Saturday, September 21, 2024
Google search engine
Homeತುಮಕೂರು ಲೈವ್VOTER LIST: ಯುವಕರಿಗೆ ಚನ್ನಬಸಪ್ಪ ಮನವಿ

VOTER LIST: ಯುವಕರಿಗೆ ಚನ್ನಬಸಪ್ಪ ಮನವಿ

Publicstory. in


Tumukuru; ಮತದಾನದ ಹಕ್ಕು ನಮ್ಮೆಲ್ಲರ ಹಕ್ಕು, ನಮ್ಮ ಮತದಾನದ ಮೂಲಕ ಭಾರತವನ್ನು ಬಲಿಷ್ಠ ಪ್ರಜಾಪ್ರಭುತ್ವ ರಾಷ್ಟ್ರವನ್ನಾಗಿ ನಿರ್ಮಾಣ ಮಾಡಲು ಸಾಧ್ಯ ಎಂದು ಅಪರ ಜಿಲ್ಲಾಧಿಕಾರಿ ಕೆ. ಚೆನ್ನಬಸಪ್ಪ ಕರೆ ನೀಡಿದರು.

ತುಮಕೂರಿನ ಬಾಲಭವನದ ನಡೆದ ರಾಷ್ಟ್ರೀಯ ಮತದಾನ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಇಂದು ರಾಷ್ಟ್ರದಾದ್ಯಂತ ಮತದಾನದ ದಿನ ಆಚರಣೆ ಮಾಡುತ್ತಿದ್ದು, ದೇಶದ 18ವರ್ಷ ಮೇಲ್ಪಟ್ಟ ಎಲ್ಲಾ ಯುವಕರು ಮತದಾರರ ಪಟ್ಟಿಗೆ ಸೇರ್ಪಡೆಗೊಳ್ಳಬೇಕು ಎಂಬುದು ಈ ರಾಷ್ಟ್ರೀಯ ಮತದಾನ ದಿನದ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.

2011ರಲ್ಲಿ ಮತದಾರರ ಪಟ್ಟಿಗೆ ಸೇರ್ಪಡೆಯಾದ ಹಾಗೂ ಚುನಾವಣೆಯಲ್ಲಿ ಭಾಗವಹಿಸುವವರ ಸಂಖ್ಯೆ ಶೇ.60%ರಷ್ಟು ಮಾತ್ರ ಇತ್ತು. ಇದೀಗ ಪ್ರಸ್ತುತ ಶೇ.80ಕ್ಕೂ ಹೆಚ್ಚು ಇದೆ. ಆಗ ಎಲ್ಲಾ ಜನರಿಗೆ ಮತದಾನ, ಪ್ರಜಾಪ್ರಭುತ್ವ ಹಾಗೂ ಮೂಲಭೂತ ಅಂಶಗಳ ಬಗ್ಗೆ ಜಾಗೃತಿ ಇರಲಿಲ್ಲ. ಚುನಾವಣಾ ಪ್ರಚಾರದ ಸ್ವೀಪ್ ಕಾರ್ಯಕ್ರಮಗಳ ಮೂಲಕ ಮತದಾನದ ಸಾಕ್ಷರತೆ ನೀಡಲಾಗುತ್ತಿದೆ.

ನಮ್ಮ ಜಿಲ್ಲೆಯ ಬಿಎಲ್‍ಓಗಳು 18ವರ್ಷ ಮೇಲ್ಪಟ್ಟ ಎಲ್ಲಾ ಯುವ ಜನರನ್ನು ಮತದಾರ ಪಟ್ಟಿಗೆ ಸೇರ್ಪಡೆ ಮಾಡಿದ್ದಾರೆ. ಮತದಾರರಿಗೆ ಮತದಾನ ಮಾಡಲು ಗುರುತಿಗಾಗಿ ಎಪಿಕ್ ಕಾರ್ಡ್ ನೀಡಲಾಗುತ್ತಿದೆ. ಒಳ್ಳೆಯ ನಾಯಕನನ್ನು ಆಯ್ಕೆ ಮಾಡಿಕೊಳ್ಳಬೇಕೆಂಬುದನ್ನು ಮನದಲ್ಲಿಟ್ಟುಕೊಂಡು ನಾವು ಯಾವುದೇ ಆಸೆ-ಆಮಿಷಗಳಿಗೆ ಬಲಿಯಾಗದೆ, ನಮ್ಮ ಅಮೂಲ್ಯವಾದ ಮತವನ್ನು ಸ್ವಾತಂತ್ರವಾಗಿ ನ್ಯಾಯಸಮ್ಮತವಾಗಿ, ಮುಕ್ತವಾಗಿ ಸ್ವಇಚ್ಚೆಯಿಂದ ಚಲಾಯಿಸಬೇಕು. ಆಗ ಮಾತ್ರ ನಮ್ಮ ದೇಶ ಬಲಿಷ್ಠ ಪ್ರಜಾಪ್ರಭುತ್ವ ರಾಷ್ಟ್ರವಾಗಲು ಸಾಧ್ಯ ಎಂದು ಅವರು ತಿಳಿಸಿದರು.

ಜಿಲ್ಲೆಯ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ನ್ಯಾಯಧೀಶರಾದ ರಾಘವೇಂದ್ರ ಶೆಟ್ಟಿಗಾರ್ ಅವರು ಮಾತನಾಡಿ, ಭಾರತದ ಸಂವಿಧಾನದಲ್ಲಿ ಭಾರತದ ಜನಪ್ರತಿನಿಧಿಯನ್ನು ಆಯ್ಕೆ ಮಾಡುವ ಜವಾಬ್ದಾರಿ ಮತದಾರರಿಗೆ ನೀಡಿದೆ. ಯುವ ಮತದಾರರಿಗೆ ಮತದಾನದ ಅರಿವು ಮೂಡಿಸುವುದೇ ಮುಖ್ಯ ಉದ್ದೇಶವಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಮ್ಮ ಸಂವಿಧಾನ ತಿಳಿಸಿರುವಂತೆ ಮತದಾನದ ಹಕ್ಕನ್ನು ಜಾಗರೂಕತೆಯಿಂದ, ಉತ್ತಮ ರೀತಿಯಾಗಿ ಚಲಾಯಿಸಬೇಕು ಎಂದು ಅವರು ತಿಳಿಸಿದರು.

ಸಮಾರಂಭದಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಿದ ಮತಗಟ್ಟೆ ಅಧಿಕಾರಿಗಳು ಹಾಗೂ ಪ್ರಬಂಧ ಮತ್ತು ರಸಪ್ರಶ್ನೆಯ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡಲಾಯಿತು. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ನಗರದ ಟೌನ್‍ಹಾಲ್ ವೃತ್ತದಿಂದ ಬಾಲಭವನದವರೆಗೂ ಅರಿವಿನ ಜಾಥಾವು ನಡೆಯಿತು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?