಗ್ರಾಮದಲ್ಲಿ ನಂಜುಂಡಯ್ಯನವರ ಒಂದು ಮನೆ ಭಾಗಶಃ ಕುಸಿದು ಬಿದ್ದಿದ್ದು ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ಕಂದಾಯ ಅಧಿಕಾರಿಗಳು ತಿಳಿಸಿದ್ದಾರೆ.

ರಾತ್ರಿ ಬೀಸಿದ ಬಿರುಗಾಳಿಗೆ ಕೋಳಘಟ್ಟ4, ನಾಯಕನಘಟ್ಟ2, ತೊರೆಮಾವಿನಹಳ್ಳಿ1, ಮಂಚೇನಹಳ್ಳಿ1, ಹರಿದಾಸನಹಳ್ಳಿ1, ತಂಡಗ ವ್ಯಾಪ್ತಿ2, ದೊಂಬರನಹಳ್ಳಿ 2, ಮಾದಿಹಳ್ಳಿ4, ಬಸವನಹಳ್ಳಿ1, ನೆಮ್ಮದಿ ಗ್ರಾಮ1, ಸಿದ್ದಾಪುರ 2, ಅಕ್ಕಳಸಂದ್ರ 5, ತಳವಾರನಹಳ್ಳಿ1 ಸೇರಿದಂತೆ ಒಟ್ಟು 26 ವಿದ್ಯುತ್ ಕಂಬಗಳ ಮೇಲೆ ಮರ ಬಿದ್ದು ಕಂಬಗಳು ತುಂಡರಿಸಿವೆ ಎಂದು ಬೆಸ್ಕಾಂ ಎಇಇ ಎಂ.ಸಿ.ರಾಜಶೇಖರ್ ತಿಳಿಸಿದ್ದಾರೆ, ಪಟ್ಟಣ ಸೇರಿದಂತೆ ಈ ಗ್ರಾಮಗಳಲ್ಲಿ ರಾತ್ರಿ ವಿದ್ಯುತ್ ಇಲ್ಲದೆ ಜನರು ಪರದಾಡಿದರು.

ತಾಲ್ಲೂಕಿನ ದಂಡನಶಿವರ ಹೋಬಳಿಯ ಸಂಪಿಗೆ ಗ್ರಾಮದಲ್ಲಿನ ಕೆಲ ಚರಂಡಿಗಳಲ್ಲಿ ಕಸ ಕಟ್ಟಿಕೊಂಡ ಪರಿಣಾಮ ಚಿಕ್ಕಕಲ್ಲಯ್ಯ ಅವರ ಮನೆಗೆ ಮಳೆ ‌ನೀರು‌ ನುಗ್ಗಿ ಮನೆಯ ವಸ್ತುಗಳೆಲ್ಲ ನೆನೆದಿವೆ ಹಾಗು ಬಾಣಂತಿ ಮತ್ತು ಮಗುವನ್ನು ಗ್ರಾಮದ ಗ್ರಾಮ ಪಂಚಾಯತಿ ಕಚೇರಿಯಲ್ಲಿ ವಾಸ್ತವ್ಯ ಹೂಡಲಾಗಿದೆಂದು ಕಂದಾಯ ಇಲಾಖೆಯ ಅಧಿಕಾರಿಗಳೊಬ್ಬರು ತಿಳಿಸಿದ್ದರು.

ಲೋಕಮ್ಮನಹಳ್ಳಿ ಗೇಟ್ ಬಳಿಯ ಚರಂಡಿಗಳನ್ನು ನಿಯಮಿತವಾಗಿ ಸ್ವಚ್ಛಗೊಳಿಸದೆ ಹಾಗು ರಾಷ್ಟ್ರೀಯ ಹೆದ್ದಾರಿ150ಎ ಇಲಾಖೆಯ ಸಿಬ್ಬಂದಿಗಳು, ಅರ್ಧಿಕಾರಿಗಳ ನಿರ್ಲಕ್ಷತನದಿಂದ ಹೆದ್ದಾರಿ ರಸ್ತೆಯ ಅಕ್ಕಪಕ್ಕದ ಮನೆ, ಅಂಗಡಿಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ನಷ್ಟ ಉಂಟಾಗಿದೆಂದು ಗ್ರಾಮಸ್ಥ ಎಂ.ಕಾಂತರಾಜು ಆರೋಪಿಸಿದ್ದಾರೆ.

ಬಾಣಸಂದ್ರ ಹೆದ್ದಾರಿ ರೈಲ್ವೆ ಮೇಲು ಸೇತುವೆ ಕೆಳಗಿನ ಚರಂಡಿಗಳಲ್ಲಿ ಕಸ ಕಟ್ಟಿಕೊಂಡು ನೀರು ನಿಂತು ಎರಡು ಗಂಟೆಯವರೆಗೂ ವಾಹನ ಸಂಚಾರ ಅಸ್ತವ್ಯಸ್ಥವಾಗಿತ್ತು.

ಶಿಂಷಾ ನದಿ ತುರುವೇಕೆರೆ ಕೆರೆಯ ಮೂಲಕ ತುಂಬಿ ಹರಿಯುತ್ತಿದೆ. ಅದೇ ರೀತಿ ತಾಲ್ಲೂಕಿನ ಬೊಮ್ಮೇನಹಳ್ಳಿ, ಬಲಮಾದಿಹಳ್ಳಿ, ಕುಣಿಕೇನಹಳ್ಳಿ, ಹುಳಿಸಂದ್ರ, ಅಮ್ಮಸಂದ್ರ ಮತ್ತು ಕೊಳಾಲ ಕೆರೆಗಳು ತುಂಬಿವೆ ಎಂದು ಹೇಮಾವತಿ ನಾಲಾ ಅಧಿಕಾರಿಗಳು ತಿಳಿಸಿದ್ದಾರೆ.

ಹಾನಿಯಾದ ಸ್ಥಳಕ್ಕೆ ತಹಶೀಲ್ದಾರ್ ಎಂ.ಎ.ಕುಂಞ ಅಹಮ್ಮದ್, ಬೆಸ್ಕಾಂ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?