ವಿದ್ಯುತ್ ಸ್ಪರ್ಶಿಸಿ ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ತುಮಕೂರು ಹೊರವಲಯದ ಬೆಳಗುಂಬದ ಸಿದ್ದರಾಮೇಶ್ವರ ಬಡಾವಣೆಯಲ್ಲಿ ಸಂಭವಿಸಿದೆ.
ಮೃತ ಮಕ್ಕಳು 8 ಮತ್ತು 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಅವರನ್ನು ಪ್ರಜ್ವಲ್ ಮತ್ತು ಯತೀಶ್ ಎಂದು ಗುರುತಿಸಲಾಗಿದೆ.
ಆಟವಾಡುತ್ತಿದ್ದಾಗ ಈ ದುರ್ಘಟನೆ ನಡೆದಿದೆ.
ಸಿದ್ದರಾಮೇಶ್ವರ ಬಡಾವಣೆಯಲ್ಲಿ ವಾಸವಿದ್ದ ವೀರಭದ್ರಯ್ಯ ಎಂಬುವರ ಪುತ್ರ ಯತೀಶ್ ಮತ್ತು ಸಿದ್ದಲಿಂಗಯ್ಯ ಅವರ ಪುತ್ರ ಪ್ರಜ್ವಲ್ ಮನೆಯ ಮೇಲೆ ಆಟವಾಡುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.