Public story
ತುಮಕೂರು: ರಾಜ್ಯಾದ್ಯಂತ ಕೋವಿಡ್-19 ಲಸಿಕಾ ಮೇಳ ನಡೆಸುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿಯೂ ಜೂನ್ 21ರಂದು ಲಸಿಕಾ ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ತಿಳಿಸಿದ್ದಾರೆ.
ಲಸಿಕಾ ಮೇಳದ ಸಂಪೂರ್ಣ ಯಶಸ್ವಿಗೆ ಎಲ್ಲರ ಸಹಕಾರ ಅತ್ಯಗತ್ಯವಾಗಿದೆ.
ಈ ಲಸಿಕಾ ಮೇಳದಲ್ಲಿ 45 ವರ್ಷ ಮೇಲ್ಪಟ್ಟ ಫಲಾನುಭವಿಗಳಿಗೆ ಲಸಿಕೆ ನೀಡಲು ಮೊದಲ ಆದ್ಯತೆ, 2ನೇ ಡೋಸ್ ಗೆ ಬಾಕಿ ಇರುವ ಫಲಾನುಭವಿಗಳಿಗೆ ಲಸಿಕಾಕರಣ, ಭಾರತ ಸರ್ಕಾರದ ವ್ಯಾಖ್ಯಾನದಂತೆ ಆರೋಗ್ಯ ಕಾರ್ಯಕರ್ತರು ಮತ್ತು ಮುಂಚೂಣಿ ಕಾರ್ಯಕರ್ತರಿಗೆ ಲಸಿಕಾಕರಣ, 18 ರಿಂದ 44 ವರ್ಷ ವಯೋಮಾನದ ರಾಜ್ಯ ಗುರುತಿಸಿರುವ ದುರ್ಬಲ ಗುಂಪಿನ ಫಲಾನುಭವಿಗಳು ಮತ್ತು ರಾಜ್ಯ ಕೊರೋನಾ ಮುಂಚೂಣಿ ಕಾರ್ಯಕರ್ತರಿಗೆ ಲಸಿಕಾಕರಣ ಹಾಗೂ ಕೋವ್ಯಾಕ್ಸಿನ್ ಲಸಿಕೆಯ ಮೊದಲನೇ ಡೋಸ್ ಲಸಿಕಾಕರಣ ನಡೆಸಲಾಗುವುದು ಎಂದು ತಿಳಿಸಿದ್ದಾರೆ.