ತುಮಕೂರು: ಮಳೆ ಕೊರತೆಯಿಂದಾಗಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಭೀತಿ ಎದುರಾಗಿದೆ. ಮಳೆ ಕೊರತೆ ಹೀಗೆ ಮುಂದುವರೆದಲ್ಲಿ ಜಿಲ್ಲೆಯ ಸುಮಾರು 415 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದುದೆಂದು ಅಂದಾಜಿಸಲಾಗಿದೆ.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪ್ರಗತಿ ಪರಿಶೀಲನೆ ಸಭೆಯಲ್ಲಿ ನೀರಿನ ಸಮಸ್ಯೆ ಕುರಿತು ಜಿಲ್ಲಾ ಉಸ್ತುವಾರಿ ಸಚಿವರ ಗಮನಕೆ, ತಂದರು.
ಜಿಲೆಯಲ್ಲಿ ಉದ್ಭವಿಸಬಹುದಾದ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಈಗಾಗಲೇ ಎಲ್ಲಾ ತಾಲ್ಲೂಕುಗಳ 186 ಕಾಮಗಾರಿಗಳಿಗೆ 360.75ಲಕ್ಷ ರೂ.ಗಳ ಕಾಂಟೆಜೆನ್ಸಿ ಕ್ರಿಯಾ ಯೋಜನೆ ಅನುಮೋದನೆಗಾಗಿ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಮಳೆ ಕೊರತೆ ಹೀಗೆ ಮುಂದುವರೆದಲ್ಲಿ ಜಿಲ್ಲೆಯ ಸುಮಾರು 415 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದುದೆಂದು ಅಂದಾಜಿಸಲಾಗಿದೆ. ಕುಡಿಯುವ ನೀರು ಸಮಸ್ಯೆ ಬಾರದಂತೆ ಜಲಜೀವನ ಮಿಷನ್ ಯೋಜನೆಯಡಿ 881 ಕೊಳವೆ ಬಾವಿಗಳನ್ನು ಕೊರೆಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವರಿಗೆ ಮಾಹಿತಿ ನೀಡಿದರು.